ಕನ್ನಡ ಸುದ್ದಿ  /  Astrology  /  Horoscope Today Astrology Prediction 23 March 2024 Sagittarius Capricorn Aquarius Pisces Daily Horoscope Sts

Horoscope Today: ಮೌನವಾಗಿದ್ದೇ ಮನದಾಸೆ ಈಡೇರಿಸಿಕೊಳ್ಳುವಿರಿ, ಆಸ್ತಿಯಲ್ಲಿ ಸೂಕ್ತ ಪಾಲು; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

ಮಾರ್ಚ್​ 23, ಶನಿವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (23 March 2024 Daily Horoscope).

ಮಾರ್ಚ್​ 23ರ ದಿನಭವಿಷ್ಯ
ಮಾರ್ಚ್​ 23ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (23 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಶನಿವಾರ

ತಿಥಿ : ತ್ರಯೋದಶಿ ಬೆ. 07.08 ರವರೆಗು ಇರುತ್ತದೆ. ಆನಂತರ ಚತುರ್ದಶಿ ಆರಂಭವಾಗಲಿದೆ.

ನಕ್ಷತ್ರ : ಪುಬ್ಬ ನಕ್ಷತ್ರವು ದಿನಪೂರ್ತಿ ಇರಲಿದೆ.

ಸೂರ್ಯೋದಯ: ಬೆ.06.22

ಸೂರ್ಯಾಸ್ತ: ಸ.06.30

ರಾಹುಕಾಲ : ಬೆ.09.00 ರಿಂದ ಬೆ.10.30

ರಾಶಿ ಫಲಗಳು

ಧನಸ್ಸು

ಕೌಟುಂಬಿಕ ಕೆಲಸ ಕಾರ್ಯಗಳನ್ನು ಪರಿಪೂರ್ಣಗೊಳಿಸುವಿರಿ. ಯಾವುದೇ ಕಷ್ಟವು ಎದುರಾದರೂ ಒಪ್ಪಿದ ಕೆಲಸದಿಂದ ದೂರ ಉಳಿಯುವುದಿಲ್ಲ. ಉದ್ಯೋಗದಲ್ಲಿ ನಿರೀಕ್ಷಿತ ಯಶಸ್ಸು ದೊರೆಯುತ್ತದೆ. ಉದ್ಯೋಗ ಬದಲಿಸುವ ಸಾಧ್ಯತೆಗಳಿವೆ. ಮಾನಸಿಕ ಒತ್ತಡದ ಕಾರಣ ವಿದ್ಯಾರ್ಥಿಗಳು ದೊರೆವ ಅವಕಾಶವನ್ನು ಬಳಸಿಕೊಳ್ಳುವುದಿಲ್ಲ. ಒಂದೇ ರೀತಿಯ ಜೀವನವನ್ನು ಇಷ್ಟಪಡದೆ ಹೊಸತನಕ್ಕೆ ಮಾರು ಹೋಗುವಿರಿ. ವ್ಯಾಪಾರ ವ್ಯವಹಾರದ ಕೆಲಸ ಕಾರ್ಯಗಳು ನಿಧಾನ ಗತಿಯಲ್ಲಿ ಸಾಗುತ್ತದೆ. ಆತ್ಮೀಯರ ಸಹಾಯ ಸಹಕಾರ ದೊರೆಯುತ್ತದೆ. ಕ್ರಮೇಣವಾಗಿ ಆದಾಯದಲ್ಲಿ ಸ್ಥಿರತೆ ಕಂಡುಬರುತ್ತದೆ. ಮಾತಿನ ಬಲದಿಂದಲೇ ಕೆಲಸ ಸಾಧಿಸುವಿರಿ. ಉಷ್ಣದ ತೊಂದರೆ ಇರುತ್ತದೆ. ಅಗ್ನಿಮಾಂಧ್ಯ ದೋಷದಿಂದ ಬಳಲುವಿರಿ.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಮಕರ

ನಿಧಾನಗತಿಯಲ್ಲಿ ಕೈ ಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಉದ್ಯೋಗದಲ್ಲಿ ಎದುರಾಗುವ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಲ್ಲ ಚಾತುರ್ಯತೆ ನಿಮಗಿರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ತಾಂತ್ರಿಕ ಪರಿಜ್ಞಾನ ಗಳಿಸಲು ವಿದೇಶಕ್ಕೆ ತೆರಳುವರು. ಕಾರ್ಯರೂಪಕ್ಕೆ ಬರುವ ಮನದ ಪರಿಕಲ್ಪನೆಗಳಿಗೆ ಯೋಗ್ಯ ಸ್ಥಾನ ಮತ್ತು ಗೌರವಗಳು ಲಭಿಸುತ್ತವೆ. ಮಕ್ಕಳ ವಿವಾಹದ ಮಾತುಕತೆ ನಡೆಯುತ್ತದೆ. ದುಡುಕಿನ ಮಾತಿನಿಂದಾಗಿ ತೊಂದರೆಗೆ ಸಿಲುಕುವಿರಿ. ಕಷ್ಟದಲ್ಲಿ ಇದ್ದವರಿಗೆ ಸಹಾಯ ಮಾಡುವಿರಿ. ಮನೆಯ ಸುತ್ತ ಮುತ್ತಲಿನ ಗಿಡ ಮರಗಳ ಸಂರಕ್ಷಣೆಯ ಹೊರೆ ಹೊರುವಿರಿ. ಸಾಧ್ಯವಾದಷ್ಟೂ ಮಾತು ಕಡಿಮೆ ಮಾಡಿರಿ.

ಪರಿಹಾರ : ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಕುಂಭ

ಕುಟುಂಬದಲ್ಲಿ ಚರ್ಚೆಯಾಗಬೇಕಿದ್ದ ಕೆಲವು ವಿಚಾರಗಳು ಗೌಪ್ಯವಾಗಿ ಉಳಿಯಲಿವೆ. ಉದ್ಯೋಗದಲ್ಲಿನ ಅನಿರೀಕ್ಷಿತ ಬದಲಾವಣೆಯನ್ನು ಒಪ್ಪಿ ಮುನ್ನಡೆಯುವಿರಿ. ವ್ಯಾಪಾರ ವ್ಯವಹಾರದಲ್ಲಿ ಖರ್ಚಿಗೆ ತಕ್ಕಷ್ಟು ಹಣ ದೊರೆಯುತ್ತದೆ. ವಿದ್ಯಾರ್ಥಿಗಳು ಕಷ್ಟದಿಂದ ಗುರಿ ತಲುಪುವರು. ಮನೆತನದ ಆಸ್ತಿಯಲ್ಲಿ ಸೂಕ್ತ ಪಾಲು ನಿಮಗೆ ದೊರೆಯುತ್ತದೆ. ತಂದೆ ಮತ್ತು ತಾಯಿಯವರಿಂದ ಹಣದ ಸಹಾಯ ಇರುತದೆ. ಸಹಕಾರ ಸಂಸ್ಥೆಯೊಂದರ ಒಡೆತನ ದೊರೆಯುತ್ತದೆ. ತಂದೆಯವರ ಆರೋಗ್ಯದಲ್ಲಿ ಏರಿಳಿತ ಕಂಡುಬರುತ್ತದೆ. ಹೆದರಿಕೆಯ ಗುಣವಿರುತ್ತದೆ. ಮೌನಿಯಾಗಿದ್ದುಕೊಂಡು ಮನದಾಸೆಯನ್ನು ಈಡೇರಿಸಿಕೊಳ್ಳುವಿರಿ. ಯಾವುದೇ ನಿರೀಕ್ಷೆ ಒಳಗಾಗದೆ ನಿಮ್ಮ ಪಾಲಿನ ಕರ್ತವ್ಯವನ್ನು ಪೂರೈಸುವಿರಿ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ...

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಬೂದು ಬಣ್ಣ

ಮೀನ

ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಒಮ್ಮೆ ಕೈಗೊಂಡ ನಿರ್ಧಾರವನ್ನು ಬದಲಿಸುವುದಿಲ್ಲ. ಬೇರೆಯವರಿಗೆ ನೀಡಿದ ವಚನವನ್ನು ತಪ್ಪುವುದಿಲ್ಲ. ಹಠದಿಂದ ಉದ್ಯೋಗದಲ್ಲಿ ಯಶಸ್ಸನ್ನು ಗಳಿಸುವಿರಿ. ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ. ವ್ಯಾಪಾರ ವ್ಯವಹಾರದಲ್ಲಿ ಜನಮೆಚ್ಚುವಂತೆ ಮಾತನಾಡುವಿರಿ. ವಿದ್ಯಾರ್ಥಿಗಳು ವಿವಾದದಿಂದ ದೂರ ಉಳಿಯುತ್ತಾರೆ. ಸಮಾಜದ ಲೋಪ ದೋಷವನ್ನು ತಿದ್ದುವ ಜವಾಬ್ದಾರಿಯು ನಿಮ್ಮದಾಗುತ್ತದೆ. ವಿದ್ಯಾರ್ಥಿಗಳು ವಿದೇಶದಲ್ಲಿ ಅಧ್ಯಯನ ನಡೆಸುತ್ತಾರೆ. ಸಮಾಜ ಸೇವಾ ಕೇಂದ್ರವನ್ನು ಆರಂಭಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ದೇವರಕೋಣೆಯನ್ನು ಶುಭ್ರವಾಗಿಸಲು ಪ್ರಯತ್ನಿಸುವಿರಿ. ಆತ್ಮೀಯರ ಮನರಂಜನಾ ಕೂಟದಲ್ಲಿ ಭಾಗವಹಿಸುವಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಕಂದು ಬಣ್ಣ

--------------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).