ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಸಂಗಾತಿಯು ಸದಾ ಬೆನ್ನುಲುಬಾಗಿರುತ್ತಾರೆ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರವಿರಲಿ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Horoscope Today: ಸಂಗಾತಿಯು ಸದಾ ಬೆನ್ನುಲುಬಾಗಿರುತ್ತಾರೆ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರವಿರಲಿ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

23 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (23rd April 2024 Daily Horoscope).

23 ಏಪ್ರಿಲ್‌ 2024 ದಿನ ಭವಿಷ್ಯ
23 ಏಪ್ರಿಲ್‌ 2024 ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (23rd April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಮಂಗಳವಾರ

ತಿಥಿ : ಹುಣ್ಣಿಮೆ ರಾತ್ರಿ 04.01 ರವರೆಗು ಇರುತ್ತದೆ ನಂತರ ಪಾಡ್ಯ ಆರಂಭವಾಗುತ್ತದೆ.

ನಕ್ಷತ್ರ : ಚಿತ್ತಾ ನಕ್ಷತ್ರವು ರಾತ್ರಿ 09.35 ರವರೆಗೂ ಇರುತ್ತದೆ ನಂತರ ಸ್ವಾತಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.06

ಸೂರ್ಯಾಸ್ತ: ಸಂಜೆ 06.32

ರಾಹುಕಾಲ : ಮಧ್ಯಾಹ್ನ 03.29 ರಿಂದ ಸಂಜೆ05.03

ರಾಶಿಫಲ

ಮೇಷ

ಮಾನಸಿಕ ಸದೃಢತೆ ಹೊಸ ಜೀವನಕ್ಕೆ ಕಾರಣವಾಗುತ್ತದೆ. ಕುಟುಂಬದಲ್ಲಿ ಉತ್ಸಾಹದ ವಾತಾವರಣ ಇರಲು ಕಾರಣರಾಗುವಿರಿ. ದೊರೆಯುವ ಅವಕಾಶಗಳನ್ನು ನಿಮ್ಮ ಇಚ್ಛೆಗೆ ಅನುಗುಣವಾಗಿ ಬಳಸಿಕೊಳ್ಳುತ್ತೀರಿ. ಲಾಭವಿಲ್ಲದ ಓಡಾಟಗಳಿಂದ ಬೇಸರ ಉಂಟಾಗುತ್ತವೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಎದುರಾಗದು. ವಿದ್ಯಾರ್ಥಿಗಳು ಹಟದದಿಂದ ಗುರಿ ಸಾಧಿಸುವಿರಿ. ಅವಶ್ಯಕತೆ ಇದ್ದಲ್ಲಿ ಮಾತ್ರ ಬೇರೆಯವರಿಗೆ ಸಹಾಯ ಮಾಡುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಧಾರ್ಮಿಕ ಸ್ಥಳಕ್ಕೆ ತೆರಳುವಿರಿ. ಅನಿರೀಕ್ಷಿತ ಧನ ಲಾಭ ಕಂಡು. ಹೊಸ ವ್ಯಾಪಾರ ವ್ಯವಹಾರವನ್ನು ಆರಂಭಿಸುವ ಆಸೆ ಇರದು. ಆತುರದಿಂದ ದಿನದ ಕೆಲಸ ಕಾರ್ಯಗಳನ್ನು ಮಾಡುವಿರಿ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ವೃಷಭ

ಮನದಲ್ಲಿ ಸದಾ ಒಳ್ಳೆಯ ವಿಚಾರಗಳನ್ನು ಯೋಚಿಸುವಿರಿ. ಆತ್ಮವಿಶ್ವಾಸದಿಂದ ಆರಂಭಿಸಿದ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸುವಂತೆ ಮಾಡುವಿರಿ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಪರಿಚಯವಾಗಿ ಹೆಚ್ಚಿನ ಅನುಕೂಲತೆಗಳು ಉಂಟಾಗಲಿವೆ. ವಿದ್ಯಾರ್ಥಿಗಳಿಗೆ ಸಂತೋಷದ ವಾರ್ತೆಯೊಂದು ಬರಲಿದೆ. ನಿಮ್ಮ ಸುತ್ತಲಿರುವ ಜನರನ್ನು ಎಚ್ಚರಿಕೆಯಿಂದ ಮಾತನಾಡಿಸಿ. ಅವಿವಾಹಿತರಿಗೆ ವಿವಾಹಯೋಗ ಇರಲಿದೆ. ಆತ್ಮೀಯರ ಜೊತೆ ಹಣದ ವಿವಾದ ಉಂಟಾಗಬಹುದು. ದಾಂಪತ್ಯದಲ್ಲಿ ಪೀತಿ ಮತ್ತು ವಿಶ್ವಾಸ ಹೆಚ್ಚುತ್ತದೆ. ತಂದೆಯವರ ಸಹಾಯದಿಂದ ಹಣ ಸ್ವಂತ ಉದ್ಧಿಮೆಯನ್ನು ಆರಂಭಿಸುವಿರಿ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 10

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಬಿಳಿ ಬಣ್ಣ

ಮಿಥುನ

ಆಡುವ ಮಾತಲ್ಲಿ ನಿಯಂತ್ರಣ ಇದ್ದಲ್ಲಿ ಅನಾಹುತವೊಂದು ತಪ್ಪಲಿದೆ. ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸಿ. ಕುಟುಂಬದಲ್ಲಿ ಬೇಸರದ ಘಟನೆ ನಡೆಯುತ್ತದೆ. ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆ ಉಂಟಾಗುತ್ತದೆ. ವಿದ್ಯಾರ್ಥಿಗಳು ದೃಢವಾದ ಮನಸ್ಸಿನಿಂದ ಕಲಿಕೆಯಲ್ಲಿ ಮುಂದುವರೆಯುವರು. ವಿದೇಶಿ ಸಂಸ್ಥೆಯ ಜೊತೆಯಲ್ಲಿ ವ್ಯಾಪಾರ ಆರಂಭಿಸುವ ಮಾತುಕತೆ ನಡೆಸುವಿರಿ. ಕೊಂಚ ನಿಧಾನ ಎನಿಸಿದರೂ ಕೆಲಸ ಕಾರ್ಯಗಳು ನಿಮ್ಮ ಎಣಿಕೆಯಂದಂತೆ ನಡೆಯುತ್ತದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಸ್ನೇಹಿತರ ಜೊತೆಯಲ್ಲಿ ದಿನ ಕಳೆಯುವಿರಿ. ಹಣವನ್ನು ಉಳಿಸುವ ಬಗ್ಗೆ ಗಮನ ನೀಡಿರಿ. ಉಪಯೋಗಿಸುವ ವಾಹನವನ್ನು ಶುಚಿಗೊಳಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು

ಕಟಕ

ಕುಟುಂಬದಲ್ಲಿನ ಬೇಸರ ದೂರವಾತ್ತದೆ. ಉದ್ಯೋಗ ಬದಲಾಯಿಸುವಿರಿ. ವಿಧ್ಯಾರ್ಥಿಗಳು ಆತುರ ಪಡದೆ ಧನಾತ್ಮಕ ನಿರ್ಧಾರವನ್ನು ತೆಗೆದುಕೊಳ್ಳಬೇಕು. ದುಡುಕದೆ ಮುಖ್ಯವಾದ ಕೆಲಸ ಕಾರ್ಯಗಳನ್ನು ನೆರವೇರಿಸುವಿರಿ. ಪ್ರತಿಯೊಬ್ಬರೂ ನೆನಪಿಡಬೇಕಾದ ಕೆಲಸವೊಂದನ್ನು ಮಾಡುವಿರಿ. ಬಂದು ಬಳಗದವರು ಹಣಕಾಸಿನ ನೆರವು ನೀಡಲಿದ್ದಾರೆ. ಜೀವನವನ್ನು ನಿಮ್ಮದೇ ಆದ ರೀತಿಯಲ್ಲಿ ರೂಪಿಸಿಕೊಳ್ಳುವಿರಿ. ಬೇಸರದ ವೇಳೆ ಸಂಗಾತಿಯ ಪ್ರೀತಿ ಹೊಸ ಶಕ್ತಿ ಮತ್ತು ಆಸೆಯನ್ನು ನೀಡುತ್ತದೆ. ಮನೆಯ ನವೀಕರಣದ ಜವಾಬ್ದಾರಿ ನಿಮ್ಮದಾಗುತ್ತದೆ. ಆರೋಗ್ಯ ಕಾಪಾಡಿಕೊಳ್ಳಲು ಪ್ರಯತ್ನಿಸುವಿರಿ. ಭೂವಿವಾದವೊಂದು ಎದುರಾಗಲಿದೆ. ಆತುರದ ನಿರ್ಧಾರ ತೆಗೆದುಕೊಳ್ಳದಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಆಕಾಶ ನೀಲಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).