ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಕುಟುಂಬದಲ್ಲಿ ಬೇಸರ ಮನೆ ಮಾಡಿರುತ್ತದೆ, ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ ಹೆಗಲೇರಲಿದೆ; ಏ. 23ರ ರಾಶಿಫಲ

Horoscope Today: ಕುಟುಂಬದಲ್ಲಿ ಬೇಸರ ಮನೆ ಮಾಡಿರುತ್ತದೆ, ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ ಹೆಗಲೇರಲಿದೆ; ಏ. 23ರ ರಾಶಿಫಲ

23rd ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (23rd April 2024 2024 Daily Horoscope).

ಧನು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
ಧನು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(23rd April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಮಂಗಳವಾರ

ತಿಥಿ : ಹುಣ್ಣಿಮೆ ರಾತ್ರಿ 04.01 ರವರೆಗು ಇರುತ್ತದೆ ನಂತರ ಪಾಡ್ಯ ಆರಂಭವಾಗುತ್ತದೆ.

ನಕ್ಷತ್ರ : ಚಿತ್ತಾ ನಕ್ಷತ್ರವು ರಾತ್ರಿ 09.35 ರವರೆಗೂ ಇರುತ್ತದೆ ನಂತರ ಸ್ವಾತಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.06

ಸೂರ್ಯಾಸ್ತ: ಸಂಜೆ 06.32

ರಾಹುಕಾಲ : ಮಧ್ಯಾಹ್ನ 03.29 ರಿಂದ ಸಂಜೆ05.03

ರಾಶಿಫಲ

ಧನಸ್ಸು

ಹಿರಿಯರ ಮಾರ್ಗದರ್ಶನದಲ್ಲಿ ಜೀವನದಲ್ಲಿ ಯಶಸ್ಸನ್ನು ಗಳಿಸುವಿರಿ. ಸಂತೋಷಕೂಟಕ್ಕಾಗಿ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಕುಟುಂಬದಲ್ಲಿ ಎಲ್ಲರ ಮನಸ್ಸೂ ಒಂದೇ ಆಗಿರುತ್ತದೆ. ಸ್ವಂತ ಶಕ್ತಿಯಿಂದ ಉದ್ಯಮವೊಂದನ್ನುಆರಂಭಿಸಿ ಉತ್ತಮ ಸ್ಥಾನ ಮಾನ ಪಡೆಯುವಿರಿ. ಸಮರ್ಪಣಾ ಮನೋಭಾವನೆಯಿಂದ ಕುಟುಂಬದ ತೊಂದರೆ ದೂರವಾಗಲಿದೆ. ಶ್ರಮಕ್ಕೆ ತಕ್ಕಂತಹ ಪ್ರತಿಫಲ ಪಡೆಯುವಿರಿ. ಸ್ಥಿರವಾದ ಮನೋಭಾವ ವಿದ್ಯಾರ್ಥಿಗಳಿಗೆ ಉನ್ನತ ಅವಕಾಶಗಳನ್ನು ನೀಡುತ್ತದೆ. ಮಕ್ಕಳ ವಿಚಾರದಲ್ಲಿ ಸಮಸ್ಯೆಯೊಂದು ಎದುರಾಗುತ್ತದೆ. ಕುಟುಂಬದ ಸದಸ್ಯರ ಸಹಯೋಗದಲ್ಲಿ ಪಾಲುಗಾರಿಕೆಯ ವ್ಯಾಪಾರವನ್ನು ಆರಂಭಿಸುವ ಬಗ್ಗೆ ಮಾತು ಕತೆ ನಡೆಯಲಿದೆ.

ಪರಿಹಾರ : ನೆರೆಹೊರೆಯ ಮಕ್ಕಳಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿ

ಮಕರ

ಕುಟುಂಬದ ಸದಸ್ಯರ ಜೊತೆ ಸಂತಸದಿಂದ ಕಾಲ ಕಳೆಯುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ. ಯಾವುದೇ ವಿಚಾರವನ್ನು ಲಘುವಾಗಿ ಪರಿಗಣಿಸದ ಕಾರಣ ತೊಂದರೆ ಕಾಣದು. ಉದ್ಯೋಗದಲ್ಲಿ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ಮಕ್ಕಳ ರಕ್ಷಣೆ ಮತ್ತು ಹೊಣೆಗಾರಿಕೆಯ ಜವಾಬ್ದಾರಿ ನಿಮ್ಮದಾಗುತ್ತದೆ. ವಿದ್ಯಾರ್ಥಿಗಳು ಹಿರಿಯರ ಸಲಹೆ ಸೂಚನೆಯನ್ನು ಪಾಲಿಸುವುದು ಮುಖ್ಯ. ಗೃಹಬಳಕೆಯ ಸಾಧನಗಳ ಖರೀದಿಗೆ ಹೆಚ್ಚಿನ ಹಣ ಖರ್ಚು ಮಾಡುವಿರಿ. ಜೀವನದ ಎಲ್ಲಾ ಸಮಸ್ಯೆಗಳನ್ನು ಜಯಿಸಿ ಸಂತೋಷದಿಂದ ಬಾಳುವಿರಿ. ಸ್ವಂತ ಉದ್ಧಿಮೆ ಇದ್ದಲ್ಲಿ ಕಾರ್ಮಿಕರಿಗೆ ಸಹಾಯ ಮಾಡಿದಲ್ಲಿ ನಿಮಗೆ ಅನುಕೂಲತೆಗಳು ಲಭಿಸಲಿವೆ. ದಿನದ ಕೆಲಸವನ್ನು ಸಂತಸದಿಂದ ಆರಂಭಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ಕುಂಭ

ಹಿರಿಯರ ಬುದ್ಧಿವಾದವನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳುವಿರಿ. ಅನುಮಾನ ಮತ್ತು ನಿರಾಸೆಯನ್ನು ಮರೆತು ಸಂಬಂಧಿಯೊಬ್ಬರ ಭೇಟಿ ಮಾಡುವಿರಿ. ಕುಟುಂಬದಲ್ಲಿ ಬೇಸರ ಮನೆ ಮಾಡಿರುತ್ತದೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ ಇರುತ್ತದೆ. ವಿದ್ಯಾರ್ಥಿಗಳು ವಿಶ್ವಾಸವನ್ನು ಬೆಳೆಸಿಕೊಂಡು ಕಲಿಕೆಯಲ್ಲಿ ಅಗ್ರಗಣ್ಯ ಸ್ಥಾನ ಗಳಿಸುವರು. ಹೆಚ್ಚಿನ ಪರಿಶ್ರಮದಿಂದ ಕ್ರಮೇಣ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಮೊದಲ ಆದ್ಯತೆಯನ್ನು ಸ್ವಂತ ಕೆಲಸಗಳಿಗೆ ನೀಡುವಿರಿ. ಸ್ವಂತ ಬಳಕೆಗಾಗಿ ಹೊಸ ವಾಹನ ಕೊಳ್ಳುವಿರಿ. ಅನಿವಾರ್ಯವಾಗಿ ವಾಸಸ್ಥಳವನ್ನು ಬದಲಾಯಿಸುವಿರಿ. ಮಕ್ಕಳ ಜೊತೆಯಲ್ಲಿ ಕಿರು ಪ್ರವಾಸಕ್ಕೆ ತೆರಳುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಮೀನ

ನಿಮಗೆ ತೊಂದರೆ ನೀಡಿದವರಿಗೂ ಒಳ್ಳೆಯದನ್ನೇ ಮಾಡುವಿರಿ. ಮಕ್ಕಳಿಂದ ಕುಟುಂಬದಲ್ಲಿ ಸಂತೋಷದ ಸನ್ನಿವೇಶ ಇರಲಿವೆ. ಬಹು ದಿನದ ನಿರೀಕ್ಷೆಯಂತೆ ಉನ್ನತ ಅಧಿಕಾರ ಲಭಿಸುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಕಡಿಮೆ ಆದರೂ ಜೀವನದಲ್ಲಿ ತೊಂದರೆ ಇರದು. ಹಣದ ಸ್ಥಿತಿಗತಿ ಕ್ರಮೇಣವಾಗಿ ಸುಧಾರಿಸುತ್ತದೆ. ವಿದ್ಯಾರ್ಥಿಗಳು ಮಾನಸಿಕ ಒತ್ತಡದಿಂದ ಹೊರ ಬಂದಲ್ಲಿ ಉತ್ತಮ ಫಲಿತಾಂಶ ಪಡೆಯಬಹುದು. ಸಂಗಾತಿಯ ಜೊತೆ ಮನಸ್ತಾಪ ಉಂಟಾಗುತ್ತದೆ. ವಿದೇಶ ಪ್ರಯಾಣ ಯೋಗವಿದೆ. ಮನೆಯ ಸುತ್ತಮುತ್ತ ಶುಚಿತ್ವ ಕಾಪಾಡಿಕೊಳ್ಳುವಿರಿ. ಸೋದರರ ನಡುವೆ ಉತ್ತಮ ಅನ್ಯೋನ್ಯತೆ ನಿಮ್ಮಲ್ಲಿ ಇರಲಿವೆ. ಕೈಕಾಲುಗಳಲ್ಲಿ ನೋವು ಹೆಚ್ಚಲಿದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ನೇರಳೆ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).