ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ತಪ್ಪು ಮಾಡಿ ದಂಡ ತೆರಬೇಕಾದ ಪರಿಸ್ಥಿತಿ ಬರುತ್ತದೆ, ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುತ್ತಾರೆ: ಜೂ 23ರ ರಾಶಿಫಲ

ತಪ್ಪು ಮಾಡಿ ದಂಡ ತೆರಬೇಕಾದ ಪರಿಸ್ಥಿತಿ ಬರುತ್ತದೆ, ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುತ್ತಾರೆ: ಜೂ 23ರ ರಾಶಿಫಲ

ಜೂನ್‌ 23ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (23rd June 2024 Daily Horoscope).

ತಪ್ಪು ಮಾಡಿ ದಂಡ ತೆರಬೇಕಾದ ಪರಿಸ್ಥಿತಿ ಬರುತ್ತದೆ, ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುತ್ತಾರೆ: ಜೂ 23ರ ರಾಶಿಫಲ
ತಪ್ಪು ಮಾಡಿ ದಂಡ ತೆರಬೇಕಾದ ಪರಿಸ್ಥಿತಿ ಬರುತ್ತದೆ, ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುತ್ತಾರೆ: ಜೂ 23ರ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (23rd June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಭಾನುವಾರ

ತಿಥಿ : ಬಿದಿಗೆ ರಾತ್ರಿ 04.17ರವರೆಗು ಇದ್ದು ಆನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ : ಪೂರ್ವಾಷಾಢ ನಕ್ಷತ್ರವು 06.11 ರವರೆಗೆ ಇದ್ದು ಆನಂತರ ಉತ್ತರಾಷಾಢ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.53

ಸೂರ್ಯಾಸ್ತ: ಸಂಜೆ 06.48

ರಾಹುಕಾಲ: ಸಂಜೆ 05.13 ರಿಂದ 06.50

ರಾಶಿಫಲ

ಮೇಷ

ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಆದಾಯವಿರುವ ಆದರೆ ಕಷ್ಟವಲ್ಲದ ಕೆಲಸ ಕಾರ್ಯಗಳನ್ನು ಆಯ್ಕೆ ಮಾಡಿಕೊಳ್ಳುವಿರಿ. ನಿಮ್ಮಲ್ಲಿರುವ ಚುರುಕುತನವನ್ನು ಬಳಸಿಕೊಳ್ಳುವುದಿಲ್ಲ. ಉದ್ಯೋಗದಲ್ಲಿ ನಿಮ್ಮ ಜವಾಬ್ದಾರಿಗಳನ್ನು ಬೇರೆಯವರಿಗೆ ಒಪ್ಪಿಸುವಿರಿ. ತಪ್ಪು ಮಾಡಿ ದಂಡ ತೆರಬೇಕಾದ ಪರಿಸ್ಥಿತಿ ಬರುತ್ತದೆ. ಸೋದರ ಅಥವಾ ಸೋದರಿಯಿಂದ ಹಣದ ಸಹಾಯ ದೊರೆಯಲಿದೆ. ವಿಶ್ರಾಂತಿ ಪಡೆಯುವಿರಿ. ನೀವು ಸುಖ ಜೀವಿಗಳು. ಆಕಸ್ಮಿಕ ಧನ ಲಾಭವಿದೆ. ನಿಮ್ಮ ಮಕ್ಕಳು ಸಂದರ್ಭಾನುಸಾರ ವರ್ತಿಸಿ ತಮ್ಮ ಕೆಲಸ ಸಾಧಿಸಿಕೊಳ್ಳುತ್ತಾರೆ. ಮುಂದಿನ ಜೀವನದ ಬಗ್ಗೆ ಯೋಚಿಸಿ ಮುಖ್ಯವಾದ ವಿಚಾರಗಳಿಗೆ ಮಾತ್ರ ಹಣ ಖರ್ಚು ಮಾಡುವಿರಿ.

ಪರಿಹಾರ : ಹಣೆಯಲ್ಲಿ ತಿಲಕ ಧರಿಸಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಂದು

ವೃಷಭ

ಮಕ್ಕಳು ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡುತ್ತಾರೆ. ಕುಟುಂಬದ ಹಿರಿಯರ ಹೆಸರಿನಲ್ಲಿ ಧರ್ಮಕಾರ್ಯಗಳನ್ನು ಮಾಡುವಿರಿ. ಆರಂಭಿಸಿದ ಪ್ರತಿಯೊಂದು ಕೆಲಸದಲ್ಲಿಯೂ ಯಶಸ್ಸು ನಿಮ್ಮದಾಗುತ್ತದೆ. ಹಣದ ತೊಂದರೆ ಇರುವುದಿಲ್ಲ. ನಿಮ್ಮ ಬುದ್ಧಿವಂತಿಕೆಯಿಂದ ಸಮಸ್ಯೆ ದೂರಾಗುತ್ತದೆ. ಉತ್ತಮ ಆದಾಯವಿದ್ದರೂ ಸುಲಭವಾಗಿ ಹಣವನ್ನು ಖರ್ಚು ಮಾಡುವುದಿಲ್ಲ. ನೀವು ಅಧಿಕಾರಿಗಳಾಗಿದ್ದರೂ ಬೇರೆಯವರ ಮಾತನ್ನು ಕೇಳಬೇಕಾಗುತ್ತದೆ. ಆರೋಗ್ಯದಲ್ಲಿ ತೊಂದರೆ ಇರುತ್ತದೆ. ನಿಮ್ಮ ಒಳ್ಳೆಯತನವನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಾರೆ. ನಿಮ್ಮ ಕೆಲಸ ಕಾರ್ಯಗಳನ್ನು ವಿರೋಧಿಸುವ ಮನಸ್ಸು ಯಾರಿಗೂ ಇರುವುದಿಲ್ಲ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುತ್ತಾರೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಪ್ಪು

ಮಿಥುನ

ಅತ್ತೆಯ ಮನೆಯಿಂದ ವಿಶೇಷ ಅನುಕೂಲತೆಗಳು ದೊರೆಯಲಿವೆ. ನಿಮ್ಮ ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ. ಆತ್ಮೀಯ ಸ್ನೇಹಿತರನ್ನು ಭೇಟಿ ಮಾಡುವಿರಿ. ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಸ್ಥಾನ ಮತ್ತು ಅನುಕೂಲತೆಗಳು ಕಂಡುಬರುತ್ತವೆ. ಯಾವುದಾದರೂ ಒಂದು ರೀತಿಯಲ್ಲಿ ಎಲ್ಲರ ಮೇಲೂ ಅಧಿಕಾರ ಚಲಾಯಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ಅಧಿಕಾರಿಗಳಾಗಿದ್ದಲ್ಲಿ ವಿಶೇಷ ಕೀರ್ತಿ ಪ್ರಶಂಸೆ ನಿಮಗೆ ದೊರೆಯುತ್ತದೆ. ಅನಿರೀಕ್ಷಿತವಾಗಿ ಹಣದ ಸಹಾಯ ದೊರೆಯುತ್ತದೆ. ದಂಪತಿ ನಡುವೆ ಅನಾವಶ್ಯಕ ವಾದ ವಿವಾದ ಇರುತ್ತವೆ. ನಿಮ್ಮ ಬಳಿ ಎಷ್ಟೇ ಹಣವಿದ್ದರೂ ಉಳಿಸಲಾರಿರಿ. ಇರುವ ಹಣ ಖರ್ಚಾಗುವವರೆಗೂ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸ ಆರಂಭಿಸಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ತಿಳಿ ಹಸಿರು

ಕಟಕ

ನೀವು ತೆಗೆದುಕೊಳ್ಳುವ ನಿರ್ಣಯವೊಂದು ತಂದೆಯವರನ್ನು ಆಪತ್ತಿನಿಂದ ಪಾರು ಮಾಡುತ್ತದೆ. ಕುಟುಂಬದಲ್ಲಿ ಸುಖ ಸಂತೋಷ ಮನೆಮಾಡುತ್ತದೆ. ಹೆಚ್ಚಿನ ಜವಾಬ್ದಾರಿಯನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಹಣಕಾಸಿನ ತೊಂದರೆ ಕಂಡು ಬರುವುದಿಲ್ಲ. ಪ್ರಯೋಜನವಿಲ್ಲದ ವಿಚಾರಗಳಿಗೆ ಹಣವನ್ನು ಖರ್ಚು ಮಾಡುವಿರಿ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಧಾರ್ಮಿಕ ಕ್ರಿಯಾ ವಿಧಿಗಳಲ್ಲಿ ಆಸಕ್ತಿ ಮೂಡುತ್ತದೆ. ನಿಮಗೆ ಅರಿಯದ ವಿಚಾರವನ್ನು ಬೇರೆಯವರಿಂದ ತಿಳಿಯುವಿರಿ. ಶತ್ರುಗಳೂ ನಿಮ್ಮ ರೀತಿನೀತಿಯನ್ನು ಮೆಚ್ಚುತ್ತಾರೆ. ಹಣದ ವಿಚಾರದಲ್ಲಿ ದುರಾಸೆ ಇರುವುದಿಲ್ಲ. ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸಿ ಕಲಿಕೆಯಲ್ಲಿ ಮುಂದುವರೆಯುತ್ತಾರೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನಸು ಗೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

 

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.