ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸ್ವಂತ ಭೂಮಿ ಕೊಳ್ಳಲಿದ್ದೀರಿ, ಆತ್ಮೀಯರೇ ನಿಮ್ಮ ನಡೆಯನ್ನು ವಿರೋಧಿಸುತ್ತಾರೆ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಸ್ವಂತ ಭೂಮಿ ಕೊಳ್ಳಲಿದ್ದೀರಿ, ಆತ್ಮೀಯರೇ ನಿಮ್ಮ ನಡೆಯನ್ನು ವಿರೋಧಿಸುತ್ತಾರೆ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಜೂನ್‌ 23ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (23rd June 2024 Daily Horoscope).

ಸ್ವಂತ ಭೂಮಿ ಕೊಳ್ಳಲಿದ್ದೀರಿ, ಆತ್ಮೀಯರೇ ನಿಮ್ಮ ನಡೆಯನ್ನು ವಿರೋಧಿಸುತ್ತಾರೆ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ
ಸ್ವಂತ ಭೂಮಿ ಕೊಳ್ಳಲಿದ್ದೀರಿ, ಆತ್ಮೀಯರೇ ನಿಮ್ಮ ನಡೆಯನ್ನು ವಿರೋಧಿಸುತ್ತಾರೆ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (23rd June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಭಾನುವಾರ

ತಿಥಿ : ಬಿದಿಗೆ ರಾತ್ರಿ 04.17ರವರೆಗು ಇದ್ದು ಆನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ : ಪೂರ್ವಾಷಾಢ ನಕ್ಷತ್ರವು 06.11 ರವರೆಗೆ ಇದ್ದು ಆನಂತರ ಉತ್ತರಾಷಾಢ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.53

ಸೂರ್ಯಾಸ್ತ: ಸಂಜೆ 06.48

ರಾಹುಕಾಲ: ಸಂಜೆ 05.13 ರಿಂದ 06.50

ರಾಶಿಫಲ

ಸಿಂಹ

ಕೆಲಸ ಕಾರ್ಯ ಸುಗಮವಾಗಿ ಸಾಗುತ್ತದೆ. ಉದ್ಯೋಗದಲ್ಲಿ ನಿಮ್ಮ ನಿರೀಕ್ಷೆಯಂತೆ ಗುರಿ ತಲುಪುವಿರಿ. ಅನಿವಾರ್ಯವಾಗಿ ಬೇರೆವರಿಂದ ಹಣ ಪಡೆಯಬೇಕಾಗುತ್ತದೆ. ದೈಹಿಕ ಶಕ್ತಿ ಕಡಿಮೆಯಾಗುತ್ತದೆ. ಮನದಲ್ಲಿ ದುಃಖವಿರುತ್ತದೆ. ಗುರು ಹಿರಿಯರಲ್ಲಿ ವಿಶೇಷ ಗೌರವ ತೋರುವಿರಿ. ಮೃದುವಾದ ಮಾತಿನಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ಬಂಧು ಬಳಗದವರಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿ ವಿರೋಧ ಉಂಟಾಗುತ್ತದೆ. ಸ್ವಂತ ಭೂಮಿ ಅಥವಾ ಮನೆಯನ್ನು ಕೊಳ್ಳುವ ಯೋಚನೆ ಮಾಡುವಿರಿ. ತಾಯಿಯ ಪ್ರೀತಿ ವಿಶ್ವಾಸ ವಿಶೇಷವಾಗಿ ದೊರೆಯುತ್ತದೆ. ದೊರೆಯುವ ಅವಕಾಶವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ.

ಪರಿಹಾರ : ತಾಯಿಯ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಕನ್ಯಾ

ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ತಾಯಿಯ ಜೊತೆ ಅನಾವಶ್ಯಕವಾಗಿ ವಾದ ವಿವಾದಗಳಿರುತ್ತವೆ. ಮಕ್ಕಳು ಯಾರ ಪ್ರಭಾವಕ್ಕೂ ಮಣಿಯದೆ ತಮ್ಮದೇ ಮಾರ್ಗದಲ್ಲಿ ಸಾಗುತ್ತಾರೆ. ಹಣ ಉಳಿಸುವ ಯೋಜನೆಯನ್ನು ಸಿದ್ಧಪಡಿಸುವಿರಿ. ಮಗನ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರುವುದಿಲ್ಲ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಹಣ ತೊಡಗಿಸಬೇಕಾಗುತ್ತದೆ. ಹಣಕಾಸಿನ ಅನುಕೂಲತೆಯು ನೀವು ನಿರೀಕ್ಷಿಸಿದ ಮಟ್ಟಕ್ಕೆ ಇರುವುದಿಲ್ಲ. ಭಾವ ಮೈದುನರ ಜೊತೆ ಮನಸ್ತಾಪವಿರುತ್ತದೆ. ಸಂಗಾತಿಯ ಸಲುವಾಗಿ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಬೇರೊಬ್ಬರಿಂದ ಹಣ ಪಡೆಯುವಿರಿ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ :5

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ : ಬಿಳಿ

ತುಲಾ

ಗೃಹಿಣಿಯರ ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ. ತಂದೆಯವರು ನೀಡಿದ ಹಣವನ್ನು ಸದ್ಬಳಕೆ ಮಾಡುವಲ್ಲಿ ವಿಫಲರಾಗುವಿರಿ. ಕುಟುಂಬದ ನೆಮ್ಮದಿ ಮರೆಯಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಬದಲಾವಣೆಗಳು ಕಂಡು ಬರಲಿವೆ. ಅನಾವಶ್ಯಕ ಖರ್ಚು ವೆಚ್ಚಗಳಿಂದ ತೊಂದರೆಗೆ ಸಿಲುಕುವಿರಿ. ಮಕ್ಕಳ ಜೊತೆ ಉತ್ತಮ ಒಡನಾಟ ಇರುವುದಿಲ್ಲ. ಆತ್ಮೀಯರಿಗೆ ಎಲ್ಲಾ ರೀತಿಯ ಸಹಾಯ ಸಹಕಾರ ನೀಡುವಿರಿ. ನಿಮ್ಮಿಂದ ಸಹಾಯ ಪಡೆದ ಕೆಲವರು ನಿಮ್ಮಿಂದ ದೂರ ಉಳಿಯುತ್ತದೆ. ಸಣ್ಣಪುಟ್ಟ ವಿಚಾರಗಳಿಗೂ ಉಗ್ರವಾಗಿ ವರ್ತಿಸುವಿರಿ. ಮನಸ್ಸಿನ ಬೇಸರದಿಂದ ಹೊರ ಬರಲು ಕುಟುಂಬದ ಸದಸ್ಯರ ಜೊತೆ ಯಾತ್ರಾಸ್ಥಳಕ್ಕೆ ಭೇಟಿ ನೀಡುವಿರಿ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಆಕಾಶ ನೀಲಿ

ವೃಶ್ಚಿಕ

ನಿಮ್ಮಲ್ಲಿ ವಿಶೇಷವಾದ ಜನಾಕರ್ಷಕ ಶಕ್ತಿ ಇರುತ್ತದೆ. ಇದರಿಂದ ಯಾವುದೇ ಕೆಲಸ ಕಾರ್ಯಗಳಾದರೂ ಸುಲಭವಾಗಿ ಯಶಸ್ಸನ್ನು ಗಳಿಸುವಿರಿ. ನಿಮ್ಮಲ್ಲಿನ ಆತ್ಮವಿಶ್ವಾಸ ಎಲ್ಲರಿಗೂ ಆಶ್ಚರ್ಯ ಉಂಟುಮಾಡುತ್ತದೆ. ದೃಢವಾದ ನಿಷ್ಠೆಯಿಂದ ಹಣಕಾಸಿನ ವಿವಾದದಲ್ಲಿ ಯಶಸ್ಸನ್ನು ಗಳಿಸುವಿರಿ. ನಿಮ್ಮಲ್ಲಿರುವ ಸಮರ್ಪಣಾ ಮನೋಭಾವನೆ ಗುಣ ಇತರರಿಗೂ ದಾರಿದೀಪವಾಗಲಿದೆ. ಉದ್ಯೋಗದಲ್ಲಿ ಅಧಿಕಾರಿಯ ಸ್ಥಾನಮಾನ ದೊರೆಯುತ್ತದೆ. ರಾಜಕೀಯ ವ್ಯಕ್ತಿಗಳು ಮತ್ತು ಹಿರಿಯ ಅಧಿಕಾರಿಗಳಿಗೆ ವಿಶೇಷ ಫಲಗಳು ದೊರೆಯಲಿವೆ. ಸಣ್ಣಪುಟ್ಟ ವಿಚಾರವಾದರೂ ಹೆಚ್ಚಿನ ಶ್ರಮ ವಹಿಸಿ ಗೆಲುವು ಸಾಧಿಸುವಿರಿ. ನಿಮ್ಮ ಮೇಲೆ ನಿಮಗೆ ಹೆಚ್ಚಿನ ನಂಬಿಕೆ ಇರುತ್ತದೆ. ನಿಮ್ಮ ಗೌರವಕ್ಕೆ ಧಕ್ಕೆ ಬರುವ ಯಾವುದೇ ಕೆಲಸ ಮಾಡುವುದಿಲ್ಲ.

ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

 

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.