ಹಣದ ವ್ಯವಹಾರದಲ್ಲಿ ಆತುರದ ನಿರ್ಧಾರ ಬೇಡ, ನಿಮ್ಮ ತಾಳ್ಮೆಗೆ ವಿರೋಧಿಗಳನ್ನೂ ಗೆಲ್ಲಿಸುವ ಶಕ್ತಿಯಿದೆ: ಮೇ 23ರ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಹಣದ ವ್ಯವಹಾರದಲ್ಲಿ ಆತುರದ ನಿರ್ಧಾರ ಬೇಡ, ನಿಮ್ಮ ತಾಳ್ಮೆಗೆ ವಿರೋಧಿಗಳನ್ನೂ ಗೆಲ್ಲಿಸುವ ಶಕ್ತಿಯಿದೆ: ಮೇ 23ರ ರಾಶಿಫಲ

ಹಣದ ವ್ಯವಹಾರದಲ್ಲಿ ಆತುರದ ನಿರ್ಧಾರ ಬೇಡ, ನಿಮ್ಮ ತಾಳ್ಮೆಗೆ ವಿರೋಧಿಗಳನ್ನೂ ಗೆಲ್ಲಿಸುವ ಶಕ್ತಿಯಿದೆ: ಮೇ 23ರ ರಾಶಿಫಲ

23 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (23rd May 2024 Daily Horoscope).

ಮೇ 22ರ ರಾಶಿಫಲ
ಮೇ 22ರ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (23rd May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ: ಹುಣ್ಣಿಮೆ 06.20 ರವರೆಗೂ ಇರುತ್ತದೆ ನಂತರ ಪಾಡ್ಯ ಆರಂಭವಾಗುತ್ತದೆ.

ನಕ್ಷತ್ರ: ವಿಶಾಖ ನಕ್ಷತ್ರವು ಬೆಳಗ್ಗೆ 08.37 ರವರೆಗು ಇದ್ದು ನಂತರ ಅನೂರಾಧ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.39

ರಾಹುಕಾಲ: 1.55 ರಿಂದ 03.31

ರಾಶಿಫಲ

ಮೇಷ

ಕುಟುಂಬದಲ್ಲಿ ತಂದೆಯವರ ದುಡುಕು ಮಾತಿನಿಂದ ಬೇಸರ ಉಂಟಾಗುತ್ತದೆ. ನಿಮ್ಮ ಮಾತುಕತೆಯಿಂದ ವಿವಾದಗಳು ಮರೆಯಾಗುತ್ತವೆ. ಉದ್ಯೋಗದಲ್ಲಿ ಎದುರಾಗುವ ಒತ್ತಡವನ್ನು ಮೀರಿ ಉನ್ನತ ಸಾಧನೆ ಮಾಡುವಿರಿ. ಮಗಳ ಜೀವನದಲ್ಲಿ ಶುಭಫಲಗಳು ದೊರೆಯುತ್ತವೆ. ವ್ಯಾಪಾರ ವ್ಯವಹಾರದಲ್ಲಿ ದುಡುಕಿನ ನಿರ್ಧಾರ ತೆಗೆದುಕೊಳ್ಳದಿರಿ. ದಿನನಿತ್ಯದ ಆದಾಯದಲ್ಲಿ ಏರಿಕೆ ಇರುತ್ತದೆ. ವಿದ್ಯಾರ್ಥಿಗಳು ಎಲ್ಲರ ಆಶಯದಂತೆ ವಿದ್ಯಾರ್ಜನೆಯಲ್ಲಿ ಮೊದಲಿಗರಾಗುತ್ತಾರೆ. ಬಹುದಿನದ ಕನಸಿನಂತೆ ವಿಶಾಲವಾದ ಮನೆಯನ್ನು ಕೊಳ್ಳುವ ಯೋಜನೆ ರೂಪಿಸುವಿರಿ. ಹೊಸ ವಾಹನವನ್ನು ಕೊಳ್ಳುವಿರಿ. ಸಂತಾನ ಲಾಭವಿದೆ. ಸಹನೆಯಿಂದ ವಿರೋಧಿಗಳ ಗೆಲ್ಲಬಲ್ಲಿರಿ. ಹಣದ ವ್ಯವಹಾರದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳದಿರಿ.

ಪರಿಹಾರ : ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನಸು ಗೆಂಪು

ವೃಷಭ

ಸನ್ನಡತೆಯಿಂದ ಗುರು ಹಿರಿಯರ ಮನಸ್ಸನ್ನು ಗೆಲ್ಲುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಂಡುಬರುವುದಿಲ್ಲ. ಸಹೋದ್ಯೋಗಿಗಳ ಮಾತನ್ನು ಗೌರವಿಸುವಿರಿ. ವಂಶ ಪಾರಂಪರ್ಯವಾಗಿ ಬಂದ ವ್ಯಾಪಾರ ವ್ಯವಹಾರದಲ್ಲಿ ಆಸಕ್ತಿ ಉಂಟಾಗುತ್ತದೆ. ವಿದ್ಯಾರ್ಜನೆಯಲ್ಲಿ ವಿಶೇಷ ಆಸಕ್ತಿ ತೋರುವಿರಿ. ವಿದ್ಯಾರ್ಥಿಗಳು ನಿರೀಕ್ಷಿತ ಯಶಸ್ಸು ಗಳಿಸುತ್ತಾರೆ. ಗೆಲ್ಲುವ ಗುರಿ ಇರುವ ಕಾರಣ ಕುಟುಂಬದ ಆದಾಯದಲ್ಲಿ ತೊಂದರೆ ಆಗದು. ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವಿರಿ. ಸೋದರಿಯ ಕುಟುಂಬದ ಸಮಸ್ಯೆ ಬಗೆಹರಿಸಲು ಶತಪ್ರಯತ್ನ ಪಡುವಿರಿ. ಸಂಗಾತಿಗೆ ಅನಿರೀಕ್ಷಿತ ಧನಲಾಭವಿದೆ. ನರನಿಶ್ಯಕ್ತಿಯ ತೊಂದರೆಯಿಂದ ಬಳಲುವಿರಿ. ವಂಶದ ಆಸ್ತಿಯಲ್ಲಿ ಸಮಪಾಲು ದೊರೆಯುತ್ತದೆ.

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಮಿಥುನ

ಸಂಸಾರದಲ್ಲಿನ ಬಿಕ್ಕಟ್ಟು ಮಿತಿ ಮೀರಬಹುದು. ವಂಶದ ಆಸ್ತಿಯ ವಿಚಾರದಲ್ಲಿ ಅನಾವಶ್ಯಕ ವಾದ ವಿವಾದವಿರುತ್ತದೆ. ಉದ್ಯೋಗದಲ್ಲಿ ನಿಮ್ಮ ಕಾರ್ಯದಕ್ಷತೆಗೆ ತಕ್ಕಂಥ ಸ್ಥಾನ ಮಾನ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ತೊಂದರೆ ಎದುರಾಗಲಿದೆ. ಸಾಲದ ವ್ಯವಹಾರದಲ್ಲಿ ಬೇರೆಯವರ ಸಹಾಯ ಪಡೆಯುವಿರಿ. ಮಾರಾಟ ಪ್ರತಿನಿಧಿಗಳಾದಲ್ಲಿ ಉತ್ತಮ ಆದಾಯ ಇರುತ್ತದೆ. ಉತ್ತಮ ಅವಕಾಶ ದೊರೆವ ಕಾರಣ ಉದ್ಯೋಗವನ್ನು ಬದಲಾಯಿಸುವಿರಿ. ವಿದ್ಯಾರ್ಥಿಗಳು ಹಿರಿಯರ ಮಾರ್ಗದರ್ಶನದಲ್ಲಿ ಯಶಸ್ಸನ್ನು ಕಾಣುತ್ತಾರೆ. ಹಣಕಾಸಿನ ವಿಚಾರದಲ್ಲಿ ಆತ್ಮೀಯರಿಂದ ತೊಂದರೆ ಉಂಟಾಗುತ್ತದೆ. ಸಮಾಜದಲ್ಲಿ ಗೌರವಯುತ ಸ್ಥಾನ ಲಭಿಸುತ್ತದೆ.

ಪರಿಹಾರ : ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಕಟಕ

ಕುಟುಂಬವನ್ನು ದೊಡ್ಡ ವಿವಾದವೊಂದರಿಂದ ಪಾರು ಮಾಡುವಿರಿ. ಗಣ್ಯವ್ಯಕ್ತಿಗಳ ಸಹಾಯದಿಂದ ಖ್ಯಾತ ಸಂಸ್ಥೆಯೊಂದರಲ್ಲಿ ಉದ್ಯೋಗ ಲಭಿಸುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಸೋದರರ ನಡುವೆ ಬಿನಾಭಿಪ್ರಾಯ ಉಂಟಾಗುತ್ತದೆ. ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಬರವಣಿಗೆಯಲ್ಲಿಯೂ ಮುನ್ನಡೆಯುತ್ತಾರೆ. ಭೂ ಅಭಿವೃದ್ಧಿ ಕೆಲಸ ಕಾರ್ಯದಲ್ಲಿ ತಂದೆಯವರಿಗೆ ಲಾಭವಿರುತ್ತದೆ. ಅನಾವಶ್ಯಕ ವಿವಾದದಿಂದಾಗಿ ವೈರಾಗ್ಯದ ಭಾವನೆ ಉಂಟಾಗುತ್ತದೆ. ತೋಟಗಾರಿಕೆಯಿಂದ ಲಾಭವಿದೆ. ತಾಯಿಯ ಆರೋಗ್ಯದಲ್ಲಿ ಏರಿಳಿತ ಇರುತ್ತದೆ. ಗಂಟಲಬೇನೆ ನಿಮ್ಮನ್ನು ಕಾಡುತ್ತದೆ. ಕ್ರೀಡಾಪಟುಗಳ ಜೀವನದಲ್ಲಿ ದೊಡ್ಡ ತಿರುವು ದೊರೆಯುತ್ತದೆ. ಆತುರದ ನಿರ್ಧಾರ ತೆಗೆದುಕೊಳ್ಳದಿರಿ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬೂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.