ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಮಕ್ಕಳ ಬಗ್ಗೆ ಎಚ್ಚರಿಕೆ ಅಗತ್ಯ, ಭೂ ಸಂಬಂಧಿತ ವ್ಯವಹಾರದಲ್ಲಿ ನಿರೀಕ್ಷಿತ ಲಾಭ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ

ಮಕ್ಕಳ ಬಗ್ಗೆ ಎಚ್ಚರಿಕೆ ಅಗತ್ಯ, ಭೂ ಸಂಬಂಧಿತ ವ್ಯವಹಾರದಲ್ಲಿ ನಿರೀಕ್ಷಿತ ಲಾಭ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ

23 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (23rd May 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (23rd May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ: ಹುಣ್ಣಿಮೆ 06.20 ರವರೆಗೂ ಇರುತ್ತದೆ ನಂತರ ಪಾಡ್ಯ ಆರಂಭವಾಗುತ್ತದೆ.

ನಕ್ಷತ್ರ: ವಿಶಾಖ ನಕ್ಷತ್ರವು ಬೆಳಗ್ಗೆ 08.37 ರವರೆಗು ಇದ್ದು ನಂತರ ಅನೂರಾಧ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.39

ರಾಹುಕಾಲ: 1.55 ರಿಂದ 03.31

ರಾಶಿಫಲ

ಸಿಂಹ

ಮಾನಸಿಕ ನೆಮ್ಮದಿಯ ಕೊರತೆ ಇರುತ್ತದೆ. ಯಾರೊಬ್ಬರ ಮಾತನ್ನು ನಂಬುವುದಿಲ್ಲ. ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಬದಲಾವಣೆ ಉಂಟಾಗಲಿದೆ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುತ್ತದೆ. ಫಲಿತಾಂಶಕ್ಕೆ ಕಾಯದೆ ನಿಮ್ಮ ಕರ್ತವ್ಯವನ್ನು ಪೂರೈಸುವಿರಿ. ಆತ್ಮೀಯರ ಸಹಾಯ ದೊರೆಯುತ್ತದೆ. ಉದ್ಯೋಗದಲ್ಲಿನ ಅನಿರೀಕ್ಷಿತ ಬದಲಾವಣೆಯಿಂದ ಅನುಕೂಲವಿದೆ. ಭೂ ಸಂಬಂಧಿತ ವ್ಯವಹಾರದಲ್ಲಿ ನಿರೀಕ್ಷಿತ ಲಾಭಾಂಶ ದೊರೆಯುತ್ತದೆ. ಕುಟುಂಬದ ಕೆಲಸ ಕಾರ್ಯಗಳು ಮುಂದೂಡಲ್ಪಡುತ್ತವೆ. ಕಷ್ಟದ ಸಂದರ್ಭದಲ್ಲಿ ಹಿರಿಯರಿಂದ ಹಣದ ಸಹಾಯ ದೊರೆಯುತ್ತದೆ. ಮನೆಯಲ್ಲಿರುವ ಮಕ್ಕಳ ಬಗ್ಗೆ ಎಚ್ಚರ ಇರಲಿ. ನೀರಿರುವ ಪ್ರದೇಶದಿಂದ ದೂರವಿರಿ. ಜನಸೇವೆಯಲ್ಲಿ ಆಸಕ್ತಿ ಉಂಟಾಗಲಿದೆ.

ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ನೀಲಿಬಣ್ಣ

ಕನ್ಯಾ

ಹಣಕಾಸಿಗೆ ಸಂಬಂಧಿಸಿದ ವಿವಾದವು ಪರಿಹಾರವಾಗುತ್ತವೆ. ಉದ್ಯೋಗದಲ್ಲಿ ನಿಮ್ಮ ಮನದಾಳದಂತೆ ಸಕಾರಾತ್ಮಕ ಬೆಳವಣಿಗೆ ಕಂಡುಬರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ವಿಶೇಷ ಅದ್ಯಯನಕ್ಕಾಗಿ ವಿದೇಶಕ್ಕೆ ತೆರಳುತ್ತಾರೆ. ರಾಜಕೀಯದಲ್ಲಿ ಉತ್ತಮ ಬೆಳವಣಿಗೆ ಇರುತ್ತದೆ. ವ್ಯವಸಾಯದಲ್ಲಿ ಆಸಕ್ತಿಯ ಜೊತೆಯಲ್ಲಿ ಅವಕಾಶವೂ ದೊರೆಯುತ್ತದೆ. ಗಣ್ಯ ವ್ಯಕ್ತಿಗಳ ಆಶ್ರಯ ದೊರೆಯುತ್ತದೆ. ಸೋದರಿಯ ವಿವಾಹ ನಿಶ್ಚಯವಾಗುತ್ತದೆ. ಸಮಾಜದಲ್ಲಿ ಗೌರವದ ಸ್ಥಾನ ಮಾನ ಲಭಿಸುತ್ತವೆ. ಆಧ್ಯಾತ್ಮಿಕ ಕಾರ್ಯಕ್ರಮ ಆಯೋಜಿಸುವವರಿಗೆ ಉನ್ನತ ಗೌರವ ಲಭಿಸುತ್ತದೆ. ಸುಲಭವಾಗಿ ಸೋಲೊಪ್ಪುವುದಿಲ್ಲ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಗುಲಾಬಿ

ತುಲಾ

ವಿಶೇಷವಾದ ಕೆಲಸವೊಂದರ ಜವಾಬ್ದಾರಿ ನಿಮ್ಮದಾಗುತ್ತದೆ. ಜನ್ಮಸ್ಥಳದಿಂದ ದೂರದ ಊರಿನಲ್ಲಿ ಉದ್ಯೋಗ ದೊರೆಯುತ್ತದೆ. ಹಣಕಾಸಿನ ವಿಚಾರದ ಬಗ್ಗೆ ಯೋಚನೆ ಇರುತ್ತದೆ. ಕುಟುಂಬದ ಅಬಿವೃದ್ದಿಯ ಬಗ್ಗೆ ಗಮನ ತೋರುವಿರಿ. ವಿಚಾರ ಅರಿಯದೆ ದುಡುಕಿ ಮಾತನಾಡುವ ಕಾರಣ ವಿರೋಧಿಗಳು ಹೆಚ್ಚುತ್ತಾರೆ. ರಕ್ತದೊತ್ತಡದ ತೊಂದರೆ ಇದ್ದಲ್ಲಿ ಎಚ್ಚರಿಕೆ ಇರಲಿ. ವ್ಯಾಪಾರ ವ್ಯವಹಾರದಲ್ಲಿ ಅಡಚಣೆ ಎದುರಾಗುತ್ತದೆ. ಸಂಸಾರದಲ್ಲಿನ ತೊಂದರೆ ದೂರವಾಗುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಗಿವ ಮುನ್ನವೇ ಉದ್ಯೋಗ ಲಭಿಸುತ್ತದೆ. ತಂದೆಯ ಅನುಭವದ ಪ್ರಯೋಜನ ಪಡೆದು ಹಣಕಾಸಿನ ವಿಚಾರದಲ್ಲಿ ಯಶಸ್ಸು ಗಳಿಸುವಿರಿ. ಸಂಗಾತಿಯ ಆರೋಗ್ಯದಲ್ಲಿ ತೊಂದರೆ ಇರುತ್ತದೆ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು ಉತ್ತರ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ವೃಶ್ಚಿಕ

ಸೋದರರ ನಡುವೆ ಒಮ್ಮತ ಏರ್ಪಡುತ್ತದೆ. ಆರೋಗ್ಯದ ತೊಂದರೆ ನಿವಾರಣೆ ಆಗುತ್ತದೆ. ಉದ್ಯೋಗದಲ್ಲಿನ ಒತ್ತಡದ ಸನ್ನಿವೇಶಕ್ಕೆ ಪರಿಹಾರವನ್ನು ಕಂಡುಹಿಡಿಯುವಿರಿ. ವ್ಯಾಪಾರದಲ್ಲಿ ಆಸಕ್ತಿ ಕಡಿಮೆಯಾಗಿ ಉದ್ಯೋಗದ ನಿರೀಕ್ಷೆ ಮೂಡುತ್ತದೆ. ಹಣದ ವ್ಯವಹಾರದಲ್ಲಿ ಸಹಾಯದ ನಿರೀಕ್ಷೆ ಬೇಡ. ವಿದ್ಯಾರ್ಥಿಗಳು ಯೋಗ ಮತ್ತು ಪ್ರಾಣಾಯಾಮದಂತಹ ಸಾಂಪ್ರಾದಾಯಿಕ ಕಲೆಗಳನ್ನು ಕಲಿಯಲಿದ್ದಾರೆ. ಆಹಾರ ಕ್ರಮದ ಬದಲಾವಣೆ ಆರೊಗ್ಯದಲ್ಲಿ ಸ್ಥಿರತೆಯನ್ನು ನೀಡುತ್ತದೆ. ತಪ್ಪು ನಿರ್ಧಾರದಿಂದ ಸ್ನೇಹಿತರಿಂದ ದೂರ ಉಳಿಯುವಿರಿ. ಗಣ್ಯವ್ಯಕ್ತಿಯೊಬ್ಬರ ಸಹಾಯ ಸಹಕಾರ ದೊರೆಯುತ್ತದೆ.

ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).