ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಸಂಗಾತಿಯ ಆರೋಗ್ಯದಲ್ಲಿ ಏರಿಳಿತ, ಸಂಬಂಧಿಕರೊಂದಿಗೆ ಭೂವಿವಾದ ಉದ್ಭವಿಸಲಿದೆ; ಮೇ 23ರ ರಾಶಿಫಲ

Horoscope Today: ಸಂಗಾತಿಯ ಆರೋಗ್ಯದಲ್ಲಿ ಏರಿಳಿತ, ಸಂಬಂಧಿಕರೊಂದಿಗೆ ಭೂವಿವಾದ ಉದ್ಭವಿಸಲಿದೆ; ಮೇ 23ರ ರಾಶಿಫಲ

23 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (23rd May 2024 Daily Horoscope).

ಮೇ 22ರ ರಾಶಿಫಲ
ಮೇ 22ರ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(23rd May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ: ಹುಣ್ಣಿಮೆ 06.20 ರವರೆಗೂ ಇರುತ್ತದೆ ನಂತರ ಪಾಡ್ಯ ಆರಂಭವಾಗುತ್ತದೆ.

ನಕ್ಷತ್ರ: ವಿಶಾಖ ನಕ್ಷತ್ರವು ಬೆಳಗ್ಗೆ 08.37 ರವರೆಗು ಇದ್ದು ನಂತರ ಅನೂರಾಧ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.39

ರಾಹುಕಾಲ: 1.55 ರಿಂದ 03.31

ರಾಶಿಫಲ

ಧನಸ್ಸು

ಜೀವನದಲ್ಲಿ ಶಾಂತಿ ನೆಮ್ಮದಿ ಇರುತ್ತದೆ. ಉದ್ಯೋಗ ಬದಲಿಸುವ ಸಾಧ್ಯತೆ ಇದೆ. ಕೌಟುಂಬಿಕ ಕೆಲಸ ಕಾರ್ಯಗಳಿಗೆ ಹಿರಿಯರಿಂದ ಹಣ ದೊರೆಯುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸದಲ್ಲಿ ಯಶಸ್ಸು ಗಳಿಸುತ್ತಾರೆ. ಶ್ರಮವೆನಿಸುವ ಕೆಲಸವನ್ನು ಮಾಡಲಿಚ್ಚಿಸುವುದಿಲ್ಲ. ತಂದೆಯವರ ಹಣದ ವಿವಾದವನ್ನು ಪರಿಹರಿಸುವಿರಿ. ಐಷಾರಾಮಿ ವಾಹನ ಕೊಳ್ಳುವ ಮನಸ್ಸಾಗುತ್ತದೆ. ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಉದ್ಯೋಗ ಗಳಿಸುತ್ತಾರೆ. ಕಮೀಷನ್ ಆಧಾರಿತ ಉಪವೃತ್ತಿಯೊಂದನ್ನು ಆರಂಭಿಸುವಿರಿ. ದುಬಾರಿ ಬೆಲೆಯ ವಸ್ತ್ರಗಳನ್ನು ಕೊಳ್ಳುವಿರಿ. ಸಂಗಾತಿಯ ಆರೋಗ್ಯದಲ್ಲಿ ಏರಿಳಿತ ಕಂಡುಬರುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು

ಮಕರ

ಬಾಯಿ ಮಾತಿನಲ್ಲಿ ಯಾವುದೇ ಕೆಲಸ ಮಾಡಲಾಗುವುದಿಲ್ಲ. ವ್ಯಾಪಾರ ವ್ಯವಹಾರದಲ್ಲಿ ಬಂಡವಾಳವನ್ನು ಹೆಚ್ಚಿಸುವಿರಿ. ಉದ್ಯೋಗದಲ್ಲಿ ಸಂಯಮದಿಂದ ವರ್ತಿಸಿದಲ್ಲಿ ಅಧಿಕಾರಿಗಳ ಸಹಕಾರ ಲಭಿಸುತ್ತದೆ. ಎಲ್ಲರು ಮೆಚ್ಚುವಂತೆ ಮಾತನಾಡಿ ಕೆಲಸ ಸಾಧಿಸುವಿರಿ. ಕುಟುಂಬದ ಕೆಲಸಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಜಾಣ್ಮೆಯಿಂದ ವರ್ತಿಸುವಿರಿ. ಸದ್ದಿಲ್ಲದೆ ವಿದ್ಯಾರ್ಥಿಗಳು ತಮ್ಮ ಗುರಿ ತಲುಪುತ್ತಾರೆ. ನಿಮ್ಮ ಮನಸ್ಸಿನ ಯೋಜನೆಯನ್ನು ಯಾರಿಗೂ ತಿಳಿಸುವುದಿಲ್ಲ. ಗೃಹಿಣಿಯರು ನಿಶ್ಯಕ್ತಿಯಿಂದ ಬಳಲುತ್ತಾರೆ. ವಿದ್ಯಾರ್ಥಿಗಳು ನೆಮ್ಮದಿಯಿಂದ ಮನರಂಜನೆಯತ್ತ ಗಮನಹರಿಸುತ್ತಾರೆ. ಯಾರ ಸಹಾಯವನ್ನೂ ನಿರೀಕ್ಷಿಸುವುದಿಲ್ಲ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಕುಂಭ

ಮಾತೇ ಮೂಲ ಬಂಡವಾಳ ಆಗಲಿದೆ. ಉದ್ಯೋಗದಲ್ಲಿ ಮಾತಿನ ಬದಲು ಮೌನಕ್ಕೆ ಪ್ರಾಶಸ್ತ್ಯ ನೀಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಜಾಣ್ಮೆಯಿಂದ ಕೆಲಸವನ್ನು ಸಾಧಿಸುವಿರಿ. ವಿದ್ಯಾರ್ಥಿಗಳು ಗುರಿ ತಲುಪುವ ತನಕ ಮೌನ ವಹಿಸುವರು. ಮನಸ್ಸಿನ ನೋವನ್ನುಯಾರಿಗೂ ತಿಳಿಸದೆ ಬೇರೆಯವರ ಗೆಲುವಿನಲ್ಲಿ ಪಾಲ್ಗೊಳ್ಳುವಿರಿ. ಗೃಹಿಣಿಯರಿಗೆ ಬಿಡುವಿಲ್ಲದ ದುಡಿಮೆ ಆಗಿರುತ್ತದೆ. ವಿದ್ಯಾರ್ಥಿಗಳು ಉದ್ಯೋಗಕ್ಕೆ ಸೇರಬಯಸುತ್ತಾರೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರುತ್ತದೆ. ಕುಟುಂಬದ ಸದಸ್ಯರ ಜೊತೆ ಮನರಂಜನಾ ತಾಣಕ್ಕೆ ತೆರಳುವಿರಿ. ತಾಯಿಯವರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಜಗಳ ಕದನಗಳಿಗೆ ಆಸ್ಪದ ನೀಡದೆ ರಾಜಿ ಮಾಡಿಕೊಳ್ಳುವಿರಿ. ಸಂಬಂಧಿಕರೊಡನೆ ಭೂವಿವಾದವೊಂದು ಎದುರಾಗಲಿದೆ.

ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಹಸಿರು

ಮೀನ

ಕುಟುಂಬದ ಹಿಂದಿನ ಹಣಕಾಸಿನ ವಿವಾದವೊಂದು ಪರಿಹಾರಗೊಳ್ಳಲಿದೆ. ಉದ್ಯೋಗದಲ್ಲಿ ಸ್ನೇಹ ಪ್ರೀತಿಯಿಂದ ವರ್ತಿಸುವುದು ಒಳ್ಳೆಯದು. ಹಣಕಾಸಿನ ವ್ಯವಹರಿಸಿದಲ್ಲಿ ಎಚ್ಚರಿಕೆ ಇರಲಿ. ವ್ಯಾಪಾರ ವ್ಯಾವಹಾರದಲ್ಲಿ ಸಾಧಾರಣ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ಪರಸ್ಥಳಕ್ಕೆ ತೆರಳಲಿದ್ದಾರೆ. ಸೋದರನ ವ್ಯಾಪಾರಕ್ಕೆ ಸಹಾಯ ಮಾಡುವಿರಿ. ಬಂಧು ಬಳಗದವರಿಂದ ದೂರ ಉಳಿಯುವಿರಿ. ಗಾಯಕರಿಗೆ ಅಪರೂಪದ ಅವಕಾಶ ದೊರೆಯುತ್ತದೆ. ಆಧುನಿಕತೆಗೆ ತಕ್ಕಂತೆ ಮನೆಯನ್ನು ನವೀಕರಿಸುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಕಿರುಪ್ರವಾಸಕ್ಕೆ ತೆರಳುವಿರಿ. ಧಾರ್ಮಿಕ ಕೇಂದ್ರಕ್ಕೆ ಹಣದ ಸಹಾಯ ಮಾಡುವಿರಿ. ಆರೋಗ್ಯದ ಬಗ್ಗೆ ಗಮನ ವಹಿಸಿ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಕೇಸರಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).