ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಕುಟುಂಬದ ಹಿರಿಯರ ಸಲಹೆಯನ್ನು ಪರಿಗಣಿಸಿದರೆ ಕೆಲಸದಲ್ಲಿ ಯಶಸ್ಸು: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Horoscope Today: ಕುಟುಂಬದ ಹಿರಿಯರ ಸಲಹೆಯನ್ನು ಪರಿಗಣಿಸಿದರೆ ಕೆಲಸದಲ್ಲಿ ಯಶಸ್ಸು: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

24 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (24 April 2024 Daily Horoscope).

24 ಏಪ್ರಿಲ್‌ 2024 ದಿನ ಭವಿಷ್ಯ
24 ಏಪ್ರಿಲ್‌ 2024 ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (24 April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ : ಪಾಡ್ಯ ಬೆಳಗ್ಗೆ5.16 ರವರೆಗೂ ಇದ್ದು ನಂತರ ಬಿದಿಗೆ ಆರಂಭವಾಗುತ್ತದೆ.

ನಕ್ಷತ್ರ: ಸ್ವಾತಿ ನಕ್ಷತ್ರವು ರಾತ್ರಿ 11.31 ರವರೆಗು ಇದ್ದು ನಂತರ ವಿಶಾಖ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.03

ಸೂರ್ಯಾಸ್ತ: ಸಂಜೆ 06.32

ರಾಹುಕಾಲ: ಮಧ್ಯಾಹ್ನ 12.22 ರಿಂದ 01.56

ರಾಶಿಫಲ

ಮೇಷ

ಅತಿಯಾದ ಕೋಪದಿಂದ ಸಣ್ಣಮಟ್ಟದ ವಿವಾದ ದೊಡ್ಡದಾಗಬಹುದು. ಹಣಕಾಸಿನ ವಿಚಾರದಲ್ಲಿ ಕುಟುಂಬದಲ್ಲಿ ಪರಸ್ಪರ ಅಸಮಾಧಾನವಿರುತ್ತದೆ. ಶಾಂತಿ ಸಹನೆಯಿಂದ ವರ್ತಿಸಿದರೆ ದೂರವಾಗಿದ್ದ ಅವಕಾಶವನ್ನು ಮರಳಿ ಪಡೆಯಬಹುದು. ಸೋದರಿಯ ಸಹಾಯದಿಂದ ಹಣಕಾಸಿನ ತೊಂದರೆ ಪರಿಹಾರಗೊಳ್ಳಲಿದೆ. ಸಂಗಾತಿಯೊಂದಿಗೆ ಶಾಂತಿಯಿಂದ ವರ್ತಿಸಿದರೆ ಕುಟುಂಬದಲ್ಲಿ ಸಂತಸದ ವಾತಾವರಣ ಉಂಟಾಗುತ್ತದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ವರ್ತನೆ ಬೇಸರ ಮೂಡಿಸುತ್ತದೆ. ಮಕ್ಕಳ ಜವಾಬ್ದಾರಿಯು ಹೆಚ್ಚಿನ ಖರ್ಚು ವೆಚ್ಚಗಳಿಗೆ ದಾರಿಯಾಗುತ್ತದೆ. ಉತ್ತಮ ಆರೋಗ್ಯವಿರುತ್ತದೆ. ಕುಟುಂಬದ ಹಿರಿಯರ ಆಶಯದಂತೆ ನಡೆದರೆ ಸುಖಕರ ಜೀವನ ನಿಮ್ಮದಾಗಿರುತ್ತದೆ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ವೃಷಭ

ಗಡಿಮೀರದ ಆತ್ಮವಿಶ್ವಾಸ ಒಳ್ಳೆಯದು. ಆದರೆ ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಬದಲಾಯಿಸಲು ವಿಫಲರಾಗುವಿರಿ. ಸಮಯವನ್ನು ಆಧರಿಸಿಕೊಂಡು ಕೆಲಸ ಕಾರ್ಯಗಳಲ್ಲಿ ತೊಡಗುವುದು ಒಳ್ಳೆಯದು. ಪ್ರೀತಿ ವಿಶ್ವಾಸದ ಮಾತುಗಳಿಂದ ಜನರ ಮನಸ್ಸನ್ನು ಗೆಲ್ಲುವಿರಿ. ದ್ವೇಷದ ಮನೋಭಾವನೆಯಿಂದ ಹೊರ ಬರುವುದು ಒಳ್ಳೆಯದು. ಗೆಲ್ಲಲೇಬೇಕೆಂಬ ಹಟದಿಂದ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಹಣಕಾಸಿನ ವಿಚಾರದಲ್ಲಿ ಬುದ್ದಿವಂತಿಕೆಯ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಸಂಗಾತಿಯ ನಡುವೆ ಉತ್ತಮ ಬಾಂಧವ್ಯ ಮೂಡುತ್ತದೆ. ಆತ್ಮೀಯರೊಂದಿಗೆ ಸಂತೋಷದಿಂದ ದಿನ ಕಳೆಯುವಿರಿ. ಪಾಲುದಾರಿಕೆ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಬಿಳಿ

ಮಿಥುನ

ಮನದಲ್ಲಿ ಸಕಾರಾತ್ಮಕ ಚಿಂತನೆಗಳು ಇರಲಿವೆ. ಇದರಿಂದಾಗಿ ಕೈ ಹಿಡಿದ ಕೆಲಸ ಕಾರ್ಯಗಳಲ್ಲಿ ಸುಲಭದ ಜಯ ನಿಮ್ಮದಾಗಲಿದೆ. ವಿವಾಹಿತರಿಗೆ ಸಂಗಾತಿಯಿಂದ ಹಣಕಾಸಿನ ಸಹಾಯ ದೊರೆಯಲಿದೆ. ಕುಟುಂಬದ ಹಿರಿಯರ ಮನಸ್ಸಿಗೆ ನೋವುಂಟಾಗುವ ಮಾತನಾಡಲಿದ್ದೀರಿ. ಸದಾ ಕಾಲ ಯಾವುದಾದರೂಂದು ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಹಣದ ಅವಶ್ಯಕತೆ ಎದುರಾಗಲಿದೆ. ಮನದ ಬೇಸರ ಕಡೆಯಲು ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವಿರಿ. ಉದ್ಯೋಗದಲ್ಲಿ ಅಧಿಕಾರಿಯೊಂದಿಗೆ ಅನಾವಶ್ಯಕ ವಾದ ವಿವಾದ ಉಂಟಾಗಲಿದೆ. ಖರ್ಚು ವೆಚ್ಚಗಳಿಗೆ ಸರಿದೂಗುವ ಆದಾಯ ದೊರೆಯಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬೂದು

ಕಟಕ

ಅತಿಯಾದ ಆತುರ ಬೇಡ. ಕೈ ಕಾಲುಗಳಿಗೆ ಪೆಟ್ಟು ಬೀಳುವ ಸಂಭವವಿದೆ. ಬುದ್ದಿವಂತಿಕೆಯ ತೀರ್ಮಾನಗಳು ಜೀವನದ ಸಮಸ್ಯೆಗಳನ್ನು ದೂರ ಮಾಡುತ್ತದೆ. ಕುಟುಂಬದ ಹೆಚ್ಚಿನ ಜವಾಬ್ದಾರಿಯು ನಿಮ್ಮದಾಗಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಸ್ನೇಹಿತರಿಂದ ಉತ್ತಮ ಸಹಾಯ ಸಹಕಾರ ದೊರೆಯುತ್ತದೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಬಹುದು. ಕೆಲಸ ಕಾರ್ಯಗಳಿಗೆ ಹಿರಿಯ ಅಧಿಕಾರಿಗಳ ಪ್ರಶಂಸೆ ದೊರೆಯುತ್ತದೆ. ಕೌಟುಂಬಿಕ ವಿಚಾರಗಳನ್ನು ಯಾರಲ್ಲಿಯೂ ಹೇಳಿಕೊಳ್ಳದಿರಿ. ಮನದ ಬೇಸರವನ್ನು ನೀಗಿಸಲು ಮನರಂಜನಾ ಮಾಧ್ಯಮವನ್ನು ಅವಲಂಬಿಸುವಿರಿ. ದಂಪತಿ ನಡುವೆ ಇದ್ದ ಅನಾವಶ್ಯಕ ವಾದ ವಿವಾದ ಕೊನೆಗೊಳ್ಳಲಿವೆ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).