Horoscope Today: ದುಂದುವೆಚ್ಚ ಮಾಡಿ ಹಣಕಾಸಿನ ಸಮಸ್ಯೆಗೆ ಸಿಲುಕದಿರಿ, ಆತ್ಮೀಯರೊಂದಿಗೆ ಹಣಕಾಸಿನ ವ್ಯವಹಾರ ಬೇಡ; ಏಪ್ರಿಲ್ 24ರ ರಾಶಿಫಲ
24 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (24th April 2024 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(24th April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಬುಧವಾರ
ತಿಥಿ : ಪಾಡ್ಯ ಬೆಳಗ್ಗೆ5.16 ರವರೆಗೂ ಇದ್ದು ನಂತರ ಬಿದಿಗೆ ಆರಂಭವಾಗುತ್ತದೆ.
ನಕ್ಷತ್ರ: ಸ್ವಾತಿ ನಕ್ಷತ್ರವು ರಾತ್ರಿ 11.31 ರವರೆಗು ಇದ್ದು ನಂತರ ವಿಶಾಖ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 06.03
ಸೂರ್ಯಾಸ್ತ: ಸಂಜೆ 06.32
ರಾಹುಕಾಲ: ಮಧ್ಯಾಹ್ನ 12.22 ರಿಂದ 01.56
ರಾಶಿಫಲ
ಧನಸ್ಸು
ಅಧಿಕ ಕೆಲಸ ಕಾರ್ಯಗಳು ಬೇಸರ ಉಂಟುಮಾಡುತ್ತದೆ. ಆದರೂ ಕಷ್ಟಪಟ್ಟು ಆರೋಗ್ಯವನ್ನು ಕಾಪಾಡಿಕೊಳ್ಳುವಿರಿ. ದುಂದುವೆಚ್ಚವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಯಾವುದೇ ಕೆಲಸವನ್ನು ಆರಂಭಿಸುವ ಮೊದಲು ಆ ವಿಚಾರವನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳುವಿರಿ. ಸಾಲವಾಗಿ ಹಣವನ್ನು ತೆಗೆದುಕೊಳ್ಳುವುದಿಲ್ಲ. ಮನಸ್ಸಿಗೆ ಬೇಸರವೆನಿಸಿದರೆ ಆರಂಭಿಸಿದ ಕೆಲಸವನ್ನು ಅರ್ಧಕ್ಕೆ ನಿಲ್ಲಿಸುವಿರಿ. ಪ್ರೀತಿ ವಿಶ್ವಾಸ ಗಳಿಸಿದವರ ಜೊತೆಯಲ್ಲಿ ಸಂತೋಷದಿಂದ ಕಾಲ ಕಳೆಯುವಿರಿ. ಕಷ್ಟಪಟ್ಟು ದುಡಿದ ಹಣವನ್ನು ಬೇರೆಯವರಿಗಾಗಿ ಖರ್ಚು ಮಾಡುವಿರಿ. ದಂಪತಿ ನಡುವೆ ಉತ್ತಮ ಭಾವನೆ ಇರುತ್ತವೆ. ಸಂದರ್ಭಕ್ಕೆ ಅನುಸಾರ ವರ್ತಿಸುವುದನ್ನು ಅಭ್ಯಾಸ ಮಾಡಿಕೊಳ್ಳಿರಿ.
ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಬಿಳಿ
ಮಕರ
ತೂಕ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುವಿರಿ. ಆತ್ಮೀಯರ ಸಲಹೆ ಇಲ್ಲದೆ ಹಣವನ್ನು ಭೂ ವಿವಹಾರದಲ್ಲಿ ತೊಡಗಿಸಬೇಡಿರಿ. ಕೊಟ್ಟ ಹಣವು ಸುಲಭವಾಗಿ ಮರಳಿ ಬರುವುದಿಲ್ಲ. ಸೋಲಿನ ವೇಳೆ ಸಹನೆಯನ್ನು ಕಳೆದುಕೊಳ್ಳುವಿರಿ. ಚಾಡಿ ಮಾತನ್ನು ನಂಬಿದರೆ ವೈವಾಹಿಕ ಸಂಬಂಧದಲ್ಲಿ ತೊಂದರೆ ಉಂಟಾಗಬಹುದು. ಕುಟುಂಬದ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಿಲ್ಲ. ಸೋದರನ ಮಾತಿನಂತೆ ನಡೆದುಕೊಂಡು ಉತ್ತಮ ಆದಾಯವನ್ನು ಗಳಿಸುವಿರಿ. ಆರೋಗ್ಯದ ಬಗ್ಗೆ ಗಮನವಹಿಸಿ. ತಾಯಿ ಜೊತೆಯಲ್ಲಿ ಹೆಚ್ಚಿನ ವೇಳೆಯನ್ನು ಕಳೆಯುವಿರಿ. ಉದ್ಯೋಗದಲ್ಲಿ ಉಂಟಾಗುವ ಬದಲಾವಣೆಗಳು ಹೊಸ ಆಸೆ ಮೂಡಿಸುತ್ತದೆ. ಸ್ವಂತ ವ್ಯಾಪಾರ ವ್ಯವಹಾರವನ್ನು ಆರಂಭಿಸುವ ಸಾಧ್ಯತೆಗಳಿವೆ.
ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ಕುಂಭ
ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಿರಿ. ಮೊದಲ ಆದ್ಯತೆಯನ್ನು ಸ್ವಂತ ಕೆಲಸ ಕಾರ್ಯಗಳಿಗೆ ನೀಡುವಿರಿ. ಕುಟುಂಬದಲ್ಲಿ ಪರಸ್ಪರ ಸಹಕಾರದ ಮನೋಭಾವನೆ ಇರುತ್ತದೆ. ಹಣಕಾಸಿನ ವ್ಯವಹಾರಗಳಲ್ಲಿ ಮಧ್ಯವರ್ತಿಗಳಾಗಬೇಡಿ. ಮಾಡದ ತಪ್ಪಿಗೆ ದಂಡ ತೆರಬೇಕಾಗುತ್ತದೆ. ಎಲ್ಲರೂ ಅಚ್ಚರಿಪಡುವಂತಹ ಯಶಸ್ಸನ್ನು ಗಳಿಸುವಿರಿ. ವಿದ್ಯಾರ್ಥಿಗಳು ನಿರೀಕ್ಷಿತ ಮಟ್ಟವನ್ನು ಸುಲಭವಾಗಿ ತಲುಪಲಿದ್ದಾರೆ. ಮಾತುಕತೆಯಿಂದ ಕೆಟ್ಟ ಹೆಸರನ್ನು ಗಳಿಸಬಹುದು. ಕುಟುಂಬದ ಹಣಕಾಸಿನ ಪರಿಸ್ಥಿತಿಯನ್ನು ಸುಧಾರಿಸಲು ಪ್ರಯತ್ನಿಸುವಿರಿ. ಬೇಸರ ಕಳೆಯಲು ಕುಟುಂಬದ ಜನರೊಂದಿಗೆ ಮನರಂಜನಾ ಕೂಟಕ್ಕೆ ತೆರಳುವಿರಿ. ಐಷಾರಾಮಿ ವಾಹನವೊಂದನ್ನು ಕೊಳ್ಳುವ ನಿರ್ಧಾರಕ್ಕೆ ಬರುವಿರಿ.
ಪರಿಹಾರ : ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಕೆಂಪು
ಮೀನ
ಮನದಲ್ಲಿ ಇರುವ ಆಸೆ ಆಕಾಂಕ್ಷೆಗಳನ್ನು ಯಾರಲ್ಲಿಯೂ ಹೇಳಿಕೊಳ್ಳುವುದಿಲ್ಲ. ಆತ್ಮೀಯರೊಂದಿಗೆ ಹಣಕಾಸಿನ ವ್ಯವಹಾರವನ್ನು ಮಾಡುವುದಿಲ್ಲ. ಆದರೆ ಸೋದರ ಅಥವಾ ಸೋದರಿಗೆ ಒತ್ತಾಯ ಪೂರ್ವಕವಾಗಿ ಹಣ ನೀಡುವಿರಿ. ಕುಟುಂಬದ ಶ್ರೇಯೋಬಿವೃದ್ಧಿಗಾಗಿ ಕಷ್ಟಪಡುವಿರಿ. ಸಾಧಕ ಬಾಧಕಗಳನ್ನು ಅಂದಾಜು ಮಾಡಿ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಅತಿಯಾದ ಆಸೆಯಿಂದ ಯಾವುದೇ ಕೆಲಸ ಆರಂಭಿಸುವುದಿಲ್ಲ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಕಾರಣ ನೆಮ್ಮದಿ ಇರುತ್ತದೆ. ಸಂಗಾತಿಯ ಮಾನಸಿಕ ಒತ್ತಡವನ್ನು ಕಡಿಮೆ ಮಾಡುವಿರಿ. ಎಲ್ಲರೊಂದಿಗೂ ನಗುನಗುತ್ತಾ ದಿನ ಕಳೆಯುವಿರಿ. ಮಕ್ಕಳೊಂದಿಗೆ ವಿಹಾರಧಾಮಕ್ಕೆ ತೆರಳುವಿರಿ.
ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ : ನೇರಳೆ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ವಿಭಾಗ