Horoscope Today: ಬೇರೆಯವರಿಗೆ ಸಹಾಯ ಮಾಡಲು ಹಿಂಜರಿಯಲ್ಲ, ಕುಟುಂಬದಲ್ಲಿ ಸಂತೋಷ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಬೇರೆಯವರಿಗೆ ಸಹಾಯ ಮಾಡಲು ಹಿಂಜರಿಯಲ್ಲ, ಕುಟುಂಬದಲ್ಲಿ ಸಂತೋಷ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

Horoscope Today: ಬೇರೆಯವರಿಗೆ ಸಹಾಯ ಮಾಡಲು ಹಿಂಜರಿಯಲ್ಲ, ಕುಟುಂಬದಲ್ಲಿ ಸಂತೋಷ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

24 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (24th June 2024 Horoscope).

ಸಿಂಹ, ಕನ್ಯಾ, ತುಲಾ, ವೃಶ್ಟಿಕ ರಾಶಿಯವರ ದಿನ ಭವಿಷ್ಯ ತಿಳಿಯಿರಿ.
ಸಿಂಹ, ಕನ್ಯಾ, ತುಲಾ, ವೃಶ್ಟಿಕ ರಾಶಿಯವರ ದಿನ ಭವಿಷ್ಯ ತಿಳಿಯಿರಿ.

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (10th June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಸೋಮವಾರ

ತಿಥಿ: ತದಿಗೆ ರಾತ್ರಿ 02.44ರವರೆಗು ಇದ್ದು, ಆನಂತರ ಚೌತಿ ಆರಂಭವಾಗುತ್ತದೆ.

ನಕ್ಷತ್ರ : ಉತ್ತರಾಷಾಡ ನಕ್ಷತ್ರವು ಸಂಜೆ 05.35 ರವರೆಗೆ ಇದ್ದು, ಆನಂತರ ಶ್ರವಣ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳ್ಗೆ 05.54

ಸೂರ್ಯಾಸ್ತ: ಸಂಜೆ 06.48

ರಾಹುಕಾಲ : ಬೆಳಗ್ಗೆ 07.37 ರಿಂದ ಬೆ.09.13

ಸಿಂಹ ರಾಶಿ

ಸಮಯ ವ್ಯರ್ಥ ಮಾಡದೆ ಯಾವುದಾದರೂ ಒಂದು ಕೆಲಸ ಕಾರ್ಯದಲ್ಲಿ ನಿರತರಾಗುವಿರಿ. ಗೃಹಿಣಿಯರಿಗೆ ವಿಶೇಷವಾದಂತಹ ಅನುಕೂಲತೆಗಳು ದೊರೆಯುತ್ತವೆ. ಬಂಧು ಬಳಗದವರ ಜೊತೆ ಉತ್ತಮ ಅನುಬಂಧ ಇರುತ್ತದೆ. ಅವರಿಗೆ ನಿಮ್ಮ ಮೇಲೆ ಅದೇ ಭಾವನೆ ಇರುವುದಿಲ್ಲ. ಬೇರೆಯವರಿಗೆ ಸಹಾಯ ಮಾಡಲು ಹಿಂಜರಿಯುವುದಿಲ್ಲ. ಕಷ್ಟ ನಷ್ಟದ ಸಂದರ್ಭದಲ್ಲಿ ಬುದ್ಧಿವಂತಿಕೆಯಿಂದ ಪಾರಾಗುವಿರಿ. ಕುಟುಂಬದಲ್ಲಿ ಅನಾವಶ್ಯಕ ಮನಸ್ತಾಪ ಇರುತ್ತದೆ. ಸರಿಯಾದ ಸಲಹೆ ಸೂಚನೆಗಳನ್ನು ನೀಡುವುದು ಒಳ್ಳೆಯದು. ಅತಿಯಾದ ಊಹೆ ಸಮಸ್ಯೆಗೆ ಕಾರಣವಾಗುತ್ತದೆ. ಮನದಲ್ಲಿಏನಾದರೂ ಒಂದು ಚಿಂತೆ ಇರುತ್ತದೆ. ಉತ್ತಮ ಆದಾಯವಿದ್ದರೂ ಹಣವನ್ನು ಉಳಿಸಲು ವಿಫಲರಾಗುವಿರಿ.

ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ನೇರಳೆ

ಕನ್ಯಾ ರಾಶಿ

ನಿಮ್ಮ ಪ್ರಾಮಾಣಿಕತೆಗೆ ಎಲ್ಲರ ಮೆಚ್ಚುಗೆ ದೊರೆಯುತ್ತದೆ. ಉದ್ಯೋಗದಲ್ಲಿ ನಿಮ್ಮಲ್ಲಿನ ಕಾರ್ಯದಕ್ಷತೆಗೆ ಉನ್ನತ ಗೌರವ ದೊರೆಯುತ್ತದೆ. ಬೇರೊಬ್ಬರ ಅಧೀನಕ್ಕೆ ಒಳಪಡದೆ ಸ್ವತಂತ್ರ ಜೀವನವನ್ನು ಇಷ್ಟಪಡುವಿರಿ. ಕುಟುಂಬದಲ್ಲಿ ಸದಾ ಕಾಲ ಸಂತೋಷ ಸಂಭ್ರಮ ಇರಲು ಕಾರಣರಾಗುವಿರಿ. ಕಲ್ಪನಾ ಜೀವಿಗಳು ನೆರೆಹೊರೆಯವರ ಜೊತೆಯಲ್ಲಿ ಉತ್ತಮ ಸ್ನೇಹ ಮತ್ತು ನಂಬಿಕೆ ಇರುತ್ತದೆ. ಎಂತಹ ಕಷ್ಟದ ಸಮಯವೆಂದರು ಸತ್ಯವನ್ನು ಹೇಳಲು ಇಷ್ಟಪಡುವಿರಿ. ಶಿಸ್ತುಬದ್ಧ ಜೀವನದಿಂದ ಎಲ್ಲರ ಗಮನ ಸೆಳೆಯುವಿರಿ. ನೀವಿರುವ ಕಡೆ ಹಾಸ್ಯಕ್ಕೆ ಬರದಿರುವುದಿಲ್ಲ. ಸಮಯವನ್ನು ಗೌರವಿಸುವಿರಿ. ನಿಮ್ಮ ಕಟ್ಟುನಿಟ್ಟಿನ ಮಾತುಗಳು ಹಲವರಿಗೆ ದಾರಿದೀಪವಾಗುತ್ತದೆ. ಹಣದ ತೊಂದರೆ ಇರುವುದಿಲ್ಲ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 12

ಅಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ

ತುಲಾ ರಾಶಿ

ಕೇವಲ ನಿಮ್ಮ ಕುಟುಂಬವಲ್ಲದೆ ಸುತ್ತಮುತ್ತಲಿನ ವಾತಾವರಣ ಸಂತೋಷವಾಗಿರಲು ಕಾರಣವಾಗುವಿರಿ. ಹೊಗಳಿಕೆಗೆ ಮರುಳಾಗುವುದಿಲ್ಲ. ತಪ್ಪಾಗಿ ಅರ್ಥ ಮಾಡಿಕೊಂಡು ನೀವೇ ಅಪಾಯವನ್ನು ಆಹ್ವಾನಿಸುವಿರಿ. ಯಾವುದೇ ಬೆದರಿಕೆಗೆ ಬಗ್ಗುವುದಿಲ್ಲ. ಅವಿವಾಹಿತರಿಗೆ ಸಂಬಂಧ ಅಥವಾ ಪರಿಚಯದವರೊಂದಿಗೆ ವಿವಾಹ ನಿಶ್ಚಯವಾಗುತ್ತದೆ. ನವ ದಂಪತಿಗಳಿಗೆ ವಿಶೇಷವಾದಂತಹ ಅನುಕೂಲತೆಗಳು ದೊರೆಯಲಿವೆ. ಗೃಹಿಣಿಯರಿಗೆ ಅನಾರೋಗ್ಯ ಉಂಟಾಗುತ್ತದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ವಿದೇಶ ಅಥವಾ ದೂರದ ಸ್ಥಳಕ್ಕೆ ಪ್ರವಾಸ ಬೆಳೆಸುವಿರಿ. ಗಂಟಲಿನಲ್ಲಿ ತೊಂದರೆ ಉಂಟಾಗಬಹುದು. ಮಕ್ಕಳ ವಿದ್ಯಾಭ್ಯಾಸವು ತೊಂದರೆ ಇಲ್ಲದೆ ನಿರಂತರವಾಗಿ ಸಾಗುತ್ತದೆ. ಕುಟುಂಬಕ್ಕೆ ಸಂಬಂಧಿಸಿದ ಭೂಮಿಯನ್ನು ಮಾರಾಟ ಮಾಡಬೇಕಾಗುತ್ತದೆ.

ಪರಿಹಾರ: ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಬಿಳಿ

ವೃಶ್ಚಿಕ ರಾಶಿ

ನೀವಿರುವ ಸ್ಥಳದಲ್ಲಿ ಅಚ್ಚುಕಟ್ಟಿನ ವಾತಾವರಣ ಇರುತ್ತದೆ. ಶಿಸ್ತು ಬದ್ಧ ಜೀವನವನ್ನು ಇಷ್ಟಪಡುವಿರಿ. ನಿಮ್ಮ ಮಕ್ಕಳಿಗೆ ಶಿಸ್ತಿನ ಪಾಠವನ್ನು ಕಲಿಸುವಿರಿ. ಆದರೆ ಸಣ್ಣ ಪುಟ್ಟ ತಪ್ಪಿಗೂ ಸಿಡುಕುವಿರಿ. ಶಾಂತಿ ಸಂಯಮವನ್ನು ಕಾಪಾಡಿಕೊಂಡರೆ ಯಶಸ್ಸಿನ ಜೀವನ ನಿಮ್ಮದಾಗುತ್ತದೆ. ನಿಮಗೆ ವಿಶೇಷವಾದಂತಹ ಜನಾಕರ್ಷಕ ಶಕ್ತಿ ಇರುತ್ತದೆ. ಬೇರೆಯವರು ಅನುಕರಿಸಬೇಕಾದ ವಿಶೇಷ ಗುಣಗಳು ನಿಮ್ಮಲ್ಲಿರುತ್ತದೆ. ಸಹೋದ್ಯೋಗಿಗಳಿಗೆ ಸದಾ ಸಹಾಯ ಮಾಡುವಿರಿ. ಕುಟುಂಬಕ್ಕೆ ಯಾವುದೇ ಹಾನಿಯಾಗಲು ಬಿಡುವುದಿಲ್ಲ. ಹಣಕಾಸಿನ ತೊಂದರೆ ಇರುವುದಿಲ್ಲ. ಕೇವಲ ಕುಟುಂಬವಲ್ಲದೆ ಸಮಾಜದಲ್ಲಿಯೂ ನಿಮ್ಮ ಮಾತಿಗೆ ಗೌರವ ಲಭಿಸುತ್ತದೆ. ನಿಸ್ವಾರ್ಥದಿಂದ ಮಾಡುವ ಕೆಲಸ ಕಾರ್ಯಗಳಿಂದ ಸಮಾಜದಲ್ಲಿ ಉನ್ನತ ಕೀರ್ತಿ ಸಂಪಾದಿಸುವಿರಿ.

ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಬೂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.