ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ದೃಷ್ಟಿದೋಷದ ಸಮಸ್ಯೆ ಕಾಡಲಿದೆ, ಹೆಚ್ಚಾದ ಒತ್ತಡದಿಂದ ಮಾನಸಿಕ ಕಿರಿಕಿರಿ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Horoscope Today: ದೃಷ್ಟಿದೋಷದ ಸಮಸ್ಯೆ ಕಾಡಲಿದೆ, ಹೆಚ್ಚಾದ ಒತ್ತಡದಿಂದ ಮಾನಸಿಕ ಕಿರಿಕಿರಿ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

24 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (24th May 2024 Daily Horoscope).

 ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (24th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಶುಕ್ರವಾರ

ತಿಥಿ: ಪಾಡ್ಯ ಸಂಜೆ 06.36 ರವರೆಗೂ ಇರುತ್ತದೆ ನಂತರ ಬಿದಿಗೆ ಆರಂಭವಾಗುತ್ತದೆ.

ನಕ್ಷತ್ರ : ಅನೂರಾಧ ನಕ್ಷತ್ರವು ಬೆಳಗ್ಗೆ 09.45 ರವರೆಗೂ ಇದ್ದು ನಂತರ ಜ್ಯೇಷ್ಠ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.40

ರಾಹುಕಾಲ: ಬೆಳಗ್ಗೆ 10.44 ರಿಂದ 12.20

ರಾಶಿಫಲ

ಮೇಷ

ಸಂಬಂಧಿಯೊಬ್ಬರ ಕಷ್ಟಕ್ಕೆ ಸಹಾಯ ಮಾಡುವಿರಿ. ಕುಟುಂಬದ ಜವಾಬ್ದಾರಿಯ ಒತ್ತಡ ಕಾರಣ ಮಾನಸಿಕ ನೆಮ್ಮದಿ ಇರುವುದಿಲ್ಲ. ಅತಿಯಾದ ಆತ್ಮವಿಶ್ವಾಸದಿಂದ ತಪ್ಪು ನಿರ್ಧಾರ ತೆಗೆದುಕೊಳ್ಳುವಿರಿ. ತಂದೆಯ ಸಹಕಾರದಿಂದ ಖ್ಯಾತ ಸಂಸ್ಥೆಯೊಂದರಲ್ಲಿ ಉದ್ಯೋಗ ಲಭಿಸುತ್ತದೆ. ಬೇಸರದಿಂದ ಹೊರ ಬರಲು ಯಾತ್ರಾಸ್ಥಳಕ್ಕೆ ತೆರಳುವಿರಿ. ಆರಂಭಿಸುವ ಕೆಲಸ ಕಾರ್ಯಗಳಲ್ಲಿ ಹಟದಿಂದ ಯಶಸ್ಸನ್ನು ಗಳಿಸುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಎದುರಾಗದು. ಸಹಪಾಠಿಗಳ ಜೊತೆ ಕಲಿಕೆಯಲ್ಲಿ ಮುಂದುವರೆಯುವಿರಿ. ಹಣಕಾಸಿನ ಸಂಸ್ಥೆಯನ್ನು ಆರಂಭಿಸುವ ಯೋಚನೆ ಕೈಗೂಡುತ್ತದೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಎಲೆ ಹಸಿರು

ವೃಷಭ

ಆತಂಕದಿಂದಲೇ ದಿನವನ್ನು ಆರಂಭಿಸುವಿರಿ. ಬೇಸರದಿಂದ ವಿದ್ಯಾರ್ಥಿಗಳು ಕ್ರಮೇಣವಾಗಿ ಸಹಜಸ್ಥಿತಿಗೆ ಮರಳುತ್ತಾರೆ. ಸೋದರಿಗೆ ಉದ್ಯೋಗ ದೊರೆಯುತ್ತದೆ. ಬಂಧು ಬಳಗದವರ ನಡುವೆ ಗೌರವದ ಸ್ಥಾನ ಗಳಿಸುವಿರಿ. ಉದ್ಯೋಗದಲ್ಲಿ ಎದುರಾಗುವ ಅಡಚಣೆಗಳು ದೂರವಾಗಲಿದೆ. ಮಂಗಳ ಕಾರ್ಯವೊಂದು ನಿಮ್ಮ ನೇತೃತ್ವದಲ್ಲಿ ಪೂರ್ಣಗೊಳ್ಳಲಿದೆ. ಹಣಕಾಸಿನ ವಿಚಾರದಲ್ಲಿ ಬದಲಾವಣೆಗಳೇನು ಕಾಣದು. ಅತಿ ಆಸೆ ಇಲ್ಲದೆ ಸಂತೃಪ್ತಿಯ ಜೀವನ ನಡೆಸುವಿರಿ. ಸಣ್ಣ ಪುಟ್ಟ ವ್ಯಾಪಾರ ಆರಂಭಿಸುವಿರಿ. ಮಕ್ಕಳ ಸಹಾಯದಿಂದ ಹಣ ಉಳಿಸಲು ಸಾಧ್ಯವಾಗುತ್ತದೆ. ವ್ಯಾಪಾರದ ಮಧ್ಯವರ್ತಿಗಳಿಗೆ ಉತ್ತಮ ಲಾಭಾಂಶ ದೊರೆಯುತ್ತದೆ. ಸಾಕುಪ್ರಾಣಿಗಳಿಂದ ದೂರವಿರಿ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೇಸರಿ

ಮಿಥುನ

ನಿಮ್ಮಿಷ್ಟದಂತೆ ಬಾಳುವಿರಿ. ಕುಟುಂಬದಲ್ಲಿನ ಮುಖ್ಯ ಜವಾಬ್ದಾರಿಗಳು ನಿಮ್ಮದಾಗಲಿದೆ. ಚಂಚಲ ಮನಸ್ಸಿದ್ದರೂ ಮಾಡುವ ಕೆಲಸ ಕಾರ್ಯದಲ್ಲಿ ಹಿಂದೆ ಉಳಿಯುವುದಿಲ್ಲ. ಉತ್ತಮ ಆದಾಯದ ಜೊತೆ ಖರ್ಚು ವೆಚ್ಚಗಳು ಹೆಚ್ಚುತ್ತವೆ. ವಿದ್ಯಾರ್ಥಿಗಳು ಏಕಾಗ್ರತೆಯನ್ನು ಬೆಳೆಸಿಕೊಳ್ಳಬೇಕು. ತಂದೆ ಮಾಡುವ ವ್ಯಾಪಾರದಲ್ಲಿ ಲಾಭ ದೊರೆಯುತ್ತದೆ. ಕಾನೂನಿನ ಚೌಕಟ್ಟಿನಲ್ಲಿ ಹಣದ ವ್ಯವಹಾರವನ್ನು ಆರಂಭಿಸುವಿರಿ. ಅತಿಯಾಸೆ ಇರುವುದಿಲ್ಲ. ಸಹಬಾಳ್ವೆಯ ಜೀವನದಲ್ಲಿ ಆಸಕ್ತಿ ಮತ್ತು ನಂಬಿಕೆ ಇರುತ್ತದೆ. ಕೃಷಿಯಾಧಾರಿತ ಉತ್ಪನ್ನಗಳ ಸರಬರಾಜಿನಿಂದ ಉತ್ತಮ ಲಾಭವಿದೆ. ದೃಷ್ಟಿದೋಷದಿಂದ ಬಳಲುವಿರಿ. ಆರೋಗ್ಯದಲ್ಲಿ ಸ್ಥಿರತೆ ಇರುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಂದು

ಕಟಕ

ಅನುಕೂಲತೆಗಳ ನಡುವೆಯೂ ಅಳುಕು ಮನಸ್ಸಿರುತ್ತದೆ. ತಂದೆಯವರ ಮಾರ್ಗದರ್ಶನದಲ್ಲಿ ಸುಖಜೀವನ ನಡೆಸುವಿರಿ. ಕಾನೂನಿನ ಸಹಾಯದಿಂದ ವೃತ್ತಿಜೀವನದ ತೊಂದರೆಯನ್ನು ಗೆಲ್ಲುವಿರಿ. ಮಕ್ಕಳ ಸಲುವಾಗಿ ಹೆಚ್ಚಿನ ಖರ್ಚು ಇರಲಿದೆ. ವಿದ್ಯಾರ್ಥಿಗಳು ಎಂದಿನಂತೆ ವಿದ್ಯಾಭ್ಯಾಸದಲ್ಲಿ ತೊಡಗುತ್ತಾರೆ. ಆದಾಯದಲ್ಲಿ ತೊಂದರೆ ಇರದು. ಹಣ ಉಳಿತಾಯದ ಬಗ್ಗೆ ಮನೆಮಂದಿಯೊಂದಿಗೆ ಚರ್ಚಿಸುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿಯ ವಾತಾವರಣ ಇರುತ್ತದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಕುಟುಂಬದಲ್ಲಿನ ಹಿರಿಯರಿಗೆ ಸಂಬಂಧಿಸಿದ ಮಂಗಳ ಕಾರ್ಯವೊಂದು ನಡೆಯುತ್ತದೆ. ಕಂತಿನ ವ್ಯಾಪಾರದಿಂದ ನಿಮಗಿಷ್ಟವೆನಿಸುವ ಪದಾರ್ಥಗಳನ್ನು ಕೊಳ್ಳುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)