ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸಿಡುಕು ಬುದ್ಧಿಯಿಂದ ಆತ್ಮೀಯರನ್ನು ದೂರ ಮಾಡಿಕೊಳ್ಳುವಿರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ

ಸಿಡುಕು ಬುದ್ಧಿಯಿಂದ ಆತ್ಮೀಯರನ್ನು ದೂರ ಮಾಡಿಕೊಳ್ಳುವಿರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ

24 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (24th May 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (24th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಶುಕ್ರವಾರ

ತಿಥಿ: ಪಾಡ್ಯ ಸಂಜೆ 06.36 ರವರೆಗೂ ಇರುತ್ತದೆ ನಂತರ ಬಿದಿಗೆ ಆರಂಭವಾಗುತ್ತದೆ.

ನಕ್ಷತ್ರ : ಅನೂರಾಧ ನಕ್ಷತ್ರವು ಬೆಳಗ್ಗೆ 09.45 ರವರೆಗೂ ಇದ್ದು ನಂತರ ಜ್ಯೇಷ್ಠ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.40

ರಾಹುಕಾಲ: ಬೆಳಗ್ಗೆ 10.44 ರಿಂದ 12.20

ರಾಶಿಫಲ

ಸಿಂಹ

ಕುಟುಂಬದ ಹಿರಿಯರ ಆಸೆ ಆಕಾಂಕ್ಷೆಯಂತೆ ನಡೆದುಕೊಳ್ಳುವಿರಿ. ಹಣಕಾಸಿನ ವ್ಯವಹಾರದಲ್ಲಿ ತೊಂದರೆ ಬಾರದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಉದ್ಯೋಗ ಗಳಿಸುತ್ತಾರೆ. ಕಾರ್ಯ ನಿರ್ವಹಣೆಯಲ್ಲಿ ಅತ್ಯುನ್ನತ ಮಟ್ಟ ತಲುಪುವಿರಿ. ಗಣ್ಯ ವ್ಯಕ್ತಿಗಳ ಆಸರೆ ನಿಮಗೆ ದೊರೆಯುತ್ತದೆ. ರಾಜಕೀಯದಲ್ಲಿ ಆಸಕ್ತಿ ತೋರುವುದಿಲ್ಲ. ವಂಶದ ಆಸ್ತಿಯಲ್ಲಿ ನಿಮ್ಮ ತಂದೆಯವರಿಗೆ ಹೆಚ್ಚಿನ ಪಾಲು ದೊರೆಯುತ್ತದೆ. ಸಿಡುಕಿನ ಬುದ್ದಿಯಿಂದ ಆತ್ಮೀಯರೊಬ್ಬರನ್ನು ಕಳೆದುಕೊಳ್ಳುವಿರಿ. ಸಮಾಜಸೇವೆಯಲ್ಲಿ ಕುಟುಂಬದ ಜವಾಬ್ದಾರಿಯನ್ನು ಮರೆಯುವಿರಿ. ಧಾರ್ಮಿಕ ಕೇಂದ್ರಕ್ಕೆ ಕುಟುಂಬದ ಸದಸ್ಯರೊಡನೆ ಪ್ರವಾಸಕ್ಕೆ ತೆರಳುವಿರಿ. ಅಧಿಕಾರ ಚಲಾಯಿಸಿದಲ್ಲಿ ಎಲ್ಲರ ವಿರೋಧ ಎದುರಿಸಬೇಕಾಗುತ್ತದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ : ಕಿತ್ತಳೆ

ಕನ್ಯಾ

ಅತಿಯಾದ ನಿರೀಕ್ಷೆ ನಿರಾಸೆಯನ್ನು ಉಂಟುಮಾಡುತ್ತದೆ. ಪ್ರಯತ್ನಕ್ಕೆ ತಕ್ಕಂತ ಫಲಿತಾಂಶ ದೊರಕುತ್ತದೆ. ದೃಢವಾದ ಮನಸ್ಸಿನಿಂದ ಕೆಲಸ ಕಾರ್ಯವನ್ನು ಆರಂಭಿಸುವುದು ಒಳ್ಳೆಯದು. ಆದಾಯದಲ್ಲಿ ಯಾವುದೇ ತೊಂದರೆ ಉಂಟಾಗದು. ಆತುರದಲ್ಲಿ ತಪ್ಪನ್ನು ಮಾಡಿ ಬೇರೆಯವರನ್ನು ದೂರುವಿರಿ. ಉದ್ಯೋಗದಲ್ಲಿ ತೊಂದರೆ ಇರುವುದಿಲ್ಲ. ದುಡುಕು ಮಾತಿನಿಂದ ಜನರಿಂದ ದೂರವಾಗುವಿರಿ. ವಿದ್ಯಾರ್ಥಿಗಳು ಜವಾಬ್ದಾರಿಯಿಂದ ಕಲಿಕೆಯಲ್ಲಿ ಮುಂದುವರೆಯುವಿರಿ. ಪಾಲುದಾರಿಕೆ ವ್ಯಾಪಾರದಲ್ಲಿ ಲಾಭವಿದೆ. ಓದುವ ಹವ್ಯಾಸವನ್ನು ರೂಢಿಸಿಕೊಳ್ಳುವಿರಿ. ಆರೋಗ್ಯ ಕಾಪಾಡಿಕೊಳ್ಳಿ. ಪಾಲುದಾರಿಕೆ ವ್ಯಾಪಾರದಲ್ಲಿ ಲಾಭವಿರುತ್ತದೆ. ಯಾರನ್ನೂ ಅನಾವಶ್ಯಕವಾಗಿ ಟೀಕಿಸಬೇಡಿ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಹಳದಿ

ತುಲಾ

ಜೀವನದಲ್ಲಿ ಬೇಸರದ ಸನ್ನಿವೇಶ ದೂರವಾಗುತ್ತದೆ. ಸ್ವಂತ ಮನೆಯಿದ್ದರೂ ಪರಸ್ಥಳದಲ್ಲಿ ನೆಲೆಸಬೇಕಾಗುತ್ತದೆ. ತಂದೆಯವರಿಂದ ಹಣದ ಸಹಾಯ ದೊರೆಯಲಿದೆ. ಉದ್ಯೋಗದಲ್ಲಿ ಆತಂಕದ ನಡುವೆಯೂ ಉನ್ನತ ಮಟ್ಟ ತಲುಪುವಿರಿ. ಸಾಂಪ್ರದಾಯಕ ಕಲೆಗಳಲ್ಲಿ ಆಸಕ್ತಿ ಮೂಡುತ್ತದೆ. ಮನಸ್ಸಿಗೆ ಒಪ್ಪುವ ಕೆಲಸವನ್ನು ಆಯ್ದು ಮಾಡುವಿರಿ. ಯಾರ ಸಲಹೆಯನ್ನೂ ಒಪ್ಪುವುದಿಲ್ಲ. ವಿದ್ಯಾರ್ಥಿಗಳು ಸುಲಭವಾಗಿ ತಮ್ಮ ಗುರಿ ತಲುಪುವರು. ಕೊನೆಯಿರದ ಕೆಲಸ ಕಾರ್ಯಗಳಿಂದ ದೈಹಿಕವಾಗಿ ಬಳಲುವಿರಿ. ಸಾಲದ ವ್ಯವಹಾರಲ್ಲಿ ನಂಬಿಕೆ ಇರುವುದಿಲ್ಲ. ವಾದ ವಿವಾದ ಕಡಿಮೆ ಮಾಡುವುದು ಒಳ್ಳೆಯದು. ಕಷ್ಟದಲ್ಲಿರುವ ಹೆಣ್ಣುಮಕ್ಕಳಿಗೆ ಸಹಾಯ ಮಾಡುವಿರಿ. ಆತುರದ ತೀರ್ಮಾನ ಸೋಲಿಗೆ ಕಾರಣವಾಗಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ: ಹಸಿರು

ವೃಶ್ಚಿಕ

ಶಾಂತಿ ಸಹನೆಯಿಂದ ವರ್ತಿಸುವಿರಿ. ನೆರೆಹೊರೆಯವರ ಕಷ್ಟದಲ್ಲಿ ಭಾಗಿಯಾಗುವಿರಿ. ವಾದ ವಿವಾದದಿಂದ ದೂರ ಉಳಿಯುವಿರಿ. ಕೋಪದಿಂದ ಹೊರ ಬರಲು ಧ್ಯಾನದ ಮಾರ್ಗವನ್ನು ಅನುಸರಿಸುವಿರಿ. ರಕ್ತದ ದೋಷದಿಂದ ಮುಕ್ತರಾಗುವಿರಿ. ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳದ ಕಾರಣ ಕುಟುಂಬದಲ್ಲಿ ವಿವಾದ ಉಂಟಾಗುತ್ತದೆ. ಹೆಚ್ಚಿನ ಅನುಕೂಲತೆಯನ್ನು ನಿರೀಕ್ಷಿಸಿ ಉದ್ಯೋಗವನ್ನು ಬದಲಾಯಿಸುವಿರಿ. ವಿದ್ಯಾರ್ಥಿಗಳು ಮಿತ್ರರ ಜೊತೆ ಹೊಂದಾಣಿಕೆಯಿಂದ ನಡೆದುಕೊಳ್ಳುತ್ತಾರೆ. ಸ್ವತಂತ್ರವಾಗಿ ನಿರ್ವಹಿಸುವ ವ್ಯಾಪಾರ ವ್ಯವಹಾರದಿಂದ ಆದಾಯ ಹೆಚ್ಚುತ್ತದೆ. ವಂಶದ ಹಳೆಯ ಮನೆಗೆ ಹೊಸ ರೂಪು ನೀಡುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 09

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)