Horoscope Today: ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಸರ್ಕಾರಿ ನೌಕರಿ ಪಡೆಯುವಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ
24 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (24th May 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(24th May 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಶುಕ್ರವಾರ
ತಿಥಿ: ಪಾಡ್ಯ ಸಂಜೆ 06.36 ರವರೆಗೂ ಇರುತ್ತದೆ ನಂತರ ಬಿದಿಗೆ ಆರಂಭವಾಗುತ್ತದೆ.
ನಕ್ಷತ್ರ : ಅನೂರಾಧ ನಕ್ಷತ್ರವು ಬೆಳಗ್ಗೆ 09.45 ರವರೆಗೂ ಇದ್ದು ನಂತರ ಜ್ಯೇಷ್ಠ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.52
ಸೂರ್ಯಾಸ್ತ: ಸಂಜೆ 06.40
ರಾಹುಕಾಲ: ಬೆಳಗ್ಗೆ 10.44 ರಿಂದ 12.20
ರಾಶಿಫಲ
ಧನಸ್ಸು
ಆರಂಭಿಸುವ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ಮಾನಸಿಕ ಒತ್ತಡದಿಂದ ತಪ್ಪು ನಿರ್ಧಾರ ತೆಗೆದುಕೊಳ್ಳುವಿರಿ. ಮನರಂಜನೆಯಿಂದ ದೂರ ಉಳಿದಲ್ಲಿ ವಿದ್ಯಾರ್ಥಿಗಳು ಹೊಸ ಸಾಧನೆ ಮಾಡುತ್ತಾರೆ. ಕುಟುಂಬದ ಕೆಲಸ ಕಾರ್ಯಗಳು ನಿಧಾನ ಗತಿಯಲ್ಲಿ ಸಾಗುತ್ತದೆ. ಹಿರಿಯ ಸೋದರನಿಗೆ ರಾಜಕೀಯದಲ್ಲಿ ವಿಶೇಷವಾದ ಮಾನ್ಯತೆ ದೊರೆಯುತ್ತದೆ. ಆದಾಯದಲ್ಲಿ ಏರಿಳಿತ ಇದ್ದರೂ ತೊಂದರೆ ಕಾಣುವುದಿಲ್ಲ. ಮಾತಿನ ಬಲದಿಂದಲೇ ನಿಮ್ಮ ಕೆಲಸ ಸಾಧಿಸುವಿರಿ. ಉಷ್ಣದ ತೊಂದರೆ ಇರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ವ್ಯಾಪಾರ ವ್ಯವಹಾರಗಳಲ್ಲಿ ನೀರಸ ವಾತಾವರಣ ಇರುತ್ತದೆ. ಸಂಗಾತಿಯ ಮನ ನೋಯಿಸುವಿರಿ.
ಪರಿಹಾರ : ಗೋಶಾಲೆಗೆ ಧನ ಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ನೇರಳೆ ಬಣ್ಣ
ಮಕರ
ಕಷ್ಟಕ್ಕೆ ಹೆದರದೆ ಕೆಲಸಗಳನ್ನು ಪೂರ್ಣಗೊಳಿಸುವ ಚಾತುರ್ಯತೆ ನಿಮಗಿರುತ್ತದೆ. ತಾಂತ್ರಿಕ ಪರಿಜ್ಞಾನ ಮತ್ತು ಪರಿಕಲ್ಪನೆಗಳಿಗೆ ಯೋಗ್ಯ ಉದ್ಯೋಗ ಲಭಿಸುತ್ತದೆ. ದೊಡ್ಡ ಮನೆತನದವರ ಮಕ್ಕಳೊಂದಿಗೆ ವಿವಾಹದ ಮಾತುಕತೆ ನಡೆಯುತ್ತದೆ. ದುಡುಕಿನ ಮಾತಿನಿಂದಾಗಿ ತೊಂದರೆಗೆ ಸಿಲುಕುವಿರಿ. ಕುಟುಂಬದ ಯಾವುದೇ ಕೆಲಸವಾದರೂ ಜವಾಬ್ದಾರಿಯಿಂದ ನಿರ್ವಹಿಸುವಿರಿ. ಕಷ್ಟದಲ್ಲಿ ಇದ್ದವರಿಗೆ ಸಹಾಯ ಮಾಡುವಿರಿ. ವಿದೇಶ ಪ್ರಯಾಣ ಯೋಗವಿದೆ. ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿಯೊಂದು ಬರಲಿದೆ. ಯಾವುದೇ ರೀತಿಯ ಪ್ರಭಾವಕ್ಕೆ ಮಣಿಯದೆ ಸ್ವಂತ ನಿರ್ಧಾರಗಳಿಗೆ ಬದ್ದರಾಗುವಿರಿ. ಮಕ್ಕಳ ಯಶಸ್ಸಿನಲ್ಲಿ ಪಾಲ್ಗೊಳ್ಳುವಿರಿ. ಆರೋಗ್ಯದಲ್ಲಿ ಸ್ಥಿರತೆ ಇರುತ್ತದೆ.
ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ
ಕುಂಭ
ವಿದ್ಯಾರ್ಥಿಗಳು ಕಷ್ಟದಿಂದ ಗುರಿ ತಲುಪುವರು. ಮನೆತನದ ಆಸ್ತಿಯಲ್ಲಿ ನ್ಯಾಯವಾದ ಪಾಲು ದೊರೆಯುತ್ತದೆ. ತಂದೆ ಮತ್ತು ತಾಯಿಯ ಸಹಕಾರ ಇರುವ ಕಾರಣ ನೆಮ್ಮದಿಯಿಂದ ಇರುವಿರಿ. ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಸರ್ಕಾರಿ ನೌಕರಿ ದೊರೆಯಲಿದೆ. ಸರ್ಕಾರದ ಸಹಕಾರ ಸಂಸ್ಥೆಯ ಒಡೆತನ ದೊರೆಯುತ್ತದೆ. ತಂದೆಯ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಬುದ್ದಿಶಕ್ತಿಗೆ ಕೊರತೆ ಇರದೇ ಹೋದರೂ ಹೆದರಿಕೆಯ ವರ್ತಿಸುವಿರಿ. ಸ್ವಂತ ವ್ಯಾಪಾರದಲ್ಲಿ ಉತ್ತಮ ವರಮಾನ ಗಳಿಸುವಿರಿ. ಹಣ್ಣಿನ ವ್ಯಾಪಾರದಲ್ಲಿ ಲಾಭವಿದೆ. ಮಾತು ಕಡಿಮೆ ಮಾಡಿ ಮೌನಿಯಾಗಿದ್ದುಕೊಂಡು ಮನದಾಸೆಯನ್ನು ಈಡೇರಿಸಿಕೊಳ್ಳುವಿರಿ. ಪುಟ್ಟ ಮಕ್ಕಳ ಆರೋಗ್ಯದಲ್ಲಿ ತೊಂದರೆ ಇರುತ್ತದೆ.
ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಬೂದು
ಮೀನ
ಬೇಸರವಾದರೂ ಜವಾಬ್ದಾರಿಯಿಂದ ಹಿಂದುಳಿಯುವುದಿಲ್ಲ. ಕುಟುಂಬದ ಹಳೆಯ ಹಣಕಾಸಿನ ವಿವಾದವೊಂದು ಪರಿಹರಿಸುವಿರಿ. ಉದ್ಯೋಗದಲ್ಲಿ ಪ್ರೀತಿ ವಿಶ್ವಾಸದಿಂದ ವರ್ತಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ವ್ಯಾಪಾರ ವ್ಯಾವಹಾರದಲ್ಲಿ ಸಾಧಾರಣ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳಲಿದ್ದಾರೆ. ಸೋದರನ ವ್ಯಾಪಾರದಲ್ಲಿ ಪಾಲುದಾರಿಕೆ ಪಡೆಯುವಿರಿ. ಬಡ ವಿದ್ಯಾರ್ಥಿಗಳಿಗೆ ಹಣದ ಸಹಾಯ ಮಾಡುವಿರಿ. ಬಂಧು ಬಳಗದವ ಬಗ್ಗೆ ಬೇಸರ ಉಂಟಾಗಿ ಅವರಿಂದ ದೂರ ಉಳಿಯುವಿರಿ. ಗಾಯಕರಿಗೆ ಅಪರೂಪದ ಅವಕಾಶ ದೊರೆಯುತ್ತದೆ. ವಾಹನ ಕೊಳ್ಳುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಕಿರುಪ್ರವಾಸಕ್ಕೆ ತೆರಳುವಿರಿ.
ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ 1
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ಕೇಸರಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)
ವಿಭಾಗ