Horoscope Today: ಹೊಗಳಿಕೆಯ ಮಾತಿಗೆ ಮರುಳಾಗಿ ತಪ್ಪು ನಿರ್ಧಾರ ತೆಗೆದುಕೊಳ್ಳದಿರಿ, ವಿವಾಹ ಯೋಗ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಹೊಗಳಿಕೆಯ ಮಾತಿಗೆ ಮರುಳಾಗಿ ತಪ್ಪು ನಿರ್ಧಾರ ತೆಗೆದುಕೊಳ್ಳದಿರಿ, ವಿವಾಹ ಯೋಗ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

Horoscope Today: ಹೊಗಳಿಕೆಯ ಮಾತಿಗೆ ಮರುಳಾಗಿ ತಪ್ಪು ನಿರ್ಧಾರ ತೆಗೆದುಕೊಳ್ಳದಿರಿ, ವಿವಾಹ ಯೋಗ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಫೆಬ್ರವರಿ 25, ಭಾನುವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (25 February 2024 Daily Horoscope).

ಫೆಬ್ರವರಿ 25ರ ದಿನಭವಿಷ್ಯ
ಫೆಬ್ರವರಿ 25ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ( February 25 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಭಾನುವಾರ

ತಿಥಿ : ಪಾಡ್ಯ ತಿಥಿಯು ಸಂಜೆ 06.58 ರವರೆಗು ಇದ್ದು ಆನಂತರ ಬಿದಿಗೆ ಆರಂಭವಾಗುತ್ತದೆ.

ನಕ್ಷತ್ರ : ಪುಬ್ಬ ನಕ್ಷತ್ರವು ರಾತ್ರಿ 12.04 ವರೆಗು ಇರುತ್ತದೆ. ಆನಂತರ ಉತ್ತರ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.34

ಸೂರ್ಯಾಸ್ತ: ಸ.06.26

ರಾಹುಕಾಲ : ಸಂ.04.30 ರಿಂದ ಸ.06.00

ರಾಶಿ ಫಲಗಳು

ಸಿಂಹ

ಹಗಲುಗನಸು ಕಾಣುವುದರಲ್ಲಿ ವೇಳೆ ಕಳೆಯುವಿರಿ. ಕುಟುಂಬದಲ್ಲಿ ಹೊಸ ಬದಲಾವಣೆಗಳು ಉಂಟಾಗಬಹುದು. ಕೌಟುಂಬಿಕ ವಿಚಾರಕ್ಕಾಗಿ ಹೆಚ್ಚಿನ ಹಣ ಬೇಕಾಗುತ್ತದೆ. ಹಣದ ಕೊರತೆ ಎದುರಾಗುವುದಿಲ್ಲ. ಬಹುದಿನದಿಂದ ಕಾಣುತ್ತಿದ್ದ ಕನಸೊಂದು ನನಸಾಗಲಿದೆ. ಉದ್ಯೋಗದಲ್ಲಿ ನಿಮ್ಮ ಕೌಶಲ್ಯಕ್ಕೆ ಸವಾಲಾಗುವ ಯೋಜನೆಗಳು ದೊರೆಯಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಉನ್ನತಮಟ್ಟ ತಲುಪುವಿರಿ. ಅನಾವಶ್ಯಕವಾಗಿ ಹಣವನ್ನು ಖರ್ಚು ಮಾಡುವುದಿಲ್ಲ. ವಿದ್ಯಾರ್ಥಿಗಳು ತಮ್ಮ ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವರು. ಅನಾವಶ್ಯಕವಾಗಿ ವಿವಾದಕ್ಕೆ ಒಳಗಾಗದೆ ನಿಮ್ಮ ಕೆಲಸ ಕಾರ್ಯಗಳಲ್ಲಿ ಮುಂದುವರೆಯಿರಿ. ಸಮಯಕ್ಕೆ ತಕ್ಕಂತೆ ವರ್ತಿಸಿ ನಿಮ್ಮತನವನ್ನು ಉಳಿಸಿಕೊಳ್ಳುವಿರಿ. ನಲ್ಮೆಯ ಮಾತುಗಳಿಂದ ಎಲ್ಲರ ಮನಸ್ಸನ್ನು ಗೆಲ್ಲಬಲ್ಲಿರಿ. ವಿವಾಹದ ವಿಚಾರ ಹಿರಿಯರ ಮನದಲ್ಲಿ ಮೂಡುತ್ತದೆ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಕನ್ಯಾ

ಸ್ತ್ರೀಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೋರಬೇಕು. ಗರ್ಭಿಣಿಯರು ಎಚ್ಚರಿಕೆಯಿಂದ ಇರಿ. ಕುಟುಂಬದಲ್ಲಿ ಹೊಸ ಆಸೆ ಆಕಾಂಕ್ಷೆಗಳು ಕೈಗೂಡಲಿವೆ. ಉದ್ಯೋಗವನ್ನು ಬದಲಿಸುವ ಹಂಬಲವಿರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಖರ್ಚು ವೆಚ್ಚಗಳು ಹೆಚ್ಚಲಿವೆ. ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ಮನಸ್ಸಿಟ್ಟು ನಿರ್ವಹಿಸುತ್ತಾರೆ. ಹೊಗಳಿಕೆಯ ಮಾತಿಗೆ ಮರುಳಾಗಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳದಿರಿ. ಕುಟುಂಬದಲ್ಲಿ ಹಿರಿಯರ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಸಂಗಾತಿಯ ಸಲಹೆ ಸೂಚನೆಯನ್ನು ಪಾಲಿಸಬೇಕಾದ ಅನಿವಾರ್ಯತೆ ಇರುತ್ತದೆ. ವಿಶ್ವಾಸವಿದ್ದಲ್ಲಿ ಗೆಲುವು ಸುಲಭವಾಗಿ ದೊರೆಯಲಿದೆ. ಮಕ್ಕಳ ಸಂತಸದ ಕ್ಷಣದಲ್ಲಿ ತೃಪ್ತಿ ಕಾಣುವಿರಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ತುಲಾ

ನಿಮ್ಮಲ್ಲಿರುವ ಶುಭ್ರವಾದ ಮನಸ್ಸು ಮತ್ತು ನಡವಳಿಕೆ ಎಲ್ಲರ ಪ್ರೀತಿ ಗಳಿಸುತ್ತದೆ. ಕುಟುಂಬದಲ್ಲಿ ಪ್ರಥಮ ಆದ್ಯತೆ ನಿಮ್ಮದಾಗುತ್ತದೆ. ಒತ್ತಡಕ್ಕೆ ಒಳಗಾಗದೆ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಉದ್ಯೋಗದಲ್ಲಿ ಮನಸ್ಸಿಗೆ ಮುದ ನೀಡುವ ಸಂದರ್ಭಗಳು ಎದುರಾಗಲಿವೆ. ಖ್ಯಾತ ಸಂಸ್ಥೆಯಿಂದ ಉದ್ಯೋಗಾವಕಾಶ ಬರಲಿದೆ. ಮನಸ್ಸಿಗೆ ಹಿತ ನೀಡುವ ತೀರ್ಮಾನಗಳಿಗೆ ಬದ್ಧರಾಗುವಿರಿ. ವ್ಯಾಪಾರ ವ್ಯವಹಾರಗಳು ಸರಾಗವಾಗಿ ನಡೆಯಲಿವೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಉನ್ನತ ಮಟ್ಟ ತಲುಪಲಿದ್ದಾರೆ. ಮಕ್ಕಳ ಸಾಧನೆಗಳಿಗೆ ಸಹಕಾರ ನೀಡುವಿರಿ. ನಿಮ್ಮಲ್ಲಿ ಹುದುಗಿದ ಪ್ರತಿಭೆಗೆ ತಕ್ಕ ವೇದಿಕೆ ದೊರೆಯಲಿದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಆತ್ಮೀಯರಿಂದ ಉಡುಗೊರೆಯೊಂದು ದೊರೆಯಬಹುದು.

ಪರಿಹಾರ : ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು ಬಣ್ಣ

ವೃಶ್ಚಿಕ

ವಯಸ್ಸಿಗೂ ಮನಸ್ಸಿಗೂ ತಾಳೆಯಾಗದ ರೀತಿ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವಿರಿ. ಕುಟುಂಬದಲ್ಲಿ ನಿಮ್ಮ ನಿಲುವಿಗೆ ಎಲ್ಲರ ಸಹಮತ ದೊರೆಯುತ್ತದೆ. ನಿಮ್ಮ ಜವಾಬ್ದಾರಿಯೂ ಹೆಚ್ಚಾಗಬಹುದು. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಾಣುವುದಿಲ್ಲ. ಕಿರಿಯ ಅಧಿಕಾರಿಗಳ ನಡುವೆ ಉತ್ತಮ ಹೊಂದಾಣಿಕೆ ಕಂಡುಬರುತ್ತದೆ. ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಗುರಿ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭವಿದೆ. ಎದುರಾಗುವ ಬದಲಾವಣೆಗಳಿಗೆ ಹೊಂದಿಕೊಳ್ಳದೆ ಹೋಗುವಿರಿ. ವಿದ್ಯಾರ್ಥಿಗಳು ಸಹಜತೆಯಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಹೆಚ್ಚಿನ ಅಭ್ಯಾಸಕ್ಕಾಗಿ ವಿದೇಶಕ್ಕೆ ತೆರಳಬಹುದು. ಸಮಾಜದಲ್ಲಿ ಜನಪ್ರಿಯತೆಯ ತುತ್ತ ತುದಿಗೇರುವಿರಿ.

ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಂದು ಬಣ್ಣ

---------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.