Horoscope Today: ವ್ಯಾಪಾರದಲ್ಲಿ ನಿಧಾನಗತಿಯ ಲಾಭ, ಸಂಗಾತಿಯೊಂದಿಗೆ ಉತ್ತಮ ಅನುಬಂಧ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವ್ಯಾಪಾರದಲ್ಲಿ ನಿಧಾನಗತಿಯ ಲಾಭ, ಸಂಗಾತಿಯೊಂದಿಗೆ ಉತ್ತಮ ಅನುಬಂಧ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

Horoscope Today: ವ್ಯಾಪಾರದಲ್ಲಿ ನಿಧಾನಗತಿಯ ಲಾಭ, ಸಂಗಾತಿಯೊಂದಿಗೆ ಉತ್ತಮ ಅನುಬಂಧ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

ಫೆಬ್ರವರಿ 25, ಭಾನುವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (25 February 2024 Daily Horoscope).

ಫೆಬ್ರವರಿ 25ರ ದಿನಭವಿಷ್ಯ
ಫೆಬ್ರವರಿ 25ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ( February 25 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಭಾನುವಾರ

ತಿಥಿ : ಪಾಡ್ಯ ತಿಥಿಯು ಸಂಜೆ 06.58 ರವರೆಗು ಇದ್ದು ಆನಂತರ ಬಿದಿಗೆ ಆರಂಭವಾಗುತ್ತದೆ.

ನಕ್ಷತ್ರ : ಪುಬ್ಬ ನಕ್ಷತ್ರವು ರಾತ್ರಿ 12.04 ವರೆಗು ಇರುತ್ತದೆ. ಆನಂತರ ಉತ್ತರ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.34

ಸೂರ್ಯಾಸ್ತ: ಸ.06.26

ರಾಹುಕಾಲ : ಸಂ.04.30 ರಿಂದ ಸ.06.00

ರಾಶಿ ಫಲಗಳು

ಧನಸ್ಸು

ಆತ್ಮೀಯರ ಜೊತೆಗೂಡಿ ಮನರಂಜನ ಕಾರ್ಯಕ್ರಮವನ್ನು ಆಯೋಜಿಸುವಿರಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಉದ್ಯೋಗದಲ್ಲಿ ಸೋಲು ಗೆಲುವು ಸಮ ಪ್ರಮಾಣದಲ್ಲಿ ಇರಲಿವೆ. ಹಿರಿಯ ಅಧಿಕಾರಿಗಳ ಜೊತೆಯಲ್ಲಿ ಅನಾವಶ್ಯಕವಾದ ವಾದ ವಿವಾದಗಳು ಉಂಟಾಗಲಿವೆ. ವ್ಯಾಪಾರ ವ್ಯವಹಾರಗಳು ಸಾಧಾರಣ ಪ್ರಗತಿಯನ್ನು ಕಾಣಲಿವೆ. ವಿದ್ಯಾರ್ಥಿಗಳು ಸಿಡುಕದೆ ಸಹನೆಯಿಂದ ವರ್ತಿಸಬೇಕು. ಅಸಾಧ್ಯವಾದಂತಹ ಕೆಲಸವು ಸುಲಭವಾಗುತ್ತದೆ. ಅವಶ್ಯಕತೆ ಇದ್ದಷ್ಟು ಹಣ ಕೈ ಸೇರುವುದಿಲ್ಲ. ವಾಸ ಸ್ಥಳವನ್ನು ಬದಲಾಯಿಸುವಿರಿ. ಮಕ್ಕಳನ್ನು ಪ್ರೀತಿ ವಿಶ್ವಾಸದಿಂದ ನೋಡಿಕೊಳ್ಳುವಿರಿ. ಸಂಗಾತಿಯ ಮನಮೆಚ್ಚುವ ಕೆಲಸಗಳನ್ನು ನಿರ್ವಹಿಸುವಿರಿ. ಸಾಲದ ವ್ಯವಹಾರ ಒಳ್ಳೆಯದಲ್ಲ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಮಕರ

ಹೆಚ್ಚಿನ ನಿರೀಕ್ಷೆಯಿಂದ ದಿನವನ್ನು ಆರಂಭಿಸುವಿರಿ. ಆದರೆ ಕುಟುಂಬದ ಸದಸ್ಯರಿಂದ ನಿರಾಸೆ ಉಂಟಾಗಬಹುದು. ಮೌನದ ಬದಲು ಮನ ಬಿಚ್ಚಿ ಮಾತನಾಡುವುದು ಒಳ್ಳೆಯದು. ಉದ್ಯೋಗದಲ್ಲಿ ಎದುರಾಗುವ ಸವಾಲುಗಳನ್ನು ಮಣಿಸುವಿರಿ. ಹಿರಿಯ ಅಧಿಕಾರಿಗಳ ಪ್ರಸಂಸ್ಥೆ ಲಭಿಸಲಿದೆ. ವ್ಯಾಪಾರ ವ್ಯವಹಾರಗಳು ನಿಧಾನಗತಿಯಲ್ಲಿ ಲಾಭ ಗಳಿಸುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಆಸಕ್ತಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಸಂಗಾತಿಯ ಮಾತಿಗೆ ಗೌರವ ನೀಡದೇ ಹೋದಲ್ಲಿ ವಿವಾದ ಉಂಟಾಗುತ್ತದೆ. ಖರ್ಚು ವೆಚ್ಚಗಳನ್ನು ನಿಯಂತ್ರಿಸಲು ಸಫಲರಾಗುವಿರಿ. ಶಾಂತಿ ನೆಮ್ಮದಿಯ ನಿರೀಕ್ಷಿಯಿಂದ ಏಕಾಂತ ಸ್ಥಳಕ್ಕೆ ತೆರಳುವಿರಿ. ಪ್ರೀತಿ ಪಾತ್ರರ ಮನ ಗೆಲ್ಲಲು ಪ್ರಯತ್ನಿಸಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ಕುಂಭ

ಕುಟುಂಬದವರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಕುಟುಂಬದಲ್ಲಿ ಎದುರಾಗುವ ಆತಂಕ ಕ್ರಮೇಣವಾಗಿ ಕಡಿಮೆಯಾಗಲಿದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಕಾಣುವುದಿಲ್ಲ. ಉತ್ತಮ ಅವಕಾಶಕ್ಕಾಗಿ ದೊರೆತು ಉದ್ಯೋಗ ಬದಲಿಸಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯವಿರುತ್ತದೆ. ಹಣವನ್ನು ಉಳಿಸುವ ಪ್ರಯತ್ನ ಮಾಡಿ ಆತ್ಮೀಯರೊಂದಿಗೆ ಪಾಲುಗಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ. ವಿದ್ಯಾರ್ಥಿಗಳು ಸ್ವತಂತ್ರವಾಗಿ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಸ್ವಂತ ಕೆಲಸ ಕಾರ್ಯಗಳಲ್ಲಿ ಸಂದರ್ಭದಲ್ಲಿಅವಕಾಶಕ್ಕಾಗಿ ಕಾಯದೆ ಹೆಚ್ಚಿನ ಪ್ರಯತ್ನಪಡಿ. ಕಷ್ಟದ ಕಾಲದಲ್ಲಿ ಸ್ನೇಹಿತರೊಬ್ಬರು ಸಹಾಯ ಮಾಡಲಿದ್ದಾರೆ. ಸಂಗಾತಿಯೊಂದಿಗೆ ಉತ್ತಮ ಅನುಬಂಧ ಏರ್ಪಡುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಮೀನ

ಕುಟುಂಬದ ಎಲ್ಲರ ಆರೋಗ್ಯದಲ್ಲಿ ಸ್ಥಿರತೆ ಕಂಡು ಬರುತ್ತದೆ. ಸುಖ ಸಂತೋಷ ಮನೆ ಮಾಡಿರುತ್ತದೆ. ಉದ್ಯೋಗದಲ್ಲಿ ಅನುಭವಕ್ಕೆ ತಕ್ಕಂತಹ ಸ್ಥಾನಮಾನ ದೊರೆಯಲಿದೆ. ಹಣಕಾಸಿನ ಕೊರತೆ ಕಡಿಮೆಯಾಗಿಸಲು ಸಣ್ಣ ಪ್ರಮಾಣದ ಮತ್ತೊಂದು ವೃತ್ತಿಯನ್ನು ಆದರಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಪರಿಪಕ್ವ ಯೋಜನೆಗಳಿಂದ ಮಾತ್ರ ಹಣವನ್ನು ಗಳಿಸಿ ಉಳಿಸಲು ಸಾಧ್ಯ. ವಿದ್ಯಾರ್ಥಿಗಳು ಮಾನಸಿಕ ಒತ್ತಡವಿದ್ದರೂ ನಿರಂತರ ಅಭ್ಯಾಸದಿಂದ ಉನ್ನತ ಸ್ಥಾನ ಗಳಿಸುತ್ತಾರೆ ಷ್ಟಾಕ್​​ ಮತ್ತು ಷೇರಿನಲ್ಲಿ ಹಣವನ್ನು ವಿನಿಯೋಗಿಸುವಿರಿ. ವಿರೋಧಿಗಳ ಬಗ್ಗೆ ಅಸಡ್ಡೆ ಇರುತ್ತದೆ. ಎಚ್ಚರಿಕೆಯಿಂದ ದೈನಂದಿನ ಕೆಲಸದಲ್ಲಿ ಮುಂದುವರೆಯಿರಿ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ

---------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.