Horoscope Today: ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಆದಾಯ, ಕುಟುಂಬದ ಜವಾಬ್ದಾರಿ ಹೆಚ್ಚಳ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಆದಾಯ, ಕುಟುಂಬದ ಜವಾಬ್ದಾರಿ ಹೆಚ್ಚಳ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

Horoscope Today: ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಆದಾಯ, ಕುಟುಂಬದ ಜವಾಬ್ದಾರಿ ಹೆಚ್ಚಳ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಮಾರ್ಚ್​ 25, ಸೋಮವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (25 March 2024 Daily Horoscope).

ಮಾರ್ಚ್​ 25ರ ದಿನಭವಿಷ್ಯ
ಮಾರ್ಚ್​ 25ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (25 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಸೋಮವಾರ

ತಿಥಿ : ಹುಣ್ಣಿಮೆ ಹ.11.18 ರವರೆಗು ಇರುತ್ತದೆ. ಆನಂತರ ಪಾಡ್ಯ ಆರಂಭವಾಗಲಿದೆ.

ನಕ್ಷತ್ರ : ಉತ್ತರ ನಕ್ಷತ್ರವು ಬೆ. 09.43 ರವರೆಗು ಇರುತ್ತದೆ. ಆನಂತರ ಹಸ್ತ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆ.06.21

ಸೂರ್ಯಾಸ್ತ: ಸ.06.30

ರಾಹುಕಾಲ : ಬೆ. 07.30 ರಿಂದ ಬೆ. 09.00

ರಾಶಿ ಫಲಗಳು

ಸಿಂಹ

ಮಕ್ಕಳು ಹಿರಿಯರ ಆಸೆ ಆಕಾಂಕ್ಷೆಗಳನ್ನು ಪೂರೈಸುತ್ತಾರೆ. ಕುಟುಂಬದ ಹಣಕಾಸಿನ ಹೊಣೆ ನಿಮ್ಮದಾಗಲಿದೆ. ಉದ್ಯೋಗದಲ್ಲಿ ನ್ಯಾಯಯುತ ಹಕ್ಕನ್ನು ಪಡೆಯುವಿರಿ. ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಆದಾಯ ದೊರೆಯುತ್ತದೆ. ಹಣದ ತೊಂದರೆ ಬಾರದು. ವಿದ್ಯಾರ್ಥಿಗಳು ಪ್ರತಿ ವಿಚಾರಗಳಿಗೂ ಹೆಚ್ಚಿನ ಆಸಕ್ತಿ ನೀಡುತ್ತಾರೆ. ಗಣ್ಯ ವ್ಯಕ್ತಿಗಳ ಆಸರೆ ದೊರೆಯುತ್ತದೆ. ದಿನ ನಿತ್ಯದ ಕೆಲಸದಲ್ಲಿ ತೊಂದರೆ ಇರದು. ರಾಜಕೀಯದಲ್ಲಿ ಆಸಕ್ತಿ ಉಂಟಾಗುತ್ತದೆ. ತಂದೆಯವರಿಗೆ ವಂಶದ ಆಸ್ತಿಯ ವಿವಾದ ಸಾಮರಸ್ಯದಲ್ಲಿ ಕೊನೆಯಾಗುತ್ತದೆ. ಹಣದ ಕೊರತೆ ಎದುರಾದಲ್ಲಿ ಸಿಡುಕಿನಿಂದ ವರ್ತಿಸುವಿರಿ. ಮನರಂಜನೆಗಾಗಿ ದೂರದ ಊರಿಗೆ ಪ್ರಯಾಣ ಬೆಳೆಸುವಿರಿ. ಕೋಪ ತೊರೆದು ಶಾಂತಿಯಿಂದ ಕೆಲಸ ಕಾರ್ಯಗಳನ್ನು ಪೂರೈಸುವಿರಿ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ನೇರಳೆ ಬಣ್ಣ

ಕನ್ಯಾ

ಕುಟುಂಬದ ವಿಚಾರದಲ್ಲಿ ಮುಂಜಾಗರೂಕತೆಯಿಂದ ವರ್ತಿಸುವಿರಿ. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಕ್ಕೆ ನಿರೀಕ್ಷಿತ ಫಲಿತಾಂಶವನ್ನು ಪಡೆಯುವಿರಿ. ಅತಿ ನಿರೀಕ್ಷೆಯಿಂದ ವ್ಯಾಪಾರವೊಂದನ್ನು ಆರಂಭಿಸುವಿರಿ. ವಿದ್ಯಾರ್ಥಿಗಳು ಯೋಚನೆ ತೊರೆದು ಉನ್ನತ ಕಲಿಕೆಯಲ್ಲಿ ಮುಂದುವರೆಯಲಿದ್ದಾರೆ. ಹಣಕಾಸಿನ ವಿಚಾರದಲ್ಲಿ ಆತ್ಮೀಯರೊಬ್ಬರ ವಿರೋಧವನ್ನು ಎದುರಿಸಬೇಕಾಗುತ್ತದೆ. ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ವ್ಯಾಣಿಜ್ಯ ಸಂಕೀರ್ಣದ ಆಡಳಿತದ ಜವಾಬ್ದಾರಿ ದೊರೆಯುತ್ತದೆ. ಜನಸೇವೆಯಲ್ಲಿ ದಿನವನ್ನು ಕಳೆಯುವಿರಿ. ಅವಶ್ಯಕತೆ ಇದ್ದವರಿಗೆ ಹಣದ ಸಹಾಯ ಮಾಡುವಿರಿ. ಉದ್ಯೋಗದಲ್ಲಿ ಆಸಕ್ತಿ ಇರುವುದಿಲ್ಲ. ಒಪ್ಪಿದ ಕೆಲಸವನ್ನಷ್ಟೇ ಮಾಡುವಿರಿ. ದಂಪತಿಗಳ ನಡುವೆ ಅನಾವಶ್ಯಕ ವಾದ ವಿವಾದಗಳಿರಲಿವೆ.

ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ತುಲಾ

ಕುಟುಂಬದಲ್ಲಿ ಅನುಕೂಲಕರ ಬದಲವಣೆಗಳು ಊಂಟಾಗುತ್ತವೆ. ಉದ್ಯೋಗದಲ್ಲಿ ಉನ್ನತ ಅಧಿಕಾರಿಗಳ ಸಲಹೆಯನ್ನು ಪಾಲಿಸಬೇಕಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಕ್ರಿಯಾಶೀಲತೆಯಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ಹಣಕಾಸಿನ ವ್ಯವಹಾರವನ್ನು ಏಕಾಂಗಿಯಾಗಿ ನಿರ್ವಹಿಸುವಿರಿ. ಸಂಗಾತಿಯ ಜೊತೆಯಲ್ಲಿ ವಿದೇಶಕ್ಕೆ ಪ್ರಯಾಣ ಬೆಳೆಸುವಿರಿ. ಷ್ಟಾಕ್ ಮತ್ತು ಷೇರಿನ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭಾಂಶ ದೊರೆಯುತ್ತದೆ. ತಾಯಿಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಸ್ತ್ರೀಯರು ಮನಮೆಚ್ಚುವ ಚಿನ್ನದ ಆಭರಣಗಳನ್ನು ಕೊಳ್ಳುತ್ತಾರೆ.

ಪರಿಹಾರ : ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ವೃಶ್ಚಿಕ

ಕುಟುಂಬದ ಜವಾಬ್ದಾರಿ ಹೆಚ್ಚುವ ಕಾರಣ ಬೇಸರ ಉಂಟಾಗುತ್ತದೆ. ಉದ್ಯೋಗದ ವಿಚಾರದಲ್ಲಿ ತಪ್ಪು ನಿರ್ಧಾರವನ್ನು ಬದಲಾಯಿಸುವುದಿಲ್ಲ. ವ್ಯಾಪಾರ ವ್ಯವಹಾರದಲ್ಲಿ ಯಾರ ಮಾತನ್ನೂ ಕೇಳದೆ ಸ್ವಂತ ನಿರ್ಧಾರಕ್ಕೆ ಬದ್ದರಾಗುವಿರಿ. ನೇರವಾದ ನಡೆ ನುಡಿ ವಿವಾದಕ್ಕೆ ಕಾರಣವಾಗುತ್ತದೆ. ತಂದೆಯವರ ಆಶ್ರಯದಲ್ಲಿ ವಂಶಾದಾರಿತ ವ್ಯಾಪಾರವನ್ನು ಆರಂಭಿಸುವಿರಿ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ದೇಹಾಲಸ್ಯ ಉಂಟಾಗುತ್ತದೆ. ವ್ಯವಸಾಯ ಮಾಡುವ ಇಚ್ಚೆ ಮೂಡುತ್ತದೆ. ಮನೆಯ ಮುಂದಿನ ಮರ ಗಿಡಗಳನ್ನು ಪೂಷಿಸುವಿರಿ. ಸಣ್ಣ ಪುಟ್ಟ ತಪ್ಪುಗಳನ್ನು ಕ್ಷಮಿಸುವುದಿಲ್ಲ. ನಿಮ್ಮ ಮನಸ್ಸನ್ನು ಅರ್ಥಮಾಡಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ.

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು ಬಣ್ಣ

-------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.