ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸ್ನೇಹಿತರಿಂದ ಪಡೆದಿದ್ದ ಸಾಲ ತೀರಿಸುವಿರಿ, ನೆಮ್ಮದಿಗಾಗಿ ಆಧ್ಯಾತ್ಮದ ಮೊರೆ ಹೋಗಲಿದ್ದೀರಿ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಸ್ನೇಹಿತರಿಂದ ಪಡೆದಿದ್ದ ಸಾಲ ತೀರಿಸುವಿರಿ, ನೆಮ್ಮದಿಗಾಗಿ ಆಧ್ಯಾತ್ಮದ ಮೊರೆ ಹೋಗಲಿದ್ದೀರಿ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

25th ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (25th April 2024 Daily Horoscope).

25th ಏಪ್ರಿಲ್‌ 2024ರ ದಿನ ಭವಿಷ್ಯ
25th ಏಪ್ರಿಲ್‌ 2024ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (25th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಗುರುವಾರ

ತಿಥಿ : ಬಿದಿಗೆ ಬೆಳಗ್ಗೆ 06.03 ರವರೆಗೂ ಇದ್ದು ನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ : ವಿಶಾಖ ನಕ್ಷತ್ರವು ರಾತ್ರಿ 01.01 ರವರೆಗೂ ಇದ್ದು ನಂತರ ಅನೂರಾಧ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.03

ಸೂರ್ಯಾಸ್ತ: ಸಂಜೆ 06.32

ರಾಹುಕಾಲ : ಮಧ್ಯಾಹ್ನ 01.55 ರಿಂದ 03.29

ರಾಶಿಫಲ

ಮೇಷ

ಗೆಲ್ಲಲೇಬೇಕೆಂಬ ಛಲ ಮತ್ತು ಚುರುಕುತನ ನಿಮ್ಮಲ್ಲಿರುತ್ತದೆ. ಆರೋಗ್ಯದಲ್ಲಿ ಸ್ಥಿರತೆ ಇರುವ ಕಾರಣ ಯಾವುದೇ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ನೆಮ್ಮದಿಯ ಜೀವನಕ್ಕಾಗಿ ಹೂಡಿದ್ದ ಹಣಕಾಸಿನ ಯೋಜನೆಗಳು ಉತ್ತಮ ಆದಾಯ ನೀಡುತ್ತದೆ. ಕೈ ಹಿಡಿದ ಕೆಲಸದ ಬಗ್ಗೆ ಯಶಸ್ಸು ಗಳಿಸುವವರೆಗೂ ಯಾರಿಗೂ ತಿಳಿಸುವುದಿಲ್ಲ. ಮನೆಯ ದುರಸ್ತಿಗಾಗಿ ಹೆಚ್ಚಿನ ಹಣ ಬೇಕಾಗುತ್ತದೆ. ಸಾಮಾಜಿಕ ಸಮಾರಂಭಗಳಲ್ಲಿ ಪ್ರಮುಖ ಸ್ಥಾನವನ್ನು ಅಲಂಕರಿಸುವಿರಿ. ಒಳ್ಳೆಯ ಅಭ್ಯಾಸ ಬೆಳೆಸಿಕೊಂಡು ಎಲ್ಲರಿಗೂ ಮಾದರಿಯಾಗುವಿರಿ. ಉದ್ಯೋಗದ ಸಲುವಾಗಿ ಕುಟುಂಬದಿಂದ ದೂರ ಉಳಿಯುವಿರಿ. ಮನನ ದುಗುಡದಿಂದ ಹೊರ ಬರಲು ಆಧ್ಯಾತ್ಮಿಕತೆಯನ್ನು ಅವಲಂಬಿಸುವಿರಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬೂದು ಬಣ್ಣ

ವೃಷಭ

ದೈನಂದಿನ ಕೆಲಸ ಕಾರ್ಯಗಳಿಂದ ಬಿಡುವು ಬಯಸುವಿರಿ. ಸಂಗಾತಿ ಮತ್ತು ಮಕ್ಕಳೊಡನೆ ಕಿರು ಪ್ರವಾಸ ಕೈಗೊಳ್ಳುವಿರಿ. ಸ್ನೇಹಿತರಿಂದ ಅನಿವಾರ್ಯವಾಗಿ ಪಡೆದಿದ್ದ ಹಣವನ್ನು ಮರುಪಾವತಿ ಮಾಡುವಿರಿ. ಆರ್ಥಿಕ ಪರಿಸ್ಥಿತಿಯಲ್ಲಿ ಪ್ರಗತಿ ಕಂಡು ಬರುತ್ತದೆ. ಚಿನ್ನ ಮತ್ತು ಬೆಳ್ಳಿಯ ಆಭರಣಕ್ಕೆ ಹಣ ವ್ಯಯವಾಗುತ್ತದೆ. ಹೊಗಳಿಕೆಗೆ ಮರುಳಾಗಿ ಸಂಬಂಧಿಕರೊಬ್ಬರಿಗೆ ಧನ ಸಹಾಯ ಮಾಡುವಿರಿ. ಉದ್ಯೋಗದಲ್ಲಿ ನಿರೀಕ್ಷಿತ ಮಟ್ಟದ ಬದಲಾವಣೆಗಳು ಕಂಡು ಬರಲಿವೆ. ವಿದ್ಯಾರ್ಥಿಗಳು ಉನ್ನತ ಅಧ್ಯಯನದಲ್ಲಿ ಮೇಲ್ಮಟ್ಟ ತಲುಪುತ್ತಾರೆ. ಆತ್ಮೀಯರೊಬ್ಬರ ಭೇಟಿಯಿಂದ ಸಂತಸಗೊಳ್ಳುವಿರಿ. ಕುಟುಂಬದಲ್ಲಿ ಮಂಗಳ ಕಾರ್ಯವೊಂದು ನಡೆಯಲಿದೆ. ಸಮಾಜ ಸೇವೆ ಮಾಡುವ ಆಶಯದಿಂದ ಸಂಘ ಸಂಸ್ಥೆಯನ್ನು ಆರಂಭಿಸುವಿರಿ. ಆರೋಗ್ಯದ ಬಗ್ಗೆ ಗಮನ ನೀಡಿರಿ.

ಪರಿಹಾರ : ಸಾಧು ಸಂತರ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಕಂದು ಬಣ್ಣ

ಮಿಥುನ

ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಉತ್ತಮ ಆರೋಗ್ಯವಿದ್ದರೂ ಮಾಡುವ ತಪ್ಪಿನಿಂದ ತೊಂದರೆ ಉಂಟಾಗಬಹುದು. ಸ್ಟಾಕ್ ಮತ್ತು ಷೇರುಗಳ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ನಿಮ್ಮೆಲ್ಲಾ ಕೆಲಸ ಕಾರ್ಯಗಳಿಗೆ ಕುಟುಂಬದ ಸದಸ್ಯರ ಸಹಾಯ ಸಹಕಾರ ದೊರೆಯುತ್ತದೆ. ಸ್ನೇಹಿತರ ಜೊತೆ ಪಾಲುದಾರಿಕೆಯ ವ್ಯಾಪಾರ ಆರಂಭಿಸುವಿರಿ. ಸಂಗಾತಿಯ ಆರೋಗ್ಯದ ಬಗ್ಗೆ ಚಿಂತೆ ಇರುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಾಯ ಸಹಕಾರ ದೊರೆಯುತ್ತದೆ. ದೈನಂದಿನ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುತ್ತದೆ. ಜನರಿಂದ ದೂರವಿದ್ದು ಏಕಾಂಗಿಯಾಗಿ ಕೆಲಸ ಸಾಧಿಸುವಿರಿ. ಸದಸ್ಯರೊಂದಿಗೆ ಪ್ರೀತಿ ವಿಶ್ವಾಸದಿಂದ ದಿನ ಕಳೆಯುವಿರಿ.

ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಪ್ಪು

ಕಟಕ

ಉತ್ತಮ ಆರೋಗ್ಯಕ್ಕಾಗಿ ಆಹಾರ ಕ್ರಮದಲ್ಲಿ ಬದಲಾವಣೆ ಮಾಡುವಿರಿ. ಒತ್ತಡಕ್ಕೆ ಒಳಗಾಗದೆ ಸರಳ ಜೀವನ ನಡೆಸುವಿರಿ. ಉದ್ಯಮಿಗಳಾದಲ್ಲಿ ಉತ್ತಮ ವರಮಾನ ದೊರೆಯಲಿದೆ. ಆತ್ಮೀಯರಿಗೆ ಹಣದ ಸಹಾಯ ಮಾಡಬೇಕಾಗುತ್ತದೆ. ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದಗಳು ಎದುರಾಗಲಿದೆ. ಉದ್ಯೋಗದಲ್ಲಿ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವಿರಿ. ದೂರವಾಗಿದ್ದ ಸಂಬಂಧಿಕರೊಬ್ಬರು ಮರಳಿ ನಿಮ್ಮ ಪ್ರೀತಿ ವಿಶ್ವಾಸ ಬಯಸುತ್ತಾರೆ. ಪಾಲುಗಾರಿಕೆ ವ್ಯಾಪಾರದಲ್ಲಿ ಹಣವನ್ನು ಹೂಡುವ ಮುನ್ನಒಮ್ಮೆ ಯೋಚಿಸಿ ನೋಡಿ. ಸಂಗಾತಿಯ ಆರೋಗ್ಯದಲ್ಲಿ ಏರಿಳಿತ ಉಂಟಾಗಬಹುದು. ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಕಲಿಯುವ ಅವಕಾಶ ಒದಗಿ ಬರಲಿದೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ತಿಳಿ ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).