ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಸಣ್ಣ ಬಂಡವಾಳದ ವ್ಯಾಪಾರ ಆರಂಭಿಸಲಿದ್ದೀರಿ, ಸ್ವಂತ ಓಡಾಟಕ್ಕೆ ವಾಹನ ಖರೀದಿಸುವಿರಿ; ಧನು, ಮಕರ, ಕುಂಭ, ಮೀನ ರಾಶಿಫಲ

Horoscope Today: ಸಣ್ಣ ಬಂಡವಾಳದ ವ್ಯಾಪಾರ ಆರಂಭಿಸಲಿದ್ದೀರಿ, ಸ್ವಂತ ಓಡಾಟಕ್ಕೆ ವಾಹನ ಖರೀದಿಸುವಿರಿ; ಧನು, ಮಕರ, ಕುಂಭ, ಮೀನ ರಾಶಿಫಲ

25th ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (25th April 2024 2024 Daily Horoscope).

25th ಏಪ್ರಿಲ್‌ 2024ರ ದಿನಭವಿಷ್ಯ
25th ಏಪ್ರಿಲ್‌ 2024ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(25th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಗುರುವಾರ

ತಿಥಿ : ಬಿದಿಗೆ ಬೆಳಗ್ಗೆ 06.03 ರವರೆಗೂ ಇದ್ದು ನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ : ವಿಶಾಖ ನಕ್ಷತ್ರವು ರಾತ್ರಿ 01.01 ರವರೆಗೂ ಇದ್ದು ನಂತರ ಅನೂರಾಧ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.03

ಸೂರ್ಯಾಸ್ತ: ಸಂಜೆ 06.32

ರಾಹುಕಾಲ : ಮಧ್ಯಾಹ್ನ 01.55 ರಿಂದ 03.29

ರಾಶಿಫಲ

ಧನಸ್ಸು

ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ದೈನಂದಿನ ಚಟುವಟಿಕೆಗಳಲ್ಲಿ ಎಂದಿನಂತೆ ಪಾಲ್ಗೊಳ್ಳುವಿರಿ. ಕುಟುಂಬದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ಹಣಕಾಸಿನ ವಿಚಾರದಲ್ಲಿ ದುಡುಕಿನ ನಿರ್ಧಾರ ತೆಗೆದುಕೊಳ್ಳದಿರಿ. ಬೇರೆಯವರ ಹಣಕಾಸಿನ ವ್ಯವಹಾರದಲ್ಲಿ ಪಾಲ್ಗೊಳ್ಳದಿರಿ. ನಿಮ್ಮಲ್ಲಿನ ನಮ್ರತೆ ಬೇರೆಯವರ ಮನಸ್ಸನ್ನು ಸರಿದಾರಿಗೆ ತರಲಿದೆ. ಉದ್ಯೋಗದಲ್ಲಿ ಹೊಸ ರೀತಿಯ ಬೆಳವಣಿಗೆಗಳು ಕಂಡುಬರುತ್ತವೆ. ಹಣಕಾಸಿನ ಸ್ಥಿತಿಯಲ್ಲಿ ಪ್ರಗತಿ ಕಂಡು ಬರಲಿದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ ನಿಮ್ಮದಾಗಲಿದೆ. ಸಂಗಾತಿಯೊಂದಿಗೆ ಆತ್ಮೀಯತೆಯಿಂದ ವರ್ತಿಸಿ. ಇದರಿಂದ ನಿಮಗೆ ಅನುಕೂಲವೇ ಹೆಚ್ಚು. ನಿಮ್ಮ ತಪ್ಪಿಗೆ ಬೇರೆಯವರನ್ನು ದೂರುವಿರಿ. ನಿಮಗೆ ನಂಬಿಕೆ ಇರುವ ಆತ್ಮೀಯ ಗುರುವೊಬ್ಬರನ್ನು ಭೇಟಿ ಮಾಡುವಿರಿ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಆಕಾಶ ನೀಲಿ

ಮಕರ

ಗೆಲುವಿನ ನಿರೀಕ್ಷೆಯಿಂದಲೇ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ನಿಮ್ಮಲ್ಲಿರುವ ಆತ್ಮವಿಶ್ವಾಸ ಕಷ್ಟದ ವೇಳೆಯಲ್ಲಿ ಆಸರೆಯಾಗಲಿದೆ. ಅತಿ ನಿಧಾನಗತಿಯ ಕಾರ್ಯ ನಿರ್ವಹಣೆ ಬೇರೆಯವರಲ್ಲಿ ಬೇಸರ ಉಂಟುಮಾಡುತ್ತದೆ. ನಿಮ್ಮ ಕಾರ್ಯದಕ್ಷತೆಗೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳು ಎದುರಾಗಲಿವೆ. ಮಾನಸಿಕ ಒತ್ತಡಕ್ಕೆಒಳಗಾಗುವಿರಿ. ನಿಮ್ಮ ಮಕ್ಕಳ ಸಾಧನೆಯು ನಿಮ್ಮೆಲ್ಲಾ ನೋವನ್ನು ಮರೆಸುತ್ತದೆ. ಅನಾವಶ್ಯಕ ಮಾತುಕತೆಗಳಿಂದ ತಪ್ಪು ಅಭಿಪ್ರಾಯ ಉಂಟಾಗಲಿದೆ. ಮನಸ್ಸಿಗೆ ಬೇಸರವಾಗುವಷ್ಟು ಪ್ರಯಾಣ ಮಾಡುವಿರಿ. ಸ್ವಂತ ಬಳಕೆಗಾಗಿ ಹೊಸ ವಾಹನ ಕೊಳ್ಳುವಿರಿ. ಕುಟುಂಬದ ಹಿರಿಯರ ಸಹಕಾರದಿಂದ ಸಣ್ಣ ಬಂಡವಾಳದ ವ್ಯಾಪಾರವನ್ನು ಆರಂಭಿಸುವಿರಿ. ಬಂಧು-ಬಳಗದವರೊಂದಿಗೆ ಅನಾವಶ್ಯಕವಾದ ವಾದ ವಿವಾದಗಳಿರುತ್ತವೆ.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಕುಂಭ

ಮನಸ್ಸಿನಲ್ಲಿ ಅನಾವಶ್ಯಕವಾದ ಯೋಚನೆಗಳು ಇರುತ್ತವೆ. ಮಾಡದ ತಪ್ಪಿನಿಂದ ಮನಸ್ಸಿಗೆ ಬೇಸರ ಉಂಟಾಗುತ್ತದೆ. ದುಡುಕಿನಿಂದ ಕೆಲಸ ಕಾರ್ಯಗಳನ್ನು ಮಾಡುವ ಕಾರಣ ತೊಂದರೆ ಅನುಭವಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಕುಟುಂಬದಲ್ಲಿ ಪರಸ್ಪರ ಪ್ರೀತಿ ಗೌರವ ಕಂಡುಬರುತ್ತದೆ. ಕುಟುಂಬಕ್ಕೆ ಸಂಬಂಧಿಸಿದ ಭೂ ವಿವಾದ ಒಂದು ಪರಿಹಾರ ಗೊಳ್ಳಲಿದೆ. ಸೋಲು ಗೆಲುವನ್ನು ಒಂದೇ ಮನೋಭಾವನೆಯಿಂದ ಸ್ವೀಕರಿಸುವಿರಿ. ಮನರಂಜನೆಗಾಗಿ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಸಮಾಜದ ನಾಯಕರಾಗಿ ಹೊರ ಹೊಮ್ಮುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಸಂತಸದಿಂದ ಬಾಳುವಿರಿ. ಸಂಗಾತಿಯಿಂದ ಹಣಕಾಸಿನ ವಿಚಾರದಲ್ಲಿ ಉತ್ತಮ ಮಟ್ಟದ ಸಹಾಯ ಸಹಕಾರ ದೊರೆಯುತ್ತದೆ. ಚಿಕ್ಕ ಮಕ್ಕಳ ಬಗ್ಗೆ ಎಚ್ಚರಿಕೆ ಇರಲಿ.

ಪರಿಹಾರ : ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೇಸರಿ

ಮೀನ

ಕುಟುಂಬದ ಸಮಸ್ಯೆಗಳನ್ನು ಬುದ್ಧಿವಂತಿಕೆಯಿಂದ ಪರಿಹರಿಸುವಿರಿ. ಎಲ್ಲರ ಜೊತೆ ಸಭ್ಯತೆಯಿಂದ ನಡೆದುಕೊಳ್ಳುವ ಕಾರಣ ವಿಶೇಷ ಗೌರವವನ್ನು ಗಳಿಸುವಿರಿ. ಅನಾವಶ್ಯಕ ಖರ್ಚು ವೆಚ್ಚಗಳನ್ನು ನಿಯಂತ್ರಿಸುವಿರಿ. ಸಂಗಾತಿಯ ಸಹಾಯ ಸಹಕಾರ ಜೀವನವದಲ್ಲಿ ಉತ್ತಮ ಬದಲಾವಣೆಗಳನ್ನು ಉಂಟುಮಾಡಲಿದೆ. ಯಾರನ್ನೂ ಅವಲಂಬಿದೆ ಸ್ವಶಕ್ತಿಯಿಂದ ಕೆಲಸ ಸಾಧಿಸುವಿರಿ. ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವಿರಿ. ಸಂಗಾತಿಯೊಡನೆ ಕಿರುಪ್ರವಾಸಕ್ಕೆ ತೆರಳುವಿರಿ. ನಿಮ್ಮ ಪ್ರೀತಿಯ ಮಾತುಕತೆ ಮಕ್ಕಳಲ್ಲಿ ಹೊಸ ಹುಮ್ಮಸ್ಸು ತುಂಬುತ್ತದೆ. ನಿಮ್ಮ ಪ್ರಭಾವದಿಂದ ಆತ್ಮೀಯರ ಭೂವಿವಾದವು ಕೊನೆಗೊಳ್ಳುತ್ತದೆ. ಆರಂಭಿಸುವ ಕೆಲಸ ಕಾರ್ಯಗಳು ಅಪೂರ್ಣಗೊಳ್ಳಲಿವೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ನೇರಳೆ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).