ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವ್ಯವಹಾರದಲ್ಲಿ ಎಚ್ಚರವಿರಲಿ, ದಿಢೀರ್ ಬದಲಾವಣೆ ಕಾಣುತ್ತೀರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

Horoscope Today: ವ್ಯವಹಾರದಲ್ಲಿ ಎಚ್ಚರವಿರಲಿ, ದಿಢೀರ್ ಬದಲಾವಣೆ ಕಾಣುತ್ತೀರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

25 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (25th June 2024 Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯ ದಿನ ಭವಿಷ್ಯ ತಿಳಿಯಿರಿ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯ ದಿನ ಭವಿಷ್ಯ ತಿಳಿಯಿರಿ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (25th June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣಪಕ್ಷ, ಮಂಗಳವಾರ

ತಿಥಿ: ಚತುರ್ಥಿ ರಾತ್ರಿ 12.51ರವರೆಗೂ ಇದ್ದು ಅನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ: ಶ್ರವಣ ನಕ್ಷತ್ರವು ಸಂಜೆ 4.37 ರವರೆಗೆ ಇದ್ದು ಅನಂತರ ಧನಿಷ್ಠ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಿಗ್ಗೆ 5.54

ಸೂರ್ಯಾಸ್ತ: ಸಂಜೆ 6.48

ರಾಹುಕಾಲ: ಬೆಳಿಗ್ಗೆ 3.37 ರಿಂದ ಸಂಜೆ 5.13

ಇಂದಿನ ವಿಶೇಷ ಅಂಗಾರಕ ಸಂಕಷ್ಠಹರ ಚತುರ್ಥಿ. ಚಂದ್ರೋದಯ ರಾತ್ರಿ: 10.06

ಸಿಂಹ ರಾಶಿ

ಬಹುದಿನದಿಂದ ಇದ್ದ ಆತ್ಮೀಯರ ಜೊತೆಗಿನ ಒಡನಾಟ ದೂರವಾಗಲಿದೆ. ದಾಂಪತ್ಯ ಜೀವನವು ಸಾಮಾನ್ಯವಾಗಿರುತ್ತದೆ. ನಿಮ್ಮ ಸ್ವಂತ ವಿಚಾರಗಳನ್ನು ಯಾರಿಗೂ ತಿಳಿಸುವಿಲ್ಲ. ಹಣಕಾಸಿನ ವ್ಯವಹಾರವನ್ನು ರಹಸ್ಯವಾಗಿ ಇರಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ವಿಶೇಷ ಲಾಭ ಗಳಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಕಾನೂನಿನ ವಿಚಾರಗಳ ಬಗ್ಗೆ ಎಚ್ಚರವಿರಲಿ. ಯಾವುದೇ ಕೆಲಸವನ್ನು ಮಾಡಲು ಮನಸ್ಸು ಒಪ್ಪುವುದಿಲ್ಲ. ಉದ್ಯೋಗದಲ್ಲಿ ಕಷ್ಟದ ಸನ್ನಿವೇಶವು ಎದುರಾಗಲಿದೆ. ನೀವು ಮಾಡುವ ಕೆಲಸವೆಲ್ಲವೂ ಸರಿ ಎಂಬ ಭಾವನೆ ಇರುತ್ತದೆ. ಸಮಯವನ್ನು ವ್ಯರ್ಥ ಮಾಡದೆ ಯಾವುದಾದರೊಂದು ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ಸಮಯಕ್ಕೆ ಸರಿಯಾಗಿ ಬುದ್ಧಿವಂತಿಕೆಯಿಂದ ವರ್ತಿಸುವಿರಿ. ನಿಮ್ಮಲ್ಲಿ ತಪ್ಪುಗಳಿದ್ದರೂ ಬೇರೆಯವರಿಗೆ ಬುದ್ಧಿವಾದ ಹೇಳುವಲ್ಲಿ ನಿಸ್ಸೀಮರು.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಕನ್ಯಾ ರಾಶಿ

ಜೊತೆಯಲ್ಲಿ ಅನಾವಶ್ಯಕ ವಾದ ವಿವಾದಗಳು ಇರುತ್ತವೆ. ಮನದಲ್ಲಿ ಸದಾ ಬದಲಾವಣೆಗಳನ್ನು ನಿರೀಕ್ಷಿಸುವಿರಿ. ಒಮ್ಮೆ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧರಾಗುವುದಿಲ್ಲ. ಧಾರ್ಮಿಕ ಕಾರ್ಯಗಳಿಂದ ಶುಭಫಲಗಳು ದೊರೆಯುತ್ತವೆ. ತಾಯಿಯ ಮೇಲೆ ವಿಶೇಷ ಪ್ರೀತಿ ವಿಶ್ವಾಸ ಇರುತ್ತದೆ. ತಾಯಿಯ ಮಾರ್ಗದರ್ಶನದಲ್ಲಿ ಜೀವನ ನಡೆಸಲು ಇಷ್ಟಪಡುವಿರಿ. ನಿಮ್ಮ ಮನಸ್ಸಿಗೆ ಹತ್ತಿರವಾದವರನ್ನು ಸದಾ ಕಾಲ ರಕ್ಷಿಸುವಿರಿ. ಉದಾರಿಗಳು. ತಪ್ಪು ಮಾಡಿದವರನ್ನು ಸರಿದಾರಿಯಲ್ಲಿ ನಡೆಯುವಂತೆ ಮಾಡುತ್ತಾರೆ. ಎಲ್ಲರನ್ನೂ ಒಂದೇ ಭಾವನೆಯಿಂದ ನೋಡುವಿರಿ. ನಿಮಗೆ ಮೃದುವಾದ ಮನಸ್ಸಿರುತ್ತದೆ. ಜೀವನದಲ್ಲಿ ದಿಢೀರನೆ ಒಳ್ಳೆಯ ಬದಲಾವಣೆಗಳು ಕಂಡುಬರುತ್ತದೆ. ಉಲ್ಲಾಸದಿಂದ ದಿನ ಕಳೆಯುವಿರಿ.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಎಲೆ ಹಸಿರು ಬಣ್ಣ

ತುಲಾ ರಾಶಿ

ಧಾರ್ಮಿಕ ಗುರುಗಳ ಭೇಟಿಯಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಹಿಂದಿನ ದಿನಗಳಲ್ಲಿ ಮಾಡಿದ ಸಹಾಯವನ್ನು ನೆನೆದು ಆಪ್ತರೊಬ್ಬರು ನಿಮ್ಮಗೆ ಸಹಾಯಕ್ಕೆ ಬರುತ್ತಾರೆ. ಕುಲದೇವರ ಯಾತ್ರಾಸ್ಥಳಕ್ಕೆ ಭೇಟಿ ನೀಡುವಿರಿ. ಜೀವನದಲ್ಲಿ ಇದ್ದ ದೊಡ್ಡ ಕಷ್ಟ ದೂರವಾಗಲಿದೆ. ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಬೇಕು. ನಿಮ್ಮ ತಾಯಿಯವರಿಂದ ಹಣದ ಸಹಾಯ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಅವರ ವಿದ್ಯಾಭ್ಯಾಸಕ್ಕೆ ತಕ್ಕಂತಹ ಉದ್ಯೋಗ ದೊರೆಯುತ್ತದೆ. ಯುವಕ ಯುವತಿಯರಿಗೆ ವಿಶೇಷ ಅನುಕೂಲ ದೊರೆಯುತ್ತದೆ. ವಿದ್ಯಾರ್ಥಿಗಳು ಆರಂಭದಲ್ಲಿ ಅಡಚಣೆಗಳನ್ನು ಎದುರಿಸುತ್ತಾರೆ. ಮಕ್ಕಳ ರೀತಿ ನೀತಿ ನಿಮ್ಮ ಮನಸ್ಸಿನಲ್ಲಿ ಹೊಸ ಭರವಸೆಯನ್ನು ಹುಟ್ಟಿಸುತ್ತದೆ.

ಪರಿಹಾರ: ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ವೃಶ್ಚಿಕ ರಾಶಿ

ಆತ್ಮೀಯರ ಮನೆಯ ವಿವಾಹ ಕಾರ್ಯದಲ್ಲಿ ಸಹಾಯ ಮಾಡುವಿರಿ. ಯಾರ ಒತ್ತಡಕ್ಕೂ ಮಣಿಯದೆ ಹಠದಿಂದ ನಿಮ್ಮ ಕೆಲಸ ಸಾಧಿಸುವಿರಿ. ಎದುರಾಗುವ ಕಷ್ಟ ನಷ್ಟಗಳಿಗೆ ಹೆದರದೆ ಮುನ್ನುಗ್ಗುವಿರಿ. ಆದರೆ ಕೆಲಸಕಾರ್ಯಗಳು ನಿಧಾನಗತಿಯಲ್ಲಿ ಸಾಗಲಿವೆ. ಸೋದರ ವರ್ಗದಿಂದ ನಿಮಗೆ ಉತ್ತಮ ಸಹಾಯ ಸಹಕಾರ ದೊರೆಯುತ್ತದೆ. ನಿಮ್ಮ ನೇತೃತ್ವದಲ್ಲಿ ಮನೆಯಲ್ಲಿ ಮಂಗಳಕಾರ್ಯವೊಂದು ನಡೆಯಲಿದೆ. ದಾಂಪತ್ಯದಲ್ಲಿ ಉತ್ತಮ ಒಡನಾಟ ಇರುತ್ತದೆ. ಅತಿಯಾದ ಆಹಾರ ಸೇವನೆಯಿಂದ ಅನಾರೋಗ್ಯ ಉಂಟಾಗುತ್ತದೆ. ಮಕ್ಕಳಿಗೆ ಹೊಟ್ಟೆನೋವಿನ ತೊಂದರೆ ಇರುತ್ತದೆ. ಅತಿಯಾಗಿ ಸಣ್ಣಗಾಗುವಿರಿ. ಅನಾವಶ್ಯಕ ಜವಾಬ್ದಾರಿಯಿಂದ ನಿಮ್ಮ ಹಣ ಖರ್ಚಾಗಬಹುದು.

ಪರಿಹಾರ: ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.