ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಹಣಕಾಸಿನ ವಿಚಾರದಲ್ಲಿ ಎಚ್ಚರವಿರಲಿ, ದೊಡ್ಡ ಕಷ್ಟ ದೂರವಾಗುತ್ತೆ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

Horoscope Today: ಹಣಕಾಸಿನ ವಿಚಾರದಲ್ಲಿ ಎಚ್ಚರವಿರಲಿ, ದೊಡ್ಡ ಕಷ್ಟ ದೂರವಾಗುತ್ತೆ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

25 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (25th June 2024 Horoscope).

ಧನು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ ತಿಳಿಯಿರಿ
ಧನು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ ತಿಳಿಯಿರಿ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (25th June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣಪಕ್ಷ, ಮಂಗಳವಾರ

ತಿಥಿ: ಚತುರ್ಥಿ ರಾತ್ರಿ 12.51ರವರೆಗೂ ಇದ್ದು ಅನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ: ಶ್ರವಣ ನಕ್ಷತ್ರವು ಸಂಜೆ 4.37 ರವರೆಗೆ ಇದ್ದು ಅನಂತರ ಧನಿಷ್ಠ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಿಗ್ಗೆ 5.54

ಸೂರ್ಯಾಸ್ತ: ಸಂಜೆ 6.48

ರಾಹುಕಾಲ: ಬೆಳಿಗ್ಗೆ 3.37 ರಿಂದ ಸಂಜೆ 5.13

ಧನಸ್ಸು ರಾಶಿ

ಮನೆಗೆ ಬಂದ ಅತಿಥಿಗಳನ್ನು ಪ್ರೀತಿ ಗೌರವದಿಂದ ಕಾಣುವಿರಿ. ನಿಮಗೆ ಉದಾರವಾದ ಮನಸ್ಸಿರುತ್ತದೆ. ಅಪರೂಪವೆಂಬಂತೆ ಬೇರೆಯವರ ಆತಿಥ್ಯ ನಿಮಗೆ ದೊರೆಯುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ಕಂಡುಬರುತ್ತದೆ. ನಿಮ್ಮ ಅಧಿಕಾರದ ಅವಧಿಯಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರನ್ನು ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಹಲವಾರು ಜನರಿಗೆ ಸಹಾಯ ಮಾಡುವಿರಿ. ದೀರ್ಘ ಕಾಲದ ಪ್ರವಾಸಕ್ಕೆ ಯೋಜನೆ ರೂಪಿಸುವಿರಿ. ಯಾತ್ರಾಸ್ಥಳಕ್ಕೆ ಭೇಟಿ ನೀಡುವಿರಿ. ವಿದ್ಯೆಗಿಂತಲೂ ನಿಮಗೆ ಅಪರಿಮಿತ ಬುದ್ಧಿಶಕ್ತಿ ಇರುತ್ತದೆ. ಹಣಕಾಸಿನ ವ್ಯವಹಾರದ ವಿಚಾರದಲ್ಲಿ ನಿಮ್ಮನ್ನು ಗೆಲ್ಲಲು ಯಾರಿಂದಲೂ ಸಾಧ್ಯವಾಗುವುದಿಲ್ಲ. ಹಣವನ್ನು ಉಳಿಸುವಲ್ಲಿ ವಿಫಲರಾಗುವಿರಿ.

ಪರಿಹಾರ: ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮಕರ ರಾಶಿ

ಸ್ವತಂತ್ರವಾಗಿ ನಡೆಸುತ್ತಿರುವ ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ ಉಂಟಾಗುತ್ತದೆ. ಆದರೆ ಪಾಲುದಾರಿಕೆಯ ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಬೆನ್ನುನೋವಿನಿಂದ ಬಳಲುವಿರಿ. ಕುಟುಂಬದ ವಿವಾಹ ಕಾರ್ಯವು ವಿವಾದದಿಂದ ನಡೆಯುತ್ತದೆ. ಮಧ್ಯ ವಯಸ್ಸಿನ ಜನರಿಂದ ನಿಮ್ಮಲ್ಲಿರುವ ಅಡ್ಡಿ ಆತಂಕಗಳು ದೂರವಾಗುತ್ತವೆ. ಕಷ್ಟದ ಸಂದರ್ಭದಲ್ಲಿ ಹೆದರದೆ ಬುದ್ಧಿವಂತಿಕೆಯಿಂದ ಪರಿಹಾರವನ್ನು ಕಂಡುಹಿಡಿಯುವಿರಿ. ನಿಮ್ಮ ಮಾತುಗಳು ಬೇರೆಯವರಲ್ಲಿ ಸಂದೇಹವನ್ನು ಉಂಟು ಮಾಡುತ್ತದೆ. ಉತ್ತಮ ಹಾಸ್ಯಪ್ರಜ್ಞೆ ಇರುತ್ತದೆ. ನಿಮ್ಮ ಮನಸ್ಸಿನಲ್ಲಿ ಚಿತ್ರ ವಿಚಿತ್ರವಾದ ಯೋಚನೆ ಇರುತ್ತದೆ. ಪ್ರಾಣಿಗಳಿಂದ ತೊಂದರೆಯಾಗಬಹುದು ಎಚ್ಚರಿಕೆ ಇರಲಿ. ನಿಮ್ಮಲ್ಲಿರುವ ಹಠದ ಗುಣ ಬೇರೆಯವರಲ್ಲಿ ಬೇಸರವನ್ನು ಉಂಟುಮಾಡಬಲ್ಲದು.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕುಂಭ ರಾಶಿ

ಕೈಕಾಲುಗಳಿಗೆ ಪೆಟ್ಟಾಗಬಹುದು. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಬಂಧುವರ್ಗದ ಜೊತೆಯಲ್ಲಿ ಭೂ ವಿವಾದವಿರುತ್ತದೆ. ನೂತನ ದಂಪತಿಗಳು ಆತಂಕದ ಪರಿಸ್ಥಿತಿಯನ್ನು ಎದುರಿಸುತ್ತಾರೆ. ಪ್ರವಾಸದ ಸಲುವಾಗಿ ವಿದೇಶಕ್ಕೆ ತೆರಳುವಿರಿ. ಸ್ತ್ರೀಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಹೊಂದಿರುವುದು ಒಳ್ಳೆಯದು. ನಿಮಗೆ ಚಂಚಲವಾದ ಮನಸ್ಸಿರುತ್ತದೆ. ತಾಯಿಯವರ ಮನಸ್ಸಿನಲ್ಲಿ ಅನಾವಶ್ಯಕ ಬೇಸರವಿರುತ್ತದೆ. ಪ್ರವಾಸದ ವೇಳೆ ನಿಮಗಿಷ್ಟವೆನಿಸುವ ವಸ್ತು ಕಳುವಾಗಬಹುದು. ಹಣದ ವಿಚಾರದಲ್ಲಿ ತಾಯಿಯ ಜೊತೆ ಮನಸ್ತಾಪ ಉಂಟಾಗುತ್ತದೆ. ಆದಾಯಕ್ಕಿಂತಲೂ ಖರ್ಚು ವೆಚ್ಚಗಳು ಅಧಿಕವಾಗಿರುತ್ತದೆ. ಬೇರೆಯವರಿಂದ ಹಣವನ್ನು ಪಡೆಯುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಮೀನ ರಾಶಿ

ಮನಸ್ಸಿಗೆ ಒಪ್ಪುವ ವಸ್ತುಗಳನ್ನು ದುಬಾರಿಯಾದರು ಕೊಳ್ಳುವಿರಿ. ಬಿಡುವಿಲ್ಲದ ಕೆಲಸದ ಕಾರಣ ನಿಮ್ಮನ್ನು ನಿದ್ರೆ ಆವರಿಸುತ್ತದೆ. ಸಂಬಂಧಿಕರೇ ನಿಮ್ಮ ವಿರೋಧಿಗಳಾಗಿ ಮಾರ್ಪಡುತ್ತಾರೆ. ಚರ್ಮದ ಸೋಂಕು ಕಡಿಮೆಯಾಗುತ್ತದೆ. ಆದರೆ ಅಧಿಕವಾದ ಮೈ ಕೈ ನೋವಿನಿಂದ ತೊಂದರೆಪಡುವಿರಿ. ಪ್ರಾಣಿಗಳಿಗೆ ಆಹಾರದ ವ್ಯವಸ್ಥೆ ಮಾಡುವಿರಿ. ವಿದ್ಯಾರ್ಥಿಗಳು ಆರಂಭದಲ್ಲಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ಬಂಧು-ಬಳಗದವರಿಂದ ದೂರ ಉಳಿಯಲು ಬಯಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಬೇರೆಯವರನ್ನು ಅವಲಂಬಿಸಬೇಡಿ. ದಂಪತಿಗಳ ನಡುವೆ ಇದ್ದ ಮನಸ್ತಾಪ ದೂರವಾಗುತ್ತದೆ.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಹಸಿರು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.