Horoscope Today: ಅನುಮಾನದ ಗುಣ ಬೇಡ, ಉದ್ಯೋಗದಲ್ಲಿ ಸ್ಥಿರತೆ ಕಂಡುಬರುತ್ತೆ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ
25 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (25th May 2024 Daily Horoscope).
ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (25th May 2024 Horoscope)
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಶನಿವಾರ
ತಿಥಿ: ಬಿದಿಗೆ ಸಂಜೆ 06.22 ರವರೆಗೂ ಇರುತ್ತದೆ. ಆನಂತರ ತದಿಗೆ ಆರಂಭವಾಗುತ್ತದೆ.
ನಕ್ಷತ್ರ: ಜ್ಯೇಷ್ಠ ನಕ್ಷತ್ರವು ಬೆಳಗ್ಗೆ 10.23 ರವರೆಗು ಇರುತ್ತದೆ. ಆನಂತರ ಮೂಲ ನಕ್ಷತ್ರವು ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.52
ಸೂರ್ಯಾಸ್ತ: ಸಂಜೆ 06.40
ರಾಹುಕಾಲ: ಬೆ. 09.08 ರಿಂದ ಬೆ. 10.44
ಮೇಷ ರಾಶಿ
ಉದ್ಯೋಗದ ವಿಚಾರದಲ್ಲಿ ಮನದಲ್ಲಿ ಆತಂಕದ ಭಾವನೆ ಇರುತ್ತದೆ. ಆತುರ ಪಡದೆ ಮಾಡುವ ಕೆಲಸದಲ್ಲಿ ಯಶಸ್ಸು ಲಭಿಸುತ್ತದೆ. ಸ್ನೇಹಿತರ ಜೊತೆಗೂಡಿ ಹಣಕಾಸಿನ ಸಂಸ್ಥೆಯನ್ನು ಆರಂಭಿಸುವಿರಿ. ನೂತನ ಆವಿಷ್ಕಾರದ ಗುಣದಿಂದ ಮುಂದುವರೆಯುವಿರಿ. ನಿಮ್ಮಲ್ಲಿನ ಪ್ರತಿಭಾಪ್ರದರ್ಶನಕ್ಕೆ ಒಳ್ಳೆಯ ಅವಕಾಶ ದೊರೆಯಲಿದೆ. ಬುದ್ಧಿ ಚಾತುರ್ಯದಿಂದ ಸಂಬರ್ಧಾನುಸಾರವಾಗಿ ವರ್ತಿಸುವಿರಿ. ಹಣಕಾಸಿನ ವಿವಾದವೊಂದರಿಂದ ಪಾರಾಗುವಿರಿ. ಅನುಮಾನದ ಗುಣಬೇಡ. ಸೋದರರಿಗೆ ಹಣದ ಕೊರತೆ ಇರುತ್ತದೆ. ಆರೋಗ್ಯದ ಬಗ್ಗೆ ಗಮನ ಇರಲಿ. ವಿದ್ಯಾರ್ಥಿಗಳಿಗೆ ಶುಭವಿದೆ.
ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕಂದು ಬಣ್ಣ
ವೃಷಭ ರಾಶಿ
ಆತ್ಮೀಯರೊಬ್ಬರು ನಿಮ್ಮನ್ನು ತಪ್ಪಾಗಿ ಭಾವಿಸುತ್ತಾರೆ. ಕುಟುಂಬದಲ್ಲಿನ ಅನಾಸಕ್ತಿಯ ಮಾತುಗಳಿಂದ ಬೇಸರ ಅನುಭವಿಸುವಿರಿ. ಬದಲಾಗದ ಮನಸ್ಸಿನ ಕಾರಣ ಕೈಹಿಡಿದ ಕೆಲಸಗಳಲ್ಲಿ ಯಶಸ್ಸು ಗಳಿಸುವಿರಿ. ಭೂವ್ಯವಹಾರದಲ್ಲಿ ಎದುರಾಗುವ ತೊಂದರೆ ದೂರವಾಗುತ್ತದೆ. ಆರೋಗ್ಯದ ಬಗ್ಗೆಎಚ್ಚರಿಕೆ ಇರಲಿ. ದೂರದ ಸಂಬಂಧಿಯೊಬ್ಬರು ನಿಮ್ಮ ಆಶ್ರಯ ಬಯಸಿ ಬರಲಿದ್ದಾರೆ. ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ವ್ಯಾಪಾರದಲ್ಲಿ ಆದಾಯವಿರುತ್ತದೆ. ಉದ್ಯೋಗದಲ್ಲಿ ಸ್ಥಿರತೆ ಕಂಡುಬರುತ್ತದೆ. ವಿದ್ಯಾರ್ಥಿಗಳು ನಿರೀಕ್ಷಿತ ಫಲಗಳನ್ನು ಪಡೆಯುತ್ತಾರೆ.
ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ಕಪ್ಪು
ಮಿಥುನ ರಾಶಿ
ಯಂತ್ರೋಪಕರಣಗಳಿಂದ ತೊಂದರೆ ಇರಲಿದೆ ಎಚ್ಚರವಿರಲಿ. ಉದ್ಯೋಗದಲ್ಲಿ ಬೇಸರವಿದ್ದರೂ ಉತ್ತಮ ವೇತನ ದೊರೆಯುತ್ತದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಕಲಿಕೆಯಲ್ಲಿ ಮುಂದುವರಿಯಲಿದ್ದಾರೆ. ಆಹಾರ ತಯಾರಿಕಾ ಕೇಂದ್ರವನ್ನು ಆರಂಭಿಸುವ ಆಸೆ ಪೂರ್ಣವಾಗಲಿದೆ. ನಿಮಗೆ ಅರಿವಿಲ್ಲದಂತೆ ಬೇರೆಯವರ ಮನ ನೋಯುವಂತೆ ಮಾತನಾಡುವಿರಿ. ಎರಡು ಅಥವಾ ಹೆಚ್ಚಿನ ಉದ್ಯೋಗವನ್ನು ಮಾಡುವಿರಿ. ಆದಾಯದಲ್ಲಿ ಏರಿಳಿತ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಮಧ್ಯವರ್ತಿಗಳಾಗದಿರಿ. ವಿವಾಹಕಾರ್ಯವು ಮುಂದೂಡಲ್ಪಡುತ್ತದೆ. ಹಿರಿಯರ ಆಸ್ತಿಯಲ್ಲಿನ ಸಿಂಹಪಾಲು ನಿಮ್ಮದಾಗುತ್ತದೆ. ಚಿನ್ನಾಭರಣವನ್ನು ಕೊಳ್ಳುವಿರಿ.
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ತಿಳಿಹಸಿರು
ಕಟಕ ರಾಶಿ
ಗುರುಹಿರಿಯರನ್ನು ಗೌರವದಿಂದ ಕಾಣುವಿರಿ. ನಿಮ್ಮ ಜವಾಬ್ದಾರಿಯನ್ನು ತಪ್ಪಿಲ್ಲದಂತೆ ನಿರ್ವಹಿಸುವಿರಿ. ಉದ್ಯೋಗದಲ್ಲಿ ಅನಿರೀಕ್ಷಿತವಾದ ಉನ್ನತಿ ಇರುತ್ತದೆ. ವಿದ್ಯಾರ್ಥಿಗಳು ಅಧ್ಯಾಯನದಲ್ಲಿ ಯಶಸ್ವಿಯಾಗಿ ಉದ್ಯೋಗ ಗಳಿಸುವಲ್ಲಿ ಸಫಲರಾಗುತ್ತಾರೆ. ವಾಸವಿರುವ ಮನೆಯನ್ನು ಬದಲಾಯಿಸಲು ತೀರ್ಮಾನಿಸುವಿರಿ. ಕುಟುಂಬದ ಹಣಕಾಸಿನ ವ್ಯವಹಾರದಲ್ಲಿ ಅನಿರೀಕ್ಷಿತ ಬದಲಾವಣೆಗಳು ತೋರುತ್ತವೆ. ಕೃಷಿ ಗೊಬ್ಬರದ ವ್ಯಾಪಾರದಲ್ಲಿ ಲಾಭವಿರುತ್ತದೆ. ಯಾತ್ರಾಸ್ಥಳದ ಪ್ರವಾಸವನ್ನು ಮುದೂಡುವಿರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ಕುಟುಂಬದ ಸಹಕಾರದಿಂದ ವ್ಯಾಪಾರವೊಂದನ್ನು ಆರಂಭಿಸುವಿರಿ.
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)