ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಹಿರಿಯ ಅಧಿಕಾರಿಗಳಿಂದ ಅನುಕಂಪ, ಹೊಸ ವ್ಯಾಪಾರ ಆರಂಭಿಸುತ್ತೀರಿ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

Horoscope Today: ಹಿರಿಯ ಅಧಿಕಾರಿಗಳಿಂದ ಅನುಕಂಪ, ಹೊಸ ವ್ಯಾಪಾರ ಆರಂಭಿಸುತ್ತೀರಿ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

25 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (25th May 2024 Daily Horoscope).

ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ದಿನದ ಭವಿಷ್ಯ ಇಲ್ಲಿದೆ
ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ದಿನದ ಭವಿಷ್ಯ ಇಲ್ಲಿದೆ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (25th May 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಶನಿವಾರ

ತಿಥಿ: ಬಿದಿಗೆ ಸಂಜೆ 06.22 ರವರೆಗೂ ಇರುತ್ತದೆ. ಆನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ: ಜ್ಯೇಷ್ಠ ನಕ್ಷತ್ರವು ಬೆಳಗ್ಗೆ 10.23 ರವರೆಗು ಇರುತ್ತದೆ. ಆನಂತರ ಮೂಲ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.40

ರಾಹುಕಾಲ: ಬೆ. 09.08 ರಿಂದ ಬೆ. 10.44

ಧನಸ್ಸು ರಾಶಿ

ಉದ್ಯೋಗದಲ್ಲಿ ಅನುಕೂಲಕರ ಬೆಳವಣಿಗಗಳು ಉಂಟಾಗಲಿವೆ. ಅಧಿಕಾರದ ಜೊತೆಯಲ್ಲಿ ಕುಟುಂಬದ ಜವಾಬ್ದಾರಿಯು ಹೆಚ್ಚುತ್ತದೆ. ಹಣಕಾಸಿನ ನಿರ್ವಹಣೆಯಲ್ಲಿ ವಿಶೇಷವಾದ ಬುದ್ಧಿ ಇರುತ್ತದೆ. ಕುಟುಂಬದಲ್ಲಿ ನಡೆಯಬೇಕಿದ್ದ ವಿವಾಹಕಾರ್ಯವು ನಡೆಯಲಿದೆ. ಸ್ವಂತವಾಗಿ ಮಾಡುವ ವ್ಯಾಪಾರಲ್ಲಿ ಉತ್ತಮ ವರಮಾನ ಇರುತ್ತದೆ. ಆದಾಯವನ್ನು ಮೀರಿದ ಖರ್ಚು ವೆಚ್ಚಗಳು ನೆಮ್ಮದಿಯನ್ನು ದೂರಮಾಡುತ್ತದೆ. ಕಿರಿಯರು ಹಿರಿಯರು ಎನ್ನದೆ ಎಲ್ಲಾರನ್ನು ಗೌರವದಿಂದ ಕಾಣುವಿರಿ. ಹುಟ್ಟೂರಿನಲ್ಲಿ ಮನೆ ಕೊಳ್ಳುವಿರಿ.

ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಮಕರ ರಾಶಿ

ಕಷ್ಟಕ್ಕೆ ಹೆದರದೆ ಪಟ್ಟು ಹಿಡಿದು ಕೆಲಸ ಮಾಡಿ ಎಲ್ಲರಿಗೂ ಮಾದರಿಯಾಗುವಿರಿ. ವೇಳೆಗೆ ಸರಿಯಾಗಿ ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳುವುದಿಲ್ಲ. ಆಧುನಿಕ ತಂತ್ರಜ್ಞಾನದ ಅಧ್ಯಯನಕ್ಕೆ ವಿದೇಶಕ್ಕೆ ತೆರಳುವಿರಿ. ಕುಟುಂಬದ ವಿಚಾರಗಳ ಬಗ್ಗೆ ಸಂಪೂರ್ಣ ಅರಿವಿರುತ್ತದೆ. ಮಕ್ಕಳಿಗೆ ಹಣಕಾಸಿನ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಆದಾಯದ ಕೊರತೆ ನೀಗಲು ವ್ಯಾಪಾರವನ್ನು ಆರಂಭಿಸುವಿರಿ. ವಿದ್ಯಾರ್ಥಿಗಳಿಗೆ ಶುಭ ಸುದ್ಧಿಯೊಂದು ದೊರೆಯಲಿದೆ. ಹೊಸ ಅನ್ವೇಷಣೆಗಳ ಬಗ್ಗೆ ಆಸಕ್ತಿ ತೋರುವಿರಿ. ಆರೋಗ್ಯದಲ್ಲಿ ತೊಂದರೆ ಇರುತ್ತದೆ.

ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ಕುಂಭ ರಾಶಿ

ಮಾತಿನಿಂದ ಜನರ ಮನ ಗೆದ್ದು ನಿಮ್ಮ ಕೆಲಸ ಸಾಧಿಸುವಿರಿ. ವಿದೇಶೀ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಹಿರಿಯ ಅಧಿಕಾರಿಗಳ ಅನುಕಂಪವನ್ನು ಪಡೆಯುವಿರಿ. ಹಣದ ಬಗ್ಗೆ ವ್ಯಾಮೋಹ ಇರದು. ಸಂತೃಪ್ತಿಯ ಜೀವನ ನಡೆಸುವಿರಿ. ವಿದ್ಯಾರ್ಥಿಗಳು ಮೌನವಾಗಿ ತಮ್ಮ ಗುರಿ ತಲುಪಲಿದ್ದಾರೆ. ಸ್ವಂತ ವ್ಯಾಪಾರ ವಹಿವಾಟನ್ನು ಆರಂಭಿಸಿ ಯಶಸ್ಸನ್ನು ಗಳಿಸುವಿರಿ. ಸೋದರರ ವ್ಯಾಪಾರದಲ್ಲಿ ಸಹಭಾಗಿತ್ವ ಪಡೆಯುವಿರಿ. ಕಷ್ಟವಿಲ್ಲದ ಸಂಪಾದನೆಯನ್ನು ಅನುಸರಿಸುವಿರಿ. ಸತ್ಯದ ದಾರಿಯಲ್ಲಿ ನಡೆಯುವಿರಿ. ಹಣದ ವಿವಾದವೊಂದು ಎದುರಾಗಲಿದೆ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕೇಸರಿ

ಮೀನ ರಾಶಿ

ಎಲ್ಲರನ್ನೂ ಸಮಾನ ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಯಾರೊಬ್ಬರ ಸಲಹೆ ಸೂಚನೆಯನ್ನು ಪಾಲಿಸುವುದಿಲ್ಲ. ಒತ್ತಡಕ್ಕೆ ಮಣಿದು ಉದ್ಯೋಗವನ್ನು ಬದಲಿಸುವಿರಿ. ಬೇರೊಬ್ಬರ ಅಧೀನದಲ್ಲಿ ಕೆಲಸ ಮಾಡಲು ಇಚ್ಚಿಸುವುದಿಲ್ಲ. ಸ್ವತಂತ್ರವಾಗಿ ಕೆಲಸ ನಿರ್ವಹಿಸುವ ಸಲುವಾಗಿ ಸಂಸ್ಥೆಯೊಂದನ್ನು ಆರಂಭಿಸುವಿರಿ. ವಿದ್ಯಾರ್ಥಿಗಳು ನೂತನ ಸಾಧನೆ ಮಾಡಲಿದ್ದಾರೆ. ಸಮಾಜದಲ್ಲಿ ವಿಶೇಷವಾದ ಗೌರವಾದರಗಳು ಲಭ್ಯವಾಗಲಿದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಒತ್ತಾಯಪೂರ್ವಕವಾಗಿ ಪಾಲೊಳ್ಳುವಿರಿ. ತಂದೆಯಿಂದ ಬರಬೇಕಿರುವ ಆಸ್ತಿಯ ಪಾಲಿನಲ್ಲಿ ವಿವಾದ ಎದುರಾಗಲಿದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)