ಕನ್ನಡ ಸುದ್ದಿ  /  Astrology  /  Horoscope Today Astrology Prediction 26 March 2024 Sagittarius Capricorn Aquarius Pisces Sts

Horoscope Today: ಬೇಸರ ಕಳೆಯಲು ಸಂತೋಷಕೂಟ ಏರ್ಪಡಿಸುವಿರಿ, ಮಕ್ಕಳಿಗೆ ಉನ್ನತ ಅಧ್ಯಯನ ಮಾಡುವ ಅವಕಾಶ; ಮಂಗಳವಾರದ ರಾಶಿಫಲ

26 ಮಾರ್ಚ್‌ 2024, ಮಂಗಳವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (26th March 2024 Daily Horoscope).

26 ಮಾರ್ಚ್‌ 2024, ಮಂಗಳವಾರ
26 ಮಾರ್ಚ್‌ 2024, ಮಂಗಳವಾರ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(26th March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಮಂಗಳವಾರ

ತಿಥಿ : ಪಾಡ್ಯ 01.15 ರವರೆಗುಗೂ ಇದ್ದು ನಂತರ ಬಿದಿಗೆ ಆರಂಭವಾಗಲಿದೆ.

ನಕ್ಷತ್ರ : ಹಸ್ತ ನಕ್ಷತ್ರವು 12.13 ರವರೆಗೂ ಇದ್ದು ನಂತರ ಚಿತ್ತ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.21

ಸೂರ್ಯಾಸ್ತ: ಸಂಜೆ 06.30

ರಾಹುಕಾಲ : 03.00 ರಿಂದ 4.30

ರಾಶಿ ಫಲ

ಧನಸ್ಸು

ಕುಟುಂಬದಲ್ಲಿ ನಿಮಗೆ ಅನುಕೂಲಕರ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಯಶಸ್ಸಿನ ಗಡಿ ದಾಟುವಿರಿ. ವ್ಯಾಪಾರದ ಲೋಪ ದೋಷವನ್ನು ಸರಿಪಡಿಸುವಿರಿ. ಕಮೀಷನ್‌ ವ್ಯವಹಾರದಲ್ಲಿ ಉತ್ತಮ ಲಾಭವಿರುತ್ತದೆ. ವಿದ್ಯಾರ್ಥಿಗಳ ಮನಸ್ಸು ಸ್ಥಿಮಿತದಲ್ಲಿ ಇರುವುದಿಲ್ಲ. ಅನಾವಶ್ಯಕ ಕೋಪಕ್ಕೆ ಒಳಗಾಗುವಿರಿ. ಅದೃಷ್ಟವಿದೆ ಆದರೆ ದೊರೆವ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಲು ವಿಫಲರಾಗುವಿರಿ. ಪ್ರೀತಿ ವಿಶ್ವಾಸದಿಂದ ಎಲ್ಲರ ಜೊತೆ ಬೆರೆಯುವಿರಿ. ಸಂಗಾತಿಯ ಮಹದಾಸೆಯೊಂದನ್ನು ನೆರವೇರಿಸುವಿರಿ. ಅತಿಯಾದ ಹಣದ ಆಸೆ ಇರದು. ಆದರೆ ಜೀವನಕ್ಕೆ ಸಾಕಾಗುವಷ್ಟು ಹಣವನ್ನು ಗಳಿಸುವಿರಿ. ವಂಶಾಧಾರಿತ ವೃತ್ತಿಯನ್ನು ಮುಂದುವರಿಸುವಿರಿ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈ ಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬೂದು ಬಣ್ಣ

ಮಕರ

ಜಾಣ್ಮೆಯ ಜೊತೆ ಜೀವನದಲ್ಲಿ ಅವಕಾಶವು ಮುಖ್ಯ ಎಂಬ ಸತ್ಯ ತಿಳಿಯುತ್ತದೆ. ಆತ್ಮೀಯರ ಸಹಯೋಗದಿಂದ ಕುಟುಂಬದ ಸಮಸ್ಯೆಯೊಂದನ್ನು ಬಗೆಹರಿಸುವಿರಿ. ಹೊಂದಾಣಿಕೆಯ ಗುಣದಿಂದ ಉದ್ಯೋಗದಲ್ಲಿ ಉನ್ನತ ಸ್ಥಾನ ಪಡೆಯುವಿರಿ. ಉದ್ಯೋಗದಲ್ಲಿ ಅತಿಯಾಸೆ ಇರುವುದಿಲ್ಲ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಸಮಯಕ್ಕೆ ತಕ್ಕಂತೆ ಹೊಂದಿಕೊಳ್ಳುವ ಕಾರಣ ವಿದ್ಯಾರ್ಥಿಗಳು ಸಂತಸದಿಂದ ಇರುತ್ತಾರೆ. ನವ ದಂಪತಿಗಳು ಸಂತಸದಿಂದ ಸುಖಜೀವನ ನಡೆಸುವರು. ಮನೆತನದ ಆಸ್ತಿಯ ವಿವಾದ ಇರುತ್ತದೆ. ಕೈಕಾಲುಗಳಲ್ಲಿ ಶಕ್ತಿ ಕಡಿಮೆಯಾಗುತ್ತದೆ. ವಾಸ ಸ್ಥಳವನ್ನು ಬದಲಾಯಿಸುವಿರಿ. ಧಾರ್ಮಿಕ ಕೇಂದ್ರದ ಅಭಿವೃದ್ಧಿಯ ಕೆಲಸಕ್ಕೆ ನೆರವಾಗುವಿರಿ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಆಕಾಶ ನೀಲಿ

ಕುಂಭ

ಕುಟುಂಬದಲ್ಲಿ ನಿಧಾನಗತಿಯ ಪ್ರಗತಿ ಕಂಡುಬರುತ್ತದೆ. ಉದ್ಯೋಗದಲ್ಲಿನ ಬದಲಾವಣೆಗೆ ಹೊಂದಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಮನರಂಜನೆಗೆ ಗಮನ ನೀಡುತ್ತಾರೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ಇರದೆ ಹೋದರೂ ನಷ್ಟದ ಮಾತಿಲ್ಲ. ಬೇಸರ ಕಳೆಯಲು ಸಂತೋಷಕೂಟವನ್ನು ಏರ್ಪಡಿಸುವಿರಿ. ಮಕ್ಕಳಿಗೆ ಉನ್ನತ ಅಧ್ಯಯನ ಮಾಡುವ ಅವಕಾಶ ಲಭ್ಯವಾಗುತ್ತದೆ. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಅಗತ್ಯ. ಯೋಗ ಪ್ರಾಣಾಯಾಮದಲ್ಲಿ ಆಸಕ್ತಿ ಮೂಡಲಿದೆ. ವಾದವು ಉಪಯೋಗವಾಗದ ಪಕ್ಷದಲ್ಲಿ ಸಂಧಾನಕ್ಕೆ ಮೊರೆ ಹೋಗುವಿರಿ. ಸಾಕು ಪ್ರಾಣಿಗಳಿಗಾಗೆ ಹೆಚ್ಚಿನ ಸಮಯ ಮೀಸಲಿಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು ಪೂರ್ವ

ಅದೃಷ್ಟದ ಬಣ್ಣ: ಕೆಂಪು

ಮೀನ

ಕುಟುಂಬದ ವಿಚಾರಗಳಲ್ಲಿ ಆಸಕ್ತಿ ತೊರುವುದಿಲ್ಲ. ಯಾವುದೇ ವಿಷಯದಲ್ಲಿ ಸೂಕ್ತ ರೀತಿಯ ತೀರ್ಮಾನ ಕೈಗೊಳ್ಳಲಾಗದು. ಉದ್ಯೋಗದಲ್ಲಿನ ವ್ಯವಹಾರಗಳು ಸರಳವಾಗಿರುತ್ತವೆ. ಪ್ರಯತ್ನ ಪಟ್ಟಲ್ಲಿ ವ್ಯಾಪಾರ ವ್ಯವಹಾರದಲ್ಲಿನ ತೊಂದರೆಗೆ ಪರಿಹಾರ ಕಂಡುಹಿಡಿಯುವಿರಿ. ಕುಟುಂಬದ ಸದಸ್ಯರ ಸಹಾಯ ನಿಮಗಿರುತ್ತದೆ. ಸಮಾಜ ಸೇವೆ ಮಾಡುವ ಆಸೆ ಇರುತ್ತದೆ. ಸಂಘ ಸಂಸ್ಥೆಯ ಒಡೆತನ ಲಭಿಸುತ್ತದೆ. ಖರ್ಚು ವೆಚ್ಚಗಳನ್ನು ಸರಿತೂಗಿಸುವಲ್ಲಿ ಸಫಲರಾಗುವಿರಿ. ಸಾರಿಗೆ ವ್ಯವಸ್ಥೆ ಕಲ್ಪಿಸುವ ಸಂಸ್ಥೆಯನ್ನು ಆರಂಭಿಸುವಿರಿ. ನೀರಾವರಿ ಭೂಮಿಯಿಂದ ಲಾಭವಿದೆ. ಹಣ್ಣು ಮತ್ತು ತರಕಾರಿ ವ್ಯಾಪಾರದಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ. ಆಪತ್ಕಾಲದಲ್ಲಿ ನಿಮ್ಮ ತಂದೆಯಿಂದ ಹಣಕಾಸಿನ ನೆರವು ದೊರೆಯಲಿದೆ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಎಲೆ ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).