ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಯಂತ್ರ ಸಂಬಂಧಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ, ದುಬಾರಿ ಬೆಲೆಯ ವಾಹನ ಕೊಳ್ಳುವಿರಿ; ಏ. 26ರ ದಿನ ಭವಿಷ್ಯ

Horoscope Today: ಯಂತ್ರ ಸಂಬಂಧಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ, ದುಬಾರಿ ಬೆಲೆಯ ವಾಹನ ಕೊಳ್ಳುವಿರಿ; ಏ. 26ರ ದಿನ ಭವಿಷ್ಯ

26th ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (26th April 2024 Daily Horoscope).

 ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (26th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಶುಕ್ರವಾರ

ತಿಥಿ: ದಿನಪೂರ್ತಿ ತದಿಗೆ ಇರುತ್ತದೆ.

ನಕ್ಷತ್ರ : ಅನೂರಾಧ ನಕ್ಷತ್ರವು ರಾತ್ರಿ 02.02 ರವರೆಗೂ ಇದ್ದು ನಂತರ ಜ್ಯೇಷ್ಠ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.57

ಸೂರ್ಯಾಸ್ತ: ಸಂಜೆ 06.32

ರಾಹುಕಾಲ: ಬೆಳಗ್ಗೆ 10.47 ರಿಂದ ಮಧ್ಯಾಹ್ನ 12.21ವರೆಗೆ

ರಾಶಿಫಲ

ಸಿಂಹ

ಮನದಲ್ಲಿ ಅನಾವಶ್ಯಕ ಯೋಚನೆ ಮನೆ ಮಾಡಿರುತ್ತದೆ. ಕೊಂಚ ಅಂತರ್ಮುಖಿಯಾಗುವಿರಿ. ಆದರೆ ಮಗಳ ಆಗಮನ ಹೊಸ ಚೇತನ ನೀಡಲಿದೆ. ಎಲ್ಲರೊಂದಿಗೆ ಧಾರ್ಮಿಕ ಕೇಂದ್ರಕ್ಕೆ ಬೇಟಿ ನೀಡುವಿರಿ. ಉದ್ಯೋಗದಲ್ಲಿನ ಆಂತರಿಕ ಕಲಹವೊಂದು ಮಾತುಕತೆಯಿಂದ ಕೊನೆಯಾಗಲಿದೆ. ಕೃಷಿ ಉತ್ಪನ್ನಗಳ ವ್ಯಾಪಾರದಲ್ಲಿ ಉತ್ತಮ ಲಾಭಾಂಶ ದೊರೆಯಲಿದೆ. ಕಷ್ಟವಾದರೂ ವಿದ್ಯಾರ್ಥಿಗಳು ಯಶಸ್ಸನ್ನು ಕಾಣುತ್ತಾರೆ. ರಾಜಕೀಯ ಧುರೀಣರಿಗೆ ಆತಂಕದ ಪರಿಸ್ಥಿತಿ ಎದುರಾದರೂ ತೊಂದರೆ ಆಗದು. ಬೃಹತ್ ಪ್ರಮಾಣದಲ್ಲಿ ವ್ಯಾಪಾರ ಆರಂಭಿಸುವ ಯೋಜನೆ ಈಡೇರಲಿದೆ. ಅತ್ಮೀಯರಿಂದ ಹಣ ಪಡೆಯಲಿದ್ದೀರಿ. ಅವಶ್ಯವಿದ್ದವರಿಗೆ ಹಣದ ಸಹಾಯ ಮಾಡುವಿರಿ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 3

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ : ಹಸಿರು ಬಣ್ಣ

ಕನ್ಯಾ

ಯಾವುದೇ ವಿಚಾರದಲ್ಲಿ ದೃಢವಾದ ನಿಲುವು ತೆಗೆದುಕೊಳ್ಳುವುದಿಲ್ಲ. ಕುಟುಂಬದ ನಿರ್ವಹಣೆಯ ಜವಾಬ್ದಾರಿ ಹೊರಲು ಹಿಂಜರಿಯುವಿರಿ. ಒಂದೇ ರೀತಿಯ ಕೆಲಸಗಳಿಂದ ಬೇಸರಗೊಳ್ಳುವಿರಿ. ಉಷ್ಣದ ತೊಂದರೆ ನಿಮ್ಮನ್ನು ಕಾಡುತ್ತದೆ. ಬೆಲೆ ಬಾಳುವ ಕಾರನ್ನು ಕೊಳ್ಳುವ ಸಂಭವವಿದೆ. ವಾಹನಗಳ ದುರಸ್ತಿ ಮತ್ತು ಮಾರಾಟದಲ್ಲಿ ಲಾಭವಿದೆ. ಉದ್ಯೋಗ ಬದಲಿಸುವಿರಿ. ವಂಶದ ಆಸ್ಥಿಯೊಂದು ನಿಮ್ಮ ಪಾಲಾಗಲಿದೆ. ಹೊಸ ವ್ಯಾಪಾರ ಆರಂಭಿಸುವಿರಿ. ಸೋದರ ಅಥವ ಸೋದರಿಗೆ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ. ವಾದ ವಿವಾದದಿಂದ ದೂರ ಉಳಿಯುವಿರಿ. ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯ ಕಾಪಾಡಿಕೊಳ್ಳಲು ದೈಹಿಕ ವ್ಯಾಯಾಮದ ಅವಶ್ಯಕತೆಯಿದೆ.

ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿ ದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 6

ಅಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ನೀಲಿ

ತುಲಾ

ಆತುರದ ತೀರ್ಮಾನದಿಂದ ಜೀವನದಲ್ಲಿ ತೊಂದರೆಗೆ ಸಿಲುಕುವಿರಿ. ಸಂದರ್ಭವನ್ನು ಅರಿತು ವರ್ತಿಸುವ ನೀವು ಕೆಲವರ ವಿರೋಧದಿಂದ ದೂರ ಉಳಿಯುವಿರಿ. ಪರೋಪಕಾರದ ಗುಣ ನಿಮ್ಮಲ್ಲಿ ಇರುತ್ತದೆ. ಕುಟುಂಬದ ಆಂತರಿಕ ವಿಚಾರದಲ್ಲಿ ತೊಡಗಿಸಿಕೊಳ್ಳುವಿರಿ. ಬೇಸರದಿಂದ ಹೊರ ಬರಲು ಪ್ರವಾಸಕ್ಕೆ ತೆರಳುವಿರಿ. ನೌಕರಿಯಲ್ಲಿ ತೊಂದರೆ ಬಾರದು. ವ್ಯಾಪಾರದಲ್ಲಿಯೂ ಮಧ್ಯಮ ಗತಿಯ ಲಾಭ ಇರುತ್ತದೆ. ವಿದ್ಯಾರ್ಥಿಗಳು ಅನ್ಯರಿಗೆ ಉತ್ತಮ ಮಾದರಿ ಆಗುತ್ತಾರೆ. ಯಂತ್ರ ಸಂಬಂಧಿ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ಸಂಬಂಧಿಯೊಬ್ಬರ ಜಮೀನನ್ನು ಕೊಳ್ಳುವಿರಿ. ಒತ್ತಡಕ್ಕೆ ಮಣಿದು ಸಂಬಂಧಿಕರೊಬ್ಬರಿಗೆ ಹಣದ ಸಹಾಯ ಮಾಡಬೇಕಾಗುತ್ತದೆ.

ಪರಿಹಾರ : ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ವೃಶ್ಚಿಕ

ಸಮಾಜದಲ್ಲಿ ವಿಶೇಷವಾದ ಕೀರ್ತಿ ದೊರೆಯುತ್ತದೆ. ಕೌಟುಂಬಿಕ ಜೀವನದಲ್ಲಿ ಶಾಂತಿ ನೆಮ್ಮದಿ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಅಭಿವೃದ್ಧಿ ಕಂಡು ಬರಲಿದೆ. ಶೀತ ವಾಯುವಿನ ದೋಷವಿರುತ್ತದೆ. ಮನಸ್ಸು ಒಳ್ಳೆಯದಾದರು ಆಡುವ ಮಾತಿನಲ್ಲಿ ಹರಿತವಿರುತ್ತದೆ. ಇದರಿಂದಾಗಿ ಬಂಧು ವರ್ಗದವರು ನಿಮ್ಮಿಂದ ದೂರ ಉಳಿಯುವ ಸಾಧ್ಯತೆಗಳಿವೆ. ಕೈಹಿಡಿದ ಕೆಲಸ ಕಾರ್ಯಗಳಲ್ಲಿ ಗುರಿ ಸಾಧಿಸುವವರೆಗೂ ನಿಮ್ಮ ಯೋಜನೆಯನ್ನು ರಹಸ್ಯವಾಗಿಡುವಿರಿ. ಸರ್ಕಾರಿ ಅನುದಾನದಲ್ಲಿ ನಡೆಸುವ ವ್ಯಾಪಾರದಲ್ಲಿ ತೊಂದರೆ ಇಲ್ಲ. ವಿದ್ಯಾರ್ಥಿಗಳಿಗೆ ಶುಭವಿದೆ. ಹೊಸ ಬಟ್ಟೆ ಮತ್ತು ಒಡವೆಗೆ ಹೆಚ್ಚಿನ ಹಣ ವೆಚ್ಚವಾಗುತ್ತದೆ. ದಂಪತಿಗಳ ನಡುವೆ ಮನಸ್ತಾಪ ಇರುತ್ತದೆ.

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).