Horoscope Today: ಕುಟುಂಬದಲ್ಲಿ ಪ್ರೀತಿ ವಿಶ್ವಾಸ ಹೆಚ್ಚುತ್ತೆ, ಖರ್ಚು ಕಡಿಮೆಗೆ ಗಮನ ನೀಡುತ್ತೀರಿ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ
26 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (26th May 2024 Daily Horoscope).

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (26th May 2024 Horoscope)
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಭಾನುವಾರ
ತಿಥಿ: ತದಿಗೆ ಸಂಜೆ 05.38 ರವರೆಗೂ ಇರುತ್ತದೆ. ಆನಂತರ ಚೌತಿ ಆರಂಭವಾಗುತ್ತದೆ.
ನಕ್ಷತ್ರ: ಮೂಲ ನಕ್ಷತ್ರವು ಬೆಳಗ್ಗೆ 10.31 ರವರೆಗೆ ಇರುತ್ತದೆ. ಆನಂತರ ಪೂರ್ವಾಷಾಡ ನಕ್ಷತ್ರವು ಆರಂಭವಾಗುತ್ತದೆ.
ಸೂರ್ಯೋದಯ: ಬೆಳಿಗ್ಗೆ 05.52
ಸೂರ್ಯಾಸ್ತ ಸಂಜೆ 06.40
ರಾಹುಕಾಲ: ಸಂಜೆ 05.08 ರಿಂದ 06.43 ರವರೆಗೆ
ಮೇಷ ರಾಶಿ
ಕುಟುಂಬದಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಹೆಚ್ಚುತ್ತದೆ. ಬೇಸರವಿಲ್ಲದೆ ಎಲ್ಲರ ಸಲಹೆಯನ್ನೂ ಆಲಿಸುವಿರಿ. ಉದ್ಯೋಗದಲ್ಲಿನ ಬದಲಾವಣೆಗಳಿಂದ ಅನುಕೂಲಕರ ವಾತಾವರಣ ಉಂಟಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆಯನ್ನು ಮೀರಿದ ಲಾಭ ದೊರೆಯುವುದು. ವಿದ್ಯಾರ್ಥಿಗಳಲ್ಲಿ ಹೊಸ ವಿಚಾರ ಕಲಿಯುವ ಆಸೆ ಮೂಡುತ್ತದೆ. ಅಪರೂಪದ ಪ್ರತಿಭೆ ನಿಮ್ಮಲ್ಲಿದ್ದು, ಎಲ್ಲರ ಗಮನ ಸೆಳೆಯುವಿರಿ. ತಾಯಿಗೆ ತವರಿನಿಂದ ಹಣದ ಸಹಾಯ ದೊರೆಯುತ್ತದೆ. ಇಷ್ಟಪಟ್ಟ ವಾಹನವನ್ನು ಕೊಳ್ಳುವಿರಿ.
ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಕೆಂಪು ಬಣ್ಣ
ವೃಷಭ ರಾಶಿ
ಕುಟುಂಬದಲ್ಲಿ ಬಿಗುವಿನ ವಾತಾವರಣ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಆತಂಕದ ಪರಿಸ್ಥಿತಿ ಎದುರಾಗುತ್ತದೆ. ಖರ್ಚನ್ನು ಕಡಿಮೆ ಮಾಡುವತ್ತ ಗಮನ ನೀಡಿರಿ. ವಿದ್ಯಾರ್ಥಿಗಳು ಯಾರೊಬ್ಬರನ್ನೂ ಅವಲಂಭಿಸದೆ ಸ್ವತಂತ್ರವಾಗಿ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಕುಟುಂಬಕ್ಕೆ ಸಂಬಂಧಿಸಿದ ಭೂಮಿಯ ವಿವಾದ ಎದುರಾಗಲಿದೆ. ರಾಜಕೀಯದಲ್ಲಿ ಪ್ರಭಾವಶಾಲಿ ಸ್ಥಾನ ದೊರೆಯುತ್ತದೆ. ಸ್ನೇಹಿತರಿಂದ ಪಡೆದ ಸಾಲದ ಹಣ ಹಿಂದಿರುಗಿಸುವಿರಿ. ಬೇರೆಯವರ ಹಣಕಾಸಿನ ವ್ಯವಹಾರದಿಂದ ದೂರ ಉಳಿಯುವಿರಿ.
ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ: ಕಿತ್ತಳೆ
ಮಿಥುನ ರಾಶಿ
ಉದ್ಯೋಗದಲ್ಲಿ ಯಾವುದೆ ಬದಲಾವಣೆ ಕಾಣುವುದಿಲ್ಲ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭವಿದೆ. ಪ್ರತಿಯೊಂದು ಕೆಲಸದಲ್ಲಿಯೂ ಲಾಭದ ನಿರೀಕ್ಷೆ ಇರುತ್ತದೆ. ವಿದ್ಯಾರ್ಥಿಗಳು ಒತ್ತಡದಲ್ಲಿ ಅಭ್ಯಾಸನಿರಗರಾಗುತ್ತಾರೆ. ಕೆಲಸವನ್ನು ಶ್ರದ್ಧೆಯಿಂದ ಮಾಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ವರಮಾನ ದೊರೆಯುತ್ತದೆ. ಮನಸ್ಸು ಒಳ್ಳೆಯದಾದರು ಉಪಯೋಗವಿಲ್ಲ. ಭೂವ್ಯವಹಾರದಲ್ಲಿ ಲಾಭವಿದೆ. ವಂಶದ ಜಮೀನನ್ನು ಮಾರಾಟಮಾಡಿ ಹೊಸ ಮನೆಕೊಳ್ಳುವ ನಿರ್ಧಾರಕ್ಕೆ ಬರುವಿರಿ. ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ.
ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಹಳದಿ
ಕಟಕ ರಾಶಿ
ಕುಟುಂಬದ ಜವಾಬ್ದಾರಿಯುತ ಸ್ಥಾನ ನಿಮ್ಮದಾಗುತ್ತದೆ. ನಿಮ್ಮ ಜವಾಬ್ದಾರಿಯೂ ಹೆಚ್ಚುತ್ತದೆ. ಶ್ರದ್ಧೆಯಿಂದ ಧಾರ್ಮಿಕ ಕೆಲಸಗಳನ್ನು ನಿರ್ವಹಿಸುವಿರಿ. ಸಮಯ ವ್ಯರ್ಥ ಮಾಡದೆ ಉದ್ಯೋಗದಲ್ಲಿ ಹೊಸ ವಿಚಾರವನ್ನು ಕಲಿಯುವಿರಿ. ವ್ಯಾಪಾರ ವ್ಯವಹಾರದಲ್ಲಿ ಲಾಭವಿರುತ್ತದೆ. ಸಮಾಜಕ್ಕೆ ನೆರವಾಗುವ ಕೆಲಸಗಳನ್ನು ಮಾಡುವಿರಿ. ವಿದ್ಯಾರ್ಥಿಗಳು ತಮ್ಮ ವಯಸ್ಸಿನವರ ಮಧ್ಯೆ ನಾಯಕನ ಸ್ಥಾನ ಗಳಿಸುವರು. ರಾಜಕೀಯ ಪ್ರವೇಶಿಸುವ ಆಶಯ ಈಡೇರುತ್ತದೆ. ದೊರೆವ ಅವಕಾಶಗಳನ್ನು ಸರಿಯಾದ ಹಾದಿಯಲ್ಲಿ ಬಳಸುವಿರಿ. ಕೃಷಿ ಕಾರ್ಯದಿಂದ ಹೆಚ್ಚಿನ ಆದಾಯ ದೊರೆಯುತ್ತದೆ.
ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಹಸಿರು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ವಿಭಾಗ