ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಪ್ರಾಣಿಗಳ ಸಂರಕ್ಷಣೆಗೆ ಆಸಕ್ತಿ, ವ್ಯಾಪಾರದಲ್ಲಿ ವಿವಾದ ಸಾಧ್ಯತೆ ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

Horoscope Today: ಪ್ರಾಣಿಗಳ ಸಂರಕ್ಷಣೆಗೆ ಆಸಕ್ತಿ, ವ್ಯಾಪಾರದಲ್ಲಿ ವಿವಾದ ಸಾಧ್ಯತೆ ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

26 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (26th May 2024 Daily Horoscope).

ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ದಿನ ಭವಿಷ್ಯ ತಿಳಿಯಿರಿ
ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ದಿನ ಭವಿಷ್ಯ ತಿಳಿಯಿರಿ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (26th May 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಭಾನುವಾರ

ತಿಥಿ: ತದಿಗೆ ಸಂಜೆ 05.38 ರವರೆಗೂ ಇರುತ್ತದೆ. ಆನಂತರ ಚೌತಿ ಆರಂಭವಾಗುತ್ತದೆ.

ನಕ್ಷತ್ರ: ಮೂಲ ನಕ್ಷತ್ರವು ಬೆಳಗ್ಗೆ 10.31 ರವರೆಗೆ ಇರುತ್ತದೆ. ಆನಂತರ ಪೂರ್ವಾಷಾಡ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಿಗ್ಗೆ 05.52

ಸೂರ್ಯಾಸ್ತ ಸಂಜೆ 06.40

ರಾಹುಕಾಲ: ಸಂಜೆ 05.08 ರಿಂದ 06.43 ರವರೆಗೆ

ಸಿಂಹ ರಾಶಿ

ತಾನೆ ದೊಡ್ಡವನೆಂಬ ಭಾವನೆ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳಲು ಪ್ರೇರೇಪಿಸುತ್ತದೆ. ನೀವು ಆಡುವ ಮಾತು ವಿವಿಧ ಅರ್ಥವನ್ನು ನೀಡುತ್ತದೆ. ನಿಮ್ಮಲ್ಲಿನ ನಿಸ್ವಾರ್ಥದ ಗುಣವು ಕುಟುಂಬದಲ್ಲಿ ನೆಮ್ಮದಿ ಉಂಟುಮಾಡುತ್ತದೆ. ಉದ್ಯೋಗದಲ್ಲಿ ಸುಲಭವಾಗಿ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ವ್ಯಾಪಾರ ವ್ಯವಹಾರಲ್ಲಿ ವಿವಾದವೊಂದು ಎದುರಾಗಲಿದೆ. ಪ್ರತಿ ವಿಷಯದಲ್ಲಿಯೂ ಅಂತಿಮ ನಿರ್ಧಾರ ತೆಗೆದುಕೊಳ್ಳುವಿರಿ. ಸ್ವಗೃಹ ಭೂಲಾಭವಿದೆ. ತಂದೆಯವರಿಂದ ಹಣದ ಸಹಾಯ ದೊರೆಯುತ್ತದೆ. ಹಣಕಾಸಿನ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ.

ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ನೀಲಿ

ಕನ್ಯಾ ರಾಶಿ

ಕಟುವಾದ ಮಾತುಕತೆ ಕುಟುಂಬದ್ದಲ್ಲಿ ಬೇಸರ ಉಂಟುಮಾಡುತ್ತದೆ. ತಪ್ಪು ಮಾಹಿತಿಯನ್ನು ನಂಬಿ ಉದ್ಯೋಗದಲ್ಲಿ ತೊಂದರೆಯನ್ನು ಎದುರಿಸುವಿರಿ. ಆರೋಗ್ಯದಲ್ಲಿ ಏರಿಳಿತಗಳು ಇರುತ್ತವೆ. ವಿದ್ಯಾರ್ಥಿಗಳು ಸ್ಥಿರವಾದ ಮನಸ್ಸಿನಿಂದ ವ್ಯಾಸಂಗದಲ್ಲಿ ಮುಂದುವರಿಯುವರು. ಸೋದರನಿಗೆ ದೂರದ ಸ್ಥಳದಲ್ಲಿ ಉದ್ಯೋಗ ದೊರೆಯುತ್ತದೆ. ಬರಹಗಾರರಿಗೆ ವಿಶೇಷವಾದ ಗೌರವಾದರಗಳು ಲಭಿಸುತ್ತವೆ. ಭೂ ಸಂಬಂಧಿತ ವ್ಯವಹಾರಗಳನ್ನು ಆರಂಭಿಸದಿರಿ. ತಂದೆಯವರ ಜೊತೆಗೂಡಿ ಮಾಡುವ ವ್ಯಾಪಾರದಲ್ಲಿ ಆಸಕ್ತಿ ಉಂಟಾಗಲಿದೆ. ಹಣದ ವಿವಾದವೊಂದು ಆತ್ಮವಿಶ್ವಾಸವನ್ನು ಕಡಿಮೆ ಮಾಡುತ್ತದೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 8

ಅಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ನೇರಳೆ

ತುಲಾ ರಾಶಿ

ಕುಟುಂಬದ ಒಳಿತಿಗಾಗಿ ವಿಶ್ರಾಂತಿ ಪಡೆಯದೆ ದುಡಿಯುವಿರಿ. ಬಿಡುವಿನ ವೇಳೆಯಲ್ಲಿ ಸಮಾಜಸೇವೆಯನ್ನು ಮಾಡುವಿರಿ. ಅನಿವಾರ್ಯವಾಗಿ ಉದ್ಯೋಗವನ್ನು ಬದಲಾಯಿಸುವಿರಿ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶ ಪ್ರಯಾಣ ಮಾಡುವರು. ಯಂತ್ರೋಪಕರಣಗಳಿಂದ ತೊಂದರೆ ಉಂಟಾಗಬಹುದು ವ್ಯಾಪಾರ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಇರುತ್ತದೆ. ಸ್ನೇಹಿತರೊಂದಿಗೆ ಹಣಕಾಸಿನ ವ್ಯವಹಾರ ಮಾಡುವುದಿಲ್ಲ. ದಂಪತಿಗಳ ನಡುವೆ ಕೆಲಕಾಲ ವಿರಸವಿರುತ್ತದೆ. ಸಾಲದ ವ್ಯವಹಾರ ಮಾಡದಿರಿ. ಪ್ರಾಣಿಗಳ ಸಂರಕ್ಷೆಣೆಯ ಬಗ್ಗೆ ಆಸಕ್ತಿ ವಹಿಸುವಿರಿ.

ಪರಿಹಾರ: ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಗುಲಾಬಿ

ವೃಶ್ಚಿಕ ರಾಶಿ

ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಬದಲಾಯಿಸುವುದಿಲ್ಲ. ಬೇರೊಬ್ಬರ ಮಾತನ್ನೂ ಕೇಳುವುದಿಲ್ಲ. ನೇರವಾದ ನಡೆ ನುಡಿಯಿಂದ ವಿರೋಧಿಗಳು ಹೆಚ್ಚುತ್ತಾರೆ. ನಿರಾಸೆಯನ್ನು ತಡೆಯಲಾರದೆ ಕೋಪಗೊಳ್ಳುವಿರಿ. ತಂದೆಯವರ ಪ್ರಭಾವದಿಂದ ಮನೆಯ ಜವಾಬ್ದಾರಿಯನ್ನು ನಿರ್ವಹಿಸುವಿರಿ. ಉದ್ಯೋಗದಲ್ಲಿ ಬದಲಾವಣೆ ಉಂಟಾದರೂ ಯಾವುದೇ ತೊಂದರೆ ಬಾರದು. ಸೋದರನ ಜೊತೆಯಲ್ಲಿ ಪಾಲುಗಾರಿಕೆಯ ವ್ಯಾಪಾರ ಆರಂಭಿಸುವಿರಿ. ಕಾನೂನುರೀತ್ಯ ಕುಟುಂಬದ ವಿವಾದಕ್ಕೆ ಪರದೆ ಎಳೆಯುವಿರಿ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ದೇಹಾಲಸ್ಯ ಉಂಟಾಗುತ್ತದೆ. ವ್ಯವಸಾಯದಲ್ಲಿ ಆಸಕ್ತಿ ಮೂಡುತ್ತದೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)