Horoscope Today: ಹಣದ ವಿವಾದ ದೂರಾಗಲಿದೆ, ಕೈಹಿಡಿದ ಕೆಲಸ ಕಾರ್ಯಗಳು ಯಶಸ್ವಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಹಣದ ವಿವಾದ ದೂರಾಗಲಿದೆ, ಕೈಹಿಡಿದ ಕೆಲಸ ಕಾರ್ಯಗಳು ಯಶಸ್ವಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

Horoscope Today: ಹಣದ ವಿವಾದ ದೂರಾಗಲಿದೆ, ಕೈಹಿಡಿದ ಕೆಲಸ ಕಾರ್ಯಗಳು ಯಶಸ್ವಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಫೆಬ್ರವರಿ 27, ಮಂಗಳವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (27 February 2024 Daily Horoscope).

ಫೆಬ್ರವರಿ 27ರ ದಿನಭವಿಷ್ಯ
ಫೆಬ್ರವರಿ 27ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ( February 27 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಮಂಗಳವಾರ

ತಿಥಿ : ತದಿಗೆ ತಿಥಿಯು ರಾ.11.05 ರವರೆಗು ಇದ್ದು ಆನಂತರ ಚೌತಿ ಆರಂಭವಾಗುತ್ತದೆ.

ನಕ್ಷತ್ರ : ಹಸ್ತ ನಕ್ಷತ್ರವು ಬೆ.05.05 ವರೆಗು ಇರುತ್ತದೆ. ಆನಂತರ ಚಿತ್ತೆ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.35

ಸೂರ್ಯಾಸ್ತ: ಸ.06.26

ರಾಹುಕಾಲ : ಮ.03.00 ರಿಂದ ಬೆ.04.30

ರಾಶಿ ಫಲಗಳು

ಸಿಂಹ

ಕುಟುಂಬದ ಯಾರ ಮಾತನ್ನೂ ಒಪ್ಪುವುದಿಲ್ಲ. ನಿಮ್ಮ ಮಾತೇ ಅಂತಿಮ ಆಗಲಿದೆ. ಆದ್ದರಿಂದ ಕುಟುಂಬದಲ್ಲಿ ಬಿಗುವಿನ ವಾತಾವರಣ ಇರುತ್ತದೆ. ಸ್ವಗೃಹ ಭೂಲಾಭವಿದೆ. ಹಣಕಾಸಿನ ವಿಚಾರದಲ್ಲಿ ಆತ್ಮೀಯರ ಸಹಾಯ ದೊರೆಯುತ್ತದೆ. ತಂದೆಯವರ ಹಠದ ಗುಣ ವಿವಾದವನ್ನು ಉಂಟುಮಾಡಬಹುದು. ವೃತ್ತಿಕ್ಷೇತ್ರದಲ್ಲಿ ಯಾವುದೇ ತೊಂದರೆ ಎದುರಾಗದು. ಹಣಕಾಸಿನ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ಅಪರೂಪದ ಕಲೆಯೊಂದು ಒಲಿಯಲಿದೆ. ಗಾಳಿಮಾತನ್ನು ಒಪ್ಪುವ ಕಾರಣ ಮನೆಯಲ್ಲಿ ವಾದ ವಿವಾದಗಳು ಉಂಟಾಗಲಿವೆ. ಸಾಲದ ವ್ಯವಹಾರ ಮಾಡದಿರಿ. ಹೊಸ ಬಟ್ಟೆ ಕೊಳ್ಳುವಿರಿ.

ಪರಿಹಾರ : ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು ಬಣ್ಣ

ಕನ್ಯಾ

ಅತಿಯಾಗಿ ಮಾತನಾಡದಿರಿ. ತಪ್ಪು ಮಾಹಿತಿಯನ್ನು ನಂಬಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ಆರೋಗ್ಯದಲ್ಲಿ ಏರಿಳಿತಗಳು ಇರುತ್ತವೆ. ಉದ್ಯೋಗದಲ್ಲಿ ತೊಂದರೆ ಕಾಣದು. ವಿದ್ಯಾರ್ಥಿಗಳು ಸ್ಥಿರವಾದ ಮನಸ್ಸಿನಿಂದ ವ್ಯಾಸಂಗದಲ್ಲಿ ತೊಡಗಿಸಿಕೊಳ್ಳುವರು. ಸೋದರನಿಗೆ ದೂರದ ಸ್ಥಳದಲ್ಲಿ ವೃತ್ತಿ ದೊರೆಯುತ್ತದೆ. ಲೇಖಕರು ಮತ್ತು ಕವಿಗಳಿಗೆ ಗೌರವಾದರಗಳು ಲಭಿಸುತ್ತವೆ. ಹೊಸ ವ್ಯಾಪಾರ ವ್ಯವಹಾರಗಳನ್ನು ಆರಂಭಿಸಲು ಇದು ಸುಸಂದರ್ಭವಲ್ಲ. ತಂದೆಯವರ ವ್ಯಾಪಾರದಲ್ಲಿ ಭಾಗಿಯಾದಲ್ಲಿ ಅನುಕೂಲ ಉಂಟಾಗಲಿದೆ. ಹಣದ ವಿವಾದವೊಂದು ದೂರವಾಗಲಿದೆ. ಸೋದರಿಯ ಜೀವನದಲ್ಲಿನ ವಿವಾದವು ಕೊನೆಗೊಳ್ಳುತ್ತವೆ. ಪ್ರಕೃತಿಯನ್ನು ಉಳಿಸುವ ಕೆಲಸ ಮಾಡುವಿರಿ.

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು ಬಣ್ಣ

ತುಲಾ

ವಿಶ್ರಾಂತಿ ಇಲ್ಲದೆ ದುಡಿಯುವ ಕಾರಣ ಮನದಲ್ಲಿ ಬೇಸರ ಇರಲಿದೆ. ಸ್ನೇಹಿತರ ಜೊತೆಗೂಡಿ ಸಮಾಜಸೇವೆಯಲ್ಲಿ ತೊಡಗುವಿರಿ. ಉದ್ಯೋಗದಲ್ಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸುವಿರಿ. ಆರೋಗ್ಯದಲ್ಲಿ ಯಾವುದೇ ತೊಂದರೆ ಬಾರದು. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಪ್ರಯಾಣ ಮಾಡಬಹುದು. ಬೃಹತ್ ಯಂತ್ರೋಪಕರಣಗಳ ಸರಬರಾಜಿನಲ್ಲಿ ಹೆಚ್ಚಿನ ಲಾಭಾಂಶ ಇರುತ್ತದೆ. ಕುಟುಂಬದಲ್ಲಿ ವಿರಸವಿರುತ್ತದೆ. ವಿರೋಧಿಗಳ ವಿಚಾರದಲ್ಲಿ ಎಚ್ಚರಿಕೆಯಿಂದ ಇರಿ. ಆದಾಯದ ದೃಷ್ಟಿಯಿಂದ ಸೋದರರ ಜೊತೆಗೂಡಿ ವ್ಯಾಪಾರವನ್ನು ಆರಂಭಿಸುವಿರಿ. ಮಗಳು ಅಥವ ಸೋದರಿಯ ವಿವಾಹದ ಮಾತುಕತೆ ನಡೆಯುತ್ತದೆ. ಪುರಾತನ ಮನೆಯನ್ನು ನವೀಕರಿಸುವಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ವೃಶ್ಚಿಕ

ಸುಲಭವಾಗಿ ಕೈಹಿಡಿದ ಕೆಲಸ ಕಾರ್ಯಗಳು ಯಶಸ್ವಿ ಆಗುತ್ತವೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರಲಿದೆ. ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ಕಣ್ಣಿನ ದೋಷ ಇರುತ್ತದೆ. ಮನೆತನದ ಆಸ್ತಿಯ ವಿಚಾರದಲ್ಲಿ ವಿವಾದವೊಂದು ಎದುರಾಗಲಿದೆ. ಹೆಚ್ಚಿನ ಪ್ರಯತ್ನದಿಂದ ಮಾತ್ರ ವಿದ್ಯಾರ್ಥಿಗಳು ಗುರಿ ತಲುಪಲು ಸಾಧ್ಯ. ವಾಣಿಜ್ಯ ಸಂಸ್ಥೆಯ ಹೊಣೆಗಾರಿಕೆ ನಿಮ್ಮದಾಗಲಿದೆ. ಅನಗತ್ಯವಾದ ಖರ್ಚುವೆಚ್ಚಗಳು ಬೇಸರ ಮೂಡಿಸುತ್ತದೆ. ಯಂತ್ರೋಪಕರಣಗಳ ಮಾರಾಟದಲ್ಲಿ ಲಾಭವಿರುತ್ತದೆ. ಅನಾವಶ್ಯಕ ಮಾತುಕತೆಯಿಂದ ದೂರ ಉಳಿಯುವಿರಿ. ವಾಹನ ಚಾಲನೆ ಮಾಡುವಾಗ ಎಚ್ಚರಿಕೆ ವಹಿಸಿ. ಸಾರ್ವಜನಿಕರಿಗೆ ಕುಡಿವ ನೀರಿನ ವ್ಯವಸ್ಥೆ ಮಾಡುವಿರಿ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

-------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.