Horoscope Today: ಬಹಳ ಹಿಂದಿನ ವಿವಾದವೊಂದಕ್ಕೆ ಪರಿಹಾರ, ರಾಜಕೀಯ ಕ್ಷೇತ್ರದಲ್ಲಿ ನಿರೀಕ್ಷಿತ ಮಟ್ಟ ತಲುಪುವಿರಿ; ಏ. 27ರ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಬಹಳ ಹಿಂದಿನ ವಿವಾದವೊಂದಕ್ಕೆ ಪರಿಹಾರ, ರಾಜಕೀಯ ಕ್ಷೇತ್ರದಲ್ಲಿ ನಿರೀಕ್ಷಿತ ಮಟ್ಟ ತಲುಪುವಿರಿ; ಏ. 27ರ ರಾಶಿಫಲ

Horoscope Today: ಬಹಳ ಹಿಂದಿನ ವಿವಾದವೊಂದಕ್ಕೆ ಪರಿಹಾರ, ರಾಜಕೀಯ ಕ್ಷೇತ್ರದಲ್ಲಿ ನಿರೀಕ್ಷಿತ ಮಟ್ಟ ತಲುಪುವಿರಿ; ಏ. 27ರ ರಾಶಿಫಲ

27th ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (27th April 2024 2024 Daily Horoscope).

 ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ಭವಿಷ್ಯ
ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(27th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಶನಿವಾರ

ತಿಥಿ : ತದಿಗೆ ಬೆಳಗ್ಗೆ 06.26 ರವರೆಗೂ ಇದ್ದು ನಂತರ ಚೌತಿ ಆರಂಭವಾಗಲಿದೆ.

ನಕ್ಷತ್ರ : ಜ್ಯೇಷ್ಠ ನಕ್ಷತ್ರವು ರಾತ್ರಿ 02.33 ರವರೆಗೂ ಇದ್ದು ನಂತರ ಮೂಲ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.57

ಸೂರ್ಯಾಸ್ತ: ಸಂಜೆ 06.32

ರಾಹುಕಾಲ: ಬೆಳಗ್ಗೆ 09.13 ರಿಂದ 10.47

ರಾಶಿಫಲ

ಧನಸ್ಸು

ಅಚಲವಾದ ನಿರ್ಣಯದಿಂದ ಮಾತ್ರ ನಿರೀಕ್ಷಿತ ಯಶಸ್ಸನ್ನು ಗಳಿಸಬಹುದು. ಸಾಧ್ಯವಾದಷ್ಟು ಕೋಪವನ್ನು ನಿಯಂತ್ರಿಸಿಕೊಳ್ಳಿ. ಭವಿಷ್ಯದ ಜೀವನಕ್ಕಾಗಿ ಹಣವನ್ನು ಉಳಿಸಲು ಪ್ರಯತ್ನಿಸಿ. ಸನ್ನಿವೇಶವನ್ನು ಅರ್ಥ ಮಾಡಿಕೊಂಡು ಸೂಕ್ತ ತೀರ್ಮಾನ ತೆಗೆದುಕೊಳ್ಳುವಿರಿ. ಅರಿಯದೆ ಮಾಡುವ ತಪ್ಪಿಗೆ ವಿಷಾದ ವ್ಯಕ್ತಪಡಿಸುವಿರಿ. ಮಕ್ಕಳ ಸಾಧನೆಯಿಂದ ಸಂತಸ ಗೊಳ್ಳುವಿರಿ. ಉದ್ಯೋಗದಲ್ಲಿ ಎದುರಾಗುವ ವಿವಾದ ಒಂದನ್ನು ದೂರ ಮಾಡುವಿರಿ. ಬೇರೆಯವರ ಮಾತನ್ನು ಸುಲಭವಾಗಿ ನಂಬುವುದಿಲ್ಲ. ರಾಜಕೀಯ ಕ್ಷೇತ್ರದಲ್ಲಿ ನಿರೀಕ್ಷಿತ ಮಟ್ಟ ತಲುಪುವಿರಿ. ಬೇರೆಯವರ ಹಣಕಾಸಿನ ವ್ಯವಹಾರಕ್ಕೆ ಸಾಕ್ಷಿಯಾಗದಿರಿ. ಅನಿವಾರ್ಯವಾಗಿ ಆಪ್ತರಿಗೆ ಹಣದ ಸಹಾಯ ಮಾಡುವಿರಿ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಮಕರ

ವಯೋವೃದ್ಧರ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ಯಶಸ್ಸನ್ನು ಕಾಣುವಿರಿ. ಮಕ್ಕಳನ್ನು ವಿಶೇಷವಾದ ಪ್ರೀತಿಯಿಂದ ನೋಡುವಿರಿ. ಸಮಯವನ್ನು ಗೌರವಿಸುವ ನೀವು ಸದಾಕಾಲ ಚಟುವಟಿಕೆಯಿಂದ ಕೂಡಿರುತ್ತೀರಿ. ಹಣಕಾಸಿನ ಅನುಕೂಲತೆ ಉಂಟಾಗುವ ಕೆಲಸವನ್ನು ಆಯ್ದುಕೊಳ್ಳುವಿರಿ. ಮಕ್ಕಳಲ್ಲಿ ಇರುವ ಅದ್ಭುತ ಕಲ್ಪನೆಗಳಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸುವಿರಿ. ಮಕ್ಕಳ ವ್ಯಾಪಾರ ವ್ಯವಹಾರಗಳ ನಿರ್ವಹಣೆ ನಿಮ್ಮದಾಗಲಿದೆ. ತಾಯಿಗೆ ತವರಿನಿಂದ ಸಹಾಯ ದೊರೆಯಲಿದೆ. ದಂಪತಿ ನಡುವೆ ವಿಶೇಷವಾದ ಪ್ರೀತಿ ಮತ್ತು ವಿಶ್ವಾಸ ಬೆಳೆಯಲಿದೆ. ಧಾರ್ಮಿಕ ಕಾರ್ಯವೊಂದರ ಸಲುವಾಗಿ ದೂರದ ಊರಿಗೆ ಪ್ರಯಾಣ ಬೆಳೆಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೆಂಪು

ಕುಂಭ

ಆರಂಭಿಸಿದ ಕೆಲಸವೊಂದರಲ್ಲಿ ಆಕಸ್ಮಿಕವಾಗಿ ಯಶಸ್ಸು ದೊರೆಯುತ್ತದೆ. ಇಂದಿನ ಘಟನೆಯೊಂದರಿಂದ ದುಡುಕುತನದ ನಿರ್ಧಾರ ತೆಗೆದುಕೊಳ್ಳಬಾರದೆಂಬ ತೀರ್ಮಾನ ಮಾಡುವಿರಿ. ಕೈಹಿಡಿದ ಕೆಲಸ ಕಾರ್ಯಗಳನ್ನು ಏಕಾಂಗಿಯಾಗಿ ಯಶಸ್ವಿಯಾಗಿ ನಿರ್ವಹಿಸುವಿರಿ. ಸರಿಯಾದ ಪೂರ್ವಭಾವಿ ತಯಾರಿಕೆ ಇಲ್ಲದೆ ಯಾವುದೇ ಕೆಲಸವನ್ನು ಆರಂಭಿಸುವುದಿಲ್ಲ. ನೀವು ಮಾಡಿದ ಕೆಲಸವೆಲ್ಲಾ ಸರಿ ಎಂಬ ಭಾವನೆ ಮನದಲ್ಲಿ ಇರುತ್ತದೆ. ಸಂಗಾತಿಯೊಂದಿಗೆ ವಿಶ್ವಾಸದಿಂದ ಮಾತನಾಡಿದರೆ ಸಮಸ್ಯೆಯೊಂದು ಪರಿಹಾರ ಗೊಳ್ಳುತ್ತದೆ. ನಿಮ್ಮ ಮಾತಿನಲ್ಲಿ ನಿಗೂಢವಾದ ಅರ್ಥವಿರುತ್ತದೆ. ನೀರಿರುವ ಸ್ಥಳಗಳಲ್ಲಿ ಎಚ್ಚರಿಕೆಯಿಂದ ಇರಿ. ಮಹಿಳೆಯರಿಗೆ ಹಾರ್ಮೋನ್‌ ತೊಂದರೆ ಉಂಟಾಗಲಿದೆ. ಸರಿಯಾದ ಲೆಕ್ಕ ಪತ್ರವಿಲ್ಲದೆ ಮನೆ ಕೊಳ್ಳುವ ಕೆಲಸವನ್ನು ಪೂರ್ಣಗೊಳಿಸದಿರಿ. ಆತ್ಮೀಯರಿಗೆ ಕಷ್ಟಕ್ಕೆಂದು ಕೊಟ್ಟ ಹಣ ಮರಳಿ ಬರುವುದಿಲ್ಲ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಮೀನ

ಸ್ನೇಹಿತರು ಮತ್ತು ಬಂಧುಗಳೊಡನೆ ಮನರಂಜನೆಯಲ್ಲಿ ದಿನ ಕಳೆಯುವಿರಿ. ಉದ್ಯೋಗದಲ್ಲಿ ನಿರಾಸಕ್ತಿ ಇರುವ ಕಾರಣ ಯಾವುದೇ ಕೆಲಸವನ್ನು ಮಾಡುವುದಿಲ್ಲ. ಹಿರಿಯ ಅಧಿಕಾರಿಗಳ ಸೂಚನೆಯನ್ನು ತಿರಸ್ಕರಿಸುವಿರಿ. ಕ್ಷಣ ಕಾಲ ಕುಟುಂಬದಲ್ಲಿ ವಿಷಾದದ ಛಾಯೆ ಉಂಟಾಗುತ್ತದೆ. ಆರ್ಥಿಕವಾಗಿ ಸದೃಢರಾಗುವಿರಿ. ಅನಾವಶ್ಯಕವಾಗಿ ಕೆಲವರಿಗೆ ಧನಸಹಾಯ ಮಾಡಬೇಕಾಗುತ್ತದೆ. ಹೊಗಳುವ ಜನರಿಂದ ಮೋಸ ಹೋಗದಿರಿ. ಸಂಗಾತಿಯೊಂದಿಗೆ ಕಿರು ಪ್ರವಾಸ ಕೈಗೊಳ್ಳುವಿರಿ. ಹವ್ಯಾಸಕ್ಕೆಂದು ಆರಂಭಿಸಿದ ಕುಶಲಕಲೆಯು ಉತ್ತಮ ಖ್ಯಾತಿ ನೀಡುತ್ತದೆ. ಯಾರು ಸಹಾಯವೂ ಇಲ್ಲವೇ ಯಾವುದೇ ಕೆಲಸ ಕಾರ್ಯಗಳನ್ನು ಮಾಡಬಲ್ಲಿರಿ. ಹಣಕಾಸಿನ ವಿಚಾರದಲ್ಲಿ ಸೋದರಿಯ ಜೊತೆ ವಾಗ್ವಾದ ಇರುತ್ತದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಹಳದಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.