ಎಂದೋ ಮಾಡಿದ ತಪ್ಪಿಗೆ ಪಶ್ಚಾತಾಪ ಪಡುವಿರಿ, ಪುತ್ರನ ಜೊತೆ ಮನಸ್ತಾಪ ಉಂಟಾಗಲಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಎಂದೋ ಮಾಡಿದ ತಪ್ಪಿಗೆ ಪಶ್ಚಾತಾಪ ಪಡುವಿರಿ, ಪುತ್ರನ ಜೊತೆ ಮನಸ್ತಾಪ ಉಂಟಾಗಲಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಎಂದೋ ಮಾಡಿದ ತಪ್ಪಿಗೆ ಪಶ್ಚಾತಾಪ ಪಡುವಿರಿ, ಪುತ್ರನ ಜೊತೆ ಮನಸ್ತಾಪ ಉಂಟಾಗಲಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಜೂನ್‌ 27ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ)

ಎಂದೋ ಮಾಡಿದ ತಪ್ಪಿಗೆ ಪಶ್ಚಾತಾಪ ಪಡುವಿರಿ, ಪುತ್ರನ ಜೊತೆ ಮನಸ್ತಾಪ ಉಂಟಾಗಲಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಎಂದೋ ಮಾಡಿದ ತಪ್ಪಿಗೆ ಪಶ್ಚಾತಾಪ ಪಡುವಿರಿ, ಪುತ್ರನ ಜೊತೆ ಮನಸ್ತಾಪ ಉಂಟಾಗಲಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (27th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಗುರುವಾರ

ತಿಥಿ : ಷಷ್ಠಿ ರಾತ್ರಿ 08.25 ರವರೆಗೂ ಇದ್ದು ನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಶತಭಿಷ ನಕ್ಷತ್ರವು 01.54 ರವರೆಗೆ ಇದ್ದು ನಂತರ ಪೂರ್ವಾಭಾದ್ರ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.55

ಸೂರ್ಯಾಸ್ತ: ಸಂಜೆ 06.48

ರಾಹುಕಾಲ: 02.02 ರಿಂದ 03.38

ರಾಶಿ ಫಲ

ಮೇಷ

ಸಮಾಜದಲ್ಲಿರುವ ಗೌರವಯುತ ಸ್ಥಾನವನ್ನು ಕಳೆದುಕೊಳ್ಳಲು ಇಷ್ಟಪಡುವುದಿಲ್ಲ. ತಮ್ಮ ಕೀರ್ತಿ ಮತ್ತು ಯಶಸ್ಸಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗುವಿರಿ. ದಾನ ಧರ್ಮದ ಕೆಲಸದಲ್ಲಿ ನೆಮ್ಮದಿ ಕಾಣುವಿರಿ. ನೀವಾಗಿಯೇ ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳುವಿರಿ. ಎಲ್ಲರಿಂದಲೂ ಹೊಗಳಿಕೆಯ ನಿರೀಕ್ಷೆಯಲ್ಲಿ ಇರುವಿರಿ. ವೇದ ವೇದಾಂತದಲ್ಲಿ ನಂಬಿಕೆ ವಿಶ್ವಾಸವಿರುತ್ತದೆ. ಕಮೀಷನ್ ಆಧಾರದಲ್ಲಿ ನಡೆಸುವ ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಲಾಭಾಂಶ ದೊರೆಯುತ್ತದೆ. ಸುತ್ತಮುತ್ತಲಿನ ಪ್ರದೇಶದಲ್ಲಿಯೂ ನಿಮಗೆ ವಿಶೇಷ ಸ್ಥಾನಮಾನ ದೊರೆಯುತ್ತದೆ. ಮಗನೊಂದಿಗೆ ಅನಾವಶ್ಯಕ ವಾದ ವಿವಾದ ಇರುತ್ತದೆ. ಅರಿಯದೆ ಮಾಡುವ ತಪ್ಪಿಗೆ ಪಶ್ಚಾತಾಪ ಪಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಆಕಾಶ ನೀಲಿ

ವೃಷಭ

ವಿದ್ಯಾರ್ಥಿಗಳು ಆತಂಕದ ಕ್ಷಣಗಳನ್ನು ಎದುರಿಸುತ್ತಾರೆ. ನೀವು ಮಾಡಿದ ತಪ್ಪಿಗೆ ಪಶ್ಚಾತಾಪ ಪಡುವಿರಿ. ಜವಾಬ್ದಾರಿ ಅರಿತು ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಕಾನೂನನ್ನು ಮೀರಿ ಯಾವುದೇ ಕೆಲಸ ಮಾಡುವುದಿಲ್ಲ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಕಂಡುಬರುತ್ತದೆ. ವಯಸ್ಸಿನ ಮಿತಿ ಇಲ್ಲದೆ ಎಲ್ಲರೊಂದಿಗೆ ನಿಷ್ಠೆಯಿಂದ ವ್ಯವಹರಿಸುವಿರಿ. ಹಣಕಾಸಿನ ವಿಚಾರದಲ್ಲಿ ದುಡುಕಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ವಿದ್ಯಾಭ್ಯಾಸ ಮುಗಿಸಿದವರಿಗೆ ಉತ್ತಮ ಫಲ ದೊರೆಯುತ್ತದೆ. ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು. ಪುಟ್ಟ ಮಕ್ಕಳಿಗೆ ಅವರ ಇಚ್ಛೆಯಾನುಸಾರ ಭೋಜನ ವ್ಯವಸ್ಥೆ ಮಾಡುವಿರಿ. ಮನೆಯ ಮಕ್ಕಳಲ್ಲದೆ ನೆರೆಹೊರೆಯ ಮಕ್ಕಳ ಜೊತೆ ಮನರಂಜನಾ ಸ್ಥಳಕ್ಕೆ ತೆರಳುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ಮಿಥುನ

ವಿದೇಶಿ ಭಾಷೆಗಳನ್ನು ಕಲಿಯುವ ಮೂಲಕ ಉದ್ಯೋಗಾವಕಾಶವನ್ನು ಹೆಚ್ಚಿಸಿಕೊಳ್ಳುವಿರಿ. ಗುರುಗಳ ಭೇಟಿಯಿಂದಾಗಿ ಅತಿಮುಖ್ಯ ಬದಲಾವಣೆಗಳು ಉಂಟಾಗಲಿವೆ. ಶಾಸ್ತ್ರ ಸಂಪ್ರದಾಯಗಳಲ್ಲಿ ನಂಬಿಕೆ ಇರುತ್ತದೆ. ವೇದಾಂತದ ಬಗ್ಗೆ ದೀರ್ಘ ಭಾಷಣ ಮಾಡುವಿರಿ. ಕೇಳುವವರಿಗೆ ಬೇಸರ ಬರುವಷ್ಟು ಮಾತನಾಡುವಿರಿ. ಜೀವನದಲ್ಲಿ ಏರಿಳಿತಗಳು ಸಾಮಾನ್ಯವಾಗಿರುತ್ತವೆ. ಪಿತ್ತದ ತೊಂದರೆ ಇರುತ್ತದೆ. ಚಿಕ್ಕ ವಯಸ್ಸಿನಲ್ಲಿ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳುವಿರಿ. ಸ್ವಂತ ವಿದ್ಯಾಸಂಸ್ಥೆಯನ್ನು ಆರಂಭಿಸುವ ಆಸೆ ಈಡೇರುತ್ತದೆ. ದಾಂಪತ್ಯ ಜೀವನದಲ್ಲಿ ಪ್ರಮುಖ ಬದಲಾವಣೆಯೊಂದು ಕಂಡುಬರುತ್ತದೆ. ಹಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದಿಲ್ಲ. ತಮ್ಮ ಸ್ಥಾನಮಾನ ಮತ್ತು ಗೌರವವನ್ನು ಕಾಪಾಡಿಕೊಳ್ಳಲು ಸದಾ ಪ್ರಯತ್ನಿಸುವಿರಿ. ಉತ್ತಮ ಆಡಳಿತ ನಡೆಸಬಲ್ಲಿರಿ. ಕೊಟ್ಟ ಮಾತನ್ನು ಎಂದಿಗೂ ಮರೆಯುವುದಿಲ್ಲ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಎಲೆ ಹಸಿರು

ಕಟಕ

ಅಧಿಕಾರ ದೊರೆತು ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ. ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಕಲಿಕೆಯಲ್ಲಿ ಹೆಚ್ಚಿನ ಶ್ರದ್ಧೆ ತೋರುತ್ತಾರೆ. ಜ್ಞಾಪಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವಿರಿ. ಸಣ್ಣ ಪ್ರಮಾಣದ ಕೆಲಸ ಕಾರ್ಯವಾದರೂ ಹೆಚ್ಚಿನ ಪ್ರಯತ್ನದಿಂದ ಮಾಡುವಿರಿ. ಆಡುವ ಮಾತಿನಲ್ಲಿ ನಿಮ್ಮನ್ನು ಮೀರಿಸುವವರು ಯಾರು ಇಲ್ಲ. ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಬುದ್ಧಿವಾದ ಹೇಳುವಲ್ಲಿ ನಿಸ್ಸೀಮರು. ನಿಮ್ಮ ಮಕ್ಕಳಿಗೆ ಉತ್ತಮ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ಚಿಕ್ಕ ವಯಸ್ಸಿನಲ್ಲಿಯೇ ಉದ್ಯೋಗ ದೊರೆಯುತ್ತದೆ. ಸಮಾಜದಲ್ಲಿ ನಿಮ್ಮ ಗೌರವ ಕೀರ್ತಿ ಹೆಚ್ಚಿಸುತ್ತದೆ. ವಿದ್ಯಾರ್ಥಿಗಳಿಗೆ ಸಾಧ್ಯವಾಗುವಂತಹ ಸಹಾಯವನ್ನು ಮಾಡುವಿರಿ. ಮಕ್ಕಳೊಂದಿಗೆ ಸದಾ ಕಾಲ ಸಂತಸ ಸಂಭ್ರಮದಿಂದ ದಿನ ಕಳೆಯಲು ಇಚ್ಚಿಸುವಿರಿ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೇಸರಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.