ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸಂಗಾತಿಯಿಂದ ಅಮೂಲ್ಯ ಉಡುಗೊರೆ ಪಡೆಯಲಿದ್ದೀರಿ, ಕುಟುಂಬದಲ್ಲಿ ಪರಸ್ಪರ ಪ್ರೀತಿ ಹೆಚ್ಚಲಿದೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಸಂಗಾತಿಯಿಂದ ಅಮೂಲ್ಯ ಉಡುಗೊರೆ ಪಡೆಯಲಿದ್ದೀರಿ, ಕುಟುಂಬದಲ್ಲಿ ಪರಸ್ಪರ ಪ್ರೀತಿ ಹೆಚ್ಚಲಿದೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಜೂನ್‌ 27ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (27th June 2024 Daily Horoscope).

ಸಂಗಾತಿಯಿಂದ ಅಮೂಲ್ಯ ಉಡುಗೊರೆ ಪಡೆಯಲಿದ್ದೀರಿ, ಕುಟುಂಬದಲ್ಲಿ ಪರಸ್ಪರ ಪ್ರೀತಿ ಹೆಚ್ಚಲಿದೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಸಂಗಾತಿಯಿಂದ ಅಮೂಲ್ಯ ಉಡುಗೊರೆ ಪಡೆಯಲಿದ್ದೀರಿ, ಕುಟುಂಬದಲ್ಲಿ ಪರಸ್ಪರ ಪ್ರೀತಿ ಹೆಚ್ಚಲಿದೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(27th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಗುರುವಾರ

ತಿಥಿ : ಷಷ್ಠಿ ರಾತ್ರಿ 08.25 ರವರೆಗೂ ಇದ್ದು ನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಶತಭಿಷ ನಕ್ಷತ್ರವು 01.54 ರವರೆಗೆ ಇದ್ದು ನಂತರ ಪೂರ್ವಾಭಾದ್ರ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.55

ಸೂರ್ಯಾಸ್ತ: ಸಂಜೆ 06.48

ರಾಹುಕಾಲ: 02.02 ರಿಂದ 03.38

ರಾಶಿ ಫಲ

ಧನಸ್ಸು

ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನದಿಂದ ವಿದ್ಯಾಭ್ಯಾಸದಲ್ಲಿ ಪರಿಪೂರ್ಣತೆಯನ್ನು ಪಡೆಯುತ್ತಾರೆ. ಆಹಾರದ ವಿಚಾರದಲ್ಲಿ ಅತಿಯಾದ ಚಪಲವಿರುತ್ತದೆ. ಮನದಲ್ಲಿ 108 ಆಸೆಗಳಿರುತ್ತವೆ. ಅದು ನನಸು ಮಾಡಿಕೊಳ್ಳಲು ಪ್ರಯತ್ನವನ್ನೇ ಪಡುವುದಿಲ್ಲ. ಅಪಾಯದ ಸನ್ನಿವೇಶದಲ್ಲಿ ಬುದ್ಧಿವಂತಿಕೆಯ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಸುಲಭವಾಗಿ ವಾದ ವಿವಾದಗಳಲ್ಲಿ ಸಿಲುಕುವುದಿಲ್ಲ. ನೀವಿರುವ ಕಡೆ ಹಾಸ್ಯಕ್ಕೆ ಕೊರತೆ ಇರುವುದಿಲ್ಲ. ಎಲ್ಲರೊಂದಿಗೆ ಸ್ನೇಹ ಪ್ರೀತಿಯಿಂದ ವರ್ತಿಸುವಿರಿ. ಯಾವುದೇ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಶಕ್ತಿಯ ಕೊರತೆ ಇರುತ್ತದೆ. ಪ್ರಾಣಿಗಳ ಬಗ್ಗೆ ಹೆಚ್ಚಿನ ಆಸಕ್ತಿ ತೋರುವಿರಿ. ಚಿಕ್ಕ ಮಕ್ಕಳಿಗಾಗಿ ಯಾವುದೇ ರೀತಿಯ ಸಹಾಯಕ್ಕೆ ಸಿದ್ಧರಾಗುವಿರಿ. ಯಾರೊಂದಿಗೂ ದ್ವೇಷ ಬೆಳೆಸಿಕೊಳ್ಳುವುದಿಲ್ಲ. ಮನೆ ಮಂದಿಯ ಜೊತೆ ಹುಟ್ಟೂರಿಗೆ ತೆರಳುವಿರಿ. ಆತ್ಮೀಯರಿಂದ ಉಡುಗೊರೆಯೊಂದು ದೊರೆಯಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹಸಿರು

ಮಕರ

ಚಿಕ್ಕ ಮಕ್ಕಳಿಗೆ ಸೋದರ ಮಾವನ ಸಹಾಯ ದೊರಕುತ್ತದೆ. ಒಂಟಿ ಜೀವನವನ್ನು ಇಷ್ಟಪಡುವುದಿಲ್ಲ. ನಿಮ್ಮ ಸುತ್ತಮುತ್ತ ಜನರ ದಂಡೇ ಇರುತ್ತದೆ. ನಿಮ್ಮ ಒಳ್ಳೆಯತನಕ್ಕೆ ಸೋತು ವಿರೋಧಿಗಳೂ ನಿಮ್ಮೊಡನೆ ಪ್ರೀತಿಯಿಂದ ಇರುತ್ತಾರೆ. ಸದಾ ನೆನಪಿನಲ್ಲಿ ಉಳಿಯುವಂತಹ ಕೆಲಸವೊಂದನ್ನು ಮಾಡುವಿರಿ. ವಿದ್ಯಾರ್ಥಿಗಳು ಉನ್ನತ ಅಧ್ಯಯನದಲ್ಲಿ ಮುಂದುವರೆಯುತ್ತಾರೆ. ಸಂಘ ಸಂಸ್ಥೆಗಳ ನಿರ್ವಹಣೆಯ ಹಕ್ಕು ನಿಮ್ಮದಾಗುತ್ತದೆ. ಯಶಸ್ಸಿನ ಬಗ್ಗೆ ಆಶಾ ಭಾವನೆ ನಿಮಗಿರುತ್ತದೆ. ಆತ್ಮೀಯರ ಕಷ್ಟ ಗಳಿಗೆ ಸೂಕ್ತ ಸಲಹೆಯನ್ನು ನೀಡುವಿರಿ. ಹಣದ ಕೊರತೆ ಇರುತ್ತದೆ. ವ್ಯವಹಾರಗಳಲ್ಲಿ ವಿಶೇಷ ಬುದ್ಧಿಯನ್ನು ತೋರುವಿರಿ. ದೈಹಿಕ ಶಕ್ತಿ ಕುಂದುತ್ತದೆ.

ಪರಿಹಾರ: ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ನೀಲಿ

ಕುಂಭ

ನಿಮ್ಮ ಮನದಾಸೆಯಂತೆ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ನಿಮ್ಮ ಮನಸ್ಸಿನಲ್ಲಿ ಸದಾ ಕಾಲ ಧನಾತ್ಮಕ ಚಿಂತನೆ ಇರುತ್ತದೆ. ಯಾರೇ ತಪ್ಪು ಮಾಡಿದರು ಅದನ್ನು ಖಂಡಿಸುವಿರಿ. ನಿಮ್ಮ ನೇರವಾದ ನಡೆ ನುಡಿಯಿಂದ ವಿರೋಧಿಗಳು ಹೆಚ್ಚುತ್ತಾರೆ. ನಿಮಗೆ ತಿಳಿಯದ ವಿಚಾರವಾದರೂ ವಾದ ವಿವಾದದಲ್ಲಿ ತೊಡಗುವಿರಿ. ಸೋಲಿನ ಸಮಯದಲ್ಲಿ ಸಿಡುಕಿನಿಂದ ವರ್ತಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಜ್ಞಾನ ವಿರುತ್ತದೆ. ಮಕ್ಕಳಿಗೆ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಗರ್ಭಿಣಿಯರು ಹೆಚ್ಚಿನ ವಿಶ್ರಾಂತಿ ತೆಗೆದುಕೊಳ್ಳಬೇಕು. ಕುಟುಂಬದಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಹೆಚ್ಚುತ್ತದೆ. ಮುಖದ ಸೌಂದರ್ಯಕ್ಕೆ ಹೆಚ್ಚಿನ ಒಲವು ನೀಡುವಿರಿ. ವ್ಯವಸಾಯದಲ್ಲಿಆಸಕ್ತಿ ಇರುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ಮೀನ

ಮನೆ ಮಂದಿಯ ಸಹಕಾರದಿಂದ ನಿಮ್ಮ ಪ್ರಯತ್ನಕ್ಕೆ ತಕ್ಕ ಫಲಿತಾಂಶ ದೊರೆಯುತ್ತದೆ. ನೋವನ್ನೆಲ್ಲಾ ಮರೆತು ಸಂತಸದಿಂದ ಎಲ್ಲರೊಂದಿಗೆ ಬಾಳುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಸ್ತ್ರೀಯರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ವಿದ್ಯಾರ್ಥಿಗಳು ವಿಶೇಷ ಸಾಧನೆಗೆ ಪಾತ್ರರಾಗುತ್ತಾರೆ. ಉತ್ತಮ ಅವಕಾಶ ದೊರೆಯುವ ಕಾರಣ ಉದ್ಯೋಗ ಬದಲಿಸುವಿರಿ. ಆಮದು ರಫ್ತು ವ್ಯಾಪಾರವಿದ್ದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಪುಟ್ಟ ಮಕ್ಕಳಿಗೆ ನೀರಿನ ತೊಂದರೆ ಇರುತ್ತದೆ. ಮಕ್ಕಳ ಆಸೆ ಆಕಾಂಕ್ಷೆಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವಿರಿ. ದಾಂಪತ್ಯದಲ್ಲಿಉತ್ತಮ ಹೊಂದಾಣಿಕೆ ಇರುತ್ತದೆ.

ಪರಿಹಾರ : ತಾಯಿಯ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಗುಲಾಬಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.