Horoscope Today: ಉದ್ಯೋಗದಲ್ಲಿ ನಿಮ್ಮ ನಿರೀಕ್ಷೆ ಸಫಲವಾಗಲಿದೆ, ಮನೆ ದುರಸ್ತಿಗೆ ಹೆಚ್ಚಿನ ಹಣ ಖರ್ಚು; ಮಾರ್ಚ್ 27ರ ದಿನಭವಿಷ್ಯ
27 ಮಾರ್ಚ್ 2024 ಬುಧವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (27th March 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (27th March 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಬುಧವಾರ
ತಿಥಿ : ಬಿದಿಗೆ 02.55 ರವರೆಗೂ ಇರುತ್ತದೆ ನಂತರ ತದಿಗೆ ಆರಂಭವಾಗಲಿದೆ.
ನಕ್ಷತ್ರ : ಚಿತ್ತ ನಕ್ಷತ್ರ 02.25 ರವರೆಗೂ ಇದ್ದು ನಂತರ ಸ್ವಾತಿ ನಕ್ಷತ್ರ ಆರಂಭವಾಗಲಿದೆ.
ಸೂರ್ಯೋದಯ: ಬೆಳಗ್ಗೆ 06.19
ಸೂರ್ಯಾಸ್ತ: ಸಂಜೆ 06.30
ರಾಹುಕಾಲ : 12.00 ರಿಂದ 01.30
ರಾಶಿಫಲ
ಮೇಷ
ಕುಟುಂಬದ ಕೆಲಸ ಕಾರ್ಯಗಳು ಸುಗಮವಾಗಿ ಸಾಗಲಿವೆ. ಬಹುದಿನದಿಂದ ನೆನೆಗುದಿಗೆ ಬಿದ್ದಿದ್ದ ಸ್ವಂತ ಕೆಲಸವು ಕೈಗೂಡಲಿದೆ. ಉದ್ಯೋಗದಲ್ಲಿನ ನಿರೀಕ್ಷೆ ಹುಸಿಯಾಗದು. ದೈನಂದಿನ ಜೀವನದಲ್ಲಿ ಪ್ರಯೋಜನಕಾರಿ ಬದಲಾವಣೆಗಳು ಕಂಡು ಬರುತ್ತವೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯಲಿದೆ. ವಿದ್ಯಾರ್ಥಿಗಳ ಕ್ರೀಡಾ ಮನೋಭಾವನೆ ಯಶಸ್ಸನ್ನು ನೀಡಲಿದೆ. ಬಯಸಿದ ಅನುಕೂಲತೆಯ ನಡುವೆ ಮಾನಸಿಕ ಒತ್ತಡ ಇರುತ್ತದೆ. ಅನಾವಶ್ಯಕವಾದ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವಿರಿ. ವಾಹನ ಚಾಲನೆಯ ವೇಳೆ ಜಾಗ್ರತೆ. ಮನೆಯ ದುರಸ್ತಿಗಾಗಿ ಹಣ ಹೊಂದಿಸಬೇಕಾಗುತ್ತದೆ. ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ.
ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಕೇಸರಿ ಬಣ್ಣ
ವೃಷಭ
ಕುಟುಂಬದಲ್ಲಿ ಮನಸ್ಸಿಗೆ ಮುದ ನೀಡುವ ಘಟನೆ ನಡೆಯುತ್ತದೆ. ಉದ್ಯೋಗದಲ್ಲಿ ನಿರೀಕ್ಷಿತ ಮಟ್ಟವನ್ನು ತಲುಪುವಿರಿ. ಅನಾವಶ್ಯಕ ಖರ್ಚು ವೆಚ್ಚಗಳಿಂದ ಚಿಂತೆ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯಕ್ಕೆ ತಕ್ಕಂತ ವೆಚ್ಚ ಇರಲಿದೆ. ಹಣಕಾಸಿನ ವ್ಯವಹಾರದಲ್ಲಿ ಸಂಬಂಧಿಕರ ಜೊತೆ ಮನಸ್ತಾವಿರುತ್ತದೆ. ಮಾತಿನ ಮೇಲೆ ಹಿಡಿತವಿದ್ದಲ್ಲಿ ಎಲ್ಲವೂ ಒಳ್ಳೆಯದು. ವಿದ್ಯಾರ್ಥಿಗಳು ಒತ್ತಡಕ್ಕೆ ಮಣಿಯದೆ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ದಂಪತಿಗಳ ನಡುವೆ ಅನಾವಶ್ಯಕ ಬೇಸರ ಮತ್ತು ಮನಸ್ತಾಪವಿರುತ್ತದೆ. ಕುಟುಂಬದ ಸದಸ್ಯರ ಜೊತೆಗೆ ಕಿರುಪ್ರವಾಸ ಕೈಗೊಳ್ಳುವಿರಿ. ನಿಮ್ಮಲ್ಲಿನ ಹಾಸ್ಯ ಪ್ರಜ್ಞೆ ಬೇಸರವನ್ನು ದೂರ ಮಾಡಲಿದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ : ಕಂದು
ಮಿಥುನ
ಕುಟುಂಬದಲ್ಲಿ ಪರಸ್ಪರ ಸಹಮತ ಕಂಡುಬರುತ್ತದೆ. ಉದ್ಯೋಗದಲ್ಲಿ ಉಂಟಾಗುವ ಬದಲಾವಣೆಗಳು ನಿಮಗೆ ಅನುಕೂಲಕಾರಿಯಾಗಲಿದೆ. ಪ್ರಯೋಜನವಿಲ್ಲದ ವಿಚಾರಗಳಿಗೆ ಸಮಯ ವ್ಯರ್ಥವಾಗಲಿದೆ. ಹಿರಿಯರ ಅನುಭವದಿಂದ ಪಾಠ ಕಲಿತು ಸರಿದಾರಿಯಲ್ಲಿ ನಡೆಯುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ದೊರೆವ ಆದಾಯವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ವಿದ್ಯಾರ್ಥಿಗಳು ದಿಟ್ಟ ನಿಲುವಿನಿಂದ ಕಲಿಕೆಯಲ್ಲಿ ಮುನ್ನಡೆಯುತ್ತಾರೆ. ಅವಶ್ಯಕತೆ ಇದ್ದಷ್ಟು ಹಣವನ್ನು ಬುದ್ಧಿವಂತಿಕೆಯಿಂದ ಸಂಪಾದಿಸುವಿರಿ. ಸ್ವಂತ ಉದ್ದಿಮೆ ಇದ್ದಲ್ಲಿ ಕಾರ್ಮಿಕರ ನಡುವೆ ವಾದ ವಿವಾದಗಳು ಇರುತ್ತವೆ. ಏಕಾಂಗಿತನವನ್ನು ಇಷ್ಟಪಡುವಿರಿ. ಕೌಟುಂಬಿಕ ಜೀವನದಲ್ಲಿ ಇದ್ದ ವಿವಾದ ಪರಿಹಾರಗೊಳ್ಳಲಿದೆ. ಆತ್ಮೀಯರ ಆಗಮನ ಸಂತಸ ಉಂಟಾಗುತ್ತದೆ.
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕೆಂಪು
ಕಟಕ
ಕುಟುಂಬದ ಜವಾಬ್ದಾರಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವಿರಿ. ಒಮ್ಮತದ ತೀರ್ಮಾನಗಳು ಕಷ್ಟ ನಷ್ಟದಿಂದ ಪಾರು ಮಾಡಲಿದೆ ಉದ್ಯೋಗದಲ್ಲಿ ಅಸಹಜ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳು ಸುಗಮವಾಗಿ ನಡೆಯಲಿವೆ. ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಆಸಕ್ತಿ ವಹಿಸುತ್ತಾರೆ. ವಾಸವಿರುವ ಮನೆಯನ್ನು ಬದಲಿಸುವಿರಿ. ಹೊಸ ವಿಚಾರಗಳಲ್ಲಿ ಆಸಕ್ತಿ ತೋರುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಹಣ ಬೇಕಾಗುತ್ತದೆ. ಹಣದ ಕೊರತೆಯಿಂದ ಪಾರಾಗಲು ಹೊಸ ಯೋಜನೆಗಳನ್ನು ರೂಪಿಸುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ಲಾಭ ಇರುತ್ತದೆ. ಸಂಗಾತಿಯೊಂದಿಗೆ ಮಾತುಕತೆಯಿಂದ ಆತ್ಮವಿಶ್ವಾಸ ಮೂಡುತ್ತದೆ. ಬೇಸಾಯದಲ್ಲಿ ಆದಾಯ ದೊರೆಯುತ್ತದೆ. ಪ್ರಾಣಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವಿರಿ.
ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಕಿತ್ತಳೆ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ.)
