ಕನ್ನಡ ಸುದ್ದಿ  /  Astrology  /  Horoscope Today Astrology Prediction 27th March 2024 Leo Virgo Libra Scorpio Daily Horoscope Sts

Horoscope Today: ಆತ್ಮೀಯರ ಸಹಾಯದಿಂದ ಅವಿವಾಹಿತರಿಗೆ ವಿವಾಹ ನಿಶ್ಚಯ, ವಿದ್ಯಾರ್ಥಿಗಳಿಗೆ ಶುಭ ದಿನ; ಇಂದಿನ ರಾಶಿಫಲ

27 ಮಾರ್ಚ್‌ 2024, ಬುಧವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (27th March 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (27th March 2024 Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ : ಬಿದಿಗೆ 02.55 ರವರೆಗೂ ಇರುತ್ತದೆ ನಂತರ ತದಿಗೆ ಆರಂಭವಾಗಲಿದೆ.

ನಕ್ಷತ್ರ : ಚಿತ್ತ ನಕ್ಷತ್ರ 02.25 ರವರೆಗೂ ಇದ್ದು ನಂತರ ಸ್ವಾತಿ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.19

ಸೂರ್ಯಾಸ್ತ: ಸಂಜೆ 06.30

ರಾಹುಕಾಲ: 12.00 ರಿಂದ 01.30

ರಾಶಿ ಫಲ

ಸಿಂಹ

ನಿಸ್ವಾರ್ಥ ಪ್ರೀತಿ ಕುಟುಂಬದಲ್ಲಿ ಹೊಸ ಭರವಸೆ ಮತ್ತು ವಿಶ್ವಾಸವನ್ನು ಉಂಟುಮಾಡುದೆ. ಪ್ರತಿರೋಧದ ನಡುವೆಯೂ ಉದ್ಯೋಗದಲ್ಲಿ ಸ್ಥಾನವನ್ನು ಬಲಪಡಿಸಿಕೊಳ್ಳುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಅದೃಷ್ಟವಿದೆ. ಬೇರೆಯವರ ಸರಿಯಾದ ಸಾಕ್ಷಿ ಇಲ್ಲದ ಮಾತನ್ನು ನಂಬಿದರೆ ತೊಂದರೆ ಖಚಿತ. ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿ ಸಾಧನೆಯತ್ತ ನಡೆಯುತ್ತಾರೆ. ಸಮಾಜದ ಗಣ್ಯ ವ್ಯಕ್ತಿಯೊಬ್ಬರ ಆಶ್ರಯ ದೊರೆಯುತ್ತದೆ. ದಾಂಪತ್ಯದಲ್ಲಿ ಇದ್ದ ಸಂಶಯವೊಂದು ದೂರವಾಗುತ್ತದೆ. ಕುಟುಂಬದ ಸದಸ್ಯದಿಂದ ಹಣದ ಸಹಾಯ ದೊರೆಯುತ್ತದೆ. ಕುಟುಂಬದ ಹೆಣ್ಣು ಮಕ್ಕಳಿಗೆ ಸಿಹಿ ಸುದ್ದಿಯೊಂದು ಬರಲಿದೆ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರಲಿದೆ.

ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಹಳದಿ ಬಣ್ಣ

ಕನ್ಯಾ

ನಿಮ್ಮ ಮಧ್ಯಸ್ಥಿಕೆಯಿಂದ ಕುಟುಂಬದಲ್ಲಿನ ಭಿನ್ನಾಭಿಪ್ರಾಯವು ಮರೆಯಾಗಲಿದೆ. ಉದ್ಯೋಗದಲ್ಲಿನ ಕಾರ್ಯತತ್ಪರತೆಗೆ ಹಿರಿಯ ಅಧಿಕಾರಿಗಳ ಮೆಚ್ಚುಗೆ ದೊರೆಯುತ್ತದೆ. ಸಮಾಜಸೇವೆ ಕಾರ್ಯಗಳನ್ನು ಮಾಡುವಿರಿ. ಉದ್ಯೋಗದಲ್ಲಿ ಬಡ್ತಿ ದೊರೆತು ಪರ ಸ್ಥಳಕ್ಕೆ ತೆರಳುವ ಸಾಧ್ಯತೆಗಳಿವೆ. ವ್ಯಾಪಾರ ವ್ಯವಹಾರಗಳಲ್ಲಿ ಸಂಗಾತಿಯ ಪಾತ್ರ ಅತಿ ಮುಖ್ಯವಾಗುತ್ತದೆ. ಹೆಚ್ಚಿನ ಲಾಭದ ಆಸೆ ಇರುವುದಿಲ್ಲ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಉತ್ತಮ ಫಲಿತಾಂಶ ಗಳಿಸುತ್ತಾರೆ. ಹಣಕಾಸಿನ ವಿವಾದದಿಂದ ಪಾರಾಗುವಿರಿ. ಆತ್ಮೀಯರ ಸಹಾಯದಿಂದ ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ಮಕ್ಕಳಿಗೆ ದುಬಾರಿ ಉಡುಗೊರೆ ನೀಡುವಿರಿ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ: ಹಸಿರು

ತುಲಾ

ಕುಟುಂಬದ ದೊಡ್ಡ ಕೆಲಸವೊಂದನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ಪ್ರಮುಖ ವಿಚಾರವನ್ನು ಮರೆವ ಕಾರಣ ಉದ್ಯೋಗದಲ್ಲಿ ಗಲಿಬಿಲಿಯ ವಾತಾವರಣ ಉಂಟಾಗುತ್ತದೆ. ಕೈ ಹಿಡಿದ ಕೆಲಸ ಪೂರೈಸುವವರೆಗೂ ವಿಶ್ರಾಂತಿ ಇರದು. ಕಡಿಮೆ ಬಂಡವಾಳದ ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ ಗಳಿಸಲು ಪ್ರಯತ್ನಿಸುವಿರಿ. ಭೂ ವ್ಯವಹಾರದಲ್ಲಿ ಉತ್ತಮ ಲಾಭವಿದೆ. ಹಣಕಾಸಿನ ಸಮಸ್ಯೆಯೊಂದು ತಂದೆಯವರ ಸಹಾಯದಿಂದ ನೆರವೇರಲಿದೆ. ವಂಶಾಧಾರಿತ ವೃತ್ತಿಯಿಂದ ಉತ್ತಮ ಆದಾಯ ಗಳಿಸುವಿರಿ. ಮನೆಯಲ್ಲಿರುವ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಹಿಸಿ. ಹೊಸ ವಾಹನ ಕೊಳ್ಳುವಿರಿ. ಸ್ಟಾಕ್ ಮತ್ತು ಷೇರಿನ ವ್ಯವಹಾರದಲ್ಲಿ ಹಣವನ್ನು ತೊಡಗಿಸುವಿರಿ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ

ವೃಶ್ಚಿಕ

ಒತ್ತಡಕ್ಕೆ ಮಣಿದು ಕುಟುಂಬದ ನಿರ್ಧಾರಗಳನ್ನು ಬದಲಾಯಿಸುವುದಿಲ್ಲ. ಒತ್ತಡದ ಸನ್ನಿವೇಶದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವಿರಿ. ನಿಮ್ಮ ನೇರವಾದ ನಡೆ ನುಡಿಗೆ ಎಲ್ಲರೂ ಬೇಸರಗೊಳ್ಳುತ್ತಾರೆ. ಬೇಗನೆ ಕೋಪಗೊಳ್ಳುವಿರಿ ಅದರಿಂದ ಯಾರಿಗೂ ತೊಂದರೆ ಆಗದು. ತಂದೆಯವರ ಪ್ರಭಾವಕ್ಕೆ ಒಳಗಾಗಿ ಮನೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುವಿರಿ. ಉದ್ಯೋಗದಲ್ಲಿ ತೊಂದರೆ ಬಾರದು. ಪಾಲುಗಾರಿಕೆಯ ವ್ಯಾಪಾರದ ಹಕ್ಕನ್ನು ಕಾನೂನುರೀತ್ಯಾ ಪಡೆಯುವಿರಿ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ಬೇಸರ ಉಂಟಾಗುತ್ತದೆ. ದೊರೆವ ಅವಕಾಶವನ್ನು ಲಾಭವಾಗಿ ಪರಿವರ್ತಿಸಿಕೊಳ್ಳುವಿರಿ. ಬೇಸಾಯದಲ್ಲಿ ಆಸಕ್ತಿ ಮೂಡಲಿದೆ. ಆರೋಗ್ಯದಲ್ಲಿ ಏರಿಳಿತ ಇರಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನೇರಳೆ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ)