ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಉದ್ಯೋಗದಲ್ಲಿ ಮಾನಸಿಕ ಒತ್ತಡ, ಮನೆ ಖರೀದಿಸುವ ಆಸೆ ಈಡೇರುವ ಸಮಯ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Horoscope Today: ಉದ್ಯೋಗದಲ್ಲಿ ಮಾನಸಿಕ ಒತ್ತಡ, ಮನೆ ಖರೀದಿಸುವ ಆಸೆ ಈಡೇರುವ ಸಮಯ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

27 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (27th May 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (27th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಸೋಮವಾರ

ತಿಥಿ: ಚೌತಿ 04.27 ರವರೆಗೂ ಇರುತ್ತದೆ ನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ: ಪೂರ್ವಾಷಾಢ ನಕ್ಷತ್ರವು 10.12 ರವರೆಗೂ ಇದ್ದು ನಂತರ ಉತ್ತರಾಷಾಢ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ05.52

ಸೂರ್ಯಾಸ್ತ: ಸಂಜೆ 06.40

ರಾಹುಕಾಲ: ಬೆಳಗ್ಗೆ 07.32 ರಿಂದ 09.08

ರಾಶಿಫಲ

ಮೇಷ

ಮನಸ್ಸು ಒಪ್ಪದೇ ಹೋದರೂ ಬೇರೆಯವರ ಕೆಲಸ ಕಾರ್ಯಗಳನ್ನು ಮಾಡಬೇಕಾಗುತ್ತದೆ. ಧಾರ್ಮಿಕ ಕೆಲಸಗಳಲ್ಲಿ ತಲ್ಲೀನರಾಗುತ್ತೀರಿ. ಉದ್ಯೋಗದಲ್ಲಿ ಜವಾಬ್ದಾರಿ ಜೊತೆಯಲ್ಲಿ ಮಾನಸಿಕ ಒತ್ತಡವೂ ಹೆಚ್ಚುತ್ತದೆ. ಕುಟುಂಬದಲ್ಲಿ ಬೇಸರದ ಘಟನೆಯೊಂದು ನಡೆಯುತ್ತದೆ. ಸ್ವಂತ ಕೆಲಸಗಳಿಗೆ ಮೊದಲ ಆದ್ಯತೆ ನೀಡುವಿರಿ. ಮಕ್ಕಳ ವಿದ್ಯಾಭ್ಯಾಸದ ವಿಚಾರಗಳನ್ನು ಮೊದಲು ಪೂರ್ಣಗೊಳಿಸಲು ಪ್ರಯತ್ನಿಸಿ. ಮಕ್ಕಳು ವಯಸ್ಸಿಗೆ ಮೀರಿದ ಜವಾಬ್ದಾರಿ ತೋರುತ್ತಾರೆ. ಮನೆಯನ್ನು ಕೊಳ್ಳುವ ಆಸೆ ನೆರವೇರುವ ಕಾಲ ಇದಾಗಿದೆ. ವಿದೇಶಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಹಿರಿಯ ಅಧಿಕಾರಿಗಳ ಪ್ರಶಂಸೆಯಿಂದ ಸಂತೋಷವಾಗಿರುತ್ತೀರಿ. ಸ್ವಂತಂತ್ರವಾಗಿ ಹಣಕಾಸಿನ ವ್ಯವಹಾರವನ್ನು ನಿರ್ವಹಿಸುವಿರಿ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನಸು ಗೆಂಪು

ವೃಷಭ

ಮನಸ್ಸಿನ ಭಾವನೆಗಳನ್ನು ಯಾರಲ್ಲೂ ಹೇಳಿಕೊಳ್ಳುವುದಿಲ್ಲ. ಹಣಕಾಸಿನ ಯೋಜನೆಯನ್ನು ಕಾರ್ಯ ರೂಪಕ್ಕೆ ತರುವಿರಿ. ಕುಟುಂಬದಲ್ಲಿ ನೆಮ್ಮದಿ ಇರುವುದಿಲ್ಲ. ದೊರೆಯುವ ಆದಾಯದಲ್ಲೇ ಹಣ ಉಳಿಸುವ ಯೋಜನೆ ರೂಪಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ದೊರೆಯುವ ಆದಾಯದಲ್ಲಿ ಕೊರತೆ ಉಂಟಾಗುತ್ತದೆ. ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸಮಸ್ಯೆಯನ್ನು ಬಗೆಹರಿಸುವಿರಿ. ಅವಶ್ಯಕತೆ ಇದ್ದಾಗ ಸ್ನೇಹಿತರ ಮತ್ತು ಸಂಬಂಧಿಗಳ ಸಹಾಯ ದೊರೆಯುತ್ತದೆ. ಆರೋಗ್ಯ್ಕದ ಬಗ್ಗೆ ಎಚ್ಚರಿಕೆ ವಹಿಸಿ. ಹಣಕಾಸಿನ ವಿಚಾರದಲ್ಲಿ ಆತ್ಮೀಯರ ಸಲಹೆ ತಿರಸ್ಕರಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ಧ್ಯಾನ ಪ್ರಾಣಾಯಾಮದ ಮೊರೆ ಹೋಗುವಿರಿ.

ಪರಿಹಾರ: ದೇವರಮನೆಯಲ್ಲಿ ತುಪ್ಪದ ದೀಪ ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಮಿಥುನ

ಮಾತಿನ ಮೇಲೆ ಹಿಡಿತ ಇರಲಿ. ಸ್ವಂತ ಕೆಲಸ ಸಾಧಿಸಲು ಮೃದುವಾಗಿ ಮಾತನಾಡುವಿರಿ. ನಿಮ್ಮ ಸ್ವಭಾವಕ್ಕೆ ಹೊಂದಿಕೊಳ್ಳುವ ಜನರ ಜೊತೆ ಸ್ನೇಹ ಬೆಳೆಸುವಿರಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ದೊರೆಯುವ ಫಲಿತಾಂಶಗಳು ನಿಮಗೆ ಅನುಕೂಲಕರವಾಗಿರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ತಿರಸ್ಕಾರದ ಮನೋಭಾವನೆ ತೋರುವಿರಿ. ವಿದ್ಯಾರ್ಥಿಗಳು ನಿರ್ಧಿಷ್ಟ ವಿಚಾರದ ಬಗ್ಗೆ ಅಧ್ಯಯನ ಮಾಡುತ್ತಾರೆ. ವಧು ವರಾನ್ವೇಷನಾ ಕೇಂದ್ರದಂತಹ ಸೇವಾ ನಿರತರಿಗೆ ಹಣದ ತೊಂದರೆ ಇರುವುದಿಲ್ಲ. ಸ್ವಂತ ಮನೆ ಕೊಳ್ಳುವ ವಿಚಾರ ಮುಂದೆ ಹೋಗುತ್ತದೆ. ಆತಂಕದ ಪರಿಸ್ಥಿತಿಯಲ್ಲಿ ಕುಟುಂಬದ ಗೌರವ ಪ್ರತಿಷ್ಠೆಯನ್ನು ಕಾಪಾಡುವಿರಿ. ಕಣ್ಣಿನ ದೋಷ ಇರುತ್ತದೆ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬಿಳಿ

ಕಟಕ

ಕುಟುಂಬಕ್ಕೆ ಸಂಬಂಧಿಸಿದ ಕೆಲಸಗಳು ಪೂರ್ಣಗೊಳ್ಳಲಿವೆ. ಜೀವನದಲ್ಲಿ ಅಡೆ ತಡೆಗಳು ಕ್ರಮೇಣವಾಗಿ ಕಡಿಮೆ ಆಗಲಿದೆ. ಅತಿಯಾದ ಆತ್ಮವಿಶ್ವಾಸದಿಂದ ಮಾಡುವ ಕೆಲಸಗಳೆಲ್ಲಾ ಸರಿ ಎಂಬ ಭಾವನೆ ಇರುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಾಣದು. ವಿದ್ಯಾರ್ಥಿಗಳ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಕಾರಿ ಉದ್ಯೋಗ ದೊರೆವ ಸಾಧ್ಯತೆ ಇದೆ. ವಿಶ್ರಾಂತಿ ಇಲ್ಲದ ದುಡಿಮೆ ಇರುತ್ತದೆ. ಮಕ್ಕಳಿಗೆ ವಿವಾಹದ ಮಾತುಕತೆ ಆಗಲಿದೆ. ಐಷಾರಾಮಿ ಜೀವನ ನಡೆಸುವಿರಿ. ಕುಟುಂಬದಲ್ಲಿನ ವಯೋವೃದ್ದರು ಯಾತ್ರಾಸ್ಥಳಕ್ಕೆ ಪ್ರವಾಸ ಬೆಳೆಸುತ್ತಾರೆ. ಅತಿಯಾದ ಆಹಾರ ಸೇವನೆಯಿಂದ ಅನಾರೋಗ್ಯ ಉಂಟಾಗಬಹುದು.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬೂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).