ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಕೆಲಸದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಅನಿರೀಕ್ಷಿತ ಧನಲಾಭ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಭವಿಷ್ಯ

Horoscope Today: ಕೆಲಸದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಅನಿರೀಕ್ಷಿತ ಧನಲಾಭ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಭವಿಷ್ಯ

27 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (27th May 2024 Daily Horoscope).

ಕೆಲಸದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಅನಿರೀಕ್ಷಿತ ಧನಲಾಭ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಭವಿಷ್ಯ
ಕೆಲಸದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಅನಿರೀಕ್ಷಿತ ಧನಲಾಭ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (27th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಸೋಮವಾರ

ತಿಥಿ: ಚೌತಿ 04.27 ರವರೆಗೂ ಇರುತ್ತದೆ ನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ: ಪೂರ್ವಾಷಾಢ ನಕ್ಷತ್ರವು 10.12 ರವರೆಗೂ ಇದ್ದು ನಂತರ ಉತ್ತರಾಷಾಢ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ05.52

ಸೂರ್ಯಾಸ್ತ: ಸಂಜೆ 06.40

ರಾಹುಕಾಲ: ಬೆಳಗ್ಗೆ 07.32 ರಿಂದ 09.08

ರಾಶಿಫಲ

ಸಿಂಹ

ಕುಟುಂಬದ ಕೆಲಸದ ನಡುವೆ ವಿಶ್ರಾಂತಿ ಇರುವುದಿಲ್ಲ. ಹಣಕಾಸಿನ ಜವಾಬ್ದಾರಿಗಳಿಂದ ದೂರ ಉಳಿಯುವಿರಿ. ಎಲ್ಲರ ಜೊತೆ ಹೊಂದಾಣಿಕೆಯಿಂದ ಬಾಳುವಿರಿ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಜೊತೆ ವಾದ ವಿವಾದ ಉಂಟಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಯಾವುದೇ ತೊಂದರೆ ಕಾಣದು. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ವಿದ್ಯಾರ್ಥಿಗಳು ಯಾರ ಒತ್ತಡಕ್ಕೂ ಮಣಿಯದೇ ಸ್ವಂತ ನಿರ್ಧಾರಗಳಿಗೆ ಬದ್ಧರಾಗುತ್ತಾರೆ. ಆತುರದಿಂದ ಅಪೂರ್ವವಾದ ಅವಕಾಶವನ್ನು ಕಳೆದುಕೊಳ್ಳುವಿರಿ. ಗೃಹಿಣಿಯರ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಮಕ್ಕಳ ಜೀವನ ರೂಪಿಸುವಲ್ಲಿ ದಿಟ್ಟ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಕುಟುಂಬದ ಎಲ್ಲರೊಂದಿಗೆ ಕಿರುಪ್ರವಾಸ ಕೈಗೊಳ್ಳುವಿರಿ.

ಪರಿಹಾರ : ಹಣೆಯಲ್ಲಿ ತಿಲಕ ಇಟ್ಟು ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಆಕಾಶ ನೀಲಿ

ಕನ್ಯಾ

ಸಮಾಜದಲ್ಲಿ ಉನ್ನತ ಸ್ಥಾನ ಲಭಿಸುತ್ತದೆ. ಕುಟುಂಬದ ಒಳಿತಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗುವಿರಿ. ಕುಟುಂಬದಲ್ಲಿ ಪರಸ್ಪರ ಉತ್ತಮ ಸಹಕಾರ ದೊರೆಯಲಿದೆ. ತಂದೆಯ ವ್ಯಾಪಾರ ವ್ಯವಹಾರದಲ್ಲಿ ಸಹಕಾರ ನೀಡುವಿರಿ. ವಿದ್ಯಾರ್ಥಿಗಳಿಗೆ ಆಧ್ಯಾತ್ಮಿಕತೆ ಬಗ್ಗೆ ಆಸಕ್ತಿ ಮೂಡುತ್ತದೆ. ಧಾರ್ಮಿಕ ಜ್ಞಾನ ಪಡೆದುಕೊಳ್ಳುವ ತವಕವಿರುತ್ತದೆ. ಸಾರ್ವಜನಿಕ ಸೇವಾ ಕೇಂದ್ರಗಳ ನಿರ್ವಹಣೆಯಲ್ಲಿ ಜನಪ್ರಿಯತೆ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಹಣಕಾಸಿನ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ. ಸುಲಭ ಎನಿಸುವ ಕೆಲಸಗಳನ್ನು ಆಯ್ದುಕೊಳ್ಳುವಿರಿ. ಅನಿರೀಕ್ಷಿತ ಧನಲಾಭ ಇರಲಿದೆ. ಗಣ್ಯವ್ಯಕ್ತಿಗಳಿಂದ ಹಣದ ಸಹಾಯ ದೊರೆಯುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ .

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು ಉತ್ತರ

ಅದೃಷ್ಟದ ಬಣ್ಣ: ಕೆಂಪು

ತುಲಾ

ನ್ಯಾಯ ನೀತಿಯನ್ನು ಗೌರವಿಸುವಿರಿ. ಧರ್ಮದ ಮಾರ್ಗದಲ್ಲಿ ಸಾಗುವಿರಿ. ನಿಮ್ಮ ಪ್ರಯತ್ನದಿಂದಾಗಿ ಕುಟುಂಬದಲ್ಲಿ ಸಂತೋಷದ ಕ್ಷಣಗಳು ಇರುತ್ತವೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ವರಮಾನ ದೊರೆಯುತ್ತದೆ. ನಿಮ್ಮಲ್ಲಿರುವ ಕ್ರಿಯಾಶೀಲ ವ್ಯಕ್ತಿತ್ವ ಎಲ್ಲರ ಗಮನ ಸೆಳೆಯುತ್ತದೆ. ನೇರ ನಿಷ್ಠುರವಾಗಿ ಮಾತನಾಡುವುದರಿಂದ ವಿರೋಧಿಗಳು ಇರುತ್ತಾರೆ. ಉದ್ಯೋಗದಲ್ಲಿ ನಿಮ್ಮಲ್ಲಿನ ಕರ್ತವ್ಯ ಪ್ರಜ್ಞೆಯನ್ನು ಎಲ್ಲರೂ ಅಭಿನಂದಿಸುತ್ತಾರೆ. ಹಿರಿಯ ಅಧಿಕಾರಿಗಳ ಪ್ರಶಂಸೆ ಪಡೆಯುವಿರಿ. ವಿದ್ಯಾರ್ಥಿಗಳು ಸಹನೆಯಿಂದ ತಮ್ಮ ಗುರಿ ತಲುಪುತ್ತಾರೆ. ರುಚಿಯಾದ ಆಹಾರ ಇಷ್ಟ ಪಡುವಿರಿ. ಪಾಲುಗಾರಿಕೆ ವ್ಯಾಪಾರದಲ್ಲಿ ಆಸಕ್ತಿ ಕಳೆದುಕೊಳ್ಳುವಿರಿ. ಧಾರ್ಮಿಕ ಕೇಂದ್ರಕ್ಕೆ ಹಣದ ಸಹಾಯ ಮಾಡುವಿರಿ

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ: ಎಲೆ ಹಸಿರು

ವೃಶ್ಚಿಕ

ಕುಟುಂಬದಲ್ಲಿ ಹಣಕಾಸಿನ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಲಿದೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚುತ್ತದೆ. ವ್ಯಾಪಾರ ವ್ಯವಹಾರದಲ್ಲಿ ದಿಢೀರನೆ ಚೇತರಿಕೆ ಕಂಡುಬರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಇದ್ದ ತೊಂದರೆ ದೂರವಾಗುತ್ತದೆ. ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಬುದ್ಧಿವಂತಿಕೆಯ ತೀರ್ಮಾನವನ್ನುತೆಗೆದುಕೊಳ್ಳುತ್ತಾರೆ. ಸಾಲದ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಬೇಕು. ಮನೆಯಲ್ಲಿ ಧಾರ್ಮಿಕ ಕಾರ್ಯವೊಂದು ನಡೆಯಲಿದೆ. ಆತ್ಮೀಯರ ಆಗಮನ ಮನಸ್ಸಿಗೆ ಸಂತೋಷವನ್ನು ಉಂಟುಮಾಡುತ್ತದೆ. ಮುಂಗೋಪದ ಕಾರಣ ಆತ್ಮೀಯರು ನಿಮ್ಮಿಂದ ದೂರ ಉಳಿಯುತ್ತಾರೆ. ಭೂವ್ಯವಹಾರದಲ್ಲಿ ಲಾಭವಿದೆ. ಚಿನ್ನ ಬೆಳ್ಳಿ ಖರೀದಿಗಾಗಿ ಹಣ ಖರ್ಚು ಮಾಡುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೇಸರಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).