Horoscope Today: ದುಡುಕು ಮಾತಿನಿಂದ ಎಲ್ಲರ ವಿರೋಧ ಕಟ್ಟಿಕೊಳ್ಳುವಿರಿ, ಅವಿವಾಹಿತರಿಗೆ ವಿವಾಹ ಯೋಗ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
27 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (27th May 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(27th May 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಸೋಮವಾರ
ತಿಥಿ: ಚೌತಿ 04.27 ರವರೆಗೂ ಇರುತ್ತದೆ ನಂತರ ಪಂಚಮಿ ಆರಂಭವಾಗುತ್ತದೆ.
ನಕ್ಷತ್ರ: ಪೂರ್ವಾಷಾಢ ನಕ್ಷತ್ರವು 10.12 ರವರೆಗೂ ಇದ್ದು ನಂತರ ಉತ್ತರಾಷಾಢ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ05.52
ಸೂರ್ಯಾಸ್ತ: ಸಂಜೆ 06.40
ರಾಹುಕಾಲ: ಬೆಳಗ್ಗೆ 07.32 ರಿಂದ 09.08
ರಾಶಿಫಲ
ಧನಸ್ಸು
ಕುಟುಂಬದ ಸದಸ್ಯರ ಜೊತೆ ದೂರದ ಊರಿಗೆ ಪ್ರಯಾಣ ಬೆಳೆಸುವಿರಿ. ಉದ್ಯೋಗದಲ್ಲಿ ನಿಧಾನಗತಿಯ ಪ್ರಗತಿ ಕಂಡು ಬರುತ್ತದೆ. ಯಾವುದೇ ವಿಚಾರವಾಗಲೀ ತಾಳ್ಮೆಯಿಂದ ಇರಿ. ವಿದ್ಯಾರ್ಥಿಗಳು ಚಂಚಲ ಮನಸ್ಥಿತಿಯಿಂದ ಕಲಿಕೆಯಲ್ಲಿ ಮುಂದುವರಿಯುತ್ತಾರೆ. ಬೇರೆಯವರಿಗೆ ಅಸಾಧ್ಯವೆನಿಸುವ ಕೆಲಸ ಕಾರ್ಯಗಳನ್ನು ಸುಲಭವಾಗಿ ಮಾಡಬಲ್ಲಿರಿ. ಸಮಯಕ್ಕೆ ತಕ್ಕಂತೆ ತೆಗೆದುಕೊಳ್ಳುವ ಬುದ್ಧಿವಂತಿಕೆಯ ನಿರ್ಧಾರಗಳನ್ನು ತೊಂದರೆಯಿಂದ ಪಾರು ಮಾಡುತ್ತದೆ. ಗೃಹಿಣಿಯರಿಗೆ ಉದೋಗ ಲಭಿಸುವ ಸಾಧ್ಯತೆ ಇದೆ. ಸಂತಾನ ಲಾಭವಿದೆ. ಹಣ ಕಾಸಿನ ವ್ಯವಹಾರದ ವೇಳೆ ಎಚ್ಚರಿಕೆಯಿಂದಿರಿ. ಮನೆಯ ಸುತ್ತ ಮುತ್ತಲಿನ ವಾತಾವರಣವನ್ನು ಶುಚಿಗೊಳಿಸುವಿರಿ.
ಪರಿಹಾರ : ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಮಕರ
ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವ ಕಾರಣ ಕುಟುಂಬದಲ್ಲಿ ಆತಂಕದ ಕ್ಷಣಗಳು ಎದುರಾಗುತ್ತವೆ. ಆರಂಭಿಸಿರುವ ವ್ಯಾಪಾರ ವ್ಯವಹಾರದಲ್ಲಿ ತೊಂದರೆ ಇರುವುದಿಲ್ಲ. ಸಂತಾನ ಲಾಭವಿದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ದಾಂಪತ್ಯದಲ್ಲಿ ಸಂತೋಷಕರ ವಾತಾವರಣ ಉಂಟಾಗುತ್ತದೆ. ಜನರ ಉಪಯೋಗಕ್ಕಾಗಿ ಅನೇಕ ಕೆಲಸಗಳನ್ನು ಮಾಡುವಿರಿ. ವಿದ್ಯಾರ್ಥಿಗಳು ಶುದ್ದಮನಸ್ಸಿನಿಂದ ಕೆಲಸ ನಿರ್ವಹಿಸುತ್ತಾರೆ. ನಿಮ್ಮಲ್ಲಿನ ಕಾರ್ಯತತ್ಪರತೆ ಎಲ್ಲರ ಪ್ರಶಂಸೆ ವ್ಯಕ್ತವಾಗುತ್ತದೆ. ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು ಪ್ರಯತ್ನಿಸುವಿರಿ. ಒಳ್ಳೆಯ ಮನಸ್ಸಿದ್ದರೂ ದುಡುಕಿನ ಮಾತಿನಿಂದಾಗಿ ವಿರೋಧ ಎದುರಿಸುವಿರಿ. ಅನಾವಶ್ಯಕವಾದ ಖರ್ಚು ವೆಚ್ಚಗಳನ್ನು ಕಡಿತಗೊಳಿಸುವಿರಿ.
ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಕೆಂಪು
ಕುಂಭ
ಕುಟುಂಬದಲ್ಲಿ ಎದುರಾದ ಮನಸ್ತಾಪವು ದೂರವಾಗುತ್ತದೆ. ಹಣಕಾಸಿನ ವಿಚಾರದಲ್ಲಿ ದಿಟ್ಟ ನಿಲುವನ್ನು ತೆಗೆದುಕೊಳ್ಳುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಯತ್ನಕ್ಕೆ ತಕ್ಕ ಫಲ ದೊರೆಯುತ್ತದೆ. ವಿದ್ಯಾರ್ಥಿಗಳು ಕ್ರಿಯಾಶೀಲತೆಯಿಂದ ಎಲ್ಲರ ಗಮನ ಸೆಳೆಯುತ್ತಾರೆ. ಪರರ ಕಷ್ಟಕ್ಕೆ ಸಹಾಯ ಮಾಡುವಿರಿ. ಬೇಸರದಿಂದ ಉದ್ಯೋಗವನ್ನು ಬದಲಾಯಿಸುವಿರಿ. ಕೃಷಿ ಉತ್ಪನ್ನಗಳ ಮಾರಾಟದಲ್ಲಿ ಲಾಭವಿರುತ್ತದೆ. ವಿವಾಹವು ನಿಮ್ಮ ನೇತೃತ್ವದಲ್ಲಿ ನಡೆಯಲಿದೆ. ನಿಮ್ಮ ನೆರೆಹೊರೆಯವರಿಂದ ಉತ್ತಮ ಅನುಕೂಲತೆಯನ್ನು ಗಳಿಸುವಿರಿ. ಅನಿರೀಕ್ಷಿತ ಧನಲಾಭವಿದೆ. ದೂರದ ಸಂಬಂಧಿಕರು ಮನೆಗೆ ಬೇಟಿ ನೀಡುತ್ತಾರೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ. ಯಾವುದೇ ನಿರೀಕ್ಷೆ ಇಲ್ಲದೆ ಬೇರೆಯವರಿಗೆ ಸಹಾಯ ಮಾಡುವಿರಿ.
ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಹಳದಿ
ಮೀನ
ನಿಮ್ಮಲ್ಲಿನ ಪ್ರೀತಿ ವಿಶ್ವಾಸ ಎಲ್ಲರಿಗೂ ಸ್ಪೂರ್ತಿಯಾಗುತ್ತದೆ. ಮಹಿಳೆಯರು ಸಮಾಜದಲ್ಲಿ ವಿಶೇಷ ಗೌರವ ಗಳಿಸುತ್ತಾರೆ. ನಿಮ್ಮ ತಂದೆಯವರು ಪ್ರಯತ್ನ ಪೂರ್ವಕವಾಗಿ ಉದ್ಯೋಗ ಬದಲಾಯಿಸುವರು. ಮಕ್ಕಳ ಬಗ್ಗೆ ವಿಶೇಷವಾದ ಪ್ರೀತಿ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ. ರಕ್ತದ ಒತ್ತಡದ ಸಮಸ್ಯೆ ಇದ್ದಲ್ಲಿ ಎಚ್ಚರಿಕೆಯಿಂದಿರಿ. ವಿದ್ಯಾರ್ಥಿಗಳು ಬುದ್ಧಿವಂತಿಕೆಯಿಂದ ತಮ್ಮ ಕಾರ್ಯ ಸಾಧಿಸುತ್ತಾರೆ. ನಿಮ್ಮ ಆಕರ್ಷಕ ಮಾತಿನಿಂದ ಎಲ್ಲರ ಮನ ಗೆಲ್ಲುವಿರಿ. ಆದಾಯ ಹೆಚ್ಚಿದರೂ ಉಳಿತಾಯ ಮಾಡಲು ಮನಸ್ಸು ಮಾಡುವುದಿಲ್ಲ. ಅವಿವಾಹಿತರಿಗೆ ವಿವಾಹದ ಮಾತುಕತೆ ಆಗಲಿದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಇರುತ್ತದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.
ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ನಸು ಗೆಂಪು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
