ಕನ್ನಡ ಸುದ್ದಿ  /  Astrology  /  Horoscope Today Astrology Prediction 28 February 2024 Leo Virgo Libra Scorpio Daily Horoscope Sts

Horoscope Today: ಸ್ಥಿರಾಸ್ತಿ ಕೊಳ್ಳುವಿರಿ, ಸಂಸಾರದಲ್ಲಿ ಹಣಕಾಸಿನ ವಿವಾದ ಎದುರಾಗಲಿದೆ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಫೆಬ್ರವರಿ 28, ಬುಧವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (28 February 2024 Daily Horoscope).

 ಫೆಬ್ರವರಿ 28ರ ದಿನಭವಿಷ್ಯ
ಫೆಬ್ರವರಿ 28ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ( February 28 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಬುಧವಾರ

ತಿಥಿ : ಚೌತಿ ರಾ.12.44 ರವರೆಗು ಇದ್ದು ಆನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ : ಚಿತ್ತೆ ನಕ್ಷತ್ರವು ದಿನ ಪೂರ್ತಿ ಇರುತ್ತದೆ.

ಸೂರ್ಯೋದಯ: ಬೆ.06.36

ಸೂರ್ಯಾಸ್ತ: ಸ.06.27

ರಾಹುಕಾಲ : ಮ.12.00ರಿಂದ ಮ.01.30

ಇಂದಿನ ವಿಶೇಷ : ಶ್ರೀ ಸಂಕಷ್ಟಹರ ಗಣಪತಿ ವ್ರತ

ರಾಶಿ ಫಲಗಳು

ಸಿಂಹ

ಕುಟುಂಬದ ಸದಸ್ಯರ ನಡುವೆ ಹಣಕಾಸಿನ ವಿಚಾರದಲ್ಲಿ ಭಿನಾಭಿಪ್ರಾಯ ಇರಲಿದೆ. ಸಹೋದ್ಯೋಗಿಗಳ ಜೊತೆಯಲ್ಲಿ ಉದ್ಯೋಗದ ಮೇಲೆ ವಿದೇಶಕ್ಕೆ ತೆರಳುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ಬಿಗುವಿನ ವಾತಾವರಣ ಇರುತ್ತದೆ. ವಿದ್ಯಾರ್ಥಿಗಳು ಹಠದಿಂದಾಗಿ ವ್ಯಾಸಂಗದಲ್ಲಿ ಮುಂದಿರುತ್ತಾರೆ. ಸರ್ಕಾರದ ಸಹಯೋಗದಲ್ಲಿ ದಂಪತಿಗಳ ಸಂಧಾನ ಕೇಂದ್ರವನ್ನು ಆರಂಭಿಸುವಿರಿ. ಭೂವ್ಯವಹಾರದಲ್ಲಿ ಉತ್ತಮ ಲಾಭಾಂಶ ಇರುತ್ತದೆ. ಕಣ್ಣಿನ ದೋಷ ಇರುತ್ತದೆ. ವಾಸಸ್ಥಳ ಬದಲಿಸುವ ಸಾಧ್ಯತೆ ಇರುತ್ತದೆ. ದೂರದ ಸಂಬಂಧಿಗಳ ವಿವಾಹಕ್ಕೆ ಹಣದ ಸಹಾಯ ಮಾಡುವಿರಿ. ಪ್ರಾಣಿಗಳಿಂದ ತೊಂದರೆ ಆಗಬಹುದು ಎಚ್ಚರ. ಸಾಲದ ವ್ಯವಹಾರದಲ್ಲಿ ಮನಸ್ತಾಪ ಉಂಟಾಗಬಹುದು.

ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಕನ್ಯಾ

ಸ್ಥಿರವಾದ ಮನಸ್ಸಿನ ಕೊರತೆ ಕುಟುಂಬದ ಶಾಂತಿಯನ್ನು ಕದಡುತ್ತದೆ. ಉದ್ಯೋಗದಲ್ಲಿ ವಿವಾದವೊಂದು ಕಾನೂನಿನ ಸಹಾಯದಿಂದ ಬಗೆಹರಿಯುತ್ತದೆ. ಸಂಗಾತಿಯ ಸಹಾಯದಿಂದ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ಪೋಷಕರ ಸಹಕಾರದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಉನ್ನತ ಮಟ್ಟ ತಲ್ಲುಪುವರು. ತಂದೆಯ ಸಹಾಯದಿಂದ ಹುಟ್ಟೂರಲ್ಲಿ ಸ್ಥಿರಾಸ್ತಿಯನ್ನು ಕೊಳ್ಳುವಿರಿ. ಸೋದರರ ನಡುವೆ ಉತ್ತಮ ಹೊಂದಾಣಿಕೆ ಇರುತ್ತದೆ. ಹೆಚ್ಚಿನ ಆದಾಯಕ್ಕಾಗಿ ಸಣ್ಣಪ್ರಮಾಣದ ವ್ಯಾಪಾರವನ್ನು ಆರಂಭಿಸುವಿರಿ. ಸೋದರಿಗೆ ವಿಶೇಷವಾದ ಐಶ್ವರ್ಯ ದೊರೆಯುತ್ತದೆ. ಆತ್ಮೀಯರೊಂದಿಗೆ ಹಣದ ವಿಚಾರದಲ್ಲಿ ಮನಸ್ತಾಪ ಉಂಟಾಗುತ್ತದೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ತುಲಾ

ವಿಶ್ರಾಂತಿ ಇಲ್ಲದೆ ಕೆಲಸವನ್ನು ಮಾಡುವಿರಿ. ಕುಟುಂಬದಲ್ಲೆ ಅವಿಶ್ವಾಸ ತುಂಬಿರುತ್ತದೆ. ಅವಿವಾಹಿತರಿಗೆ ವಿವಾಹಯೋಗವಿದೆ. ಉದ್ಯೋಗದಲ್ಲಿ ಆತಂಕದ ಪರಿಸ್ಥಿತಿ ಇದ್ದರೂ ತೊಂದರೆ ಆಗದು. ಅವಶ್ಯಕತೆ ಇದ್ದಲ್ಲಿ ವೃತ್ತಿಯನ್ನು ಬದಲಿಸಬಹುದು. ವಿದ್ಯಾರ್ಥಿಗಳು ಅತಿಯಾದ ಆತ್ಮವಿಶ್ವಾಸದಿಂದ ತಪ್ಪು ಮಾಡಬಹುದು. ಸ್ನೇಹಿತರ ಜೊತೆಯಲ್ಲಿ ಉತ್ತಮ ಸಂಬಂಧವಿರುತ್ತದೆ. ಲೆಕ್ಕಾಚಾರ ಸಂಸ್ಥೆಯ ನಿರ್ವಹಣೆಯ ಜವಾಬ್ದಾರಿ ದೊರೆಯಲಿದೆ. ಸಂಸಾರದಲ್ಲಿ ಹಣಕಾಸಿನ ವಿವಾದವೊಂದು ಎದುರಾಗುತ್ತದೆ. ಪಾಲುಗಾರಿಕೆಯ ವ್ಯವಹಾರ ಒಳ್ಳೆಯದು. ಭೂವ್ಯವಹಾರ ಬೇಡ. ಮನೆಯ ನವೀಕರಣ ಮಾಡಲಿರುವಿರಿ. ವಾಹನವನ್ನು ಬದಲಾಯಿಸುವಿರಿ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಳದಿ ಬಣ್ಣ

ವೃಶ್ಚಿಕ

ಯಾರ ಮಾತನ್ನೂ ಸುಲಭವಾಗಿ ಒಪ್ಪುವುದಿಲ್ಲ. ಸ್ವತಂತ್ರವಾಗಿ ಕುಟುಂಬದ ಕೆಲಸ ಕಾರ್ಯಗಳನ್ನು ಮಾಡುವಿರಿ. ಮಾನಸಿಕ ನೆಮ್ಮದಿ ಇರುವುದಿಲ್ಲ. ಸಣ್ಣ ಪುಟ್ಟ ವಿಚಾರಗಳನ್ನು ಅತಿ ಗಂಭೀರವಾಗಿ ಪರಿಗಣಿಸುವಿರಿ. ಉದ್ಯೋಗದಲ್ಲಿ ಬೇಸರದ ಸನ್ನಿವೇಶವನ್ನು ಎದುರಿಸಬೇಕಾಗುತ್ತದೆ. ವಿದೇಶದಲ್ಲಿ ಉದ್ಯೋಗ ದೊರೆಯಬಹುದು. ದಂಪತಿಗಳ ನಡುವೆ ಹೊಂದಾಣಿಕೆಯ ಕೊರತೆ ಇರುತ್ತದೆ. ನಿಮ್ಮ ತಪ್ಪಿಗೆ ಬೇರೆಯವರನ್ನು ದೂರುವಿರಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ. ವಿದ್ಯಾರ್ಥಿಗಳು ಮನಸ್ಸಿಟ್ಟು ಓದಿನಲ್ಲಿ ತೊಡಗಬೇಕಾಗುತ್ತದೆ. ಪಾಲುಗಾರಿಕೆಯ ವ್ಯವಹಾರದಲ್ಲಿ ಉತ್ತಮ ಆದಾಯ ಇರುತ್ತದೆ. ಪಶುಸಂಗೋಪನೆಯಲ್ಲಿ ಆಸಕ್ತಿ ಮೂಡಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಸಿರು ಬಣ್ಣ

---------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).