Horoscope Today: ಉದ್ಯೋಗದಲ್ಲಿ ಹೊಸ ಪ್ರಯೋಗ, ಆರ್ಥಿಕ ಭದ್ರತೆ ಹೆಚ್ಚಾಗುತ್ತೆ ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಉದ್ಯೋಗದಲ್ಲಿ ಹೊಸ ಪ್ರಯೋಗ, ಆರ್ಥಿಕ ಭದ್ರತೆ ಹೆಚ್ಚಾಗುತ್ತೆ ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

Horoscope Today: ಉದ್ಯೋಗದಲ್ಲಿ ಹೊಸ ಪ್ರಯೋಗ, ಆರ್ಥಿಕ ಭದ್ರತೆ ಹೆಚ್ಚಾಗುತ್ತೆ ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

28 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (28th June 2024 Horoscope).

ಧನು, ಮಕರ, ಕುಂಭ, ಮೀನ ರಾಶಿಯ ದಿನ ಭವಿಷ್ಯ ತಿಳಿಯಿರಿ
ಧನು, ಮಕರ, ಕುಂಭ, ಮೀನ ರಾಶಿಯ ದಿನ ಭವಿಷ್ಯ ತಿಳಿಯಿರಿ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (28th June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಶುಕ್ರವಾರ

ತಿಥಿ: ಸಸ್ತಮಿ ಸಾ. 05.58 ರವರೆಗು ಇದ್ದು ಆನಂತರ ಅಷ್ಟಮಿ ಆರಂಭವಾಗುತ್ತದೆ.

ನಕ್ಷತ್ರ: ಪೂರ್ವಾಭಾದ್ರ ನಕ್ಷತ್ರವು ಹ. 12.17 ರವರೆಗೆ ಇದ್ದು ಆನಂತರ ಉತ್ತರಾಭಾದ್ರ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.55

ಸೂರ್ಯಾಸ್ತ: ಸಂಜೆ 06.48

ರಾಹುಕಾಲ: ಬೆ. 10.50 ರಿಂದ ಹ. 12.26

ಧನಸ್ಸು ರಾಶಿ

ಆತ್ಮೀಯರ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವಿರಿ. ದೀರ್ಘಕಾಲದ ಯೋಜನೆಗಳಲ್ಲಿ ಹಣವನ್ನು ಹೂಡುವಿರಿ. ಸ್ಟಾಕ್‌ ಮತ್ತು ಷೇರ್‌ಗಳಲ್ಲಿ ಉತ್ತಮ ಆದಾಯ ಗಳಿಸುವಿರಿ. ಆರೋಗ್ಯದ ಬಗ್ಗೆ ಗಮನ ಇರಲಿ. ಕುಟುಂಬದಲ್ಲಿ ಎಲ್ಲರ ಜೊತೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಆಪತ್ಕಾಲದಲ್ಲಿ ಸಂಗಾತಿಯ ಸಹಾಯ ಸಹಕಾರ ದೊರೆಯುತ್ತದೆ. ವ್ಯಾಪಾರೋದ್ಯಮಿಗಳಿಗೆ ಹೆಚ್ಚಿನ ವರಮಾನ ದೊರೆಯಲಿದೆ. ಉದ್ಯೋಗದ ಸಲುವಾಗಿ ಪ್ರವಾಸ ಮಾಡಬೇಕಾಗುತ್ತದೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಸಕಾರಾತ್ಮಕ ಫಲಿತಾಂಶವನ್ನು ಪಡೆಯುವಿರಿ. ಕುಟುಂಬದ ಅಗತ್ಯಗಳಿಗಾಗಿ ಹೆಚ್ಚಿನ ಪ್ರಯತ್ನ ಮತ್ತು ಹಣ ಬೇಕಾಗುತ್ತದೆ. ನಿಮ್ಮಲ್ಲಿನ ಮರೆವಿನ ಗುಣವನ್ನು ಕೆಲವರು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುವರು. ಸಮಯವನ್ನು ಅರಿತು ನಡೆಯುವುದು ಒಳ್ಳೆಯದು.

ಪರಿಹಾರ: ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಮಕರ ರಾಶಿ

ಉತ್ತಮ ಆರೋಗ್ಯಗಳಿಸಲು ಆಹಾರ ಕ್ರಮವನ್ನು ಬದಲಿಸಿ, ವ್ಯಾಯಾಮದ ಹಾದಿ ಹಿಡಿಯುವಿರಿ. ನಿಮ್ಮ ಅಭ್ಯುದಯ ಬುದ್ಧಿವಂತಿಕೆಯ ಫಲವಾಗಿ ಆರ್ಥಿಕ ಭದ್ರತೆ ಹೆಚ್ಚುತ್ತದೆ. ಮಕ್ಕಳ ಜೊತೆಯಲ್ಲಿ ಸಾಮಾಜಿಕ ಚಟುವಟಿಕೆಗಳ್ಳಿ ಪಾಲ್ಗೊಳ್ಳುವಿರಿ. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಅನುಕೂಲ ದೊರೆಯುತ್ತದೆ. ಕುಟುಂಬದ ಹಿರಿಯರ ಪ್ರೀತಿ ವಿಶ್ವಾಸ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಜೀವನದಲ್ಲಿ ಅದ್ಭುತವಾದ ಬದಲಾವಣೆಗಳು ಎದುರಾಗಲಿದೆ. ವ್ಯಾಪಾರಿಗಳು ಸಾಧ್ಯವಾದಷ್ಟು ಸಾಲದ ವ್ಯವಹಾರದಿಂದ ದೂರ ಉಳಿಯುವುದು ಒಳ್ಳೆಯದು. ಹಣದ ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳನ್ನು ರಹಸ್ಯವಾಗಿ ಇಡುವಿರಿ. ಉತ್ಸಾಹದ ಮಾತುಕತೆಯಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ

ಪರಿಹಾರ: ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ಕುಂಭ ರಾಶಿ

ತಂದೆಯೊಂದಿಗೆ ವಾದ ವಿವಾದ ಮಾಡುವುದನ್ನು ತಪ್ಪಿಸಿ. ಹಣಕಾಸಿನ ಹೊಸ ಹೂಡಿಕೆಯ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಿರಿ. ವಿದ್ಯಾರ್ಥಿಗಳು ವಿಶೇಷವಾದ ಅಧ್ಯಯನದಿಂದ ತಮ್ಮ ಜ್ಞಾನವನ್ನು ಬೆಳೆಸಿಕೊಳ್ಳುತ್ತಾರೆ. ದಿಟ್ಟ ತೀರ್ಮಾನ ಮಾಡಿದ ನಂತರವೇ ಉದ್ಯೋಗದಲ್ಲಿ ಹೊಸ ಪ್ರಯೋಗವನ್ನು ಮಾಡುವಿರಿ. ಮಕ್ಕಳು ನಿಮಗೆ ಕೆಲಸ ಕಾರ್ಯಗಳನ್ನುಮಾಡಲು ಸಹಾಯ ಮಾಡುತ್ತಾರೆ. ಸುದೀರ್ಘಕಾಲದ ಪ್ರಯಾಣದಲ್ಲಿ ಮನದ ನೋವು ಮರೆಯುವಿರಿ. ಸಮಾಜದ ಗಣ್ಯವ್ಯಕ್ತಿಗಳ ಸಂಪರ್ಕಗಳಿಸಲು ಸಾಧ್ಯವಾಗಲಿದೆ ಹೊಸ ತಂತ್ರಗಳಿಗೆ ಹೊಂದಿಕೊಳ್ಳಲೇಬೇಕಾದ ಅನಿವಾರ್ಯತೆ ಉಂಟಾಗಲಿದೆ.

ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಎಲೆಹಸಿರು

ಮೀನ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ನಿಜವಾದ ಆನಂದವನ್ನು ಸವಿಯುವಿರಿ. ಕುಟುಂಬದ ಒಳಿತಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ದರಾಗುವಿರಿ. ಯಾವುದೇ ಪ್ರಮುಖ ತೀರ್ಮಾನವನ್ನು ತೆಗೆದುಕೊಳ್ಳುವ ಮುನ್ನ ಆತ್ಮೀಯರೊಂದಿಗೆ ಚರ್ಚಿಸುವಿರಿ. ಸೋದರರಿಂದ ಆರ್ಥಿಕ ಸಹಾಯ ದೊರೆಯಲಿದೆ. ಕುಟುಂಬದ ಸದಸ್ಯರ ಅಗತ್ಯತೆಗಳನ್ನು ಪೂರೈಸಲು ಪ್ರಯತಿಸುವಿರಿ. ಮಕ್ಕಳ ವಿದ್ಯಾಭ್ಯಾಸದ ಮೇಲೆ ಗಮನ ಹರಿಸುವುದು ಒಳ್ಳೆಯದು. ನಿಮ್ಮ ಜೀವನದಲ್ಲಿನ ಕಹಿ ಘಟನೆಗಳನ್ನು ಮರತು ಸಂತೋಷವಾಗಿರಲು ಪ್ರಯತ್ನಿಸುವಿರಿ. ಜನಸಾಮಾನ್ಯರಿಗಾಗಿ ನಿಮ್ಮಅಮೂಲ್ಯ ಸಮಯವನ್ನು ಮೀಸಲಿಡುವಿರಿ. ದುರುಪಯೋಗಪಡಿಸಿಕೊಳ್ಳಬಹುದು. ಮನರಂಜನಾ ಮಾಧ್ಯಮದಲ್ಲಿ ಹೆಚ್ಚಿನ ಸಮಯವನ್ನು ವ್ಯರ್ಥಮಾಡುವಿರಿ.

ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.