ಕನ್ನಡ ಸುದ್ದಿ  /  Astrology  /  Horoscope Today Astrology Prediction 28th March 2024 Leo Virgo Libra Scorpio Daily Horoscope Sts

Horoscope Today: ವಿಶೇಷ ವ್ಯಕ್ತಿಯೊಬ್ಬರನ್ನು ಭೇಟಿ ಮಾಡಲಿದ್ದೀರಿ, ಆರೋಗ್ಯದ ಕಡೆ ಗಮನ ವಹಿಸಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

28 ಮಾರ್ಚ್‌ 2024, ಗುರುವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (28th March 2024 Daily Horoscope).

ಮಾರ್ಚ್‌ 28ರ ದಿನಭವಿಷ್ಯ ಸಿಂಹದಿಂದ ವೃಶ್ಚಿಕ ರಾಶಿವರೆಗೆ
ಮಾರ್ಚ್‌ 28ರ ದಿನಭವಿಷ್ಯ ಸಿಂಹದಿಂದ ವೃಶ್ಚಿಕ ರಾಶಿವರೆಗೆ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (28th March 2024 Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಗುರುವಾರ,

ತಿಥಿ: ತದಿಗೆ ಬೆಳಿಗ್ಗೆ 4.11 ರವರೆಗೂ ಇರುತ್ತದೆ. ಅನಂತರ ಚೌತಿ ಆರಂಭವಾಗಲಿದೆ.

ನಕ್ಷತ್ರ: ಸ್ವಾತಿ ನಕ್ಷತ್ರವು ಬೆಳಿಗ್ಗೆ 4.14 ರವರೆಗೂ ಇರುತ್ತದೆ. ಅನಂತರ ವಿಶಾಖ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಿಗ್ಗೆ 6.19

ಸೂರ್ಯಾಸ್ತ: ಸಂಜೆ 6.30

ರಾಹುಕಾಲ: ಬೆಳಿಗ್ಗೆ 1.30 ರಿಂದ ಬೆಳಿಗ್ಗೆ 3.00

ಸಿಂಹ

ಶಾಂತಿಯಿಂದ ವ್ಯವಹರಿಸಿದಲ್ಲಿ ಕುಟುಂಬದಲ್ಲಿ ಒಮ್ಮತ ಮೂಡುತ್ತದೆ. ಉದ್ಯೋಗದಲ್ಲಿ ವಿಭಿನ್ನ ವ್ಯಕ್ತಿತ್ವದಿಂದ ಎಲ್ಲರ ಮನ ಗೆಲ್ಲುವಿರಿ. ವ್ಯಾಪಾರ ವ್ಯವಹಾರದಲ್ಲಿ ಯಾವುದೇ ತೊಂದರೆ ಕಂಡುಬರುವುದಿಲ್ಲ. ಹಣಕಾಸಿನ ವಿಚಾರದಲ್ಲಿ ಉದ್ವೇಗದಿಂದ ವರ್ತಿಸುವಿರಿ. ಅನಾವಶ್ಯಕವಾದ ಚಿಂತೆ ಎಲ್ಲರ ಬೇಸರಕ್ಕೆ ಕಾರಣರಾಗುತ್ತದೆ. ಮಕ್ಕಳ ಆಗಮನ ಸಂತೋಷ ತುಂಬಲಿದೆ. ಹೊಸ ಆರ್ಥಿಕ ಯೋಜನೆಗಳನ್ನು ರೂಪಿಸುವಿರಿ. ಸಾಧಕ ಬಾಧಕಗಳನ್ನು ವಿವೇಚಿಸಿ ಹೊಸ ಕೆಲಸವನ್ನು ಆರಂಭಿಸುವಿರಿ. ಮಕ್ಕಳು ಸಹಾಯ ಸಹಕಾರ ದೊರೆಯುತ್ತದೆ. ವಿಶೇಷಾರ್ಹ ವ್ಯಕ್ತಿಯನ್ನು ಸಂಧಿಸುತ್ತೀರಿ. ಸಂಗಾತಿಯಿಂದ ಆಶ್ಚರ್ಯಕರ ವಿಚಾರವೊಂದು ತಿಳಿದುಬರಲಿದೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಹಸಿರುಬಣ್ಣ

ಕನ್ಯಾ

ನೆಮ್ಮದಿ ಇರದ ಕಾರಣ ಕುಟುಂಬದಲ್ಲಿ ಮೌನ ನೆಲೆಸಿರುತ್ತದೆ. ಉದ್ಯೋಗದಲ್ಲಿ ಏಕಾಂಗಿ ಎಂಬ ಭಾವನೆ ಮೂಡಲಿದೆ. ಮಾನಸಿಕ ನೆಮ್ಮದಿ ಗಳಿಸಲು ಧ್ಯಾನದ ಮಾರ್ಗ ಅನುಸರಿಸುವಿರಿ. ಉದ್ಯೋಗದಲ್ಲಿನ ಪ್ರಗತಿಗೆ ಸ್ಥಿರವಲ್ಲದ ಮನಸ್ಸು ಅಡ್ಡವಾಗಲಿದೆ. ಹೈನು ಉದ್ಯಮದ ಸಂಸ್ಥೆಯಲ್ಲಿ ಪಾಲುಗಾರಿಕೆ ಲಾಭವನ್ನು ಪಡೆಯುವಿರಿ. ವಿದ್ಯಾರ್ಥಿಗಳು ಸಹಪಾಠಿಗಳಿಗೆ ಸಹಾಯ ಮಾಡುತ್ತಾರೆ. ಬಿಡುವಿನ ವೇಳೆಯಲ್ಲಿ ಸಮಾಜಸೇವೆಯಲ್ಲಿ ತೊಡಗುವಿರಿ. ಸಮಾಜದಲ್ಲಿ ಪ್ರಮುಖ ಸ್ಥಾನವನ್ನು ಗಳಿಸುವಿರಿ. ಅಪೂರ್ಣಗೊಂಡ ಯೋಜನೆಗಳನ್ನು ಪೂರ್ಣಗೊಳಿಸುವಿರಿ. ಮಕ್ಕಳ ಮನರಂಜನೆಗೆ ಪ್ರಾಮುಖ್ಯ ನೀಡುವಿರಿ. ಒಳ್ಳೆಯ ಮಾನವತೆಗೆ ಉದಾಹರಣೆ ಆಗುವಿರಿ. ಆರೋಗ್ಯದ ಕಡೆ ಎಚ್ಚರಿಕೆ ಇರಲಿ

ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ ಬಣ್ಣ

ತುಲಾ

ಕುಟುಂಬದಲ್ಲಿ ಅನಾವಶ್ಯಕ ಚಿಂತೆ ಇರುತ್ತದೆ. ಉದ್ಯೋಗದಲ್ಲಿ ಉತ್ತಮ ಬದಲಾವಣೆಗಳು ಇರುವ ಕಾರಣ ಚಿಂತಿಸುವ ಅಗತ್ಯವಿಲ್ಲ. ವ್ಯಾಪಾರ ವ್ಯವಹಾರದಲ್ಲಿ ಅಭಿವೃದ್ಧಿ ಇರುತ್ತದೆ. ವಿದ್ಯಾರ್ಥಿಗಳ ನೈಜ ಸ್ವಭಾವ ಎಲ್ಲರ ಮನಸ್ಸನ್ನು ಗೆಲ್ಲುತ್ತದೆ . ಸ್ಟಾಕ್‌ ಮತ್ತು ಷೇರಿನ ವ್ಯವಹಾರದಲ್ಲಿ ಹೂಡಿಕೆ ಮಾಡುವ ವೇಳೆ ಆತ್ಮೀಯರ ಸಲಹೆ ಪಡೆಯಿರಿ. ಸಂತೋಷಕೂಟ ನಡೆಸಲು ಯೋಜನೆ ರೂಪಿಸುವಿರಿ. ಮನಗೆದ್ದವರ ಜೊತೆ ಪ್ರವಾಸಕ್ಕೆ ತೆರಳುವಿರಿ. ಅಧಿಕವಾದ ಕೆಲಸದ ನಡುವೆಯೂ ಮನರಂಜನೆಯತ್ತ ಗಮನ ಹರಿಸುವಿರಿ. ಅವಿವಾಹಿತರಿಗೆ ವಿವಾಹದ ಮಾತುಕತೆ ನಡೆಯುತ್ತದೆ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ. ಸಾಲದ ವ್ಯವಹಾರದಲ್ಲಿ ತೊಂದರೆ ಎದುರಾಗಬಹುದು.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ವೃಶ್ಚಿಕ

ಕುಟುಂಬದ ಜವಾಬ್ದಾರಿಯು ವಿಶ್ರಾಂತಿ ಇಲ್ಲದಂತೆ ಮಾಡಲಿದೆ. ಹಿರಿಯರ ಮಾರ್ಗದರ್ಶನ ದೊರೆಯುತ್ತದೆ. ಆತ್ಮವಿಶ್ವಾಸ ಹೆಚ್ಚಲಿದೆ. ಹಣಕಾಸಿನ ವಿಚಾರದಲ್ಲಿ ಸಂದಿಗ್ಧತೆಗೆ ಸಿಲುಕುವಿರಿ. ಉದ್ಯೋಗದಲ್ಲಿನ ತಪ್ಪುಗ್ರಹಿಕೆಯನ್ನು ಸರಿಪಡಿಸುವಿರಿ. ವಿದ್ಯಾರ್ಥಿಗಳು ಸೋಲು ಗೆಲುವನ್ನುಕ್ರೀಡಾಸ್ಪೂರ್ತಿಯಿಂದ ಎದುರಿಸಬಲ್ಲರು. ವ್ಯಾಪಾರ ವ್ಯವಹಾರದಲ್ಲಿ ಕುಟುಂಬದ ಹಿರಿಯರು ಬಂಡವಾಳ ಹೂಡಲಿದ್ದಾರೆ. ಪರಿಸ್ಥಿತಿಗೆ ತಕ್ಕಂತೆ ವರ್ತಿಸುವ ಕಾರಣ ವಾದ ವಿವಾದ ಕಂಡುಬಾರದು. ಅತಿಯಾದ ಆಸೆ ಇರುವುದಿಲ್ಲ. ಎಲ್ಲರ ಜೊತೆ ಸಂತೋಷದಿಂದ ಬಾಳುವಿರಿ. ಬೇಸರ ಕಳೆಯಲು ಸಭೆ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಸಂಗಾತಿಯ ಜೊತೆಯಲ್ಲಿ ವಾದ ವಿವಾದಗಳು ಇರಲಿವೆ.

ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆ ನೀಡಿ ಇಂದಿನ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ)