ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಕೋಪ ಹತೋಟಿಯಲ್ಲಿಟ್ಟುಕೊಳ್ಳಬೇಕು, ಉತ್ತಮ ಆದಾಯದಿಂದ ಆರ್ಥಿಕ ಸಮಸ್ಯೆ ದೂರ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಕೋಪ ಹತೋಟಿಯಲ್ಲಿಟ್ಟುಕೊಳ್ಳಬೇಕು, ಉತ್ತಮ ಆದಾಯದಿಂದ ಆರ್ಥಿಕ ಸಮಸ್ಯೆ ದೂರ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

28 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (28th May 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (28th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಮಂಗಳವಾರ

ತಿಥಿ: ಪಂಚಮಿ 02.54 ರವರೆಗೂ ಇರುತ್ತದೆ. ಆನಂತರ ಷಷ್ಠಿ ಆರಂಭವಾಗುತ್ತದೆ.

ನಕ್ಷತ್ರ : ಉತ್ತರಾಷಾಢ ನಕ್ಷತ್ರವು ಬೆಳಗ್ಗೆ 09.29 ರವರೆಗು ಇರುತ್ತದೆ. ಆನಂತರ ಶ್ರವಣ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ05.52

ಸೂರ್ಯಾಸ್ತ: ಸಂಜೆ 06.41

ರಾಹುಕಾಲ: 03.32 ರಿಂದ 05.08

ರಾಶಿಫಲ

ಮೇಷ

ನಿಮ್ಮಲ್ಲಿರುವ ಸೇವಾ ಮನೋಭಾವನೆ ಎಲ್ಲರ ಮೆಚ್ಚುಗೆ ಪಡೆಯುತ್ತದೆ. ಕುಟುಂಬದಲ್ಲಿ ನಿಮ್ಮ ಕಾರ್ಯವಿಧಾನಕ್ಕೆ ಸಹಕಾರ ದೊರೆಯುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಜೊತೆಗೂಡಿ ನಿರ್ದಿಷ್ಠ ಗುರಿ ತಲುಪುವಿರಿ. ಸಮಾಜದಲ್ಲಿ ಗೌರವಯುತ ಸ್ಥಾನ ಲಭಿಸುತ್ತದೆ. ನಿಮ್ಮಲ್ಲಿ ಕೆಟ್ಟ ಹವ್ಯಾಸಗಳಿದ್ದರೆ ಅದನ್ನು ಮರೆತು ಬಾಳುವಿರಿ. ನೀವು ಇಷ್ಟ ಪಡುವ ಬೆಲೆ ಬಾಳುವ ವಸ್ತುವೊಂದು ಕಳೆದುಹೋಗಬಹುದು. ಕುಟುಂಬದ ವಿದ್ಯಾರ್ಥಿಗಳ ಮನದಾಳವನ್ನು ಅರಿತು ನಡೆವ ಅವಶ್ಯಕತೆ ಇದೆ. ಮಕ್ಕಳ ಬೇಡಿಕೆಗಳ ಈಡೇರಿಸಲು ಹೆಚ್ಚಿನ ಹಣ ವೆಚ್ಚವಾಗಲಿದೆ. ಸಂಗಾತಿಗೆ ನಿಮ್ಮ ಬಗ್ಗೆ ಬೇಸರ ಉಂಟಾಗುತ್ತದೆ. ಕೋಪವನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸಿ.

ಪರಿಹಾರ : ಬೆಲ್ಲದಿಂದ ಮಾಡಿದ ಆಹಾರ ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಸಿರು

ವೃಷಭ

ಅತಿ ಮುಖ್ಯವಾದ ಕೆಲಸಗಳನ್ನು ಪೂರ್ಣಗೊಳಿಸುವಿರಿ. ನಿಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಪ್ರಯತ್ನಿಸುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿ ಉಳಿಸಲು ಸಫಲರಾಗುವಿರಿ. ಸ್ವಂತ ಕೆಲಸಕಾರ್ಯಗಳಿಗೆ ಮೊದಲ ಆದ್ಯತೆ ನೀಡುವಿರಿ. ಸಂಗಾತಿಯ ಜೊತೆ ಇದ್ದ ವಿರಸ ಮರೆಯಾಗುತ್ತದೆ. ಉದ್ಯೋಗದಲ್ಲಿ ವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಕುಟುಂಬದಲ್ಲಿನ ಹಿರಿಯರಿಗೆ ವಿಶ್ರಾಂತಿಯ ಅವಶ್ಯಕತೆ ಇದೆ. ಉತ್ತಮ ಆದಾಯದಿಂದ ನಿಮ್ಮ ಸಮಸ್ಯೆಗಳು ದೂರವಾಗಲಿವೆ. ಕುಟುಂಬದಲ್ಲಿನ ಮಕ್ಕಳ ಅನಾರೋಗ್ಯ ಚಿಂತೆಗೆ ಕಾರಣವಾಗುತ್ತದೆ. ಆತ್ಮೀಯರ ಬುದ್ಧಿವಾದ ಹೊಸ ಚೈತನ್ಯ ಉಂಟುಮಾಡುತ್ತದೆ. ಇಂದು ಆರಂಭಿಸಿದ ಕೆಲಸ ಕಾರ್ಯಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ. ದಂಪತಿ ನಡುವೆ ಉತ್ತಮ ಅನುಬಂಧ ಇರುತ್ತದೆ.

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ

ಮಿಥುನ

ಉತ್ತಮ ನಿರೀಕ್ಷೆಯಿಂದ ದಿನ ಆರಂಭಿಸುವಿರಿ. ಆತ್ಮವಿಶ್ವಾಸದಿಂದ ಕೆಲಸಕಾರ್ಯಗಳನ್ನು ಆರಂಭಿಸುವಿರಿ. ಕುಟುಂಬದ ಸದಸ್ಯರ ನಡುವೆ ವಿಶ್ವಾಸ ಹೆಚ್ಚುತ್ತದೆ. ವಿದ್ಯಾರ್ಥಿಗಳು ವಿಶ್ವಾಸ ಮತ್ತು ನಮ್ರತೆಯನ್ನು ರೂಢಿಸಿಕೊಳ್ಳುತ್ತಾರೆ. ನಕಾರಾತ್ಮಕ ಭಾವನೆಗಳಿಂದ ದೂರ ಉಳಿಯಲು ಪ್ರಯತ್ನಿಸಿ. ಉಳಿತಾಯ ಮಾಡಿದ ಹಣ ಸದ್ವಿನಿಯೋಗವಾಗುತ್ತದೆ. ಮನಸ್ಸಿನಲ್ಲಿ ಬೇಸರ ಉಂಟಾಗಲಿದೆ. ಸಾರ್ವಜನಿಕ ಸಭೆ ಸಮಾರಂಭದಲ್ಲಿ ಭಾಗವಹಿಸುವಿರಿ. ಹಾಸ್ಯದ ಮನೋಭಾವನೆಯಿಂದ ಜನಮನ ಗೆಲ್ಲುವಿರಿ. ಸಂಗಾತಿಯ ಪ್ರೀತಿ ವಿಶ್ವಾಸ ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ನೇರವಾದ ನಡೆ ನುಡಿ ಸಹೋದ್ಯೋಗಿಗಳ ವಿರೋಧಕ್ಕೆ ಕಾರಣವಾಗುತ್ತದೆ. ಬಿಡುವಿನ ವೇಳೆಯಲ್ಲಿ ಆತ್ಮೀಯರನ್ನು ಭೇಟಿ ಮಾಡುವಿರಿ.

ಪರಿಹಾರ : ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೇರಳೆ

ಕಟಕ

ಅನಾವಶ್ಯಕ ಯೋಚನೆಯಿಂದ ಬೇಸರ ವ್ಯಕ್ತಪಡಿಸುವಿರಿ. ಸ್ವಂತ ಕೆಲಸ ಕಾರ್ಯಗಳಲ್ಲಿ ಅಡ್ಡಿ ಆತಂಕಗಳನ್ನು ಎದುರಿಸುವಿರಿ. ದಾಂಪತ್ಯ ಜೀವನದಲ್ಲಿ ಶಾಂತಿ ನೆಮ್ಮದಿ ತುಂಬಿರುತ್ತದೆ. ನಿಮ್ಮಲ್ಲಿನ ಆಕರ್ಷಕ ಭಾಷಾ ಪ್ರಾವಿಣ್ಯತೆ ಎಲ್ಲರ ಗಮನ ಸೆಳೆಯುತ್ತದೆ. ಆರ್ಥಿಕಸ್ಥಿತಿಯಲ್ಲಿ ಪ್ಲ್ರಗತಿ ಕಂಡುಬರುತ್ತದೆ. ಆತ್ಮೀಯರಿಗೆ ನೀಡಿದ ಹಣವನ್ನು ಮರಳಿ ಪಡೆಯುತ್ತೀರಿ . ಕುಟುಂಬದಲ್ಲಿನ ಬದಲಾವಣೆಗಳು ನಿಮ್ಮಲ್ಲಿ ಅತೃಪ್ತಿ ಉಂಟು ಮಾಡುತ್ತದೆ. ಸಂಗಾತಿಯ ಮನದ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಿರಿ. ನಿಮ್ಮ ಮನದ ಆಶಯಗಳನ್ನು ಯಾರಲ್ಲಿಯೂ ಹೇಳಲು ಸಾಧ್ಯವಾಗುವುದಿಲ್ಲ. ಸ್ತ್ರೀಯರಿಗೆ ಅನಿರೀಕ್ಷಿತವಾಗಿ ಹೊಸ ಉದ್ಯೋಗದ ಅವಕಾಶ ದೊರೆಯುತ್ತದೆ. ಆರೋಗ್ಯದ ಬಗ್ಗೆ ಗಮನವಿರಲಿ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಗುಲಾಬಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).