Horoscope Today: ಅವಿವಾಹಿತರಿಗೆ ಪರಿಚಿತರ ಜೊತೆ ವಿವಾಹ, ಉದ್ಯೋಗ ಬದಲಾವಣೆ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ
ಫೆಬ್ರವರಿ 29, ಗುರುವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (29 February 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ( February 29 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಗುರುವಾರ
ತಿಥಿ : ಪಂಚಮಿ ರಾ.02.08 ರವರೆಗು ಇದ್ದು ಆನಂತರ ಷಷ್ಠಿ ಆರಂಭವಾಗುತ್ತದೆ.
ನಕ್ಷತ್ರ : ಚಿತ್ತೆ ನಕ್ಷತ್ರವು ಬೆ.07.19ರವರೆಗೆ ಇರುತ್ತದೆ. ಆನಂತರ ಸ್ವಾತಿ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆ.06.36
ಸೂರ್ಯಾಸ್ತ: ಸ.06.27
ರಾಹುಕಾಲ : ಮ.01.30 ರಿಂದ ಮ.03.00
ರಾಶಿ ಫಲಗಳು
ಧನಸ್ಸು
ಗುರು ಹಿರಿಯರ ಸಮಕ್ರಮದಲ್ಲಿ ಸಮಾಜದ ನಾಯಕತ್ವ ವಹಿಸುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಬೇರೆಯವರಿಂದ ಸಹಾಯ ನಿರೀಕ್ಷಿಸುವುದಿಲ್ಲ. ಸಹೋದ್ಯೋಗಿಗಳಿಗೆ ಉತ್ತಮ ಸಹಕಾರ ನೀಡುವಿರಿ. ಕ್ಲಿಷ್ಟಕರ ಕೆಲಸವೊಂದನ್ನು ಸುಲಭವಾಗಿ ಮಾಡುವಿರಿ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಲಾಭ ದೊರೆಯುತ್ತವೆ. ನಿಮ್ಮ ನೆರೆಹೊರೆಯವರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಕುಟುಂಬದ ಹಣಕಾಸಿನ ಸಮಸ್ಯೆಯನ್ನು ಬಗೆಹರಿಸುವಿರಿ. ವಿದ್ಯಾರ್ಥಿಗಳು ಆತಂಕದಿಂದಲೇ ತಮ್ಮ ಗುರಿಯನ್ನು ತಲುಪುತ್ತಾರೆ. ಅವಿವಾಹಿತರಿಗೆ ಸಂಬಂಧ ಅಥವಾ ಪರಿಚಿತರ ಜೊತೆ ವಿವಾಹ ಆಗುತ್ತದೆ. ಜನರ ಮಧ್ಯೆ ಮೌನವನ್ನು ವಹಿಸುವಿರಿ.
ಪರಿಹಾರ : ಕೈ ಅಥವ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ
ಮಕರ
ವಯಸ್ಸಿನ ಅಂತರವಿಲ್ಲದೆ ಎಲ್ಲರನ್ನೂ ಗೌರವದಿಂದ ಕಾಣುವಿರಿ. ಕುಟುಂಬದಲ್ಲಿನ ಐಕ್ಯತೆಯನ್ನು ಕಾಪಾಡುವಿರಿ. ಕಷ್ಟ ನಷ್ಟಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಉದ್ಯೋಗದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸನ್ನು ಕಾಣುವಿರಿ. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಸದಾ ಕಾಲ ನಿರತರಾಗಿರುತ್ತಾರೆ. ಅತಿಯಾದ ನಿದ್ದೆ ಬೇಸರಕ್ಕೆ ಕಾರಣವಾಗುತ್ತದೆ. ತಂದೆಗೆ ಸೇರಿದ ಭೂ ವಿವಾದವನ್ನು ಅಂತ್ಯಗೊಳಿಸುವಿರಿ. ಸೋದರಿಗೆ ಉನ್ನತ ಗೌರವ ಮತ್ತು ಐಶ್ವರ್ಯ ಲಭಿಸುತ್ತದೆ. ಹಿಂದಿನ ತಲೆಮಾರಿನ ಆಸ್ತಿಯು ಲಭಿಸುತ್ತದೆ. ಯಂತ್ರೋಪಕರಣಗಳ ವ್ಯಾಪಾರದಲ್ಲಿ ಲಾಭವಿರುತ್ತದೆ. ಕುಟುಂಬದ ಸದಸ್ಯರ ಜೊತೆಯ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ.
ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ರಕ್ತದ ಬಣ್ಣ
ಕುಂಭ
ಸತತ ಪ್ರಯತ್ನದಿಂದ ಕೆಲಸ ಕಾರ್ಯದಲ್ಲಿ ಜಯ ಗಳಿಸುವಿರಿ. ಕುಟುಂಬದಲ್ಲಿ ಪರಸ್ಪರ ವಿರೋಧಾಭಾಸ ಇರುತ್ತದೆ. ಉದ್ಯೋಗದಲ್ಲಿ ಸಾಧಾರಣ ಯಶಸ್ಸು ದೊರೆಯುತ್ತದೆ. ಸಂಗಾತಿಗೆ ಸಂಬಂಧಿಸಿದ ಆಸ್ತಿಯ ವಿವಾದ ಇರುತ್ತದೆ. ವಿದ್ಯಾರ್ಥಿಗಳು ಮನದಲ್ಲಿನ ಆತಂಕದಿಂದ ಹೊರಬಂದು ಓದಿನಲ್ಲಿ ಮಗ್ನರಾಗುವುದು ಒಳ್ಳೆಯದು. ಮನೆತನದಲ್ಲಿಯೇ ವಿಶೇಷವಾದ ಸ್ಥಾನಮಾನ ದೊರೆಯುವುದು. ಸಂಗಾತಿಯ ಸಹಾಯದಿಂದ ವ್ಯಾಪಾರವೊಂದನ್ನು ಆರಂಭಿಸಬಹುದು. ಬೇರೆಯವರ ವಾದ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿ ಸೂಕ್ತ ಸಲಹೆಯನ್ನು ನೀಡುವಿರಿ. ಹೆಚ್ಚಿನ ಪ್ರಯತ್ನದಿಂದ ಸ್ವಂತ ಭೂಮಿಯನ್ನು ಕೊಳ್ಳಬಹುದು. ತಾಯಿಯವರ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.
ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ
ಮೀನ
ಆದಾಯದ ಕೊರತೆ ಇರುವುದಿಲ್ಲ. ಆದರೆ ಹೆಚ್ಚಿನ ಖರ್ಚು ನಿಮ್ಮನ್ನು ಭಾದಿಸುತ್ತದೆ. ಕುಟುಂಬದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಮಾನಸಿಕ ಒತ್ತಡವನ್ನು ಸಹಿಸದೆ ಕೋಪದಿಂದ ವರ್ತಿಸುವಿರಿ. ಉದ್ಯೋಗದಲ್ಲಿ ಯಾವುದೇ ಸಮಸ್ಯೆ ಬಾರದು. ಕೆಲವೊಮ್ಮೆ ಕೆಲಸ ಕಾರ್ಯದಲ್ಲಿ ಆತಂಕದ ಸನ್ನಿವೇಶ ಎದುರಾಗಬಹುದು. ವಿದ್ಯಾರ್ಥಿಗಳಿಗೆ ಸಹಪಾಠಿಗಳ ಸಹಕಾರ ದೊರೆಯಲಿದೆ. ಉತ್ತಮ ಅವಕಾಶ ದೊರೆವ ಕಾರಣ ಉದ್ಯೋಗ ಬದಲಾಯಿಸುವಿರಿ. ಆದಾಯ ಮತ್ತು ಖರ್ಚನ್ನು ಸರಿದೂಗಿಸಲು ಕಡಿಮೆ ಬಂಡವಾಳದ ವ್ಯಾಪಾರ ಒಂದನ್ನು ಆರಂಭಿಸುವಿರಿ. ಆರೋಗ್ಯದಲ್ಲಿ ಸ್ಥಿರತೆ ಇರುತ್ತದೆ. ಆದರೆ ಆತ್ಮವಿಶ್ವಾಸವನ್ನು ಕಳೆದುಕೊಳ್ಳಬೇಡಿರಿ. ಧಾರ್ಮಿಕ ಸಂಸ್ಥೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡುವಿರಿ.
ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಎಲೆ ಹಸಿರು ಬಣ್ಣ
--------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ