Horoscope Today: ಕಷ್ಟದ ಸಮಯದಲ್ಲಿ ಆತ್ಮೀಯರು ಜೊತೆಯಾಗಿ ನಿಲ್ಲಲಿದ್ದಾರೆ, ಕಲಾವಿದರಿಗೆ ವಿಶಿಷ್ಟ ಗೌರವಾದರ ದೊರೆಯಲಿದೆ; ಏ. 29ರ ದಿನ ಭವಿಷ್ಯ
29 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (29th April 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (29th April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಸೋಮವಾರ
ತಿಥಿ: ಷಷ್ಠಿ ರಾತ್ರಿ 04.09 ವರೆಗೂ ಇದ್ದು ನಂತರ ಸಪ್ತಮಿ ಆರಂಭವಾಗುತ್ತದೆ.
ನಕ್ಷತ್ರ : ಪೂರ್ವಾಷಾಢ ನಕ್ಷತ್ರವು ರಾತ್ರಿ 02.11 ವರೆಗು ಇದ್ದು ನಂತರ ಉತ್ತರಾಷಾಢ ನಕ್ಷತ್ರವು ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.58
ಸೂರ್ಯಾಸ್ತ: ಸಂಜೆ 06.33
ರಾಹುಕಾಲ: ಬೆಳಗ್ಗೆ 07.39 ರಿಂದ 09.13
ರಾಶಿಫಲ
ಸಿಂಹ
ಅನಿರೀಕ್ಷಿತವಾಗಿ ಆಸ್ತಿಯ ವಿಚಾರವಾಗಿ ಹುಟ್ಟೂರಿಗೆ ತೆರಳುವಿರಿ. ಸದಾಕಾಲ ಕುಟುಂಬದಲ್ಲಿ ಸಂತೋಷ ಇರಲು ಪ್ರಯತ್ನಿಸುವಿರಿ. ಉದ್ಯೋಗದಲ್ಲಿ ಅಧಿಕಾರಿಗಳ ಜೊತೆಯಲ್ಲಿ ಅನಾವಶ್ಯಕ ವಾದ ವಿವಾದ ಉಂಟಾಗಲಿವೆ. ವ್ಯಾಪಾರ ವ್ಯವಹಾರಗಳಲ್ಲಿ ಯಾವುದೇ ತೊಂದರೆ ಕಾಣುವುದಿಲ್ಲ. ಮಹಿಳಾ ಉದ್ಯಮಿಗಳು ಉತ್ತಮ ಲಾಭ ಗಳಿಸುತ್ತಾರೆ. ವಿದ್ಯಾರ್ಥಿಗಳು ಎಲ್ಲರೊಡನೆ ಪ್ರೀತಿಯಿಂದ ನಡೆದುಕೊಳ್ಳಲಿದ್ದಾರೆ. ತೋಟಗಾರಿಕೆಯಲ್ಲಿ ಆಸಕ್ತಿ ಮೂಡಲಿದೆ. ಅನಾವಶ್ಯಕವಾಗಿ ಹಣಕಾಸಿನ ವಿವಾದದಲ್ಲಿ ಭೇಟಿ ಮಾಡುವಿರಿ.
ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ನಸುಗೆಂಪು
ಕನ್ಯಾ
ಕುಟುಂಬದ ಕೆಲಸ ಕಾರ್ಯಗಳು ಅಡ್ಡಿ ಇಲ್ಲದೆ ಸಾಗಲಿವೆ. ನೀವಿರುವ ಕಡೆ ಸಂತೋಷದ ವಾತಾವರಣವಿರುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಜೊತೆಯಲ್ಲಿ ವಿಶ್ವಾಸದಿಂದ ಇರುವಿರಿ. ಹೊಂದಾಣಿಕೆಯ ಗುಣದ ಕಾರಣ ಜೀವನದಲ್ಲಿ ಯಾವುದೇ ಸಮಸ್ಯೆ ಕಾಣದು. ವ್ಯಾಪಾರ ವ್ಯವಹಾರಗಳಲ್ಲಿ ಶಾಂತಿಯಿಂದ ವರ್ತಿಸಿರಿ. ಆತುರದ ನಿರ್ಧಾರದಿಂದ ಹಣಕಾಸಿನ ವಿಚಾರದಲ್ಲಿ ಸಂದಿಗ್ದತೆ ಎದುರಿಸುವಿರಿ. ವಿದ್ಯಾರ್ಥಿಗಳು ತಮ್ಮ ತಪ್ಪಿಗೆ ಬೇರೆಯವರನ್ನು ಗುರಿ ಮಾಡುತ್ತಾರೆ. ಸ್ನೇಹಿತರ ಅನುಪಸ್ಥಿತಿ ಕಾಡಲಿದೆ. ಸುಲಭವಾಗಿ ಹಣವನ್ನು ಖರ್ಚು ಮಾಡುವುದಿಲ್ಲ. ನಿರೀಕ್ಷೆಗೂ ಮೀರಿದ ಆದಾಯ ದೊರೆಯುತ್ತದೆ. ಕಲಾವಿದರಿಗೆ ವಿಶಿಷ್ಟ ಗೌರವಾದರಗಳು ಲಭಿಸಲಿವೆ. ಕೊಟ್ಟ ಮಾತಿಗೆ ಬದ್ದರಾಗಿರುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ
ತುಲಾ
ಹೊಸ ರೀತಿಯ ಬದಲಾವಣೆಗಳು ಕುಟುಂಬದಲ್ಲಿ ಗೊಂದಲವನ್ನು ಉಂಟುಮಾಡುತ್ತದೆ. ಆತುರ ಪಡದೆ ನಿಧಾನದಿಂದ ಕೆಲಸದಲ್ಲಿ ತೊಡಗುವುದು ಒಳ್ಳೆಯದು. ಉದ್ಯೋಗದಲ್ಲಿ ವಿಘ್ನವಿಲ್ಲದೆ ಕೆಲಸ ಕಾರ್ಯಗಳು ಪೂರ್ಣಗೊಳ್ಳುತ್ತವೆ. ಸಹೋದ್ಯೋಗಿಗಳ ಪ್ರೀತಿ ವಿಶ್ವಾಸ ಗಳಿಸಿದಲ್ಲಿ ಯಾವುದೆ ತೊಂದರೆ ಕಾಣದು. ವ್ಯಾಪಾರ ವ್ಯವಹಾರಗಳಲ್ಲಿ ಹೊಂದಾಣಿಕೆಯ ಬುದ್ಧಿ ಮುಖ್ಯವಾಗುತ್ತದೆ. ಅತಿ ಆಸೆ ತೋರದೆ ದೊರೆವ ಲಾಭವನ್ನು ಒಪ್ಪಿಕೊಳ್ಳುವಿರಿ. ಹಣ ಹೂಡಿಕೆಯ ವಿಚಾರದಲ್ಲಿ ಆತುರಕ್ಕೆ ಒಳಗಾಗದಿರಿ. ವಿದ್ಯಾರ್ಥಿಗಳು ಕಷ್ಟವಿಲ್ಲದೆ ಗುರಿ ಮೀರಿ ನಡೆಯುತ್ತಾರೆ. ಹಣದ ಕೊರತೆ ಕಂಡು ಬರದು. ಸಹಾಯ ಮಾಡಲು ಆತ್ಮೀಯರ ದಂಡೇ ನಿಮ್ಮ ಬಳಿ ಇರುತ್ತದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು ಪಶ್ಚಿಮ
ಅದೃಷ್ಟದ ಬಣ್ಣ: ಬಿಳಿ
ವೃಶ್ಚಿಕ
ಕುಟುಂಬದಲ್ಲಿನ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಹೆಚ್ಚಿದ ಕುಟುಂಬದ ಜವಾಬ್ದಾರಿಯಿಂದ ಮಾನಸಿಕ ಒತ್ತಡ ಹೆಚ್ಚುತ್ತದೆ. ಉದ್ಯೋಗದಲ್ಲಿ ಹೆಚ್ಚಿನ ಪ್ರಯತ್ನದಿಂದ ಮಾತ್ರ ಯಶಸ್ಸು ಗಳಿಸುವಿರಿ. ನಿರಾಸೆಯನ್ನು ತಾಳಲಾರದೆ ಕೋಪದಿಂದ ವರ್ತಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹಣದ ತೊಂದರೆ ಉಂಟಾಗುವುದಿಲ್ಲ. ಮನಸ್ಸಿನಲ್ಲಿ ಒಳ್ಳೆಯದಿದ್ದರೂ ದುಡುಕುತನದಿಂದ ವಿರೋಧವನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಏಕಾಂಗಿಯಾಗಿ ಕುಳಿತು ತಮ್ಮ ಕೆಲಸ ಪೂರೈಸುತ್ತಾರೆ. ಆಧುನಿಕ ತಂತ್ರಜ್ಞಾನವನ್ನು ಕಲಿಯುವ ಅವಕಾಶ ದೊರೆಯುತ್ತದೆ. ವಯಸ್ಸಿನ ಇತಿಮಿತಿ ಇಲ್ಲದೆ ಮನರಂಜನಾ ಕೂಟದಲ್ಲಿ ಭಾಗವಹಿಸುವಿರಿ. ಆತ್ಮೀಯರೊಂದಿಗೆ ಮನದ ವಿಚಾರವನ್ನು ಹಂಚಿಕೊಳ್ಳುವಿರಿ.
ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಬೂದು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).