ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಬುದ್ದಿವಂತಿಕೆಯ ತೀರ್ಮಾನದಿಂದಾಗಿ ಹಳೆಯ ಸಮಸ್ಯೆಗೆ ಪರಿಹಾರ, ಏಕಾಂಗಿಯಾಗಿ ಜವಾಬ್ದಾರಿ ನಿರ್ವಹಿಸುವಿರಿ; ಏ. 29ರ ದಿನ ಭವಿಷ್ಯ

ಬುದ್ದಿವಂತಿಕೆಯ ತೀರ್ಮಾನದಿಂದಾಗಿ ಹಳೆಯ ಸಮಸ್ಯೆಗೆ ಪರಿಹಾರ, ಏಕಾಂಗಿಯಾಗಿ ಜವಾಬ್ದಾರಿ ನಿರ್ವಹಿಸುವಿರಿ; ಏ. 29ರ ದಿನ ಭವಿಷ್ಯ

29 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (29th April 2024 2024 Daily Horoscope).

ಏ. 29ರ ದಿನ ಭವಿಷ್ಯ
ಏ. 29ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(29th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಸೋಮವಾರ

ತಿಥಿ: ಷಷ್ಠಿ ರಾತ್ರಿ 04.09 ವರೆಗೂ ಇದ್ದು ನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಪೂರ್ವಾಷಾಢ ನಕ್ಷತ್ರವು ರಾತ್ರಿ 02.11 ವರೆಗು ಇದ್ದು ನಂತರ ಉತ್ತರಾಷಾಢ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.33

ರಾಹುಕಾಲ: ಬೆಳಗ್ಗೆ 07.39 ರಿಂದ 09.13

ರಾಶಿಫಲ

ಧನಸ್ಸು

ಬಂಧು ಮಕ್ಕಳ ಆಗಮನದಿಂದ ಕುಟುಂಬದಲ್ಲಿ ಸಂತಸವನ್ನು ಉಂಟು ಮಾಡುತ್ತದೆ. ಉದ್ಯೋಗದಲ್ಲಿ ಸಮಸ್ಯೆಗಳು ಇರದೇ ಹೋದರು ಪ್ರಗತಿ ಕಂಡು ಬರದು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಯಲ್ಲಿ ಇತರ ವಿಚಾರದಲ್ಲಿಯೂ ಹೆಚ್ಚಿನ ಆಸಕ್ತಿ ತೋರುತ್ತಾರೆ. ಹಣಕಾಸಿನ ವಿಚಾರದಲ್ಲಿ ಒತ್ತಡವಿದ್ದರೂ ಯಾವುದೇ ತೊಂದರೆ ಎದುರಾಗದು. ಅನಿರೀಕ್ಷಿತ ಧನ ಲಾಭವಿದೆ. ಆಹಾರ ಸೇವನೆಯಲ್ಲಿ ಇತಿ ಮಿತಿ ಇರದ ಕಾರಣ ಅಜೀರ್ಣದಿಂದ ಬಳಲುವಿರಿ. ವಿವಾಹದ ವಿಚಾರದಲ್ಲಿ ಅಡ್ಡಿ ಆತಂಕ ಎದುರಾಗುತ್ತದೆ. ಬುದ್ದಿವಂತಿಕೆಯ ತೀರ್ಮಾನದಿಂದಾಗಿ ಹಳೆಯ ಸಮಸ್ಯೆಗೊಂದು ಬಗೆಹರಿಯುತ್ತದೆ. ತೆಗೆದುಕೊಳ್ಳುವ ನಿರ್ಧಾರಗಳಿಗೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆಯುತ್ತದೆ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಆಕಾಶ ನೀಲಿ

ಮಕರ

ಹಣಕಾಸಿನ ವಿವಾದಗಳಿಂದ ಕುಟುಂಬದಲ್ಲಿ ಬೇಸರದ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಜವಾಬ್ದಾರಿ ಹೆಚ್ಚುತ್ತದೆ. ಸ್ನೇಹಿತರ ಸಹಾಯ ದೊರೆಯಲಿದೆ. ಹೊಸ ಉದ್ಯೋಗ ಹುಡುಕಲು ಆರಂಭಿಸುವಿರಿ. ಕ್ರಮೇಣವಾಗಿ ಹಣದ ಸಮಸ್ಯೆಯು ದೂರವಾಗುತ್ತದೆ. ಬಂಧು-ಬಳಗದವರ ಜೊತೆಯಲ್ಲಿ ಶಾಂತಿ ಸಹನೆಯಿಂದ ವರ್ತಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಏಕಾಂಗಿಯಾಗಿ ಜವಾಬ್ದಾರಿ ನಿರ್ವಹಿಸುವಿರಿ. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿ ಕಡಿಮೆಯಾಗುತ್ತದೆ. ಬೇಸರದಿಂದ ಹೊರ ಬರಲು ಮಕ್ಕಳೊಂದಿಗೆ ಮನರಂಜನಾ ಸ್ಥಳಕ್ಕೆ ಭೇಟಿ ನೀಡುವಿರಿ. ಚಾಡಿ ಮಾತನ್ನು ನಂಬದಿರಿ. ಹಣಕಾಸಿನ ವ್ಯವಹಾರದಲ್ಲಿ ತೊಂದರೆ ಎದುರಾಗುತ್ತದೆ. ಅನಿವಾರ್ಯವಾಗಿ ಬೇರೆಯವರಿಂದ ಹಣ ಪಡೆಯಬೇಕಾಗುತ್ತದೆ

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೆಂಪು

ಕುಂಭ

ಬೇಸರದ ಕಾರಣ ಕುಟುಂಬದಲ್ಲಿ ಮೌನ ನೆಲೆಸಿರುತ್ತದೆ. ಪರಸ್ಪರ ಸಮಾಲೋಚನೆಯಿಂದ ಕೌಟುಂಬಿಕ ಸಮಸ್ಯೆಯೂ ಕೊನೆಗೊಳ್ಳುತ್ತದೆ. ಉದ್ಯೋಗದಲ್ಲಿ ಸೋಲು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸುವಿರಿ. ದೊರೆಯುವ ಹೊಸ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ. ಆತ್ಮೀಯರ ಸಲಹೆಯಂತೆ ಉದ್ಯೋಗ ಬದಲಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಿರದು. ಚಿಕ್ಕಪುಟ್ಟ ಕೆಲಸ ಕಾರ್ಯಗಳಿಗೂ ಹೆಚ್ಚಿನ ಪ್ರಮಾಣದ ಅವಶ್ಯಕತೆ ಇದೆ. ವಿದ್ಯಾರ್ಥಿಗಳು ಏಕಾಂಗಿಯಾಗಿ ಕಲಿಕೆಯಲ್ಲಿ ತೊಡಗುತ್ತಾರೆ. ಪ್ರಯೋಜನವಿಲ್ಲದ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ಹಿರಿಯರ ಅನುಭವವನ್ನು ಬಳಸಿಕೊಂಡರೆ ಯಾವುದೇ ತೊಂದರೆ ಎದುರಾಗದು.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಎಲೆ ಹಸಿರು

ಮೀನ

ಸಂಬಂಧಿಕರಿಗೆ ಮತ್ತು ಸ್ನೇಹಿತರಿಗೆ ಹಣದ ಸಹಾಯ ಮಾಡುವಿರಿ. ಕುಟುಂಬದಲ್ಲಿ ಬಿಗುವಿನ ವಾತಾವರಣವಿರುತ್ತದೆ. ಅನಾವಶ್ಯಕ ಮಾತನ್ನು ಕಡಿಮೆ ಮಾಡಿ ಕೆಲಸದಲ್ಲಿ ಜಯ ಗಳಿಸಲು ಪ್ರಯತ್ನಿಸಿ. ಉದ್ಯೋಗದಲ್ಲಿನ ಫಲಿತಾಂಶಗಳು ನಿರೀಕ್ಷೆಯಂತೆ ದೊರೆಯುವುದಿಲ್ಲ. ದೃಢ ಸಂಕಲ್ಪದಿಂದ ಮಾತ್ರ ಕೆಲಸ ಕಾರ್ಯಗಳಲ್ಲಿ ಜಯ ಗಳಿಸಲು ಸಾಧ್ಯ. ವ್ಯಾಪಾರ ವ್ಯವಹಾರಗಳಲ್ಲಿ ದೊರೆವ ಅವಕಾಶವನ್ನು ಬಳಸಿಕೊಂಡರೆ ಹಣದ ಕೊರತೆ ಕಾಣದು. ವಿದ್ಯಾರ್ಥಿಗಳು ದುಡುಕದೆ ಬುದ್ಧಿವಂತಿಕೆಯಿಂದ ಅಭ್ಯಾಸದಲ್ಲಿ ತೊಡಗುತ್ತಾರೆ. ಪ್ರವಾಸದಿಂದ ಲಾಭವಿದೆ ಉದ್ಯೋಗ ಕ್ಷೇತ್ರದ ಮೂಲಕ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ. ಒಂಟಿಯಾಗಿ ಸಮಸ್ಯೆಗಳ ವಿರುದ್ದ ಹೋರಾಡಿ ಜಯ ಗಳಿಸುವಿರಿ.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಕೇಸರಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).