ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಯಾರ ಮನಸ್ಸನ್ನೂ ನೋಯಿಸುವುದಿಲ್ಲ, ಧಾರ್ಮಿಕ ಕಾರ್ಯದಿಂದ ನೆಮ್ಮದಿ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

Horoscope Today: ಯಾರ ಮನಸ್ಸನ್ನೂ ನೋಯಿಸುವುದಿಲ್ಲ, ಧಾರ್ಮಿಕ ಕಾರ್ಯದಿಂದ ನೆಮ್ಮದಿ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

29 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (29th June 2024 Horoscope).

ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯ ದಿನ ಭವಿಷ್ಯ ತಿಳಿಯಿರಿ
ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯ ದಿನ ಭವಿಷ್ಯ ತಿಳಿಯಿರಿ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (29th June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಶನಿವಾರ

ತಿಥಿ: ಅಷ್ಟಮಿ ಹ. 03.30 ರವರೆಗು ಇದ್ದು ಆನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ: ಉತ್ತರಾಭಾದ್ರ ನಕ್ಷತ್ರವು ಹ. 10.37 ರವರೆಗೆ ಇದ್ದು ಆನಂತರ ರೇವತಿ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.55

ಸೂರ್ಯಾಸ್ತ: ಸಂಜೆ 06.48

ರಾಹುಕಾಲ: ಬೆಳಗ್ಗೆ 09.14 ರಿಂದ 10.50

ಮೇಷ ರಾಶಿ

ವಿದ್ಯಾವಂತರ ಬಗ್ಗೆ ವಿಶೇಷ ಗೌರವವಿರುತ್ತದೆ. ಗುರು ಹಿರಿಯರಿಗೆ ಅಗತ್ಯವಾದಂತಹ ಸೌಲಭ್ಯವನ್ನು ಕಲ್ಪಿಸುವಿರಿ. ನಿಮ್ಮಲ್ಲಿ ಎಷ್ಟೇ ಬುದ್ಧಿವಂತಿಕೆ ಇದ್ದರೂ ಬೇಕಾದ ಸಮಯಕ್ಕೆ ಅದರ ಬಳಕೆ ಸಾಧ್ಯವಾಗುವುದಿಲ್ಲ. ಬಹು ಮುಖ್ಯವಾದ ಕೆಲಸವನ್ನು ಮಾಡಲು ಮರೆಯುವಿರಿ. ಅನಾರೋಗ್ಯದ ಕಾರಣ ವಿಶ್ರಾಂತಿಯನ್ನು ಬಯಸುವಿರಿ. ಸುಲಭವಾಗಿ ಯಾರ ಮೇಲೂ ನಂಬಿಕೆ ಉಂಟಾಗುವುದಿಲ್ಲ. ವಿದ್ಯಾರ್ಥಿಗಳಿಗೆ ಓದಲು ಅಥವಾ ಬರೆಯಲು ಕುಳಿತರೆ ನಿದ್ದೆ ಆವರಿಸುತ್ತೆ. ಉದ್ಯೋಗದಲ್ಲಿ ಅನಗತ್ಯ ಅಡಚಣೆಗಳು ಎದುರಾಗಲಿವೆ. ಹವ್ಯಾಸಕ್ಕೆಂದು ಆರಂಭಿಸಿದ ಬರವಣಿಗೆಯು ಜೀವನಕ್ಕೆ ಆಧಾರವಾಗುತ್ತದೆ. ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕೇಸರಿ

ವೃಷಭ ರಾಶಿ

ನಿಮ್ಮ ಮನದಲ್ಲಿ ಸಕಾರಾತ್ಮಕ ಭಾವನೆಗಳು ಉಂಟಾಗುತ್ತವೆ. ಮಹಿಳೆಯರು ಕಷ್ಟದಲ್ಲಿರುವ ಹೆಣ್ಣು ಮಕ್ಕಳಿಗೆ ಸಹಾಯ ಮಾಡುತ್ತಾರೆ. ಯಾರ ಮನಸ್ಸನ್ನೂ ನೋಯಿಸದೆ ಎಲ್ಲರೊಂದಿಗೆ ಸ್ನೇಹ ಪ್ರೀತಿಯಿಂದ ವರ್ತಿಸುವಿರಿ. ನಿಮ್ಮ ಹುಟ್ಟೂರಿನಲ್ಲಿರುವ ಶಿಥಿಲಗೊಂಡ ದೇವಾಲಯವನ್ನು ಪುನರುಜ್ಜೀವನಗೊಳಿಸುವಿರಿ. ಈ ದಿನ ಬಹುತೇಕ ಒಳ್ಳೆಯ ಫಲಗಳನ್ನು ಪಡೆಯುವಿರಿ. ಚಿಕ್ಕ ಮಕ್ಕಳಿಗೆ ಯಾವುದಾದರೂ ಒಂದು ರೀತಿಯಲ್ಲಿ ತೊಂದರೆ ಇರುತ್ತದೆ. ಬಂಧು ಬಳಗದವರ ಸಮಸ್ಯೆಗಳನ್ನು ಪರಿಹರಿಸಿ ವಿಶೇಷ ಗೌರವಕ್ಕೆ ಪಾತ್ರರಾಗುವಿರಿ. ಸೋದರ ಮಾವನಿಗೆ ಹಣದ ಸಹಾಯ ಮಾಡುವಿರಿ.

ಪರಿಹಾರ: ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಮಿಥುನ ರಾಶಿ

ಅರಸಿ ಬಂದ ಜನಕ್ಕೆ ನಿಮ್ಮ ಕೈಲಾದ ಸಹಾಯವನ್ನು ಮಾಡುವಿರಿ. ಕೇವಲ ನಿಮ್ಮ ಮನೆ ಮಾತ್ರವಲ್ಲದೆ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿ ಇಟ್ಟುಕೊಳ್ಳುವಿರಿ. ರೋಷ ದ್ವೇಷಕ್ಕೆ ಮಣಿಯದೆ ಪ್ರೀತಿ ವಿಶ್ವಾಸಕ್ಕೆ ತಲೆಬಾಗುವಿರಿ. ಧಾರ್ಮಿಕ ಕಾರ್ಯವೊಂದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಕುಟುಂಬದ ಹಿರಿಯರ ಬೆಂಬಲ ನಿಮಗೆ ದೊರೆಯುತ್ತದೆ. ಅನಿರೀಕ್ಷಿತವಾಗಿ ವಿಶೇಷವಾದ ಅನುಕೂಲತೆಗಳು ದೊರೆಯುತ್ತವೆ. ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವಿರಿ. ಮಾಡುವ ಕೆಲಸ ಕಷ್ಟವೆನಿಸಿದರು ಅದರಿಂದ ಲಾಭ ಮತ್ತು ಒಳ್ಳೆಯ ಹೆಸರನ್ನು ನಿರೀಕ್ಷಿಸುವಿರಿ. ನಿಮ್ಮ ಮನಸ್ಸಿನಲ್ಲಿ ನೀವು ಮಾಡುವ ಕೆಲಸಗಳೆಲ್ಲ ಸರಿಯಾದವು ಎಂಬ ಭಾವನೆ ಇರುತ್ತದೆ.

ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಕೆಂಪು

ಕಟಕ ರಾಶಿ

ರಾಜಕೀಯಕ್ಕೆ ಪ್ರವೇಶಿಸಲು ಉತ್ತಮ ಅವಕಾಶ ದೊರೆಯುತ್ತದೆ. ಯಾವುದೇ ಸನ್ನಿವೇಶವನ್ನು ಬುದ್ದಿವಂತಿಕೆಯಿಂದ ನಿಮ್ಮ ನಿಯಂತ್ರಣಕ್ಕೆ ತಂದು ಕೊಳ್ಳುವಿರಿ. ಪ್ರತಿಯೊಂದು ವಿಚಾರದಲ್ಲಿಯೂ ಹೆಚ್ಚಿನ ಆಸಕ್ತಿ ತೋರುವುದರಿಂದ ಯಾವುದೇ ತೊಂದರೆ ಬಾರದು. ಸ್ವಾರ್ಥದ ಬುದ್ಧಿ ಇರುವುದಿಲ್ಲ. ಗುರು ಹಿರಿಯರನ್ನು ಗೌರವದಿಂದ ಕಾಣುವಿರಿ. ನೇರವಾದ ನಡೆ ನುಡಿ ಇರುವ ಕಾರಣ ಸ್ನೇಹಿತರು ಕಡಿಮೆ. ಆದರೆ ನೀವು ಯಾರನ್ನು ದ್ವೇಷಿಸುವುದಿಲ್ಲ. ಸಮಾಜದ ಮುಖ್ಯಸ್ಥರಾಗಿ ಬಾಳುವಿರಿ. ನಮ್ಮವರು ಬೇರೆಯವರು ಎಂಬ ತಾರತಮ್ಯ ತೋರುವುದಿಲ್ಲ. ಯಾರೇ ತಪ್ಪನ್ನು ಮಾಡಿದರು ಅದನ್ನು ಖಂಡಿಸುವಿರಿ.

ಪರಿಹಾರ: ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಕಿತ್ತಳೆ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)