ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಅಧಿಕಾರದಲ್ಲಿ ಉನ್ನತ ಮಟ್ಟಕ್ಕೆ, ನಿರೀಕ್ಷೆಯಂತೆ ಜೀವನದಲ್ಲಿ ಬದಲಾವಣೆ; ಸಿಂಹ, ಕನ್ಯಾ,ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

Horoscope Today: ಅಧಿಕಾರದಲ್ಲಿ ಉನ್ನತ ಮಟ್ಟಕ್ಕೆ, ನಿರೀಕ್ಷೆಯಂತೆ ಜೀವನದಲ್ಲಿ ಬದಲಾವಣೆ; ಸಿಂಹ, ಕನ್ಯಾ,ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

29 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (29th June 2024 Horoscope).

 ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ ತಿಳಿಯಿರಿ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ ತಿಳಿಯಿರಿ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (29th June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಶನಿವಾರ

ತಿಥಿ: ಅಷ್ಟಮಿ ಹ. 03.30 ರವರೆಗು ಇದ್ದು ಆನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ: ಉತ್ತರಾಭಾದ್ರ ನಕ್ಷತ್ರವು ಹ. 10.37 ರವರೆಗೆ ಇದ್ದು ಆನಂತರ ರೇವತಿ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.55

ಸೂರ್ಯಾಸ್ತ: ಸಂಜೆ 06.48

ರಾಹುಕಾಲ: ಬೆಳಗ್ಗೆ 09.14 ರಿಂದ 10.50

ಸಿಂಹ ರಾಶಿ

ಎಲ್ಲರಿಗೂ ಅನುಕೂಲವಾಗುವಂತಹ ಕೆಲಸ ಕಾರ್ಯಗಳನ್ನು ಮಾಡುವಿರಿ. ವಿದ್ಯಾರ್ಥಿಗಳು ಉನ್ನತ ಅಧ್ಯಯನದಲ್ಲಿ ತೊಡಗುತ್ತಾರೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಮಕ್ಕಳನ್ನು ಸನ್ಮಾರ್ಗದಲ್ಲಿ ಬೆಳೆಸುವಿರಿ. ನಿಮ್ಮ ನಿರೀಕ್ಷೆಯಂತೆ ಜೀವನದಲ್ಲಿ ಹಲವಾರು ಬದಲಾವಣೆಗಳು ಕಂಡುಬರುತ್ತವೆ. ದಾಂಪತ್ಯ ಜೀವನವು ಪ್ರೀತಿ ವಿಶ್ವಾಸದಿಂದ ಕೂಡಿರುತ್ತದೆ. ಉದ್ಯೋಗದಲ್ಲಿ ನಿರೀಕ್ಷಿತ ಮಟ್ಟವನ್ನು ತಲುಪುವಿರಿ. ಅಧಿಕಾರದ ಬಗ್ಗೆ ಆಸೆ ಇರುವುದಿಲ್ಲ. ಆದರೆ ದೊರೆಯುವ ಅವಕಾಶವನ್ನು ಕೈ ಬಿಡುವುದಿಲ್ಲ. ಸಮಾಜದಲ್ಲಿ ಉನ್ನತ ಗೌರವ ಗಳಿಸುವಿರಿ. ಹಣಕಾಸಿನ ವಿಚಾರದಲ್ಲಿ ದುಡುಕಿನ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ.

ಪರಿಹಾರ: ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಹಳದಿ

ಕನ್ಯಾ ರಾಶಿ

ಹಣಕಾಸಿನ ವಿಚಾರದಲ್ಲಿ ಮನಸ್ತಾಪವಿರುತ್ತದೆ. ಕುಟುಂಬದ ಹಿರಿಯರ ಜವಾಬ್ದಾರಿಯು ನಿಮ್ಮದಾಗಲಿದೆ. ವಂಶದಲ್ಲಿಯೇ ನಿಮಗೆ ವಿಶೇಷ ಗೌರವ ಲಭಿಸುತ್ತದೆ. ಮಕ್ಕಳನ್ನು ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಎಲ್ಲರ ಜೊತೆಯೂ ಗಂಭೀರವಾಗಿ ನಡೆದುಕೊಳ್ಳುವಿರಿ. ಸಂಚಾರ ಮಾಡುವುದರಲ್ಲಿ ಅತಿಯಾದ ಸಂತೋಷವಿರುತ್ತದೆ. ಆಕಸ್ಮಿಕವಾಗಿ ಆಗುವ ತಪ್ಪಿಗೂ ಪಶ್ಚಾತಾಪ ಪಡುವಿರಿ. ಸ್ವತಂತ್ರವಾದ ಉದ್ದಿಮೆಯನ್ನು ಆರಂಭಿಸುವ ಹಂಬಲವಿರುತ್ತದೆ. ನಿಮ್ಮ ಒಳ್ಳೆಯ ಪ್ರಭಾವಕ್ಕೆ ಎಲ್ಲರ ಸಹಾಯ ಸಹಕಾರ ದೊರೆಯುತ್ತದೆ. ಬಹುದಿನದ ನಂತರ ನಿಮ್ಮ ಕೆಲಸವೊಂದು ಆತ್ಮೀಯರ ಸಹಾಯದಿಂದ ನೆರವೇರುತ್ತದೆ. ಸಮಾಜದ ಗಣ್ಯ ವ್ಯಕ್ತಿಗಳ ಜೊತೆಯಲ್ಲಿ ಒಡನಾಟವಿರುತ್ತದೆ. ಪುಟ್ಟ ಮಕ್ಕಳ ಆಟ ಪಾಠಗಳಿಂದ ಮನದ ನೋವನ್ನು ಮರೆಯುವಿರಿ.

ಪರಿಹಾರ: ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 7

ಅಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಹಸಿರು

ತುಲಾ ರಾಶಿ

ಕುಟುಂಬದ ಕಷ್ಟ ನಷ್ಟಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ. ಉದ್ಯೋಗದಲ್ಲಿ ನಿಮಗೆ ಅನುಕೂಲವಾಗುವಂತಹ ಬದಲಾವಣೆಗಳು ಕಂಡು ಬರಲಿವೆ. ಅಧಿಕಾರಿಗಳಾದಲ್ಲಿ ಉನ್ನತ ಮಟ್ಟವನ್ನು ತಲುಪುವಿರಿ. ಯುವಕ ಯುವತಿಯರು ವಿಶೇಷ ಅನುಕೂಲತೆಯನ್ನು ಪಡೆಯುತ್ತಾರೆ. ನಿವೃತ್ತಿಯ ನಂತರವೂ ಅನಿವಾರ್ಯವಾಗಿ ತಂದೆಯವರು ಕೆಲಸ ಮಾಡಬೇಕಾಗುತ್ತದೆ. ಪ್ರಾಮಾಣಿಕತೆಯಿಂದ ನಿಮ್ಮ ಕರ್ತವ್ಯವನ್ನು ಪಾಲಿಸುವಿರಿ. ತಂದೆ ಮಕ್ಕಳ ನಡುವೆ ಅಲ್ಪ ಪ್ರಮಾಣದ ಮನಸ್ತಾಪವಿರುತ್ತದೆ. ಕಲಾವಿದರು ವಿನೂತನ ಅವಕಾಶಗಳನ್ನು ಪಡೆದುಕೊಳ್ಳುತ್ತಾರೆ. ನಿಮ್ಮ ಮನಸ್ಸಿಗೆ ಬೇಸರವಾದಲ್ಲಿ ಹಿರಿಯ ಅಧಿಕಾರಿಗಳನ್ನು ನಿಂದಿಸುವಿರಿ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ಯಾರೊಂದಿಗೂ ಸಾಲದ ವ್ಯವಹಾರವನ್ನು ಮಾಡಲು ಇಷ್ಟಪಡುವುದಿಲ್ಲ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ನೀಲಿ

ವೃಶ್ಚಿಕ ರಾಶಿ

ನೆರೆಹೊರೆಯವರಿಗೆ ಅನುಕೂಲವಾಗುವಂತಹ ಕೆಲಸ ಕಾರ್ಯಗಳನ್ನು ರೂಪಿಸುವಿರಿ. ದಿನನಿತ್ಯದ ಸವಾಲುಗಳನ್ನು ಸುಲಭವಾಗಿ ಎದುರಿಸುವಿರಿ. ಸತತ ಪ್ರಯತ್ನದಿಂದ ಯಶಸ್ಸನ್ನು ಗಳಿಸುವಿರಿ. ಒಮ್ಮೆಯೂ ಯೋಚಿಸದೆ ಪ್ರಶ್ನೆಗೆ ತಕ್ಕಂತೆ ನೇರವಾದ ಉತ್ತರಗಳನ್ನು ನೀಡುವಿರಿ. ಕ್ಷಣಾರ್ಧದಲ್ಲಿ ಕೋಪ ಬರುತ್ತದೆ. ಯಾವುದೇ ಸಮಸ್ಯೆ ಎದುರಾದರೂ ಉಪಾಯದಿಂದ ಪಾರಾಗುವಿರಿ. ಆತಂಕದ ಮನೋಭಾವನೆಯಿಂದ ಬಳಲುವಿರಿ. ಒಂದು ಕೆಲಸ ಪೂರ್ಣಗೊಳ್ಳುವವರೆಗೂ ಮತ್ತೊಂದು ಕೆಲಸವನ್ನು ಆರಂಭಿಸುವುದಿಲ್ಲ. ಆತುರದಿಂದ ಕೆಲಸ ಕಾರ್ಯಗಳಲ್ಲಿ ತೊಡಗುವುದಿಲ್ಲ. ನಿಮ್ಮ ನಡವಡಿಕೆಯು ಬೇರೆಯವರಿಗೆ ಹೊಸ ಸ್ಪೂರ್ತಿಯನ್ನು ತುಂಬುತ್ತದೆ. ದಂಪತಿ ನಡುವೆ ಉತ್ತಮ ಬಾಂಧವ್ಯ ಉಂಟಾಗುತ್ತದೆ.

ಪರಿಹಾರ: ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ನೇರಳೆ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.