Horoscope Today: ಅನಾವಶ್ಯಕ ಚಿಂತೆ ಮಾಡಲ್ಲ, ಕುಟುಂಬದೊಂದಿಗೆ ಪ್ರವಾಸ ಬಲು ಇಷ್ಟ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ
29 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (29th June 2024 Horoscope).

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (29th June 2024 Horoscope)
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಶನಿವಾರ
ತಿಥಿ: ಅಷ್ಟಮಿ ಹ. 03.30 ರವರೆಗು ಇದ್ದು ಆನಂತರ ನವಮಿ ಆರಂಭವಾಗುತ್ತದೆ.
ನಕ್ಷತ್ರ: ಉತ್ತರಾಭಾದ್ರ ನಕ್ಷತ್ರವು ಹ. 10.37 ರವರೆಗೆ ಇದ್ದು ಆನಂತರ ರೇವತಿ ನಕ್ಷತ್ರವು ಆರಂಭವಾಗಲಿದೆ.
ಸೂರ್ಯೋದಯ: ಬೆಳಗ್ಗೆ 05.55
ಸೂರ್ಯಾಸ್ತ: ಸಂಜೆ 06.48
ರಾಹುಕಾಲ: ಬೆಳಗ್ಗೆ 09.14 ರಿಂದ 10.50
ಧನಸ್ಸು ರಾಶಿ
ಸಂತೋಷವಾಗಲಿ ಅಥವಾ ದುಃಖವಾಗಲಿ ತಡೆಯಲಾರದೆ ಭಾವುಕತೆಯಿಂದ ವ್ಯಕ್ತಪಡಿಸುವಿರಿ. ದಂಪತಿಗಳ ನಡುವೆ ಉತ್ತಮ ಬಾಂಧವ್ಯವಿರುತ್ತದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ತೊಂದರೆ ಉಂಟಾದಲ್ಲಿ ಸಹನೆ ಕಳೆದುಕೊಳ್ಳುವಿರಿ. ಕೋಪಗೊಂಡರು ಅದರಿಂದ ಯಾರಿಗೂ ತೊಂದರೆ ಆಗುವುದಿಲ್ಲ. ಸಣ್ಣ ಮಟ್ಟದ ಕೆಲಸ ಕಾರ್ಯವಾದರೂ ಹೆಚ್ಚಿನ ಉತ್ಸಾಹದಿಂದ ಆರಂಭಿಸುವಿರಿ. ಅನಾವಶ್ಯಕ ಚಿಂತೆ ಮಾಡುವುದಿಲ್ಲ. ನಿಮ್ಮ ನಿರಂತರ ಚಟುವಟಿಕೆ ಎಲ್ಲರಿಗೂ ಮಾದರಿಯಾಗುತ್ತದೆ. ಅನಿವಾರ್ಯವಾದಲ್ಲಿ ಕುಟುಂಬದ ಹಿರಿಯರು ನಿಮಗೆ ಸಹಾಯ ಮಾಡುತ್ತಾರೆ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಎಂದಿಗೂ ಬದಲಾಯಿಸುವುದಿಲ್ಲ. ಸೋಲನ್ನು ಲೆಕ್ಕಿಸದೆ ಕರ್ತವ್ಯದತ್ತ ಮುನ್ನುಗ್ಗುವಿರಿ. ನಿಮ್ಮಲ್ಲಿರುವ ಕ್ರೀಡಾಮನೋಭಾವನೆ ನಿಧಾನವಾಗಿ ಯಶಸ್ಸನ್ನು ನೀಡುತ್ತದೆ. ಆರೋಗ್ಯವನ್ನು ಕಾಪಾಡಿಕೊಳ್ಳುವ ಸಲುವಾಗಿ ನಿಮಗೆ ನೀವೇ ಹತ್ತಾರು ಕಟ್ಟುಪಾಡುಗಳನ್ನು ಹಾಕಿಕೊಳ್ಳುವಿರಿ.
ಪರಿಹಾರ: ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಗುಲಾಬಿ
ಮಕರ ರಾಶಿ
ಸಮಾಜದಲ್ಲಿ ಉನ್ನತ ಕೀರ್ತಿಗೆ ಪಾತ್ರರಾಗುವಿರಿ. ಸಮರ್ಪಣಾ ಮನೋಭಾವನೆಯಿಂದ ಕೈ ಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಆತುರದಿಂದ ತೊಂದರೆ ಆಗಬಹುದು. ಎಚ್ಚರಿಕೆ ವಹಿಸಿ ದಾಂಪತ್ಯ ಜೀವನದಲ್ಲಿ ಸುಖ ಸಂತೋಷ ಮನೆ ಮಾಡಿರುತ್ತದೆ. ಕೋಪ ಬಂದಾಗ ಉದ್ವೇಗದಿಂದ ವರ್ತಿಸುವಿರಿ. ಇದರಿಂದ ಎಲ್ಲರಿಗೂ ನಿಮ್ಮ ಬಗ್ಗೆ ತಪ್ಪು ಅಭಿಪ್ರಾಯ ಬರುವ ಸಾಧ್ಯತೆ ಇದೆ. ಸುಲಭವಾಗಿ ಸೋಲನ್ನು ಒಪ್ಪಿಕೊಳ್ಳುವುದಿಲ್ಲ. ಜಯ ಲಭಿಸುವವರೆಗೂ ವಿಶ್ರಾಂತಿಯನ್ನು ಪಡೆಯುವುದಿಲ್ಲ. ಸಾಹಸದ ಗುಣ ನಿಮ್ಮಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಆಟ ಪಾಠಗಳಲ್ಲಿ ವಿಶೇಷವಾದಂತಹ ಆಸಕ್ತಿಯನ್ನು ತೋರಿಸುತ್ತಾರೆ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಕುತೂಹಲವಿರುತ್ತದೆ.
ಪರಿಹಾರ: ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ಕುಂಭ ರಾಶಿ
ನೋಡಲು ಆಕರ್ಷಕವಾಗಿರುವ ವಸ್ತುಗಳನ್ನು ಕೊಳ್ಳುವಿರಿ. ಉದ್ಯೋಗ ಕ್ಷೇತ್ರದ ಪ್ರತಿಯೊಂದು ವಿಚಾರದಲ್ಲಿಯೂ ಮುಂದಾಳತ್ವ ವಹಿಸುವಿರಿ. ಸಂಗಾತಿ ಮಕ್ಕಳ ಜೊತೆ ಪ್ರವಾಸ ಮಾಡುವುದೆಂದರೆ ಬಲು ಇಷ್ಟ. ಕೋಪ ಬಂದಷ್ಟೇ ಬೇಗ ಶಾಂತರಾಗುವಿರಿ. ನವ ವಿವಾಹಿತರ ನಡುವೆ ಅನಗತ್ಯ ಮನಸ್ತಾಪವಿರುತ್ತದೆ. ಆರಂಭಿಸಿದ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತದೆ. ಹಣದ ಕೊರತೆಯನ್ನು ಎದುರಿಸುವಿರಿ. ಸ್ವಂತ ಜಮೀನು ಅಥವಾ ಮನೆಯನ್ನು ಕೊಳ್ಳುವ ಯೋಜನೆ ರೂಪಿಸುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ಹಿನ್ನಡೆ ಇರುತ್ತೆ. ನಿಮ್ಮ ಹಠದ ಗುಣದಿಂದ ಕುಟುಂಬದಲ್ಲಿ ನೆಮ್ಮದಿಯ ಕೊರತೆ ಇರುತ್ತದೆ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ: ಕಂದು
ಮೀನ ರಾಶಿ
ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಬೇರೆಯವರ ಯಶಸ್ಸಿನಲ್ಲಿ ಪಾಲ್ಗೊಳ್ಳುವುದಿಲ್ಲ. ನಿಮಗೆ ವಿರೋಧಿಗಳಿದ್ದರೂ ಯಾವುದೇ ತೊಂದರೆ ಮಾಡಲಾರರು. ದಾಂಪತ್ಯದಲ್ಲಿ ಇದ್ದ ಭಿನ್ನಾಭಿಪ್ರಾಯಗಳು ಮರೆಯಾಗಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಅವಶ್ಯಕವಾದ ಖರ್ಚು ವೆಚ್ಚಗಳನ್ನು ಇಷ್ಟಪಡುವುದಿಲ್ಲ. ಮಕ್ಕಳಿಗೆ ಸ್ವಾತಂತ್ರ್ಯ ನೀಡಿದರು ಕುಟುಂಬದ ಗೌರವವನ್ನು ಕಾಪಾಡುತ್ತಾರೆ. ನಿರುದ್ಯೋಗಿಗಳಿಗೆ ಸಹಾಯ ಮಾಡುವಿರಿ. ಕಷ್ಟದಲ್ಲಿ ಇರುವವರಿಗೆ ಉತ್ತಮ ಮಾರ್ಗದರ್ಶನ ನೀಡುವಿರಿ. ಕಡಿಮೆ ಅವಧಿಯಲ್ಲಿಯೇ ಹೆಚ್ಚಿನ ಕೆಲಸವನ್ನು ನಿರ್ವಹಿಸುವಿರಿ. ಬೇರೆಯವರ ತಪ್ಪುಗಳನ್ನು ಜಾಣ್ಮೆಯಿಂದ ಸರಿಪಡಿಸುವಿರಿ.
ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಗುಲಾಬಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ವಿಭಾಗ