ಕನ್ನಡ ಸುದ್ದಿ  /  Astrology  /  Horoscope Today Astrology Prediction 29th March 2024 Aries Taurus Gemini Cancer Daily Horoscope Sts

Horoscope Today: ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ, ದಂಪತಿ ನಡುವೆ ಇದ್ದ ಮನಸ್ತಾಪ ಕೊನೆ; ಮಾರ್ಚ್‌ 29ರ ದಿನಭವಿಷ್ಯ

29 ಮಾರ್ಚ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (29th March 2024 Daily Horoscope).

29 ಮಾರ್ಚ್‌ 2024ರ ರಾಶಿಫಲ
29 ಮಾರ್ಚ್‌ 2024ರ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (29th March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಶುಕ್ರವಾರ

ತಿಥಿ: ಚೌತಿ 04.56 ವರೆಗೂ ಇದ್ದು ನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ: ವಿಶಾಖ ನಕ್ಷತ್ರವು ಸಂಜೆ 05.35 ರವರೆಗೂ ಇರುತ್ತದೆ ನಂತರ ಅನೂರಾಧಾ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.16

ಸೂರ್ಯಾಸ್ತ: ಸಂಜೆ 06.30

ರಾಹುಕಾಲ : ಬೆಳಗ್ಗೆ 10.30 ರಿಂದ 12.00

ರಾಶಿಫಲ

ಮೇಷ

ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಮಾನಸಿಕ ಶಾಂತಿಗಾಗಿ ಯಾತ್ರಾಸ್ಥಳಕ್ಕೆ ಭೇಟಿ ನೀಡುವಿರಿ. ಉದ್ಯೋಗದಲ್ಲಿನ ಬದಲಾವಣೆಗಳನ್ನು ಒಪ್ಪಿಕೊಳ್ಳಬೇಕಾಗುತ್ತದೆ. ವೃತ್ತಿ ಬದಲಾವಣೆಯ ವಿಚಾರದಲ್ಲಿ ಆತುರದಿಂದ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಡಿರಿ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಮಟ್ಟದ ಆದಾಯ ದೊರಕುತ್ತದೆ. ವಿದ್ಯಾರ್ಥಿಗಳು ಹೊಸ ನಿರೀಕ್ಷೆಯೊಂದಿಗೆ ಎಲ್ಲರೊಂದಿಗೆ ಸ್ನೇಹದಿಂದ ಬಾಳುತ್ತಾರೆ. ಸಂತಾನ ಲಾಭವಿದೆ. ಆರೋಗ್ಯದ ಬಗ್ಗೆ ಕೊಂಚ ಕಾಳಜಿ ಇರಲಿ. ದಂಪತಿಗಳ ನಡುವೆ ವಿವಾದ ಮರೆಯಾಗಲಿದೆ. ಅತಿಯಾದ ದೈರ್ಯದಿಂದ ಅಪಾಯಕಾರಿ ಕೆಲಸ ಕಾರ್ಯಗಳಲ್ಲಿ ಆಸಕ್ತಿ ತೋರುವಿರಿ. ಮನೆಯಲ್ಲಿರುವ ಗಂಡು ಮಕ್ಕಳ ಆರೋಗ್ಯದಲ್ಲಿ ತೊಂದರೆ ಇರುತ್ತದೆ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ವೃಷಭ

ಕುಟುಂಬದಲ್ಲಿ ಹೊಸ ಆಸೆ ಆಕಾಂಕ್ಷೆ ಇರುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಉಂಟಾಗದು. ಹಿರಿಯರ ಅಧಿಕಾರಿಗಳ ಬೇಟಿಯ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ಆದಾಯಕ್ಕೆ ತೊಂದರೆ ಇರುವುದಿಲ್ಲ. ಕುಟುಂಬದಲ್ಲಿ ಸ್ಥಿರವಾದ ಆದಾಯ ಇರದ ಕಾರಣ ಸಣ್ಣ ಪ್ರಮಾಣದ ವಾದ ವಿವಾದಗಳು ಇರಲಿವೆ. ಸರಳ ಜೀವನ ನಡೆಸುವಿರಿ. ವಿದ್ಯಾರ್ಥಿಗಳು ಎಲ್ಲರೊಂದಿಗೆ ಸಂತಸದಿಂದ ಇರಲಿದ್ದಾರೆ. ಅನಾವಶ್ಯಕ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವಿರಿ. ವಾದ ವಿವಾದದ ಸಂದರ್ಭದಲ್ಲಿ ಮೌನವಾಗಿರುವಿರಿ. ಅನಿರೀಕ್ಷಿತ ಧನ ಲಾಭವಿದೆ. ಬೇರೆಯವರ ಹಣಕಾಸಿನ ವಿಚಾರದಿಂದ ದೂರ ಉಳಿಯುವಿರಿ. ತಂದೆಯವರಿಗೆ ಉದ್ಯೋಗದಲ್ಲಿ ಪ್ರಮುಖ ಬದಲಾವಣೆಗಳು ಎದುರಾಗಲಿವೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು ಪೂರ್ವ

ಅದೃಷ್ಟದ ಬಣ್ಣ : ಕಡು ಬಾದಾಮಿ ಬಣ್ಣ

ಮಿಥುನ

ಕುಟುಂಬದ ಸದಸ್ಯರ ನಡುವೆ ಪರಸ್ಪರ ಓಲೈಕೆಯ ಗುಣವಿರುತ್ತದೆ. ಉದ್ಯೋಗದಲ್ಲಿ ಯಾವುದೇ ರೀತಿಯ ಅಡೆತಡೆಗಳು ಉಂಟಾಗದು. ಆದರೆ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಧನ ಲಾಭವಿರುತ್ತದೆ. ವಿದ್ಯಾರ್ಥಿಗಳು ದೃಢವಾದ ನಿರ್ಧಾರವನ್ನು ತೆಗೆದುಕೊಳ್ಳುವುದು ಒಳ್ಳೆಯದು. ಗೆಲ್ಲಬೇಕೆಂಬ ಹಠ ಇದ್ದಲ್ಲಿ ಯಾವುದು ಅಸಾಧ್ಯವಾಗದು. ಮನೆತನದ ಹಣದ ವಿವಾದಗಳು ಸುಲಭವಾಗಿ ಬಗೆಹರಿಯಲಿವೆ. ಹಳೆಯ ವಿಚಾರಗಳನ್ನು ಮರೆಯದಿರಿ. ಹೊಸ ವಾಹನವನ್ನು ಕೊಳ್ಳುವ ಸಾಧ್ಯತೆಗಳಿವೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಬಡ ರೋಗಿಗಳಿಗೆ ಹಣದ ಸಹಾಯ ಮಾಡುವ ಉದ್ದೇಶದಿಂದ ಸಂಘ ಸಂಸ್ಥೆಯ ನೇತೃತ್ವ ವಹಿಸುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ಕಟಕ

ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದಗಳಿಂದ ಮನಸ್ತಾಪ ಉಂಟಾಗುತ್ತವೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ವಿಶ್ವಾಸವನ್ನು ಗಳಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಸಹನೆಯಿಂದ ವರ್ತಿಸುವುದು ಕ್ಷೇಮ. ನಿರೀಕ್ಷೆಗಿಂತಲೂ ಹೆಚ್ಚಿನ ಖರ್ಚು ವೆಚ್ಚಗಳು ಎದುರಾಗಲಿವೆ. ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನದಿಂದ ಗಳಿಸುವರು. ಮನೆಯ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಇರಲಿದೆ. ಅನಾವಶ್ಯಕವಾಗಿ ಸಂಗಾತಿಯ ಜೊತೆಯಲ್ಲಿ ಮನಸ್ತಾಪ ಉಂಟಾಗುತ್ತದೆ. ಅವಶ್ಯಕತೆ ಇರುವ ಕೆಲಸಗಳನ್ನಷ್ಟೇ ಆಯ್ದು ಮಾಡುವಿರಿ. ಧಾರ್ಮಿಕ ಕೇಂದ್ರಕ್ಕೆ ಹಣದ ಸಹಾಯ ಮಾಡಲು ನಿರ್ಧರಿಸುವಿರಿ. ಹೋಟೆಲ್ ಅಥವಾ ಬೇಕರಿ ವ್ಯಾಪಾರ ಆರಂಭಿಸುವಿರಿ. ಕುಟುಂಬದ ಹಿರಿಯರಿಗೆ ಹಣದ ಸಹಾಯ ಮಾಡುವಿರಿ

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).