ಕನ್ನಡ ಸುದ್ದಿ  /  Astrology  /  Horoscope Today Astrology Prediction 29th March 2024 Sagittarius Capricorn Aquarius Pisces Sts

Horoscope Today: ದಿನನಿತ್ಯದ ಕೆಲಸದಲ್ಲಿ ಹಿನ್ನಡೆ, ಕೆಲಸದ ಸ್ಥಳದಲ್ಲಿ ಮನಸ್ತಾಪ; ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

29 ಮಾರ್ಚ್‌ 2024, ಶುಕ್ರವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (29th March 2024 Daily Horoscope).

29 ಮಾರ್ಚ್‌ 2024, ಶುಕ್ರವಾರದ ದಿನಭವಿಷ್ಯ
29 ಮಾರ್ಚ್‌ 2024, ಶುಕ್ರವಾರದ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (29th March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಶುಕ್ರವಾರ

ತಿಥಿ : ಚೌತಿ 04.56 ವರೆಗೂ ಇದ್ದು ನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ : ವಿಶಾಖ ನಕ್ಷತ್ರವು ಸಂಜೆ 05.35 ರವರೆಗೂ ಇರುತ್ತದೆ ನಂತರ ಅನೂರಾಧಾ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.16

ಸೂರ್ಯಾಸ್ತ: ಸಂಜೆ 06.30

ರಾಹುಕಾಲ : ಬೆಳಗ್ಗೆ 10.30 ರಿಂದ 12.00

ರಾಶಿ ಫಲ

ಧನಸ್ಸು

ಕುಟುಂಬದಲ್ಲಿ ಮಕ್ಕಳ ಮಾತಿಗೆ ಒತ್ತುನೀಡಿ ಮನೆಯನ್ನು ಅಲಂಕರಿಸುವಿರಿ. ಸಮಾಜದಲ್ಲಿ ನಿಮ್ಮ ಮಾತಿಗೆ ವಿಶೇಷ ಪ್ರಾಮುಖ್ಯತೆ ದೊರೆಯುತ್ತದೆ. ಉದ್ಯೋಗದಲ್ಲಿ ಕೆಲಸದ ಒತ್ತಡಕ್ಕೆ ಹೊಂದಿಕೊಂಡು ಬಾಳುವಿರಿ. ಮನದಲ್ಲಿನ ಬೇಸರ ಕ್ರಮೇಣವಾಗಿ ಕಡಿಮೆ ಆಗಲಿದೆ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಬದಲಾವಣೆ ಕಂಡು ಬರುತ್ತದೆ. ವಿದ್ಯಾರ್ಥಿಗಳು ಏಕಾಂಗಿತನದಲ್ಲಿ ಸಂತಸ ಕಂಡುಕೊಳ್ಳುತ್ತಾರೆ. ಒತ್ತಡಕ್ಕೆ ಮಣಿದು ಎಲ್ಲರೊಂದಿಗೆ ಪ್ರವಾಸ ಕೈಗೊಳ್ಳುವಿರಿ. ಗರ್ಭಿಣಿಯರ ಆರೋಗ್ಯದಲ್ಲಿನ ಬದಲಾವಣೆಗಳು ಆತಂಕವನ್ನು ಸೃಷ್ಠಿಸುತ್ತದೆ. ಸಾಲದ ವ್ಯವಹಾರದ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಸ್ನೇಹಿತನಿಂದ ಹಣದ ಸಹಾಯ ದೊರೆಯುತ್ತದೆ. ಆಕರ್ಷಕ ವಸ್ತುಗಳನ್ನು ಕೊಳ್ಳುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಗುಲಾಬಿ

ಮಕರ

ಕುಟುಂಬದ ಜವಾಬ್ದಾರಿಯನ್ನು ಬೇರೆಯವರಿಗೆ ಹಸ್ತಾಂತರಿಸುವಿರಿ. ದಂಪತಿಗಳ ನಡುವೆ ಹೊಂದಾಣಿಕೆಯ ಮನೋಭಾವನೆ ಇರುತ್ತದೆ. ದೊರೆಯದ ಅವಕಾಶಗಳಿಂದ ಬೇಸತ್ತು ಉದ್ಯೋಗ ಬದಲಾಯಿಸುವ ನಿರ್ಧಾರಕ್ಕೆ ಬರುವಿರಿ. ವ್ಯಾಪಾರ ವ್ಯವಹಾರಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲು ವಿಫಲರಾಗುವಿರಿ. ಸಾಲವು ಅವಶ್ಯಕತೆ ಮೀರಿ ಬೆಳೆಯುತ್ತದೆ. ಹಣಕಾಸಿನ ಅಭಿವೃದ್ಧಿ ಇರುತ್ತದೆ. ನಿಧಾನದ ಮಾತುಕತೆಯಿಂದ ವಿವಾದಗಳಿರದೆ ಬಾಳುವಿರಿ. ವಿದ್ಯಾರ್ಥಿಗಳು ಆತಂಕವನ್ನು ಮರೆತು ಬಾಳುವುದು ಒಳ್ಳೆಯದು. ಕೌಟುಂಬಿಕ ಸವಾಲುಗಳನ್ನು ಹಟದಿಂದ ಜಯಿಸುವಿರಿ. ಆತ್ಮೀಯರೊಂದಿಗೆ ಪಾಲುಗಾರಿಕೆಯ ವ್ಯಾಪಾರವನ್ನು ಆಅಂಭಿಸುವಿರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬಿಳಿ

ಕುಂಭ

ದಿನನಿತ್ಯದ ಕೆಲಸದಲ್ಲಿ ಹಿನ್ನೆಡೆ ಉಂಟಾಗಲಿದೆ. ಹಿರಿಯರಿಂದ ಅನುಕೂಲಕರ ಸಹಾಯ ದೊರೆಯುತ್ತದೆ. ಒತ್ತಡದ ನಡುವೆಯೂ ನಿಮ್ಮ ಮನೋಭಾವನೆ ಬದಲಾಗುವುದಿಲ್ಲ. ಹಿರಿಯರು ತೆಗೆದುಕೊಂಡ ತೀರ್ಮಾನಗಳಿಗೆ ಬದ್ಧರಾಗುವಿರಿ. ವಿನಾಕಾರಣ ಉದ್ಯೋಗದಲ್ಲಿ ವಿರೋಧ ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿನ ಅನಿರೀಕ್ಷಿತ ಬದಲಾವಣೆಗಳಲ್ಲಿ ಅನುಕೂಲತೆ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭವಿರುತ್ತದೆ. ವಿದ್ಯಾರ್ಥಿಗಳು ಸ್ವಂತಂತ್ರವಾಗಿ ಪ್ರಗತಿಯತ್ತ ನಡೆಯುತ್ತಾರೆ. ಮನೆಗಾಗಿ ಹೆಚ್ಚಿನ ಹಣದ ಅವಶ್ಯಕತೆ ಇದೆ. ಸಂಬಂಧಿಯೊಬ್ಬರ ಸಹಾಯದಿಂದ ವಿವಾಹದ ಮಾತುಕತೆ ನಡೆಯುತ್ತದೆ. ಸಾಲದ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಬೂದು

ಮೀನ

ಮುಗ್ಧ ಮನಸ್ಸಿನಿಂದ ಕುಟುಂಬದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ಉದ್ಯೋಗದಲ್ಲಿ ಕಾರ್ಯದ ಒತ್ತಡವಿದ್ದರೂ ಸಹಜತೆಗೆ ಮರಳುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ನಿರ್ದಿಷ್ಟ ಲೆಕ್ಕಾಚಾರ ಇರುವುದಿಲ್ಲ. ವಿದ್ಯಾರ್ಥಿಗಳು ಗೆಲುವಿನಂತೆ ಸೋಲನ್ನು ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿ ಇರುತ್ತಾರೆ. ಆತ್ಮೀಯರಿಂದ ಹಣದ ಸಹಾಯ ದೊರೆಯಲಿದೆ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ಆರೋಗ್ಯದ ಬಗ್ಗೆ ಗಮನಹರಿಸಿ. ಭೂವಿವಾದದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಬೇಡಿ. ಕುಟುಂಬದ ಹಿರಿಯರ ಆಗಮನವಾಗುತ್ತದೆ. ಪ್ರಾಣಿ ಪಕ್ಷಿಗಳ ಬಗ್ಗೆ ಆಸಕ್ತಿ ಇರುತ್ತದೆ. ಸಾಲದ ವ್ಯವಹಾರದಿಂದ ದೂರ ಉಳಿಯುವಿರಿ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಕಂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).