ಮಾನಸಿಕ ಒತ್ತಡದಿಂದ ಅನಾರೋಗ್ಯ ಕಾಡಬಹುದು, ಬಾಲ್ಯದ ಸ್ನೇಹಿತರೊಂದಿಗೆ ಮದುವೆ ನಿಶ್ಚಯ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
29 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (29th May 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (29th May 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಬುಧವಾರ
ತಿಥಿ: ಷಷ್ಠಿ 01.06 ರವರೆಗೂ ಇರುತ್ತದೆ ನಂತರ ಸಪ್ತಮಿ ಆರಂಭವಾಗುತ್ತದೆ.
ನಕ್ಷತ್ರ : ಶ್ರವಣ ನಕ್ಷತ್ರವು ಬೆಳಗ್ಗೆ 08.26 ರವರೆಗೂ ಇದ್ದು ನಂತರ ಧನಿಷ್ಠ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.52
ಸೂರ್ಯಾಸ್ತ: ಸಂಜೆ 06.41
ರಾಹುಕಾಲ: 12.20 ರಿಂದ 01.56
ರಾಶಿಫಲ
ಮೇಷ
ನಿಮ್ಮಲ್ಲಿನ ವೃತ್ತಿಪರತೆ ಎಲ್ಲರ ಮನಸ್ಸನ್ನು ಗೆಲ್ಲುತ್ತದೆ. ಬೇರೆಯವರು ಸುಲಭವಾಗಿ ನಿಮ್ಮ ರೀತಿ ನೀತಿಯನ್ನು ಒಪ್ಪುತ್ತಾರೆ. ದುಂದು ವೆಚ್ಚದಿಂದ ಕುಟುಂಬದಲ್ಲಿದ್ದ ಒಗ್ಗಟ್ಟು ಮರೆಯಾಗುತ್ತದೆ. ಬೇರೊಬ್ಬರ ಸಹಾಯ ಇಲ್ಲದೆ ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸುವಿರಿ. ಮಾನಸಿಕ ಒತ್ತಡದಿಂದ ಅನಾರೋಗ್ಯ ಉಂಟಾಗುತ್ತದೆ. ನಿಮ್ಮಲ್ಲಿನ ಆತ್ಮಶಕ್ತಿಯು ಸೋಲಿನ ಭಯದಿಂದ ಪಾರು ಮಾಡುತ್ತದೆ. ಮಕ್ಕಳ ನಿಸ್ವಾರ್ಥ ಪ್ರೀತಿ ದೊರೆತು ಸಂತೋಷದಿಂದ ಬಾಳುವಿರಿ. ಹಣಕಾಸಿಗೆ ಸಂಬಂಧಿಸಿದ ಹೊಸ ಯೋಜನೆಗಳನ್ನು ಅನುಸ್ಠಾನಕ್ಕೆ ತರುವಿರಿ. ನಿಮ್ಮೆಲ್ಲಾ ಕೆಲಸಗಳನ್ನು ಅನಿವಾರ್ಯವಾಗಿ ಮುಂದೂಡಬೇಕಾಗುತ್ತದೆ. ಬಾಲ್ಯದ ಗೆಳೆಯ/ಗೆಳತಿ ಜೊತೆ ವಿವಾಹ ನಿಶ್ಚಯವಾಗಲಿದೆ.
ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ
ವೃಷಭ
ನಿಮ್ಮ ಸಂಗಾತಿ ಜೊತೆ ಯಾತ್ರಾಸ್ಥಳಕ್ಕೆ ಪ್ರಯಾಣ ಬೆಳೆಸುವಿರಿ. ನಿಮ್ಮ ಕಷ್ಟ ನಷ್ಟಗಳಿಗೆ ನೀವೇ ಪರಿಹಾರ ಕಂಡುಕೊಳ್ಳುವಿರಿ. ಕುಟುಂಬದ ವ್ಯಾಪಾರವನ್ನು ಮುಂದುವರೆಸಿದಲ್ಲಿ ಹೆಚ್ಚಿನ ಪ್ರಯೋಜನ ದೊರೆಯುತ್ತದೆ. ಆಯುರ್ವೇದ ಚಿಕಿತ್ಸೆಯಿಂದ ಮುಖದ ಮೇಲಿನ ಕಲೆಗಳು ದೂರವಾಗಲಿವೆ. ಕುಟುಂಬದ ಹಿರಿಯರ ನಡೆ ನುಡಿಯನ್ನು ಒಪ್ಪುವುದಿಲ್ಲ. ನಿಮ್ಮ ಅನುಭವದಿಂದ ಸಹೋದ್ಯೋಗಿಗಳು ಅನೇಕ ವಿಚಾರಗಳನ್ನು ಕಲಿಯಲು ಪ್ರಯತ್ನಿಸುತ್ತಾರೆ. ನಿಮ್ಮ ಸಂಗಾತಿಯ ಜೊತೆಗಿನ ಸಂಬಂಧ ಚಾಡಿ ಮಾತಿನಿಂದ ತೊಂದರೆಗೆ ಒಳಗಾಗಬಹುದು. ವಿಶ್ವಾಸದಿಂದ ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಸಾಧಿಸುವಿರಿ. ಅನಗತ್ಯವಾದ ಹಣದ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವಿರಿ. ಮನೆಯಲ್ಲಿ ಸಾಕಿರುವ ಪ್ರಾಣಿಗಳ ಬಗ್ಗೆ ಗಮನವಿರಲಿ.
ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಬಿಳಿ
ಮಿಥುನ
ಮನೆಯಲ್ಲಿನ ಯೋಚನೆಗಳನ್ನು ಕಾರ್ಯರೂಪಕ್ಕೆ ತರುವಿರಿ. ಶಾಂತ ಚಿತ್ತರಾದರೂ ಕೋಪ ಬಂದಾಗ ಉದ್ವೇಗದಿಂದ ವರ್ತಿಸುವಿರಿ. ಹಣಕಾಸಿನ ತೊಂದರೆ ಇರುವುದಿಲ್ಲ. ನೀವು ಕುಟುಂಬದ ಸದಸ್ಯರೊಡನೆ ಆಮದು ರಪ್ತಿನ ವ್ಯಾಪಾರ ಆರಂಭಿಸುವಿರಿ. ಆತ್ಮಸ್ಥೈರ್ಯವನ್ನು ಗಳಿಸಲು ಪ್ರಯತ್ನಿಸಿ. ಅಮೂಲ್ಯ ವಸ್ತುಗಳನ್ನು ಶೇಖರಿಸುವಿರಿ. ನಿಮ್ಮಲ್ಲಿನ ನಾಯಕತ್ವದ ಗುಣಗಳು ಇತರರಿಗೆ ಮಾದರಿ ಆಗಲಿದೆ. ಜನರ ಅವಶ್ಯಕತೆಗಳನ್ನು ಪೂರೈಸುವ ಸಾರ್ವಜನಿಕ ಸಂಸ್ಥೆಯನ್ನು ಆರಂಭಿಸುವಿರಿ. ನಿಮ್ಮಲ್ಲಿನ ನಾಯಕತ್ವದ ಗುಣವನ್ನು ಎಲ್ಲರೂ ಮೆಚ್ಚುತ್ತಾರೆ. ನಿಮ್ಮ ದೊಡ್ಡಮಟ್ಟದ ಆಸೆಯೊಂದು ಈಡೇರಲಿದೆ.
ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಬೂದು
ಕಟಕ
ಬೇಸರದ ಕಾರಣ ಮನರಂಜನೆಯಿಂದ ದೂರ ಉಳಿಯುವಿರಿ. ಸುಖ ಸಂತೋಷದಿಂದ ಬಾಳ್ವೆ ನಡೆಸುವಿರಿ. ಸುಲಭವಾಗಿ ನಿಮ್ಮ ಬಳಿ ಇರುವ ಹಣವನ್ನು ಖರ್ಚು ಮಾಡುವುದಿಲ್ಲ. ಬೇಸರ ಉಂಟಾಗಿ ಉದ್ಯೋಗವನ್ನು ಬದಲಿಸುವಿರಿ. ಸಮಯ ವ್ಯರ್ಥಮಾಡದೆ ಮಕ್ಕಳಿಗೆ ಸಹಾಯವಾಗುವ ಕೆಲಸ ಮಾಡುವಿರಿ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನ ಮೇಲೆ ಪರಿಣಾಮ ಬೀರುವ ಕೆಲಸವೊಂದು ನಡೆಯಲಿದೆ. ಆತ್ಮೀಯರ ಆಗಮನ ಮನದ ಸಂತಸವನ್ನು ಹೆಚ್ಚಿಸಲಿದೆ. ನೋವನ್ನು ಮರೆತು ಎಲ್ಲರ ಜೊತೆ ಸಂತಸದಿಂದ ಬಾಳುವಿರಿ. ನಿಮ್ಮಲ್ಲಿನ ಸಹಾಯದ ಮನೋಭಾವನೆಯಿಂದ ಸಮಾಜದ ಕೇಂದ್ರಬಿಂದುವಾಗುವಿರಿ. ಹೊಸ ಮನೆಯನ್ನು ನಿರ್ಮಿಸಲಿದ್ದೀರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಆಕಾಶ ನೀಲಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).