ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ದೀರ್ಘಕಾಲದ ಅನಾರೋಗ್ಯಕ್ಕೆ ಶಾಶ್ವತ ಪರಿಹಾರ, ಸಂಗೀತ ನಾಟ್ಯ ಬಲ್ಲವರಿಗೆ ಉತ್ತಮ ಅವಕಾಶ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ದೀರ್ಘಕಾಲದ ಅನಾರೋಗ್ಯಕ್ಕೆ ಶಾಶ್ವತ ಪರಿಹಾರ, ಸಂಗೀತ ನಾಟ್ಯ ಬಲ್ಲವರಿಗೆ ಉತ್ತಮ ಅವಕಾಶ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

29 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (29th May 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(29th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ: ಷಷ್ಠಿ 01.06 ರವರೆಗೂ ಇರುತ್ತದೆ ನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಶ್ರವಣ ನಕ್ಷತ್ರವು ಬೆಳಗ್ಗೆ 08.26 ರವರೆಗೂ ಇದ್ದು ನಂತರ ಧನಿಷ್ಠ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.41

ರಾಹುಕಾಲ: 12.20 ರಿಂದ 01.56

ರಾಶಿಫಲ

 

ಧನಸ್ಸು

ಕೆಲಸದಲ್ಲಿ ಹಿರಿಯ ಅಧಿಕಾರಿಗಳ ಒತ್ತಡ ಮನಸ್ತಾಪಕ್ಕೆ ಕಾರಣವಾಗಲಿದೆ. ಹೊಸ ಮನೆಕೊಳ್ಳುವ ವಿಚಾರ ಮುಂದೂಡುವಿರಿ. ಕೌಟುಂಬಿಕ ವ್ಯಾಜ್ಯವು ವಿದ್ಯಾರ್ಥಿಗಳ ಏಕಾಗ್ರತೆಗೆ ಧಕ್ಕೆ ತರುತ್ತದೆ. ದೀರ್ಘಕಾಲದ ಅನಾರೋಗ್ಯಕ್ಕೆ ಶಾಶ್ವತ ಮದ್ದೊಂದು ದೊರೆಯಲಿದೆ. ಲಾಭ ನಷ್ಟವನ್ನು ಗಮನಿಸದೆ ವ್ಯಾಪಾರದಲ್ಲಿ ಮುಂದುವರೆಯುವಿರಿ. ವಿವಿಧ ಯೋಜನೆಗಳಲ್ಲಿ ಹೂಡಿಕೆ ಮಾಡಿದ್ದ ಹಣಕ್ಕೆ ಉತ್ತಮ ಲಾಭ ದೊರೆಯುತ್ತದೆ. ಮಕ್ಕಳ ಜೊತೆ ಉತ್ತಮ ಒಡನಾಟ ಇರಲಿದೆ. ಸಂಗಾತಿ ಜೊತೆ ಉತ್ತಮ ಅನುಬಂಧ ಇರುತ್ತದೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ವರಮಾನ ಹೆಚ್ಚುತ್ತದೆ. ಪಾಲುದಾರಿಕೆಯ ವ್ಯಾಪಾರದಲ್ಲಿ ಮನಸ್ತಾಪ ಉಂಟಾಗಲಿದೆ. ಬಿಡುವಿನ ವೇಳೆಯನ್ನು ಧ್ಯಾನ ವ್ಯಾಯಾಮಗಳಿಗೆ ಮೀಸಲಿಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೆಂಪು

ಮಕರ

ಹಣಕಾಸಿನ ವಿಚಾರದಲ್ಲಿ ಕುಟುಂಬದಲ್ಲಿ ಭಿನಾಭಿಪ್ರಾಯ ಉಂಟಾಗಲಿದೆ. ಸಂದಿಗ್ಧ ಪರಿಸ್ಥಿತಿಯಲ್ಲಿ ಮೌನ ವಹಿಸುವಿರಿ. ಸೋಲುವ ವೇಳೆಯಲ್ಲಿ ಸಹನೆ ಕಳೆದುಕೊಂಡು ಉದ್ವಿಗ್ನವಾಗಿ ವರ್ತಿಸುವಿರಿ. ಅನಾವಶ್ಯಕವಾಗಿ ಚಿಂತಿಸಿ ಅರೆ ತಲೆಶೂಲೆಯಿಂದ ಬಳಲುವಿರಿ. ಉದ್ಯೋಗದಲ್ಲಿ ಯಶಸ್ಸಿನ ಸಂತೋಷದ ಕ್ಷಣಗಳನ್ನು ಸಹೋದ್ಯೋಗಿಗಳ ಜೊತೆ ಆಚರಿಸುವಿರಿ. ನೀವು ನಿರಾಸೆಯನ್ನೂ ಆನಂದದಿಂದಲೇ ಸ್ವೀಕರಿಸುವಿರಿ. ನಿಮ್ಮ ಖರ್ಚುಗಳನ್ನು ನಿಯಂತ್ರಿಸುವಿರಿ. ಅನಿರೀಕ್ಷಿತವಾದ ಆದಾಯದಲ್ಲಿನ ಏರಿಕೆ ನಿಮ್ಮ ಮನಸ್ಸಿನ ಶಾಂತಿ ನೀಡುತ್ತದೆ. ನೀವಿರುವ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಿಕೊಳ್ಳಿ. ಕೊಂಚ ಪ್ರಯಾಸದಿಂದ ದಿನದ ಕೆಲಸಗಳನ್ನು ಪೂರ್ಣಗೊಳಿಸುವಿರಿ.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಿತ್ತಳೆ

ಕುಂಭ

ಸ್ವಂತ ಕೆಲಸ ಕಾರ್ಯಗಳಿಗೆ ಸಮಯದ ಕೊರತೆ ಇರುತ್ತದೆ. ಯೋಗ ಮತ್ತು ಇತರೆ ದೈಹಿಕ ವ್ಯಾಯಾಮದಲ್ಲಿ ತೊಡಗುವಿರಿ. ಆತ್ಮೀಯರ ಸಹಾಯ ಸಹಕಾರ ಇರುವ ಕಾರಣ ಮಾನಸಿಕ ಶಾಂತಿ ಇರಲಿದೆ. ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಇರುತ್ತದೆ. ಕುಟುಂಬದಲ್ಲಿ ಮಂಗಳ ಕಾರ್ಯವೊಂದು ನಡೆಯಲಿದೆ. ಹಿಂದಿನ ದಿನಗಳಲ್ಲಿ ನಿರ್ಣಯಿಸಿದ್ದ ಪ್ರಯಾಣ ಮೊಟಕುಕೊಳ್ಳುತ್ತದೆ. ನಿಮ್ಮಲ್ಲಿನ ಹವ್ಯಾಸವು ಎಲ್ಲರ ಗಮನ ಸೆಳೆಯುವುದು. ವಿಶ್ರಾಂತಿ ಇಲ್ಲದ ಕೆಲಸ ನಿಮ್ಮದಾಗುತ್ತದೆ. ಆರ್ಥಿಕವಾಗಿ ಸದೃಢರಾಗುವಿರಿ. ಮೊದಲೇ ಲಾಭವನ್ನು ಲೆಕ್ಕಾಚಾರ ಮಾಡಿ ನಂತರ ಕೆಲಸವನ್ನು ಆರಂಭಿಸುವಿರಿ. ಮಕ್ಕಳು ಸಂತೋಷ ನೀಡುವ ಕೆಲಸಗಳನ್ನು ಮಾಡಲಿದ್ದಾರೆ. ಹಿರಿಯರ ಆಶೀರ್ವಾದ ದೊರೆಯಲಿದೆ. ಪಾಲುದಾರಿಕೆಯ ವ್ಯಾಪಾರದಲ್ಲಿ ಆಸಕ್ತಿ ಇರುವುದಿಲ್ಲ. ವಾಸ ಸ್ಥಾನವನ್ನು ಬದಲಿಸುವಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಹಳದಿ

ಮೀನ

ನಿಮ್ಮ ನಿಷ್ಕಲ್ಮಷ ಮನೋಭಾವ ಎಲ್ಲರ ಮನ ಸೆಳೆಯುತ್ತದೆ. ಸಾಲದ ವ್ಯವಹಾರದಲ್ಲಿ ವಾದ ವಿವಾದಗಳು ಎದುರಾಗುತ್ತವೆ. ಪ್ರತಿಯೊಂದು ವಿಚಾರದಲ್ಲಿಯೂ ಕುಟುಂಬದಲ್ಲಿ ಒಮ್ಮತ ಅಭಿಪ್ರಾಯ ಇರುತ್ತದೆ. ಸ್ನೇಹಿತರೊಬ್ಬರು ತಪ್ಪು ಕಲ್ಪನೆಯಿಂದ ನಿಮ್ಮಿಂದ ದೂರವಾಗಲಿದ್ದಾರೆ. ವೈಯಕ್ತಿಕ ಕೆಲಸ ಕಾರ್ಯಗಳಿಗೆ ಆದ್ಯತೆ ನೀಡುವಿರಿ. ಸಮಾಜದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ನಿರತರಾಗುವಿರಿ. ಹಿರಿಯರ ಸೇವೆ ಮಾಡುವ ಅವಕಾಶ ದೊರೆಯುತ್ತದೆ. ಪ್ರೀತಿ ವಿಶ್ವಾಸದಿಂದ ಮಕ್ಕಳ ಜೊತೆ ಸಂತೋಷದಿಂದ ಬಾಳುವಿರಿ. ಸಂಗೀತ ನಾಟ್ಯ ಬಲ್ಲವರಿಗೆ ಉತ್ತಮ ಅವಕಾಶ. ಸಮಯಕ್ಕೆ ತಕ್ಕಂತೆ ವರ್ತಿಸುವಿರಿ. ಸಂಗಾತಿಯ ಸಹಕಾರದಿಂದ ನಿಮ್ಮ ಕಷ್ಟಗಳು ಮರೆಯಾಗಲಿವೆ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).